Site icon Vistara News

Horoscope Today | ಧನಸ್ಸು ರಾಶಿಯವರ ಇಂದಿನ ಅದೃಷ್ಟ ಸಂಖ್ಯೆ ಎಷ್ಟು ಗೊತ್ತಾ?

nava pancham yoga

nava pancham yoga

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ.

ತಿಥಿ: ದಶಮಿ 21:40 ವಾರ:  ಗುರುವಾರ
ನಕ್ಷತ್ರ: ರೇವತಿ 06:13 ಯೋಗ: ಅತಿಗಂಡ 28:50
ಕರಣ: ವಣಿಜ 09:08 ದಿನ ವಿಶೇಷ: ಅಂತಾರಾಷ್ಟ್ರೀಯ ಒಲಿಂಪಿಕ್‌ ದಿನ

ಸೂರ್ಯೋದಯ : 05:43    ಸೂರ್ಯಾಸ್ತ  : 07:14

ರಾಹು ಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ:  ಪ್ರಾತಃ ಕಾಲ 9.00 ರಿಂದ 10.30
ಯಮಗಂಡಕಾಲ: ಪ್ರಾತಃ ಕಾಲ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಆಧ್ಯಾತ್ಮಿಕ ವ್ಯಕ್ತಿಗಳ ದರ್ಶನ, ಆಶೀರ್ವಾದದಿಂದ ಮನಸ್ಸಿಗೆ ಸಮಾಧಾನ. ವ್ಯಾಪರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದ ಸದಸ್ಯರ ವರ್ತನೆ ತಮಗೆ ಮುಜುಗರ ಉಂಟುಮಾಡುವ ಸಾಧ್ಯತೆ. ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯ ಹಾಗೂ ಉದ್ಯೋಗ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ವೃಷಭ: ಅನಗತ್ಯ ವಿಚಾರಗಳು ನಿಮ್ಮ ಮನಸ್ಸಿನ ಮೇಲೆ ಪರಿಣಾಮ ಬೀರುತ್ತವೆ. ಭೂಮಿ ಹೂಡಿಕೆ ವ್ಯವಹಾರಗಳಲ್ಲಿ ದಿನದಮಟ್ಟಿಗೆ ತೊಡಗುವುದು ಬೇಡ. ಅನಗತ್ಯ ಖರ್ಚು. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಆರೋಗ್ಯದ ಕುರಿತಾಗಿ ಕಾಳಜಿವಹಿಸಿ, ಅದರಲ್ಲಿಯೂ ಕಣ್ಣಿನ ಆರೋಗ್ಯ ಬಹಳ ಮಹತ್ವದ್ದು. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 5

ಮಿಥುನ: ಹಣಕಾಸಿನ ಹೂಡಿಕೆ ಕುರಿತು ಚರ್ಚೆ, ಮಾತಿಗಿಳಿದರು ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಅನಗತ್ಯ ವಿಚಾರಗಳು ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ, ಅದರಿಂದ ದೂರ ಇರಿ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಕಟಕ: ನಿಮ್ಮ ವರ್ತನೆ ಕುಟುಂಬದವರ ಸಿಟ್ಟಿಗೆ ಕಾರಣವಾಗಬಹುದು. ಆರ್ಥಿಕವಾಗಿ ಲಾಭ, ಪ್ರಯಾಣವು ಗಡಿಬಿಡಿ ಹಾಗೂ ಒತ್ತಡದಿಂದ ಕೂಡಿರುತ್ತದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ, ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಸಿಂಹ: ಆರೋಗ್ಯದ ಕುರಿತಾಗಿ ಖರ್ಚು ಮಾಡುವ ಸಾಧ್ಯತೆ. ಸಕಾರಾತ್ಮಕ ಆಲೋಚನೆಗಳು ಇರಲಿ.
ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಪ್ರಭಾವಿ ವ್ಯಕ್ತಿಗಳ ಸಂಪರ್ಕ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕನ್ಯಾ: ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅನಿವಾರ್ಯ ಕಾರಣಗಳಿಂದ ಖರ್ಚು, ಉದ್ಯೋಗಿಗಳಿಗೆ ಕಿರಿಕಿರಿ, ಮನಸ್ಸಿಗೆ ನೋವು ತರುವ ಸಾಧ್ಯತೆ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ತುಲಾ: ಆಶಾವಾದಿಗಳಾಗಿರುವ ನಿಮಗೆ ಇಂದು ಯಶಸ್ಸು ಸಿಗಲಿದೆ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ. ವಿವಾಹದ ಕುರಿತು ಚರ್ಚೆ. ಆತುರ ಹಾಗೂ ಹಠಮಾರಿ ಸ್ವಭಾವವನ್ನು ಕಡಿಮೆ ಮಾಡಿಕೊಳ್ಳಿ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ವೃಶ್ಚಿಕ: ಸಂಗಾತಿಯೊಂದಿಗೆ ಮನೆಯ ಆಗುಹೋಗುಗಳ ಕುರಿತು ಚರ್ಚೆ. ಮಕ್ಕಳಿಂದ ಮನೆಯಲ್ಲಿ ಸಾಮರಸ್ಯದ ವಾತಾವರಣ ನಿರ್ಮಾಣಗೊಳ್ಳುವ ಸಾಧ್ಯತೆ. ಶೈಕ್ಷಣಿಕವಾಗಿ ಖರ್ಚು. ಸಕಾರಾತ್ಮಕ ಬದಲಾವಣೆ ನಿಮ್ಮ ಮನಸ್ಸಿಗೆ ಮುದ ನೀಡುತ್ತದೆ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಧನಸ್ಸು: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತತರ ಗಮನ ಸೆಳೆಯುವುದು. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು.
ಕುಟುಂಬದ ಸದಸ್ಯರೊಂದಿಗೆ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಮಕರ: ದೈಹಿಕ ಶ್ರಮದಿಂದ ನಿಮಗೆ ಹೆಚ್ಚು ಆಯಾಸವಾಗಲಿದೆ. ಯೋಜಿತ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಲಾಭಕಾರಕ. ನಿಮ್ಮ ಪ್ರಾಮಾಣಿಕತೆ ನಿಮಗೆ ಯಶಸ್ಸು ತಂದು ಕೊಡುವುದು. ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕುಂಭ: ಆರೋಗ್ಯದ ಕುರಿತಾಗಿ ನಿರ್ಲಕ್ಷ್ಯ ತೊರಿಸುವುದು ಬೇಡ. ಹಣಕಾಸಿನ ವಿಷಯದಲ್ಲಿ ತಾಪತ್ರಯ ಅನಿಸುತ್ತದೆ. ಖರ್ಚು ಹೆಚ್ಚಾಗುವ ಸಾಧ್ಯತೆ. ಸಂಗಾತಿಯ ಮಾತುಗಳಿಗೆ ಮಹತ್ವ ಕೊಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಮೀನ: ವ್ಯಾಜ್ಯಗಳು ಹೆಚ್ಚಾಗದಂತೆ ಎಚ್ಚರಿಕೆ ವಹಿಸಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣ. ಸ್ಮರಣಿಯ ದಿನ ಇಂದಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

Exit mobile version