ಇಂದಿನ ಪಂಚಾಂಗ
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಜ್ಯೇಷ್ಠ ಮಾಸ, ಕೃಷ್ಣ ಪಕ್ಷ.
ತಿಥಿ: ಚತುರ್ದಶಿ ವಾರ: ಸೋಮವಾರ
ನಕ್ಷತ್ರ: ರೋಹಿಣಿ 16:00 ಯೋಗ: ಶೂಲ 06:45
ಕರಣ: ವಿಷ್ಟಿ (ಭದ್ರ)16:37 ದಿನ ವಿಶೇಷ: ಕೆಂಪೇಗೌಡ ಜಯಂತಿ
ಸೂರ್ಯೋದಯ: 05:44 ಸೂರ್ಯಾಸ್ತ: 07:1೫
ರಾಹು ಕಾಲ : ಪ್ರಾತಃ ಕಾಲ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಪ್ರಾತಃ ಕಾಲ 10.30 ರಿಂದ 12.00
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಆರೋಗ್ಯದಲ್ಲಿ ವ್ಯತ್ಯಾಸ, ಅಗತ್ಯ ವಸ್ತುಗಳ ಖರೀದಿ ಯಿಂದ ಖರ್ಚು, ನಿಮ್ಮ ಆಪ್ತರು ಸಮಸ್ಯೆಯನ್ನು ಉಂಟು ಮಾಡುವ ಸಾಧ್ಯತೆ. ಅನಗತ್ಯ ಒತ್ತಡ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ಸಂಗಾತಿಯ ಮಧುರ ಮಾತುಗಳು ಹಿತವೆನಿಸುಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: ೭
ವೃಷಭ: ದೀರ್ಘಕಾಲದ ಪ್ರಯತ್ನ ನಿಮಗೆ ಯಶಸ್ಸು ತಂದು ಕೊಡಲಿದೆ. ಈ ಹಿಂದೆ ನೀವು ಮಾಡಿದ ಸಹಾಯ ಇಂದು ಫಲ ನೀಡಲಿದೆ. ಹಿರಿಯರಿಂದ ಪ್ರಶಂಸೆ ವ್ಯಕ್ತವಾಗಲಿದೆ. ಉದ್ಯೋಗದಲ್ಲಿ ಯಶಸ್ಸು. ವ್ಯಾಪಾರ ಅಭಿವೃದ್ಧಿ ಕಾಣಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: ೬
ಮಿಥುನ: ಆಹಾರ ಹಿತ ಮಿತವಾಗಿರಲಿ, ಇಲ್ಲವಾದಲ್ಲಿ ಆರೋಗ್ಯದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುದಂತೆ ಎಚ್ಚರಿಕೆ ವಹಿಸಿ, ಆತುರದಲ್ಲಿ ಅತಿರೇಕದ ಮಾತುಗಳು ಆಡಿ ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: ೪
ಕಟಕ: ಉದ್ಯೋಗಿಗಳಿಗೆ ಉತ್ತಮ ಯಶಸ್ಸು ಸಿಗಲಿದೆ. ಅವಶ್ಯಕ ಖರೀದಿಯ ಕಾರಣಗಳಿಂದ ಖರ್ಚು, ಅಷ್ಟೇ ಹಣಕಾಸಿನ ಹರಿವು ಹೆಚ್ಚಾಗಲಿದೆ. ಕುಟುಂಬದಲ್ಲಿ ಚರ್ಚಿಸುವ ವಿಷಯಗಳು ನಿಮ್ಮನ್ನು ಭಾವುಕರನ್ನಾಗಿ ಮಾಡುವುದು. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: ೭
ಸಿಂಹ: ಸೃಜನಾತ್ಮಕ ಕೆಲಸ ಕಾರ್ಯಗಳಿಂದ ಯಶಸ್ಸು ಸಿಗಲಿದೆ.
ಉತ್ತಮ ಆರೋಗ್ಯ. ಆರ್ಥಿಕವಾಗಿ ಸದೃಢವಾಗಲಿದ್ದಿರಿ. ಅತಿಥಿಗಳ ಆಗಮನ ಸಂತಸ ತರಲಿದೆ. ಉದ್ಯೋಗಿಗಳಿಗೆ ಕೆಲಸದ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: ೬
ಕನ್ಯಾ: ಹೂಡಿಕೆ ವ್ಯವಹಾರದಲ್ಲಿ ಹೆಚ್ಚು ಲಾಭ ಸಿಗಲಿದೆ. ನಿಮ್ಮ ನಡವಳಿಕೆ ಕುಟುಂಬದ ಸದಸ್ಯರಿಗೆ ಕೋಪ ತರಿಸಬಹುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ವ್ಯಾಪರದಲ್ಲಿ ಹೆಚ್ಚು ಲಾಭ ಗಳಿಸಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: ೪
ತುಲಾ: ಅನಿರೀಕ್ಷಿತ ಘಟನೆಗಳು ಕೆಲವು ಸಮಸ್ಯೆಗಳನ್ನು ಉಂಟುಮಾಡಬಹುದು. ಒತ್ತಡಕ್ಕೆ ಒಳಗಾಗದೆ, ತಾಳ್ಮೆಯಿಂದ ಇರಿ. ಹಿರಿಯರ ಮಾರ್ಗದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಭೇಟಿ ಮನಸ್ಸಿಗೆ ಸಮಾಧಾನ ತರುವುದು. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: ೭
ವೃಶ್ಚಿಕ: ಪೋಷಕರ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ, ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಕೆಲಸ ಕಾರ್ಯಗಳು ಆಲಸ್ಯದಿಂದ ಸಾಗಲಿದ್ದು, ಮುಂಜಾಗ್ರತೆ ವಹಿಸಿ. ವ್ಯಾಪರ ವ್ಯವಹಾರದಲ್ಲಿ ಸಾಮಾನ್ಯ. ಕೌಟುಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: ೮
ಧನಸ್ಸು: ಅಧಿಕ ಉತ್ಸಾಹದಿಂದ ಇರುವಿರಿ. ಆದರೂ ಕೆಲಸದ ಒತ್ತಡ ತಪ್ಪದು. ವ್ಯಾಪರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಬರುವ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸುವ ಶಕ್ತಿ ಪ್ರದರ್ಶನ ಮಾಡಲಿದ್ದರಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆರೋಗ್ಯ ಉತ್ತಮ. ಕೌಟುಂಬಿಕ ಮಿಶ್ರ ಫಲ.
ಅದೃಷ್ಟ ಸಂಖ್ಯೆ: ೫
ಮಕರ: ಮುಂಗೋಪದಿಂದ ಮಾತುಗಳನ್ನು ಆಡಿ ತೊಂದರೆಯಿಲ್ಲಿ ಸಿಕ್ಕು, ಅಪಾಯ ತಂದುಕೊಳ್ಳುವುದು ಬೇಡ. ಭೂ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಜೊತೆಗೆ ಇರುವವರೊಂದಿಗೆ ಅನಾವಶ್ಯಕ ಜಗಳಗಳು ನಡೆಯುವ ಸಾಧ್ಯತೆ ಇದೆ. ಮಾತಿನಲ್ಲಿ ನಿಗಾ ಇರಲಿ. ಉದ್ಯೋಗಿಗಳಿಗೆ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: ೫
ಕುಂಭ: ಅನಾವಶ್ಯಕ ವಿಚಾರಗಳು ನಿಮ್ಮ ಮಾನಸಿಕ ನೆಮ್ಮದಿ ಹಾಳುಮಾಡುವ ಸಾಧ್ಯತೆ. ಆರ್ಥಿಕ ಪ್ರಗತಿ ಸಾಧಾರಣ. ಸಹನೆ ಕಳೆದುಕೊಳ್ಳುವುದು ಬೇಡ. ನೆರೆಹೊರೆಯವರ ಜೊತೆಗೆ ವಾದಕ್ಕೆ ಇಳಿಯುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: ೩
ಮೀನ: ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ನಿಮ್ಮ ಅಭಿಪ್ರಾಯಗಳನ್ನು ಇತರರು ಓಪ್ಪಿಕೊಳ್ಳದಿರಬಹುದು. ಮನೆಯಲ್ಲಿ ಹಿರಿಯರೊಂದಿಗೆ ಮಾತಿಗೆ ಇಳಿಯುವುದು ಬೇಡ. ವ್ಯಾಪರ ವ್ಯವಹಾರ ಮಧ್ಯಮ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: ೧
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com