Horoscope Today | ವೃಶ್ಚಿಕ ರಾಶಿಯವರ ಜನಪ್ರಿಯತೆ ಹೆಚ್ಚಲಿದೆ; ನಿಮ್ಮ ಭವಿಷ್ಯ ಹೇಗಿದೆ ನೋಡಿ - Vistara News

ಪ್ರಮುಖ ಸುದ್ದಿ

Horoscope Today | ವೃಶ್ಚಿಕ ರಾಶಿಯವರ ಜನಪ್ರಿಯತೆ ಹೆಚ್ಚಲಿದೆ; ನಿಮ್ಮ ಭವಿಷ್ಯ ಹೇಗಿದೆ ನೋಡಿ

ಶುಭಕೃತ ನಾಮ ಸಂವತ್ಸರ, ಗ್ರೀಷ್ಮ ಋತು, ಆಷಾಢ ಮಾಸದ ನವಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.

ತಿಥಿ: ನವಮಿ 18:24 ವಾರ: ಶುಕ್ರವಾರ
ನಕ್ಷತ್ರ: ಚಿತ್ತಾ  12:12 ಯೋಗ: ಶಿವ 08:59
ಕರಣ: ಬಾಲವ 07:01

ಸೂರ್ಯೋದಯ: 0೬.೦೩  ಸೂರ್ಯಾಸ್ತ: 07.೦೦

ರಾಹು ಕಾಲ : ಪ್ರಾತಃ ಕಾಲ 10.30 ರಿಂದ 12.00
ಗುಳಿಕಕಾಲ:  ಪ್ರಾತಃ ಕಾಲ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Horoscope Today)

Horoscope Today

ಮೇಷ: ಆರೋಗ್ಯ ಮಧ್ಯಮ. ಹಣಕಾಸು ಬಾಕಿ ವ್ಯವಹಾರಗಳು ಪೂರ್ಣವಾಗುವವು. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ . ಶುಭ ಕಾರ್ಯಗಳಿಗೆ ಆಮಂತ್ರಣ ಸಿಗುವ ಸಾಧ್ಯತೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಷಭ: ಆರ್ಥಿಕವಾಗಿ ಬಳಲುವ ಸಾಧ್ಯತೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರ ಮಾಡುವಿರಿ. ಹಿಂದೆ ನಡೆದ ಘಟನೆ ನೆನಪಿಸಿ ಕೊರಗುವುದು ಬೇಡ. ಸಹದ್ಯೋಗಿಗಳಿಂದ ಅಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ತೊಂದರೆಗೊಳಗಾಗುವಂತೆ ಮಾಡುವ ಸಾಧ್ಯತೆ. ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ, ಕೆಲಸ ಕಾರ್ಯಗಳು ನಿಧಾನ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭಫಲ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ, ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ. ಜನಪ್ರೀಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಶುಭಫಲ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದಲ್ಲಿ ಹೊಸತರ ಕುರಿತು ಆಲೋಚನೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆಯಿಂದ ಚಾಲನೆ ಮಾಡಿ, ಅಪಘಾತ ಸಂಭವ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ದಿಡೀರ್ ಪ್ರಯಾಣ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಆರೋಗ್ಯ ಮಧ್ಯಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Parashuram D : ವಿಸ್ತಾರ ಮೀಡಿಯಾದ ನೂತನ ಜಿ.ಎಮ್ ಆಗಿ ಪರಶುರಾಮ ಡಿ

Parashuram D: ವಿಸ್ತಾರ ಮೀಡಿಯಾದಲ್ಲಿ ಸಿಒಒ (ಚೀಫ್‌ ಆಪರೇಷನಲ್‌ ಆಫೀಸರ್‌) ಆಗಿ ಕಾರ್ಯ ನಿರ್ವಹಿಸುತ್ತಿದ್ದ ಪರಶುರಾಮ್‌ ಡಿ ಅವರಿಗೆ ಜಿ.ಎಮ್‌ ಆಗಿ ಪದೋನ್ನತಿ ನೀಡಲಾಗಿದೆ. ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ಎರಡು ದಶಕಗಳ ಅನುಭವ ಹೊಂದಿರುವ ಪರಶುರಾಮ್ ಡಿ ಅವರು ನುರಿತ ತಂತ್ರಜ್ಞರ ತಂಡದ ಮುಖ್ಯಸ್ಥರಾಗಿ ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾಗಿದ್ದಾರೆ. ನಾಡಿನಾದ್ಯಂತ ಪ್ರಸಿದ್ಧಿ ಪಡೆಯುತ್ತಿರುವ ʼವಿಸ್ತಾರ ನ್ಯೂಸ್‌ʼ ಚಾನೆಲ್ ಆರಂಭಿಕ ಕಾರ್ಯದಿಂದ ಹಿಡಿದು ಇಲ್ಲಿಯವರೆಗೆ ಪ್ರತಿ ಹೆಜ್ಜೆಯಲ್ಲಿಯೂ ಪರಿಶ್ರಮ ವಹಿಸಿದ್ದಾರೆ.

VISTARANEWS.COM


on

Parashuram D
Koo

ಬೆಂಗಳೂರು: ವಿಸ್ತಾರ ಮೀಡಿಯಾದ ನೂತನ ಜಿ ಎಮ್‌ (ಆಪರೇಷನ್‌) ಆಗಿ ಪರಶುರಾಮ್ ಡಿ (Parashuram D) ಅವರನ್ನು ನೇಮಕ ಮಾಡಲಾಗಿದೆ. ಪರಶುರಾಮ್‌ ಅವರು ಈಗ ವಿಸ್ತಾರ ಮೀಡಿಯಾದಲ್ಲಿ ಸಿಒಒ (ಚೀಫ್‌ ಆಪರೇಷನಲ್‌ ಆಫೀಸರ್‌) ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮಾಧ್ಯಮ ಕ್ಷೇತ್ರದಲ್ಲಿ ಸುಮಾರು ಎರಡು ದಶಕಗಳ ಅನುಭವ ಹೊಂದಿರುವ ಪರಶುರಾಮ್ ಡಿ ಅವರು ನುರಿತ ತಂತ್ರಜ್ಞರ ತಂಡದ ಮುಖ್ಯಸ್ಥರಾಗಿ ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸುವಲ್ಲಿ ಅಮೂಲ್ಯ ಕೊಡುಗೆ ನೀಡಿದ್ದಾರೆ. ಈ ಮೂಲಕ ಮಾಧ್ಯಮ ರಂಗದಲ್ಲಿ ಹೆಸರುವಾಸಿಯಾಗಿದ್ದಾರೆ.

ಟೆಲಿವಿಷನ್ ಲೋಕದಲ್ಲಿನ ಎಲ್ಲಾ ಬಗೆಯ ವಿಡಿಯೊ – ಆಡಿಯೊ ಪ್ರೊಡಕ್ಷನ್ ಮತ್ತು ಬ್ರಾಡ್ಕಾಸ್ಟ್ ವಿಭಾಗದಲ್ಲಿ ಭಾರತದಲ್ಲಿಯೇ ಅತ್ಯುತ್ತಮ ತಂತ್ರಜ್ಞರೆಂದು ಗುರುತಿಸಲ್ಪಡುವ ಕೆಲವೇ ಕೆಲವು ಮಂದಿಯಲ್ಲಿ ಪರಶುರಾಮ್ ಅವರೂ ಒಬ್ಬರು ಎಂಬುದು ಹೆಮ್ಮೆಯ ಸಂಗತಿ. ಅವರ ಕಾರ್ಯವ್ಯಾಪ್ತಿ ಅಷ್ಟಕ್ಕೇ ನಿಲ್ಲದೇ ಇನ್ನೂ ಮುಂದಕ್ಕೆ ಹೋಗಿ, ಟಿವಿ ಮಾಧ್ಯಮ ಸಂಸ್ಥೆಗಳನ್ನು ಕಟ್ಟುವಲ್ಲಿಯೂ ಮುಂದುವರಿದಿದೆ. ಆರಂಭದ ಕಾರ್ಯಯೋಜನೆ ರೂಪಿಸುವ ಹಂತದಿಂದ ಹಿಡಿದು, ನಿರ್ಮಾಣ ಕಾರ್ಯ, ಲೋಕಾರ್ಪಣೆವರೆಗಿನ ಎಲ್ಲಾ ಹಂತದಲ್ಲೂ ದಕ್ಷತೆಯಿಂದ ಕಾರ್ಯನಿರ್ವಹಿಸಿ ಅದಕ್ಕೆ ಬೇಕಾಗಿರುವ ನುರಿತ ತಂತ್ರಜ್ಞರ ತಂಡವನ್ನು ಕಟ್ಟಿ ಮುನ್ನಡೆಸುವ ಅದಮ್ಯ ಸಾಮರ್ಥ್ಯವನ್ನು ಇವರು ಬೆಳೆಸಿಕೊಂಡಿದ್ದಾರೆ. ಇದಕ್ಕೆ ಸಾಕ್ಷಿ ʼವಿಸ್ತಾರ ನ್ಯೂಸ್‌ʼ ಕನ್ನಡ ವಾಹಿನಿ.

‘ಈ ಟಿವಿ’ಯಿಂದ ಬಿಗ್‌ ಬಾಸ್‌ವರೆಗೆ

ಪರಶುರಾಮ್‌ ಅವರು ಕನ್ನಡದ ಹೆಸರಾಂತ ಚಾನೆಲ್ ಎನಿಸಿಕೊಂಡ ʼಈ ಟಿವಿʼ ಕನ್ನಡ ವಾಹಿನಿಯ ತಾಂತ್ರಿಕ ವಿಭಾಗದಲ್ಲಿ ಕೆಲಸವನ್ನು ಪ್ರಾರಂಭಿಸಿದ್ದರು. ಕಿರುತೆರೆಯ ಮಾಧ್ಯಮ ಲೋಕದಲ್ಲಿ ಹೊಸ ಹೊಸ ಜವಾಬ್ದಾರಿಯನ್ನು, ಸಾಹಸವನ್ನು ಕೈಗೊಳ್ಳುತ್ತಾ ಟೆಕ್ನಿಕಲ್ ವಿಚಾರದಲ್ಲಿ ಹೆಚ್ಚು ಆಳವಾಗಿ ತಮ್ಮನ್ನು ತಾವು ತೊಡಗಿಸಿಕೊಂಡರು. ಮುಂದೆ ʼಸಮಯʼ ಮತ್ತು ʼಜನಶ್ರೀʼ ನ್ಯೂಸ್ ಚಾನೆಲ್‌ನಲ್ಲಿ ತಮ್ಮ ಕ್ರಿಯೇಟಿವಿಟಿಯಿಂದ ಮಾಧ್ಯಮ ಲೋಕದಲ್ಲಿ ಸಾಕಷ್ಟು ಹೆಸರನ್ನು ಸಂಪಾದಿಸಿದರು. ಇಂದು ನಾಡಿನಾದ್ಯಂತ ಮನೆ ಮಾತಾಗಿರುವ ರಿಯಾಲಿಟಿ ಶೋ ʼಬಿಗ್ ಬಾಸ್ʼ ಕನ್ನಡದ ಆನ್ ಲೈನ್ ತಾಂತ್ರಿಕ ವಿಭಾಗದ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸಿ ‘ಎಂಡಮೋಲ್’ ಕಂಪನಿಯಿಂದ ವಿಶೇಷ ಪ್ರಶಂಸೆಗೆ ಪಾತ್ರರಾಗಿದ್ದಾರೆ.

ಈಗಿನ ʼರಿಪಬ್ಲಿಕ್ ಕನ್ನಡʼ ಚಾನೆಲ್ ಆಗಿ ಪರಿವರ್ತನೆಯಾಗಿರುವ ಅಂದಿನ ʼದಿಗ್ವಿಜಯ ನ್ಯೂಸ್ʼ ಚಾನೆಲ್‌ನಲ್ಲಿ “ಪ್ರೊಡಕ್ಷನ್ ಹೆಡ್” ಆಗಿ ತಮ್ಮದೇ ಆದ ಕ್ರಿಯಾಶೀಲ ತಂಡವನ್ನು ರಚಿಸಿಕೊಂಡು ದಿಗ್ವಿಜಯ ಚಾನೆಲ್ ಅನ್ನು ಕ್ರಿಯೇಟಿವ್ ಆಗಿ ಮುನ್ನಡೆಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.

ಅಡ್ವರ್ಟೈಸಿಂಗ್ ಮತ್ತು ಬ್ರಾಂಡಿಂಗ್ ಛಾಪು

ತಮ್ಮದೇ ಆದ “ಅಧಿತಿ ಲಿಂಕ್ ಮೀಡಿಯಾ” ಎಂಬ ಸಂಸ್ಥೆಯ ಮೂಲಕ ಅಡ್ವರ್ಟೈಸಿಂಗ್ ಮತ್ತು ಬ್ರಾಂಡಿಂಗ್ ಲೋಕದಲ್ಲಿ ಹೊಸ ಛಾಪನ್ನೇ ಇವರು ಮೂಡಿಸಿ ಅಮೆಜಾನ್ ಪ್ರೈಮ್ ಮತ್ತು ಸ್ಪೈಸ್ ಕಂಪನಿಯೊಂದಿಗೆ ಚಲನಚಿತ್ರಗಳ ಪ್ರಮೋಷನ್ ವಿಭಾಗದಲ್ಲಿ ಹಾಗೂ ಮೈತ್ರಿ ಮೂವೀಸ್, ಗೀತಾ ಪಿಕ್ಚರ್ಸ್‌ನಂತಹ ತೆಲುಗಿನ ದೊಡ್ಡ, ದೊಡ್ಡ ಸಂಸ್ಥೆಯೊಂದಿಗೆ ಪ್ರಚಾರ ವಿಭಾಗದಲ್ಲಿ ಪಾಲುದಾರರಾಗಿ ಯಶಸ್ವಿಯಾಗಿದ್ದಾರೆ. ಅಲ್ಲದೇ ಟೈಮ್ಸ್ ಗ್ರೂಪ್‌ನ ಇವೆಂಟ್ಸ್‌ಗಳನ್ನು ಸಮರ್ಥವಾಗಿ ತಮ್ಮ ಅಧಿತಿ ಲಿಂಕ್ ಮೀಡಿಯಾದ ಮೂಲಕ ನಿಭಾಯಿಸಿದ್ದಾರೆ. ತಮ್ಮದೇ ಆದ ಸಂಸ್ಥೆಯೊಂದನ್ನು ಕಟ್ಟಿ ಬೆಳೆಸಿ ಆಡಳಿತಾತ್ಮಕ ವಿಚಾರದಲ್ಲಿ ಹೆಚ್ಚಿನ ಅನುಭವವನ್ನು ಹೊಂದಿದ್ದಾರೆ.

ವಿಸ್ತಾರ ನ್ಯೂಸ್​​ನಲ್ಲಿ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ʼವಿಸ್ತಾರ ನ್ಯೂಸ್‌ʼ ಹಿಂದಿನ ಶಕ್ತಿ

ನಾಡಿನಾದ್ಯಂತ ಪ್ರಸಿದ್ಧಿ ಪಡೆಯುತ್ತಿರುವ ʼವಿಸ್ತಾರ ನ್ಯೂಸ್‌ʼ ಚಾನೆಲ್ ಆರಂಭದ ಮೊದಲ ಸದಸ್ಯರಾಗಿ, ಚಾನೆಲ್ ಪ್ರಾರಂಭಿಸಬೇಕೆಂಬ ಮೊದಲ ಹೆಜ್ಜೆಯಿಂದ ಹಿಡಿದು ಇಲ್ಲಿಯವರೆಗೆ ಪ್ರತಿ ಹೆಜ್ಜೆಯಲ್ಲಿಯೂ ಪರಿಶ್ರಮ ವಹಿಸಿದ್ದಾರೆ. ಪೂರ್ವ ತಯಾರಿಯಿಂದ ಹಿಡಿದು ಚಾನೆಲ್ ಲೋಕಾರ್ಪಣೆಯವರೆಗೆ ಆಡಳಿತ ಮಂಡಳಿ ಹಾಗೂ ಸಹೋದ್ಯೋಗಿಗಳ ಜೊತೆಗಿದ್ದು ಅವರು ಪಟ್ಟ ಕಠಿಣ ಪರಿಶ್ರಮ ಹಾಗೂ ಅವರ ನಿಷ್ಠೆ, ಪ್ರಾಮಾಣಿಕತೆ, ಬದ್ಧತೆಯ ಫಲವಾಗಿ ಈಗ ಸಂಸ್ಥೆಯ ಉನ್ನತವಾದ ಜವಾಬ್ದಾರಿಯನ್ನು ನಿರ್ವಹಿಸುವ ಹಂತಕ್ಕೆ ತಲುಪಿದ್ದಾರೆ.

ಶುಭ ಹಾರೈಕೆ

ಮಾಧ್ಯಮ ಲೋಕದಲ್ಲಿನ ಎಲ್ಲಾ ಹಂತದ ಅವರ ಒಟ್ಟೂ ಅನುಭವಕ್ಕೆ ವಿಸ್ತಾರ ಮೀಡಿಯಾ ಸಂಸ್ಥೆಯನ್ನು ಬಹಳ ಎತ್ತರಕ್ಕೆ ಕೊಂಡೊಯ್ಯುವ ಶಕ್ತಿ ಇದೆ. ಅವರ ಹಾಗೂ ಇಡೀ ವಿಸ್ತಾರ ತಂಡದ ಪರಿಶ್ರಮ ಜೊತೆಗೂಡಿ ವಿಸ್ತಾರ ಮೀಡಿಯಾ ಸಂಸ್ಥೆ ದೇಶದಲ್ಲಿಯೇ ಗುರುತಿಸಿಕೊಳ್ಳುವಂತಹ ಹೆಮ್ಮೆಯ ಸಂಸ್ಥೆಯಾಗಿ ರೂಪುಗೊಳ್ಳಲಿದೆ ಎಂಬ ವಿಶ್ವಾಸ ನಮಗಿದೆ. ಪರಶುರಾಮ್‌ ಡಿ ಅವರಿಗೆ ಶುಭ ಹಾರೈಸುತ್ತೇವೆ ಎಂದು ವಿಸ್ತಾರ ಮೀಡಿಯಾ ಪ್ರೈ. ಲಿ.ನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Continue Reading

ಪ್ರಮುಖ ಸುದ್ದಿ

Gautam Gambhir : ವಿರಾಟ್​ ಕೊಹ್ಲಿ, ರೋಹಿತ್​ ಶರ್ಮಾ 2027ರ ವಿಶ್ವ ಕಪ್​ ತನಕ ಆಡುತ್ತಾರೆ ಎಂದ ಗಂಭೀರ್​

Gautam Gambhir : ಇದು ಅತ್ಯಂತ ವೈಯಕ್ತಿಕ ನಿರ್ಧಾರ. ಅವರಲ್ಲಿ ಎಷ್ಟು ಪ್ರಮಾನದ ಕ್ರಿಕೆಟ್ ಸಾಮರ್ಥ್ಯ ಉಳಿದಿದೆ ಎಂದು ನಾನು ಹೇಳಲಾರೆ. ಅಂತಿಮವಾಗಿ, ಅದು ಅವರಿಗೆ ಬಿಟ್ಟದ್ದು. ತಂಡದ ಯಶಸ್ಸಿಗೆ ಅವರು ಎಷ್ಟು ಕೊಡುಗೆ ನೀಡಬಹುದು ಎಂಬುದನ್ನು ನಿರ್ಧರಿಸುವುದು ಆಟಗಾರರಿಗೆ ಬಿಟ್ಟದ್ದು. ಅಂತಿಮವಾಗಿ, ತಂಡವೇ ಮುಖ್ಯ. ವಿರಾಟ್ ಮತ್ತು ರೋಹಿತ್ ಏನು ನೀಡಬಲ್ಲರು ಎಂಬುದನ್ನು ಎಲ್ಲರೂ ನೋಡಿದ್ದಾರೆ ಎಂದು ಗಂಭೀರ್ ಹೇಳಿದ್ದಾರೆ.

VISTARANEWS.COM


on

Gautam Gambhir
Koo

ಹೊಸದಿಲ್ಲಿ, : ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳಲ್ಲಿ ಪ್ರಮುಖ ಪಾತ್ರ ವಹಿಸಲಿದ್ದಾರೆ ಎಂದು ನೂತನ ಮುಖ್ಯ ಕೋಚ್ ಗೌತಮ್ ಗಂಭೀರ್ (Gautam Gambhir) ಹೇಳಿದ್ದಾರೆ. ಚಾಂಪಿಯನ್ಸ್ ಟ್ರೋಫಿ ಮತ್ತು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ರೋಹಿತ್ ಮತ್ತು ಕೊಹ್ಲಿ ತಮ್ಮ ಎಲ್ಲ ಸಿದ್ಧತೆಗಳನ್ನು ನಡೆಸಲಿದ್ದಾರೆ, ಅದೇ ರೀತಿ 2025 ರ ಋತುವಿನ ನಂತರವೂ ಭಾರತ ತಂಡದಲ್ಲಿ ಮುಂದುವರಿಯಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಶ್ರೀಲಂಕಾ ಪ್ರವಾಸಕ್ಕೆ ಮುಂಚಿತವಾಗಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಗಂಭೀರ್, ಟಿ20 ವಿಶ್ವಕಪ್ ಅಥವಾ 50 ಓವರ್​ಗಳ ವಿಶ್ವಕಪ್ ಆಗಿರಲಿ, ದೊಡ್ಡ ವೇದಿಕೆಯಲ್ಲಿ ಯಾವ ಸಾಧನೆ ಮಾಡಬಹುದು ಎಂಬುದನ್ನು ಅವರು ತೋರಿಸಿದ್ದಾರೆ ಎಂದು ನಾನು ಭಾವಿಸುತ್ತೇನೆ. ನಾನು ಸ್ಪಷ್ಟವಾಗಿ ಹೇಳಬಹುದಾದ ಒಂದು ವಿಷಯವೆಂದರೆ ಆ ಇಬ್ಬರಲ್ಲಿ ಸಾಕಷ್ಟು ಕ್ರಿಕೆಟ್ ಉಳಿದಿದೆ. ಅದಕ್ಕಿಂತ ಮುಖ್ಯವಾಗಿ ಕೆಲವೇ ತಿಂಗಳಲ್ಲಿ ಚಾಂಪಿಯನ್ಸ್ ಟ್ರೋಫಿ ಬರುತ್ತಿದೆ. ಆಸ್ಟ್ರೇಲಿಯಾದ ದೊಡ್ಡ ಪ್ರವಾಸವೂ ಮುಂದಿದೆ. ಅವರು ತಮ್ಮ ಫಿಟ್ನೆಸ್ ಕಾಯ್ದುಕೊಳ್ಳಲು ಸಾಧ್ಯವಾದರೆ 2027 ರ ಏಕದಿನ ವಿಶ್ವಕಪ್​​ಗೂ ಇರುತ್ತಾರೆ ಎಂದು ಭಯಸುವೆ ” ಎಂದು ಹೇಳಿದ್ದಾರೆ.

ಇದು ಅತ್ಯಂತ ವೈಯಕ್ತಿಕ ನಿರ್ಧಾರ. ಅವರಲ್ಲಿ ಎಷ್ಟು ಪ್ರಮಾನದ ಕ್ರಿಕೆಟ್ ಸಾಮರ್ಥ್ಯ ಉಳಿದಿದೆ ಎಂದು ನಾನು ಹೇಳಲಾರೆ. ಅಂತಿಮವಾಗಿ, ಅದು ಅವರಿಗೆ ಬಿಟ್ಟದ್ದು. ತಂಡದ ಯಶಸ್ಸಿಗೆ ಅವರು ಎಷ್ಟು ಕೊಡುಗೆ ನೀಡಬಹುದು ಎಂಬುದನ್ನು ನಿರ್ಧರಿಸುವುದು ಆಟಗಾರರಿಗೆ ಬಿಟ್ಟದ್ದು. ಅಂತಿಮವಾಗಿ, ತಂಡವೇ ಮುಖ್ಯ. ವಿರಾಟ್ ಮತ್ತು ರೋಹಿತ್ ಏನು ನೀಡಬಲ್ಲರು ಎಂಬುದನ್ನು ಎಲ್ಲರೂ ನೋಡಿದ್ದಾರೆ. ಅವರು ವಿಶ್ವ ದರ್ಜೆಯ ಆಟಗಾರರು. ತಂಡ ಸಾಧ್ಯವಾದಷ್ಟು ಕಾಲ ಅವರಿಬ್ಬರನ್ನು ಬಯಸುತ್ತದೆ ಎಂದು ಗಂಭೀರ್​ ಹೇಳಿದರು.

ಕಳೆದ ತಿಂಗಳು ಬಾರ್ಬಡೋಸ್​​ನಲ್ಲಿ ನಡೆದ ಟಿ 20 ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ 20 ಐ ಕ್ರಿಕೆಟ್​ನಿಂದ ನಿವೃತ್ತರಾದರು. ಇಬ್ಬರೂ ಆಟಗಾರರು ಏಕದಿನ ಮತ್ತು ಟೆಸ್ಟ್ ತಂಡದ ಭಾಗವಾಗಿ ಮುಂದುವರಿಯಲಿದ್ದಾರೆ.

ಟೆಸ್ಟ್​ನಲ್ಲಿ ಪಾರಮ್ಯ

ಕೊಹ್ಲಿ ಮತ್ತು ರೋಹಿತ್ ಇಲ್ಲಿಂದ ಏಕದಿನ ಮತ್ತು ಟೆಸ್ಟ್​​ನಲ್ಲಿ ಭಾರತದ ಪಂದ್ಯಗಳನ್ನು ಆಡುತ್ತಾರೆ ಎಂದು ಗಂಭೀರ್ ಹೇಳಿದರು. ಅವರು ಉನ್ನತ ಮಟ್ಟದಲ್ಲಿ ಕೇವಲ ಎರಡು ಸ್ವರೂಪಗಳನ್ನು ಆಡುತ್ತಿರುವುದರಿಂದ ಅವರು ತಮ್ಮ ಕೆಲಸದ ಹೊರೆಯನ್ನು ನಿರ್ವಹಿಸಬಹುದು ಎಂದು ಹೇಳಿದರು. 2027ರ ಏಕದಿನ ವಿಶ್ವಕಪ್ ವೇಳೆ 37ರ ಹರೆಯದ ರೋಹಿತ್ಗೆ 41 ವರ್ಷ ವಯಸ್ಸಾಗಲಿದ್ದು ಕೊಹ್ಲಿಗೆ 38 ವರ್ಷವಾಗಲಿದೆ.

ಭಾರತ ಏಕದಿನ ಮತ್ತು ಟೆಸ್ಟ್ ನಾಯಕನಾಗಿ ರೋಹಿತ್ ಶರ್ಮಾ ಅವರನ್ನು ಉಳಿಸಿಕೊಂಡಿದ್ದರೆ, ಸೂರ್ಯಕುಮಾರ್ ಯಾದವ್ ಅವರನ್ನು ಟಿ 20 ಐ ನಾಯಕರನ್ನಾಗಿ ಕಳೆದ ವಾರ ಹೆಸರಿಸಲಾಗಿದೆ.

ಇದನ್ನೂ ಓದಿ: Gautam Gambhir : ನನ್ನ ಎಲ್ಲ ಬೇಡಿಕೆಗಳಿಗೆ ಬಿಸಿಸಿಐ ಸಮ್ಮತಿಸಿದೆ; ಗೌತಮ್ ಗಂಭೀರ್​

ಬುಮ್ರಾ ನಿರ್ವಹಣೆ ಮುಖ್ಯ

ಜಸ್ಪ್ರೀತ್ ಬುಮ್ರಾ ಅವರಂತಹವರಿಗೆ ಕೆಲಸದ ಹೊರೆ ನಿರ್ವಹಣೆ ಮುಖ್ಯ. ರೋಹಿತ್ ಮತ್ತು ವಿರಾಟ್ ಟಿ 20 ಪಂದ್ಯಗಳನ್ನು ಆಡುತ್ತಿಲ್ಲ. ಆದ್ದರಿಂದ ಅವರು ಪ್ರಮುಖ ಪಂದ್ಯಗಳಿಗೆ ಲಭ್ಯವಿರಬೇಕು. ಅವರು ಉತ್ತಮ ಕ್ರಿಕೆಟ್ ಆಡಲು ಮತ್ತು ಉತ್ತಮ ಫಾರ್ಮ್​ನಲ್ಲಿರಬೇಕು. ಬುಮ್ರಾಗೆ ಮಾತ್ರವಲ್ಲ, ಹೆಚ್ಚಿನ ಬೌಲರ್​ಗಳಿಗೆ ಕೆಲಸದ ಹೊರೆ ನಿರ್ವಹಣೆ ಮುಖ್ಯವಾಗಿದೆ ಎಂದು ಗಂಭೀರ್​ ಹೇಳಿದರು.

ಆಗಸ್ಟ್​ನಲ್ಲಿ ಶ್ರೀಲಂಕಾದಲ್ಲಿ ಪ್ರಾರಂಭವಾಗುವ 3 ಪಂದ್ಯಗಳ ಏಕದಿನ ಸರಣಿಗೆ ರೋಹಿತ್ ಮತ್ತು ಕೊಹ್ಲಿ ಇಬ್ಬರನ್ನೂ ಆಯ್ಕೆ ಮಾಡಲಾಗಿದೆ. ಗಂಭೀರ್ ಅವರ ಕೋರಿಕೆಯ ಮೇರೆಗೆ ಇಬ್ಬರು ಬ್ಯಾಟರ್​ಗಳು ಪ್ರವಾಸಿ ತಂಡದ ಭಾಗವಾಗಲು ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. 3ಟಿ 20 ಮತ್ತು ಅಷ್ಟೇ ಏಕದಿನ ಪಂದ್ಯಗಳನ್ನು ಹೊಂದಿರುವ ಮುಂಬರುವ ಶ್ರೀಲಂಕಾ ಪ್ರವಾಸವು ತಂಡದ ಮುಖ್ಯ ಕೋಚ್ ಆಗಿ ಗಂಭೀರ್ ಅವರ ಮೊದಲ ನೇಮಕವಾಗಿದೆ.

ಅಭಿಷೇಕ್ ನಾಯರ್ ಮತ್ತು ರಯಾನ್ ಟೆನ್ ಡೊಸ್ಚಾಟೆ ಸಹಾಯಕ ತರಬೇತುದಾರರಾಗಿ ಅವರೊಂದಿಗೆ ಸೇರಲಿದ್ದಾರೆ ಎಂದು ಗಂಭೀರ್ ಸೋಮವಾರ ಖಚಿತಪಡಿಸಿದ್ದಾರೆ. ಟಿ ದಿಲೀಪ್ ಮತ್ತು ಸಾಯಿರಾಜ್ ಬಹುತುಲೆ ಕೂಡ ಶ್ರೀಲಂಕಾ ಪ್ರವಾಸಕ್ಕಾಗಿ ಅವರ ಕೋಚಿಂಗ್ ಸಿಬ್ಬಂದಿಯ ಭಾಗವಾಗಲಿದ್ದಾರೆ.

Continue Reading

ಉದ್ಯೋಗ

Job Alert: ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡುವ ವಿಧಾನ ಇಲ್ಲಿದೆ

Job Alert: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16.

VISTARANEWS.COM


on

Job Alert
Koo

ಬೆಂಗಳೂರು: ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್‌ಮೆಂಟ್‌ ಕಾರ್ಪೋರೇಷನ್‌ ಲಿಮಿಟೆಡ್‌ (Tehri Hydro Development Corporation Limited) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಮ್ಯಾನೇಜರ್‌, ಅಸಿಸ್ಟಂಟ್‌ ಮ್ಯಾನೇಜರ್‌, ಡೆಪ್ಯುಟಿ ಮ್ಯಾನೇಜರ್‌, ಸೀನಿಯರ್‌ ಮ್ಯಾನೇಜರ್‌ ಮತ್ತು ಸೀನಿಯರ್‌ ಮೆಡಿಕಲ್‌ ಆಫೀಸರ್‌ ಸೇರಿ ಒಟ್ಟು 55 ಹುದ್ದೆಗಳಿವೆ (THDC Recruitment 2024). ಪದವಿ, ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕಿದ್ದು, ಕೊನೆಯ ದಿನ ಆಗಸ್ಟ್‌ 16 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮ್ಯಾನೇಜರ್ 25 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌, ಸ್ನಾತಕೋತ್ತರ ಪದವಿ
ಅಸಿಸ್ಟೆಂಟ್ ಮ್ಯಾನೇಜರ್ 19 ಹುದ್ದೆ, ವಿದ್ಯಾರ್ಹತೆ: ಪದವಿ, ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಡೆಪ್ಯುಟಿ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಪದವಿ
ಸೀನಿಯರ್ ಮ್ಯಾನೇಜರ್ 3 ಹುದ್ದೆ, ವಿದ್ಯಾರ್ಹತೆ: ಬಿಇ ಅಥವಾ ಬಿ.ಟೆಕ್‌, ಎಂ.ಟೆಕ್‌
ಹಿರಿಯ ವೈದ್ಯಾಧಿಕಾರಿ 5 ಹುದ್ದೆ, ವಿದ್ಯಾರ್ಹತೆ: ಎಂಬಿಬಿಎಸ್

ಗರಿಷ್ಠ ವಯೋಮಿತಿ

ಮ್ಯಾನೇಜರ್ 45 ವರ್ಷ
ಅಸಿಸ್ಟೆಂಟ್ ಮ್ಯಾನೇಜರ್ 32 ವರ್ಷ
ಡೆಪ್ಯುಟಿ ಮ್ಯಾನೇಜರ್ 40 ವರ್ಷ
ಸೀನಿಯರ್ ಮ್ಯಾನೇಜರ್ 48 ವರ್ಷ
ಹಿರಿಯ ವೈದ್ಯಾಧಿಕಾರಿ 34 ವರ್ಷ

ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ / ಇಡಬ್ಲ್ಯುಎಸ್‌) ಅಭ್ಯರ್ಥಿಗಳಿಗೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ ಮತ್ತು ಆಯ್ಕೆ ವಿಧಾನ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಾಜಿ ಸೈನಿಕರು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ. ಸಾಮಾನ್ಯ / ಒಬಿಸಿ / ಇಡಬ್ಲ್ಯುಎಸ್‌ ಅಭ್ಯರ್ಥಿಗಳು ಅರ್ಜಿ ಸುಲ್ಕವಾಗಿ ಆನ್‌ಲೈನ್‌ನಲ್ಲಿ 600 ರೂ. ಪಾವತಿಸಬೇಕು. ಸಂದರ್ಶನದ ಮೂಲಕ ಆಯ್ಕೆ ನಡೆಯಲಿದೆ.

THDC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಇಮೇಲ್‌, ಮೊಬೈಲ್‌ ನಂಬರ್‌ ಬಳಸಿ ಹೆಸರು ನಮೂದಿಸಿ.
  • ಇಲ್ಲಿ ಕಂಡುಬರುವ ಅಪ್ಲಿಕೇಷನ್‌ ಫಾರಂ ಅನ್ನು ಎಚ್ಚರಿಕೆಯಿಂದ ಭರ್ತಿ ಮಾಡಿ.
  • ಅಗತ್ಯ ದಾಖಲೆಗಳನ್ನು ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದವರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಭವಿಷ್ಯದ ಅಗತ್ಯಗಳಿಗೆ ಅಪ್ಲಿಕೇಷನ್‌ ಫಾರಂನ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ವಿವರಗಳಿಗೆ, ವೆಬ್‌ಸೈಟ್‌ ವಿಳಾಸ: thdc.co.inಕ್ಕೆ ಭೇಟಿ ನೀಡಿ ಅಥವಾ thdcrecruitment@thdc.co.in ಇಮೇಲ್‌ಗೆ ಸಂಪರ್ಕಿಸಿ.

ಇದನ್ನೂ ಓದಿ: Sbi Recruitment: ಎಸ್‌ಬಿಐನಲ್ಲಿ 1,040 ಎಸ್‌ಸಿಒ ಹುದ್ದೆಗಳಿಗೆ ಅರ್ಜಿ ಅಹ್ವಾನ

Continue Reading

ದೇಶ

Nipah Virus: ಕೇರಳದಲ್ಲಿ ನಿಫಾ ಭೀತಿ; ಬಾಲಕ ಸಾವಿನ ಬೆನ್ನಲ್ಲೇ ಮತ್ತೆ 6 ಮಂದಿಯಲ್ಲಿ ಸೋಂಕು ಪತ್ತೆ

Nipah Virus: ನಿನ್ನೆಯಷ್ಟೇ ಮಣಪ್ಪುರಂನಲ್ಲಿ ನಿಫಾ ಸೋಂಕು ತಗುಲಿದ್ದ 14ವರ್ಷ ಬಾಲಕ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದ. ಈಗಾಗಲೇ ಆರೋಗ್ಯ ಇಲಾಖೆ ಒಟ್ಟು 350ಸಂಪರ್ಕಿತರ ಪಟ್ಟಿ ತಯಾರು ಮಾಡಿದೆ. ಅವರಲ್ಲಿ 101 ಜನರನ್ನು ಗಂಭೀರ ಎಂದು ಪರಿಗಣಿಸಲಾಗಿದೆ. ಈ ಪಟ್ಟಿಯಲ್ಲಿ 68 ಆರೋಗ್ಯ ಸಿಬ್ಬಂದಿಗಳೂ ಇದ್ದಾರೆ. ಬಾಲಕ ಸೋಂಕಿಗೆ ತುತ್ತಾದ ಬಳಿಕ ಖಾಸಗಿ ಬಸ್‌ನಲ್ಲಿ ಪ್ರಯಾಣಿಸಿದ್ದ ಎನ್ನಲಾಗಿದೆ.

VISTARANEWS.COM


on

Nipah Virus
Koo

ತಿರುವನಂತಪುರಂ: ಕೇರಳದಲ್ಲಿ ನಿಫಾ ಸೋಂಕು(Nipah Virus) ತಗುಲಿದ್ದ 14ವರ್ಷದ ಬಾಲಕ ಹೃದಯಾಘಾತ(Cardiac Arrest)ದಿಂದ ಸಾವನ್ನಪ್ಪಿರುವ ಬೆನ್ನಲ್ಲೇ ವಿವಿಧ ಜಿಲ್ಲೆಗಳಲ್ಲಿ ಒಟ್ಟು ಆರು ಜನರಲ್ಲಿ ನಿಫಾ ವೈರಸ್‌ ಕಂಡುಬಂದಿದೆ. ಇನ್ನು ರಾಜ್ಯದ್ಯಂತ ಹೈ ಅಲರ್ಟ್‌ ಘೋಷಿಸಲಾಗಿದೆ. ನಿನ್ನೆ ಮೃತಪಟ್ಟ ಬಾಲಕ ಜೊತೆ ನೇರ ಸಂಪರ್ಕ ಹೊಂದಿದ್ದ 13ಮಂದಿಯ ವೈದ್ಯಕೀಯ ಪರೀಕ್ಷೆಯ ವರದಿ ಬರಬೇಕಾಗಿದೆ.

ನಿನ್ನೆಯಷ್ಟೇ ಮಣಪ್ಪುರಂನಲ್ಲಿ ನಿಫಾ ಸೋಂಕು ತಗುಲಿದ್ದ 14ವರ್ಷ ಬಾಲಕ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದ. ಈಗಾಗಲೇ ಆರೋಗ್ಯ ಇಲಾಖೆ ಒಟ್ಟು 350ಸಂಪರ್ಕಿತರ ಪಟ್ಟಿ ತಯಾರು ಮಾಡಿದೆ. ಅವರಲ್ಲಿ 101 ಜನರನ್ನು ಗಂಭೀರ ಎಂದು ಪರಿಗಣಿಸಲಾಗಿದೆ. ಈ ಪಟ್ಟಿಯಲ್ಲಿ 68 ಆರೋಗ್ಯ ಸಿಬ್ಬಂದಿಗಳೂ ಇದ್ದಾರೆ. ಬಾಲಕ ಸೋಂಕಿಗೆ ತುತ್ತಾದ ಬಳಿಕ ಖಾಸಗಿ ಬಸ್‌ನಲ್ಲಿ ಪ್ರಯಾಣಿಸಿದ್ದ ಎನ್ನಲಾಗಿದೆ.

ಇನ್ನು ಸೋಂಕು ದೃಢಪಟ್ಟಿರುವ ಒಟ್ಟು ಆರು ಮಂದಿ ಪಾಲಕ್ಕಾಡ್‌ ಮತ್ತು ತಿರುವನಂತಪುರಂ ಜಿಲ್ಲೆಯವರಾಗಿದ್ದಾರೆ. ಇಬ್ಬರು ಪಾಲಕ್ಕಾಡು ಸರ್ಕಾರಿ ಆಸ್ಪತ್ರೆಯಲ ಸಿಬ್ಬಂದಿಗಳಾಗಿದ್ದಾರೆ. ಅದೇ ಆಸ್ಪತ್ರೆಯಲ್ಲಿ ಬಾಲಕನಿಗೆ ಚಿಕಿತ್ಸೆ ನೀಡಲಾಗಿತ್ತು. ಇನ್ನು ಸರ್ಕಾರ ಜನರಿಗೆ ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ.

ಎನ್‌ಐವಿ-ಪುಣೆ ಶನಿವಾರ ಬಾಲಕನಿಗೆ ನಿಪಾ ವೈರಸ್ ಇರುವುದು ದೃಢಪಡಿಸಿದ ನಂತರ, ಖಾಸಗಿ ಆಸ್ಪತ್ರೆಯಿಂದ ಕೋಝಿಕ್ಕೋಡ್‌ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆತನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಇಂದು ಬೆಳಗ್ಗೆ ಮೂತ್ರದ ಪ್ರಮಾಣ ಕಡಿಮೆಯಾಗಿದ್ದು, ಭಾರೀ ಹೃದಯಾಘಾತದಿಂದಾಗಿ ಆತ ಭಾನುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾನೆ. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ ಎಂದಿದ್ದಾರೆ.
ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ನಂತರವೇ ಅಂತ್ಯಕ್ರಿಯೆಯ ಕುರಿತು ಹೆಚ್ಚಿನ ನಿರ್ಧರಿಸಲಾಗುತ್ತದೆ ಎಂದು ಜಾರ್ಜ್ ಹೇಳಿದರು. ಇನ್ನು ಬಾಲಕನ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಪ್ರಸ್ತುತ ಕೋಝಿಕ್ಕೋಡ್ ವೈದ್ಯಕೀಯ ಕಾಲೇಜಿನಲ್ಲಿ ಐಸೋಲೇಶನ್‌ನಲ್ಲಿಡಲಾಗಿದೆ.

ಸೋಂಕಿತ ಬಾಲಕನ ಸಂಪರ್ಕದಲ್ಲಿದ್ದವರ ಪಟ್ಟಿ ಸಿದ್ಧಪಡಿಸಲಾಗಿದೆ. ಹೆಚ್ಚಿನ ಅಪಾಯದ ಪ್ರದೇಶಗಳಲ್ಲಿರುವ ಜನರ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲು ಕ್ರಮವಹಿಸಲಾಗಿದೆ. ಬಾಲಕನಿಗೆ ಸೋಂಕು ತಗುಲಿದ ಪ್ರದೇಶದ 3 ಕಿಮೀ ವ್ಯಾಪ್ತಿಯಲ್ಲಿ ನಿರ್ಬಂಧ ವಿಧಿಸಬೇಕೆ ಎಂಬ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ. ಸಚಿವೆ ವೀಣಾ ಜಾರ್ಜ್ ಅವರು ಮಲಪ್ಪುರಂಗೆ ತೆರಳಿದ್ದಾರೆ. ವೈರಸ್ ನಿಯಂತ್ರಣಕ್ಕಾಗಿ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ಸ್ (ಎಸ್‌ಒಪಿ) ಅನುಷ್ಠಾನವನ್ನು ಮೇಲ್ವಿಚಾರಣೆ ಮಾಡಲು ಸರ್ಕಾರವು ಸಮಿತಿಗಳನ್ನು ರಚಿಸಿದೆ.

ಇದನ್ನೂ ಓದಿ: Kanwar Yatra: ಕನ್ವರ್‌ ಯಾತ್ರೆ ವೇಳೆ ಅಂಗಡಿಗಳಿಗೆ ನಾಮ ಫಲಕ ಕಡ್ಡಾಯ ಆದೇಶಕ್ಕೆ ಸುಪ್ರೀಂ ತಡೆ

Continue Reading
Advertisement
News
ದೇಶ2 hours ago

‘ಐಎಎಸ್‌’ ಗಂಡನ ಬಿಟ್ಟು, ಗ್ಯಾಂಗ್‌ಸ್ಟರ್‌ ಜತೆ ಓಡಿಹೋಗಿದ್ದ ಮಹಿಳೆ ಬಾಳು ಅಂತ್ಯ; ಪತಿ ಮನೆಗೆ ವಾಪಸಾಗಿ ಆತ್ಮಹತ್ಯೆ!

Mumbai Indians
ಕ್ರಿಕೆಟ್2 hours ago

Mumbai Indians : ಮುಂದಿನ ಐಪಿಎಲ್​ಗೆ ಮುಂಬೈ ತೊರೆಯಲಿದ್ದಾರೆ ರೋಹಿತ್ ಶರ್ಮಾ, ಸೂರ್ಯಕುಮಾರ್ ಯಾದವ್​

Abhinav Bindra
ಕ್ರೀಡೆ3 hours ago

Abhinav Bindra : ಭಾರತದ ಶೂಟರ್ ಅಭಿನವ್ ಬಿಂದ್ರಾಗೆ ‘ಒಲಿಂಪಿಕ್​ ಆರ್ಡರ್’ ಗೌರವ​

BJP strongly condemns MLA Shivaram Hebbar statement about MP Vishweshwar Hegde Kageri says hariprakash konemane
ಕರ್ನಾಟಕ3 hours ago

Uttara Kannada News: ಸಂಸದ ಕಾಗೇರಿ ಬಗ್ಗೆ ಶಾಸಕ ಹೆಬ್ಬಾರ್‌ ಕೀಳುಮಟ್ಟದ ಹೇಳಿಕೆಗೆ ಬಿಜೆಪಿ ತೀವ್ರ ಖಂಡನೆ

Chaluvadi Narayanaswamy
ಕರ್ನಾಟಕ4 hours ago

Chaluvadi Narayanaswamy : ಛಲವಾದಿ ನಾರಾಯಣಸ್ವಾಮಿ ವಿಧಾನ ಪರಿಷತ್​​ನ ಪ್ರತಿಪಕ್ಷದ ನಾಯಕ

NEET
ಕರ್ನಾಟಕ4 hours ago

NEET: ನೀಟ್‌ ಪರೀಕ್ಷೆಗೆ ವಿರೋಧ, ಬೆಂಗಳೂರು ವಿಭಜನೆಗೆ ಅಸ್ತು; ರಾಜ್ಯ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ

DK Shivakumar
ಕರ್ನಾಟಕ5 hours ago

DK Shivakumar: ರೈತನಿಗೆ ಪ್ರವೇಶ ನಿರ್ಬಂಧ ಖಂಡನೀಯ; ಮಾಲ್ ಸೇರಿ ಇತರೆಡೆ ಶೀಘ್ರ ವಸ್ತ್ರ ಸಂಹಿತೆ ಜಾರಿ ಎಂದ ಡಿಕೆಶಿ

Veerabaswanthreddy Mudnal
ಶ್ರದ್ಧಾಂಜಲಿ5 hours ago

Veerabaswanthreddy Mudnal: ಮಾಜಿ ಶಾಸಕ ಡಾ.ವೀರಬಸವಂತರೆಡ್ಡಿ ಮುದ್ನಾಳ ಅನಾರೋಗ್ಯದಿಂದ ನಿಧನ

Rahat Fateh Ali Khan
ವಿದೇಶ5 hours ago

Rahat Fateh Ali Khan: ದುಬೈನಲ್ಲಿ ಪಾಕಿಸ್ತಾನದ ಗಾಯಕನ ಬಂಧನ; ಎಸಗಿದ ಕೃತ್ಯವೇನು?

Valmiki Corporation Scam
ಕರ್ನಾಟಕ5 hours ago

Valmiki Corporation Scam: ಬಿ. ನಾಗೇಂದ್ರ ಹೆಸರೇಳುವಂತೆ ಒತ್ತಡ; ಇಡಿ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಮನೆ ಗೋಡೆ ಕುಸಿತ; ಕೊಟ್ಟಿಗೆಯಲ್ಲಿದ್ದ ಜಾನುವಾರುಗಳು ಸಾವು

karnataka Rain
ಮಳೆ3 days ago

Karnataka Rain : ಹಳ್ಳ ದಾಟಲು ಹೋಗಿ ನೀರುಪಾಲಾದ ಜಾನುವಾರು; ಬಿರುಗಾಳಿಗೆ ಕಳಚಿದ ವಿಂಡ್‌ ಫ್ಯಾನ್‌

karnataka Rain
ಮಳೆ4 days ago

Karnataka Rain : ಬೀದಿಗೆ ತಂದ ರಣಮಳೆ; ಮನೆ ಕುಸಿದು ಬಿದ್ದು 9 ತಿಂಗಳ ಗರ್ಭಿಣಿ ನರಳಾಟ

Karnataka Rain
ಮಳೆ4 days ago

Karnataka Rain : ರಾಜ್ಯದಲ್ಲಿ ಮಳೆಯ ಆರ್ಭಟ; ರಾತ್ರಿ ಕಳೆದು ಬೆಳಗಾಗುವುದರೊಳಗೆ ಕಂದಕ ನಿರ್ಮಾಣ

Karnataka Rain
ಮಳೆ4 days ago

Karnataka Rain : ಭಾರಿ ಮಳೆ ಎಫೆಕ್ಟ್‌; ಉಕ್ಕಿ ಹರಿಯುತ್ತಿದ್ದ ನದಿಯಲ್ಲಿ ಕೊಚ್ಚಿ ಹೋದ ರಾಸು

Uttara Kannada Landslide
ಮಳೆ4 days ago

Uttara Kannada Landslide: ಶಿರೂರು ಗುಡ್ಡ ಕುಸಿತ; ಅಖಾಡಕ್ಕಿಳಿದ ಜಿಯೊಲಾಜಿಕಲ್ ಸರ್ವೆ ಆಫ್ ಇಂಡಿಯಾ ಟೀಂ

Karnataka Rain
ಮಳೆ7 days ago

Karnataka Rain : ಕಾರವಾರದಲ್ಲಿ ಮಳೆ ಅವಾಂತರ; ಮನೆ ಮೇಲೆ ಗುಡ್ಡ ಕುಸಿದು ವೃದ್ಧ ಸಾವು

karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ನಿಯಂತ್ರಣ ತಪ್ಪಿ ಕೆರೆಗೆ ಉರುಳಿ ಬಿದ್ದ ಕಾರು; ನಾಲ್ವರು ಪ್ರಾಣಾಪಾಯದಿಂದ ಪಾರು

karnataka Weather Forecast
ಮಳೆ1 week ago

Karnataka Weather : ವ್ಯಾಪಕ ಮಳೆ ಎಚ್ಚರಿಕೆ; ನಾಳೆಯೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

karnataka Rain
ಮಳೆ1 week ago

Karnataka Rain : ಶಾಲಾ-ಕಾಲೇಜಿಗೆ ಈ ದಿನ ರಜಾ; ಅಬ್ಬರಿಸುತ್ತಿರುವ ಮಳೆಗೆ ಮನೆಯಲ್ಲೇ ಎಲ್ಲರೂ ಸಜಾ!

ಟ್ರೆಂಡಿಂಗ್‌