ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ
ತಿಥಿ: ಅಷ್ಟಮಿ 08:29 ವಾರ: ಬುಧವಾರ
ನಕ್ಷತ್ರ: ಉತ್ತರಾಭಾದ್ರಪದ 28:29 ಯೋಗ: ಸಿದ್ಧಿ 27:24
ಕರಣ: ಭವ 08:29 ದಿನ ವಿಶೇಷ: ಕಾಲಾಷ್ಟಮೀ
ಸೂರ್ಯೋದಯ : 05:42 ಸೂರ್ಯಾಸ್ತ : 07:09
ರಾಹು ಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಪ್ರಾತಃ ಕಾಲ 10.30 ರಿಂದ 12.00
ಯಮಗಂಡಕಾಲ: ಪ್ರಾತಃ ಕಾಲ 7.30 ರಿಂದ 9.00
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಆರೋಗ್ಯ ಮಧ್ಯಮ.ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗುವವು.ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ.ಆಮಂತ್ರಣ ಸಿಗುವ ಸಾಧ್ಯತೆ.ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ಇರಲಿ.ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ.ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ.ವಾಹನ ಖರೀದಿ ವಿಚಾರ.ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ.ಸಹದ್ಯೋಗಿಗಳಿಂದ ಅಸಹಕಾರ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2
ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6
ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ.
ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ,ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ. ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ, ಕೆಲಸ ಕಾರ್ಯಗಳು ನಿಧಾನ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ.ಆರ್ಥಿಕವಾಗಿ ಲಾಭ.ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ.ಜನಪ್ರೀಯತೆ ಹೆಚ್ಚಾಗಲಿದೆ.ಪ್ರವಾಸದ ಕುರಿತು ಚರ್ಚೆ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7
ಧನಸ್ಸು: ಅತಿಯಾದ ಚಿಂತೆ,ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಶುಭಫಲ.ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು.ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯ ಪರಿಪೂರ್ಣ.ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಆಲೋಚನೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4
ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವ. ಅವಸರದಲ್ಲಿ ಕೆಲಸ ಮಾಡುವುದು ಬೇಡ.ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ದಿಡೀರ್ ಪ್ರಯಾಣ ಸಾಧ್ಯತೆ.
ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2
ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಆರೋಗ್ಯ ಮಧ್ಯಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ,ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com