Site icon Vistara News

Horoscope Today | ಕನ್ಯಾ ರಾಶಿಯವರಿಗೆ ಇಂದು ಶುಭಫಲ, ನಿಮ್ಮ ಭವಿಷ್ಯ ಹೇಗಿದೆ?

horoscope today read your daily horoscope

Horoscope Today

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ.

ತಿಥಿ: ದ್ವಾದಶಿ 25:09 ವಾರ: ಶನಿವಾರ
ನಕ್ಷತ್ರ: ಭರಣಿ  10:22 ಯೋಗ: ಧೃತಿ 29:52
ಕರಣ: ಕೌಲವ 12:07

ಸೂರ್ಯೋದಯ: 05:44  ಸೂರ್ಯಾಸ್ತ: 07:14

ರಾಹು ಕಾಲ : ಪ್ರಾತಃ ಕಾಲ 9.00 ರಿಂದ 10.30
ಗುಳಿಕಕಾಲ:  ಪ್ರಾತಃ ಕಾಲ  6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಆಶಾ ಭಂಗ ಮಾಡುವ ಸಾಧ್ಯತೆ. ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು. ಪ್ರಯಾಣದ ಸಾಧ್ಯತೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ:

ವೃಷಭ: ಹಣದ ಹೂಡಿಕೆ ಕುರಿತು ಆಲೋಚನೆ. ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣ. ಸ್ನೇಹಿತರು,ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಯಾವುದೇ ಆತುರದ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಕಟಕ: ನ್ಯಾಯಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿವೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣ. ಸಂಗಾತಿಯ ಮನಸ್ಸಿನ ಭಾವನೆಗಳನ್ನ ಅರ್ಥ ಮಾಡಿಕೊಳ್ಳವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮ. ವ್ಯಾಪರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ಭೂ ಸಂಭಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಲಾಭವಾಗಲಿದೆ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣ. ಪ್ರಯಾಣ ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ, ಹೊಡಿಕೆ ವ್ಯವಹಾರದಲ್ಲಿ ಪ್ರಗತಿ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗಾಗದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ. ಆಲಸ್ಯತನದಿಂದ ಕಾರ್ಯ ಮುಂದುಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಜಾಗ್ರತೆ ಇರಲಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಮಕರ: ಹಾಸ್ಯ ಪ್ರವೃತ್ತಿಯಿಂದ, ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದವರು ನಿಮ್ಮ ಬಗೆಗೆ ಹೆಚ್ಚು ಕಾಳಜಿ ವಹಿಸುವರು. ಆರೋಗ್ಯ‌ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಕುಂಭ: ಶೀಘ್ರ ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಅಪಾಯ ತಂದಿತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಸಂಗಾತಿಯ ಮಾತುಗಳು ಹಿತವೇನಿಸಿದರೂ, ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

Exit mobile version