Site icon Vistara News

Horoscope Today | ತುಲಾ ರಾಶಿಯ ಉದ್ಯೋಗಿಗಳಿಗೆ ಶುಭಕಾಲ; ನಿಮ್ಮ ಭವಿಷ್ಯ ಹೇಗಿದೆ?

Horoscope Today daily horoscope

Horoscope Today

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.

ತಿಥಿ: ಷಷ್ಠಿ 19:28 ವಾರ: ಮಂಗಳವಾರ
ನಕ್ಷತ್ರ: ಪೂರ್ವಾ 10:29 ಯೋಗ: ವ್ಯತಿಪತಾ 12:13
ಕರಣ: ತೈತುಲ 19:28

ಸೂರ್ಯೋದಯ: 0೬.೦೩  ಸೂರ್ಯಾಸ್ತ: 07.೦೦

ರಾಹು ಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ:  ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಪ್ರಾತಃ ಕಾಲ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ದೈಹಿಕ ಶ್ರಮ ಹೆಚ್ಚಲಿದೆ. ಸಂಶಯಾಸ್ಪದವಾದ ಹಣಕಾಸು ವ್ಯವಹಾರದಲ್ಲಿ ತೊಡಗುವುದು ಬೇಡ. ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆ. ಆಪ್ತರಿಂದ ಸಿಹಿ ಸುದ್ದಿ. ದಿನದ ಮಟ್ಟಿಗೆ ಖರ್ಚು. ಸಂಗಾತಿಯ ಮಧುರ ಮಾತುಗಳು ಹಿತವೇನಿಸುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವೃಷಭ: ಕುಟುಂಬದ ಆಪ್ತರಿಂದ ಆರ್ಥಿಕ ಸಹಾಯದ ಬೇಡಿಕೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ವಿದ್ಯಾರ್ಥಿಗಳು ಮನೋಬಲ ಹೆಚ್ಚಿಸಿಕೊಳ್ಳುವುದು ಅವಶ್ಯಕ. ಅಧೈರ್ಯ ಕಾಡಬಹುದು. ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗುವುದು. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ಮಿಥುನ: ಸದಾ ಕಲ್ಪನೆಯಲ್ಲಿ ಕನಸುಗಳನ್ನು ಕಾಣುವುದು ವೃತಾ ಕಾಲಹರಣ. ಆರ್ಥಿಕವಾಗಿ ಬೇರೆಯವರಿಗೆ ಸಹಾಯ ಮಾಡಿ ನೀವು ಹಣಕಾಸಿನ ಸಮಸ್ಯೆಯಲ್ಲಿ ಸಿಲುಕುವುದು ಬೇಡ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ಕಟಕ: ಕುಟುಂಬದ ಸದಸ್ಯರಿಂದ ಆರ್ಥಿಕ ಬೆಂಬಲ ಸಿಗಲಿದೆ.
ಉದ್ಯೋಗಿಗಳಿಗೆ ಶುಭಫಲ. ಹಣದ ಹರಿವು ಹೆಚ್ಚಾಗಲಿದೆ. ವ್ಯಾಪಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ಆಪ್ತ ವ್ಯಕ್ತಿಗಳೊಂದಿಗೆ ಮಾತುಕತೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ಸಿಂಹ: ಕೆಲವು ಘಟನೆಗಳು ಮನಸ್ಸಿನ ಮೇಲೆ ಪರಿಣಾಮ ಬೀರುವವು. ಆರೋಗ್ಯ ಪರಿಪೂರ್ಣ. ಸಹೋದ್ಯೋಗಿಗಳಿಂದ ಬೆಂಬಲ ಸಿಗಲಿದೆ. ಕ್ಷೇತ್ರ ದರ್ಶನ, ಆಧ್ಯಾತ್ಮಿಕ ಗುರುಗಳ ಮಾರ್ಗದರ್ಶನ ಸಿಗಲಿದೆ. ಉದ್ಯೋಗಿಗಳಿಗೆ ಕಿರಿಕಿರಿಯಾಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ದೀರ್ಘಕಾಲದ ಕೆಲಸ ಕಾರ್ಯಗಳು ಇಂದು ಯಶಸ್ಸನ್ನು ತಂದು ಕೊಡಲಿದೆ. ಆದಾಯದ ಮೂಲ ಹೆಚ್ಚಾಗಲಿದೆ. ಆಪ್ತರೊಂದಿಗೆ ಮಾತುಕತೆ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ, ಕುಟುಂಬದ ವಾತಾವರಣ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ತುಲಾ: ಆತ್ಮವಿಶ್ವಾಸದಿಂದ ಕೆಲಸಕಾರ್ಯಗಳಲ್ಲಿ ಪ್ರಗತಿ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಹಣಕಾಸು, ಉದ್ಯೋಗ ಹಾಗೂ ವ್ಯಾಪಾರದಲ್ಲಿ ಪ್ರಗತಿ. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭಕಾಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ವೃಶ್ಚಿಕ: ಆರೋಗ್ಯದ ಕುರಿತು ಕಾಳಜಿ ಇರಲಿ. ನ್ಯಾಯಾಲಯದಲ್ಲಿರುವ ವ್ಯಾಜ್ಯಗಳು ವಿಜಯವನ್ನು ತಂದುಕೊಡುವ ಸಾಧ್ಯತೆ. ಹಣಕಾಸು, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ಧನಸ್ಸು: ಮಾನಸಿಕ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಹಾದಿ ಅತ್ಯವಶ್ಯಕ. ಹಣಕಾಸು ವಿಷಯದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರಫಲ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ಮಕರ:  ಬುದ್ಧಿವಂತಿಕೆಯಿಂದ ಕೆಲಸಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು. ಶೀಘ್ರಕೋಪ ಅಪಾಯ ತರುವುದು. ಆರೋಗ್ಯ ಪರಿಪೂರ್ಣ. ಆರ್ಥಿಕ ಲಾಭ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:

ಕುಂಭ: ದುಂದುವೆಚ್ಚವನ್ನು ತಪ್ಪಿಸಿ. ಬುದ್ಧಿವಂತಿಕೆಯಿಂದ ಕೆಲಸಮಾಡಿ ವ್ಯರ್ಥ ಪ್ರಯತ್ನ ಮಾಡುವುದು ಬೇಡ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಮೀನ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಮಧ್ಯಮ. ಆರ್ಥಿಕವಾಗಿ ಪ್ರಗತಿ. ಸಂಗಾತಿ ಇಂದು ನಿಮ್ಮೊಂದಿಗೆ ಮುಖ್ಯ ವಿಷಯದ ಕುರಿತು ಚರ್ಚಿಸಬಹುದು. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

Exit mobile version