Site icon Vistara News

Horoscope Today | ಸರಸ್ವತಿ ಪೂಜೆಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

horoscope today

ವಾರ ಭವಿಷ್ಯ

ಇಂದಿನ ಪಂಚಾಂಗ (02-10-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ

ತಿಥಿ: ಸಪ್ತಮಿ 18:46 ವಾರ: ಭಾನುವಾರ
ನಕ್ಷತ್ರ:ಮೂಲಾ 25:51 ಯೋಗ: ಸೌಭಾಗ್ಯ 17:12
ಕರಣ: ಗರಜ 07:47 ದಿನ ವಿಶೇಷ: ಶರನ್ನವರಾತ್ರಿ ಮಹೋತ್ಸವದ ಏಳನೇ ದಿನ. ಕಾಲರಾತ್ರೀ ಅವತಾರ.
ಸರಸ್ವತಿ ಪೂಜೆ. ಗಾಂಧಿ ಜಯಂತಿ. ಲಾಲ್‌ ಬಹದ್ದೂರ್‌ ಶಾಸ್ತ್ರಿ ಜಯಂತಿ. ಇಂದಿನ ವರ್ಣ: ಕೇಸರಿ.
ಅಮೃತಕಾಲ: ಸಂಜೆ 07 ಗಂಟೆ 50 ನಿಮಿಷದಿಂದ 09 ಗಂಟೆ 20 ನಿಮಿಷದವರೆಗೆ.

ಸೂರ್ಯೋದಯ: 06: 20     ಸೂರ್ಯಾಸ್ತ: 06: 20

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಸಂಜೆ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ದಿನದ ಮಟ್ಟಿಗೆ ಒತ್ತಡ ಉಂಟು ಮಾಡುವ ವಿಚಾರಗಳಿಂದ ಮಾನಸಿಕ ನೆಮ್ಮದಿ ಕಡಿಮೆ. ಆರ್ಥಿಕ ಪ್ರಗತಿ. ಉದ್ಯೋಗದಲ್ಲಿ ಕಿರಿಕಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಆರ್ಥಿಕ ವ್ಯವಹಾರಗಳಲ್ಲಿ ಎಚ್ಚರಿಕೆಯಿಂದ ಮುಂದುವರಿಯಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಷಭ: ಅತಿಯಾದ ಕೋಪದಿಂದ ಮನೆಯ ವಾತಾವರಣ ಹದಗೆಡಲು ಕಾರಣವಾಗುವುದು ಬೇಡ. ಮನೆಯ ಸದಸ್ಯರು ತಮಗೆ ಅಸಹಕಾರ ನೀಡವ ಸಾಧ್ಯತೆ. ಆರೋಗ್ಯ ಮಧ್ಯಮ. ಖರ್ಚು ಹೆಚ್ಚಾದೀತು. ಉದ್ಯೋಗ ಸ್ಥಳದಲ್ಲಿ ಮಿಶ್ರ ಫಲ. ಹಿಡಿದ ಕಾರ್ಯ ಪೂರ್ಣಗೊಳಿಸುವಿರಿ.
ಅದೃಷ್ಟ ಸಂಖ್ಯೆ: 7

ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯುತ್ತದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಇಂದು ನಿಮ್ಮ ಖರ್ಚು ಹೆಚ್ಚಾಗಲಿದೆ. ಹಣದ ವಿಷಯದಲ್ಲಿ ಎಚ್ಚರಿಕೆ ವಹಿಸಿ. ನೀವಂದುಕೊಂಡಿರುವ ಕಾರ್ಯದಲ್ಲಿ ಪ್ರಯತ್ನ ವಿಫಲ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕಟಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು, ಕೀರ್ತಿ ಸಿಗುವುದು. ಇಂದು ನಿಮ್ಮ ಶ್ರಮಕ್ಕೆ ತಕ್ಕ ಫಲ ದೊರೆಯುವ ದಿನ. ಹಣದ ಹರಿವು ಹೆಚ್ಚಾಗಲಿದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಆಪ್ತರನ್ನು ಭೇಟಿ ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಇಂದು ನಿಮ್ಮ ಏಕಾಗ್ರತೆಗೆ ಭಂಗ ಉಂಟಾಗುವ ಸಾಧ್ಯತೆಗಳು ಹೆಚ್ಚು. ಆರೋಗ್ಯ ಪರಿಪೂರ್ಣ. ಮನೆಯಲ್ಲಿ ವಿನಾಕಾರಣ ಕಲಹಗಳು ನಡೆಯುವ ಸಾಧ್ಯತೆ. ನೀವೇ ತಾಳ್ಮಯಿಂದ ವರ್ತಿಸಿ. ಉದ್ಯೋಗದಲ್ಲಿ ಯಾವುದೇ ಕೆಲಸ ಮಾಡುವುದಿದ್ದರೂ ಹೆಚ್ಚಿನ ಗಮನ ನೀಡಿ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಕನ್ಯಾ: ಅತಿಯಾದ ಶ್ರಮದ ಕಾರಣ ನಿಮಗೆ ಆಯಾಸ, ಒತ್ತಡ ಉಂಟಾಗುವ ಸಾಧ್ಯತೆ. ದಿನದ ಮಟ್ಟಿಗೆ ವಿಶ್ರಾಂತಿ ಅತ್ಯಾವಶ್ಯಕ. ಮನೆಯಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ಉದ್ಯೋಗಿಗಳಿಗೆ ಸ್ವಲ್ಪ ಮಟ್ಟಿಗೆ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ತುಲಾ: ಸಕಾರಾತ್ಮಕ ಆಲೋಚನೆಗಳು ಸದಾ ಯಶಸ್ಸು ತಂದು ಕೊಡುವುದು. ಆತ್ಮವಿಶ್ವಾಸದಿಂದ ಹಿಡಿದ ಕೆಲಸವನ್ನು ಮುಂದುವರಿಸಿ. ಹಣಕಾಸು ಹಾಗೂ ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ನಿಮ್ಮ ಆಕರ್ಷಕ ವರ್ತನೆ ಇತರರ ಗಮನ ಸೆಳೆಯುತ್ತದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿಯಾಗಿ, ಹಣದ ಹರಿವು ಹೆಚ್ಚಾಗಲಿದೆ. ಕುಟುಂಬದ ಸದಸ್ಯರ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಧನಸ್ಸು: ಯಾವುದಾದರೂ ಸುದ್ದಿ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಆರ್ಥಿಕ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅಪರಿಚಿತರೊಂದಿಗೆ ವಾದಕ್ಕಿಳಿಯುವುದು ಬೇಡ. ಆರೋಗ್ಯ ಉತ್ತಮ, ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಮಕರ: ಒತ್ತಡದ ಮಧ್ಯೆಯೂ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸುವಿರಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಮಾನಸಿಕ ಆರೋಗ್ಯ ಹದಗೆಡುವ ಸಾಧ್ಯತೆ. ಅಪೇಕ್ಷಿತ ವಿಷಯದ ಕುರಿತು ಚರ್ಚೆ, ಕುಟುಂಬದ ಸದಸ್ಯರ ಮಧ್ಯೆ ಕಲಹ ಮೂಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

ಕುಂಭ: ನಿಮ್ಮ ಮೇಲಿನ ಜವಾಬ್ದಾರಿಗಳು ಹೆಚ್ಚಾಗಲಿವೆ. ಸಹನೆ ಮಿತಿಮೀರಿ ಕೋಪಗೊಳ್ಳುವ ಸಾಧ್ಯತೆ. ಗೌಪ್ಯ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ದಿನದ ಮಟ್ಟಿಗೆ ಖರ್ಚು. ಆರೋಗ್ಯದ ಕಾಳಜಿ ಅವಶ್ಯ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

ಮೀನ: ಹಳೆಯ ವ್ಯಾಧಿಯು ಉಲ್ಬಣಗೊಳ್ಳುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಪ್ರಯಾಣದಿಂದ ದಿನದ ಮಟ್ಟಿಗೆ ಖರ್ಚು. ನಿಮ್ಮ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ ಇಂದು ಹೆಚ್ಚು ಸವಾಲು ಎದುರಾಗಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Navaratri 2022 | ಭೂತ, ಪ್ರೇತ ಇತ್ಯಾದಿ ಭಯ ದೂರವಾಗಲು ನವರಾತ್ರಿಯ 7ನೇ ದಿನ ಈ ದೇವಿಯನ್ನು ಪೂಜಿಸಿ

Exit mobile version