Site icon Vistara News

Horoscope Today: ಇಂದು ಶುಕ್ಲಾದೇವಿ ಪೂಜಿಸುವ ದಿನ; ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ?

horoscope today

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ
ತಿಥಿ:  ಸಪ್ತಮಿ 07:54 ವಾರ:  ಮಂಗಳವಾರ
ನಕ್ಷತ್ರ:  ಪೂರ್ವ ಫಾಲ್ಗುಣಿ 27:48 ಯೋಗ: ವಜ್ರ 28:25
ಕರಣ: ವಣಿಜ 07:54 ದಿನ ವಿಶೇಷ: ಶುಕ್ಲಾದೇವಿ ಪೂಜೆ, ವಿಶ್ವ ಸುರಕ್ಷಿತ ಆಹಾರ ದಿನ

ಸೂರ್ಯೋದಯ :  05:42               ಸೂರ್ಯಾಸ್ತ  : 07:09

ರಾಹು ಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ:  ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಕಾಲ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಆರೋಗ್ಯದಲ್ಲಿ ಪ್ರಗತಿ. ವ್ಯಾಪರ ವ್ಯವಹಾರದಲ್ಲಿ ಲಾಭ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ಧಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಹದಗೆಡಲು ಹಾದಿ ಮಾಡಿಕೊಡುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳಲ್ಲಿ ನಿಧಾನ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ಸಿಗಲಿದೆ. ಆರ್ಥಿವಾಗಿ ಬಲ ಸಿಗಲಿದೆ. ದ್ವಿಸ್ವಭಾವದರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯದಲ್ಲಿ ಪ್ರಗತಿ.
ಅದೃಷ್ಟ ಸಂಖ್ಯೆ: 2

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತಿರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ. ಆರೋಗ್ಯದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ತುಲಾ: ಆಪ್ತರ ಮಾತುಗಳು ಅಗಾದ ಪರಿಣಾಮ ಬೀರುವ ಸಾಧ್ಯತೆ. ಹಣಕಾಸ ವ್ಯವಹಾರದಲ್ಲಿ ಕುಂಠಿತ. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ದೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ. ನಿಮ್ಮ ಉದಾರ ವರ್ತನೆಯನ್ನು ಬಳಸಿ ಕೊಂಡು ಬೆರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

ಧನಸ್ಸು: ದೈಹಿಕ ಆಯಾಸವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಕೆಲಸಕಾರ್ಯಗಳಲ್ಲಿ ನಿಧಾನ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3

ಮಕರ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಕಾರ್ಯದಲ್ಲಿ ಪ್ರಗತಿ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

Exit mobile version