Horoscope Today: ಇಂದು ಗಂಗಾವತರಣ ದಿನ; ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ - Vistara News

ಪ್ರಮುಖ ಸುದ್ದಿ

Horoscope Today: ಇಂದು ಗಂಗಾವತರಣ ದಿನ; ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ

ಜೇಷ್ಠ ಮಾಸ ಶುಕ್ಲ ಪಕ್ಷದ ದಶಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ
ತಿಥಿ:  ದಶಮಿ 07:25 ವಾರ:  ಶುಕ್ರವಾರ
ನಕ್ಷತ್ರ:  ಚಿತ್ತಾ 27:35 ಯೋಗ: ವರಿಯಾಣ 23:33
ಕರಣ: ಗರಜ 07:25 ದಿನ ವಿಶೇಷ: ಗಂಗಾವತರಣ ದಿನ, ಗಿಡ ಮೂಲಿಕೆಗಳ ದಿನ

ಸೂರ್ಯೋದಯ :  05:41             ಸೂರ್ಯಾಸ್ತ : 07:11

ರಾಹು ಕಾಲ : ಪ್ರಾತಃ ಕಾಲ 10.30 ರಿಂದ 12.00
ಗುಳಿಕಕಾಲ:  ಪ್ರಾತಃ ಕಾಲ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (horoscope today)

dina bhavishya

ಮೇಷ: ಅನೇಕ ಒತ್ತಡಗಳು ಆವರಿಸುವ ಸಾಧ್ಯತೆ. ಇತರರ ಮೇಲೆ ವಿನಾ ಕಾರಣ ಹಗೆ ಸಾಧಿಸಿ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಆರ್ಥಿಕವಾಗಿ ಸಮಸ್ಯೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

dina bhavishya

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಹೂಡಿಕೆಯ ಕುರಿತು ಆಲೋಚನೆ. ಆಪ್ತರ ಆರೋಗ್ಯ ವಿಚಾರಣೆ. ಉದ್ಯೋಗಿಗಳಿಗೆ ಮಿಶ್ರಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಆರ್ಥಿಕ ಲಾಭ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

today's horoscope in kannada

ಮಿಥುನ: ಕೆಲಸ ಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ. ಆರ್ಥಿಕ ಲಾಭ ಸಾಧಾರಣ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 3

dina bhavishya

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

dina bhavishya

ಸಿಂಹ: ಆರೋಗ್ಯ ಕಾಳಜಿ ಅವಶ್ಯಕ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವುದು ಬೇಡ. ಆರ್ಥಿಕವಾಗಿ ಕೊಂಚ ಲಾಭ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 5

today's horoscope in kannada

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ. ಜವಾಬ್ದಾರಿಗಳು ಹೆಚ್ಚಾಗಲಿದೆ, ಕೋಪದಿಂದ ವರ್ತಿಸುವ ಸಾಧ್ಯತೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

today's horoscope in kannada

ತುಲಾ: ಆರೋಗ್ಯ ಪರಿಪೂರ್ಣ. ಕುಟುಂಬದ ಹಿರಿಯರಿಂದ ಒತ್ತಡ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಆರ್ಥಿಕ ಲಾಭ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ. ಆಪ್ತರಿಂದ ಸಲಹೆ ಸಹಕಾರ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

dina bhavishya

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲುವಾಗಿ ಖರ್ಚು. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರ ಸಾಧಾರಣ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 7

dina bhavishya

ಧನಸ್ಸು: ಆಪ್ತರಿಂದ ಬೆಂಬಲ. ಕೆಲಸಕಾರ್ಯಗಳಲ್ಲಿ ಪ್ರಗತಿ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

dina bhavishya

ಮಕರ: ಉತ್ಸಾಹ ಭರಿತ ಜೀವನ. ಆರ್ಥಿಕವಾಗಿ ಲಾಭ. ಹೂಡಿಕೆ ವ್ಯವಹಾರಗಳಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ಇದನ್ನೂ ಓದಿ | ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ

today's horoscope in kannada

ಕುಂಭ: ಇತರರನ್ನು ಟೀಕಿಸುತ್ತಾ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

today's horoscope in kannada

ಮೀನ: ಆರೋಗ್ಯ ಪರಿಪೂರ್ಣ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ. ಕುಟುಂಬದ ಸದಸ್ಯರಿಂದ ಒತ್ತಡ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಡೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

panchanga

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕರ್ನಾಟಕ

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Bengaluru Rain: ಬೆಂಗಳೂರಿನಲ್ಲಿ ಭಾರಿ ಮಳೆಯಿಂದ ರಸ್ತೆಗಳು ಸೇರಿ 33 ಸ್ಥಳಗಳು ಜಲಾವೃತಗೊಂಡಿದ್ದು, 16 ಮರಗಳು ನೆಲಕ್ಕುರುಳಿವೆ. ರಸ್ತೆಗಳಲ್ಲಿ ಭಾರಿ ಪ್ರಮಾಣದ ನೀರು ತುಂಬಿಕೊಂಡಿದ್ದರಿಂದ ವಾಹನ ಸವಾರರು ಪರದಾಡಿದರು.

VISTARANEWS.COM


on

Bengaluru Rain
ಬೆಂಗಳೂರಿನ ಓಕಳೀಪುರಂನ ರಾಜೀವ್ ಗಾಂಧಿ ಅಷ್ಟಪಥ ಅಂಡರ್ ಪಾಸ್‌ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.
Koo

ಬೆಂಗಳೂರು: ನಗರದ ವಿವಿಧೆಡೆ ಸೋಮವಾರ ರಾತ್ರಿ ವರುಣ (Bengaluru Rain) ಆರ್ಭಟಿಸಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾರಿ ಮಳೆಯಿಂದ ರಸ್ತೆಗಳು ಸೇರಿ ನಗರದ 33 ಸ್ಥಳಗಳು ಜಲಾವೃತಗೊಂಡಿದ್ದು, 16 ಮರಗಳು ನೆಲಕ್ಕುರುಳಿವೆ. ಇದರಿಂದ ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿ ವಾಹನ ಸವಾರರು ಪರದಾಡಬೇಕಾಯಿತು.

ಬೆಂಗಳೂರಿನ ಓಕಳೀಪುರಂ, ಮಲೇಶ್ವರಂ, ರಾಜಾಜಿನಗರ, ಮೆಜೆಸ್ಟಿಕ್, ರೇಸ್ ಕೋರ್ಸ್, ಕೆ.ಆರ್.ಮಾರ್ಕೆಟ್, ಮತ್ತಿಕೆರೆ, ಕತ್ತರಿಗುಪ್ಪೆ, ಆನೇಕಲ್‌, ಎಲೆಕ್ಟ್ರಾನಿಕ್‌ ಸಿಟಿ ಸೇರಿ ವಿವಿಧೆಡೆ ಮಳೆ ಅಬ್ಬರಿಸಿದೆ. ಓಕಳೀಪುರಂನ ರಾಜೀವ್ ಗಾಂಧಿ ಅಷ್ಟಪಥ ಅಂಡರ್ ಪಾಸ್‌ ಜಲಾವೃತವಾಗಿದ್ದರಿಂದ ವಾಹನ ಸವಾರರು ಪರದಾಡಿದರು.

ಮೈಸೂರು ರಸ್ತೆಯ ಬ್ಯಾಟರಾಯನಪುರ, ಜೆಸಿ ನಗರದಲ್ಲಿ ಆಲಿಕಲ್ಲು ಮಳೆ ಸುರಿದಿದೆ. ಮಲ್ಲೇಶ್ವರ, ಬಸವನಗುಡಿ, ಕತ್ತರಿಗುಪ್ಪೆ ಸರ್ಕಲ್‌, ರಾಜಾಜಿನಗರ ಭಾಷ್ಯಂ ಸರ್ಕಲ್‌ ಬಳಿ ಸೇರಿದಂತೆ 16 ಕಡೆ ಮರಗಳು ನೆಲಕ್ಕುರುಳಿವೆ. ಅದೃಷ್ಟವಾಶಾತ್‌ ಯಾವುದೇ ಪ್ರಾಣಹಾನಿಯಾಗಿಲ್ಲ.

ಮಲ್ಲೇಶ್ವರದಲ್ಲಿ ಮರ ಬಿದ್ದಿರುವುದು

ರಾಜಾಜಿನಗರದಲ್ಲಿ ಮರ ನೆಲಕ್ಕುರುಳಿರುವುದು

ಬಾರಿ ಗಾಳಿ ಮಳೆಗೆ ಹಾರಿದ ಅಂಗಡಿಗಳ ಹೊದಿಕೆ, ಶೀಟ್‌ಗಳು

ಆನೇಕಲ್: ಬಾರಿ ಗಾಳಿ ಮಳೆಯಿಂದ ಹೂ ಮತ್ತು ಹಣ್ಣಿನ ಅಂಗಡಿಗಳ ಹೊದಿಕೆ ಮತ್ತು ಶೀಟ್‌ಗಳು ಹಾರಿದ ಘಟನೆ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ನಡೆಯಿತು. ಚಂದಾಪುರ ಪುರಸಭೆ ಕಚೇರಿ ಮುಂದೆ ನೋಡ ನೋಡುತ್ತಿದ್ದಂತೆ ಅಂಗಡಿಗಳ ಶೀಟ್‌ಗಳು ಹಾರಿ ಹೋದವು. ಜತೆಗೆ ಹೂವು, ಹಣ್ಣು ನೀರುಪಾಲಾಗಿದ್ದರಿಂದ ವ್ಯಾಪಾರಿಗಳು ನಷ್ಟ ಅನುಭವಿಸುವಂತಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಧಾರಕಾರ ಮಳೆ ಸುರಿಯಿತು.

Continue Reading

ಪ್ರಮುಖ ಸುದ್ದಿ

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

Rohit Sharma: ನಾಯಕತ್ವದ ಹೊರೆ ರೋಹಿತ್ ಶರ್ಮಾ ಅವರ ಹೆಗಲ ಮೇಲಿದ್ದ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟರ್​​ ಆಗಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆಯ ದೊಡ್ಡ ಹೊರೆಯನ್ನು ಅವರು ಹೊಂದಿದ್ದರು. ವಿಶೇಷವೆಂದರೆ, ರೋಹಿತ್ 5 ಐಪಿಎಲ್ ಚಾಂಪಿಯನ್​ಶಿಪ್​ ಗೆದ್ದಿದ್ದರಿಂದ ಮುಂಬೈ ಇಂಡಿಯನ್ಸ್ ಪರ ಅತ್ಯಂತ ಯಶಸ್ವಿ ನಾಯಕ ಕೂಡ ಔದು. ಆದರೆ ಇದೀಗ ಬ್ಯಾಟಿಂಗ್​ನಲ್ಲಿ ಅವರ ಪ್ರದರ್ಶನವು ಕಡಿಮೆಯಾಗಿದೆ.

VISTARANEWS.COM


on

Rohit Sharma
Koo

ಮುಂಬಯಿ: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024) ಮತ್ತೊಮ್ಮೆ ಬ್ಯಾಟಿಂಗ್​ನಲ್ಲಿ ವಿಫಲವಾದ ನಂತರ ಮುಂಬೈ ಇಂಡಿಯನ್ಸ್ (Mumbai Indians) ಮಾಜಿ ನಾಯಕ ರೋಹಿತ್ ಶರ್ಮಾ (Rohit Sharma) ಭಾವುಕರಾದ ಘಟನೆ ನಡೆಯಿತು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪ್ಯಾಟ್ ಕಮಿನ್ಸ್ (Pat Cummins) ನೇತೃತ್ವದ ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧದ ಪಂದ್ಯದ 55ನೇ ಪಂದ್ಯದಲ್ಲಿ ಅವರಿಗೆ ಉತ್ತಮವಾಗಿ ಬ್ಯಾಟಿಂಗ್ ಮಾಡಲು ಸಾಧ್ಯವಾಗಲಿಲ್ಲ. ಮುಂಬೈ ಇಂಡಿಯನ್ಸ್ (MI) ಅವರ ಬದಲಿಗೆ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡಲು ನಿರ್ಧರಿಸಿದ್ದರಿಂದ ರೋಹಿತ್ ಶರ್ಮಾ 2024 ರ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಉತ್ತಮ ಬ್ಯಾಟಿಂಗ್ ಮಾಡಿಲ್ಲ.

ನಾಯಕತ್ವದ ಹೊರೆ ರೋಹಿತ್ ಶರ್ಮಾ ಅವರ ಹೆಗಲ ಮೇಲಿದ್ದ ಅವಧಿಯಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಬ್ಯಾಟರ್​​ ಆಗಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡುವ ನಿರೀಕ್ಷೆಯ ದೊಡ್ಡ ಹೊರೆಯನ್ನು ಅವರು ಹೊಂದಿದ್ದರು. ವಿಶೇಷವೆಂದರೆ, ರೋಹಿತ್ 5 ಐಪಿಎಲ್ ಚಾಂಪಿಯನ್​ಶಿಪ್​ ಗೆದ್ದಿದ್ದರಿಂದ ಮುಂಬೈ ಇಂಡಿಯನ್ಸ್ ಪರ ಅತ್ಯಂತ ಯಶಸ್ವಿ ನಾಯಕ ಕೂಡ ಔದು. ಆದರೆ ಇದೀಗ ಬ್ಯಾಟಿಂಗ್​ನಲ್ಲಿ ಅವರ ಪ್ರದರ್ಶನವು ಕಡಿಮೆಯಾಗಿದೆ.

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಬಾರಿಸುವ ಮೂಲಕ ಟೂರ್ನಿಯಲ್ಲಿ ಉತ್ತಮ ಆರಂಭ ಕಂಡಿದದ್ದರು. ಮುಂಬೈ ಇಂಡಿಯನ್ಸ್ ಪರ ಮೊದಲ 7 ಪಂದ್ಯಗಳಲ್ಲಿ ರೋಹಿತ್ ಶರ್ಮಾ 49.5 ಸರಾಸರಿಯಲ್ಲಿ 297 ರನ್ ಗಳಿಸಿದ್ದಾರೆ. ಆದಾಗ್ಯೂ, ಅವರ ಫಾರ್ಮ್ ಯು-ಟರ್ನ್ ತೆಗೆದುಕೊಂಡಿತು ಮತ್ತು ಮುಂದಿನ 5 ಪಂದ್ಯಗಳಲ್ಲಿ ಅವರು ದಯನೀಯವಾಗಿ ವಿಫಲರಾಗಿದ್ದಾರೆ. 6.6 ಸರಾಸರಿ ಮತ್ತು 94.3 ಸ್ಟ್ರೈಕ್ ರೇಟ್​ನಲ್ಲಿ ಕೇವಲ 33 ರನ್ ಗಳಿಸಿದರು.

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ 5 ಎಸೆತಗಳಲ್ಲಿ ಕೇವಲ 4 ರನ್ ಗಳಿಸಿದ್ದರು. 4ನೇ ಓವರ್​ನ 2ನೇ ಎಸೆತದಲ್ಲಿ ಕಮಿನ್ಸ್ ಎಸೆತಕ್ಕೆ ಜೋರಾಗಿ ಬಾರಿಸಲು ಹೋಗಿ ಔಟಾದರು. ಹೆನ್ರಿಕ್ ಕ್ಲಾಸೆನ್ ಯಾವುದೇ ತಪ್ಪು ಮಾಡಲಿಲ್ಲ. ಶರ್ಮಾ ಅವರನ್ನು ಔಟ್ ಮಾಡಲು ಸರಳ ಕ್ಯಾಚ್ ಪೂರ್ಣಗೊಳಿಸಿದರು.

ಪ್ಯಾಟ್ ಕಮಿನ್ಸ್ ಟಿ 20 ಪಂದ್ಯಗಳಲ್ಲಿ ರೋಹಿತ್ ಶರ್ಮಾ ಅವರನ್ನು ಔಟ್ ಮಾಡಿದ್ದು ಇದು ನಾಲ್ಕನೇ ಬಾರಿ. ಒಟ್ಟಾರೆಯಾಗಿ, 9 ಇನ್ನಿಂಗ್ಸ್ ಗಳಲ್ಲಿ, ಅವರು ಕಮಿನ್ಸ್ ವಿರುದ್ಧ 41 ಎಸೆತಗಳಲ್ಲಿ 14.25 ಸರಾಸರಿಯಲ್ಲಿ 57 ರನ್ ಗಳಿಸಿದ್ದಾರೆ.

ಪಂದ್ಯದಲ್ಲಿ ಮುಂಬಯಿಗೆ ಭರ್ಜರಿ ವಿಜಯ

ಮುಂಬಯಿ: ಸೂರ್ಯಕುಮಾರ್ ಯಾದವ್ (Suryakumar Yadav) ಬಾರಿಸಿದ ಸ್ಫೋಟಕ ಶತಕ (102,51 ಎಸೆತ, 12 ಫೋರ್, 6 ಸಿಕ್ಸರ್​) ಹಾಗೂ ಬೌಲರ್​ಗಳ ಸಂಘಟಿತ ಹೋರಾಟದಿಂದ ಮಿಂಚಿದ ಮುಂಬೈ ಇಂಡಿಯನ್ಸ್​ (Mumbai Indians) ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) 55ನೇ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (Sunrisers Hyderabad)​ ವಿರುದ್ಧ 7 ವಿಕೆಟ್​ ಸುಲಭ ವಿಜಯ ದಾಖಲಿಸಿದೆ. ಈ ಮೂಲಕ ಸೂರ್ಯನ ಪ್ರತಾಪಕ್ಕೆ ಸನ್​​ ಮಂಕಾಗಿ ಹೋಯಿತು. ಇದು ಮುಂಬಯಿ ತಂಡಕ್ಕೆ ಹಾಲಿ ಆವೃತ್ತಿಯ 12 ಪಂದ್ಯಗಳಲ್ಲಿ 4ನೇ ಗೆಲುವಾಗಿದೆ. ಇದರೊಂದಿಗೆ 10ನೇ ಸ್ಥಾನದಿಂದ ಒಂದು ಸ್ಥಾನ ಮೇಲ್ಕಕೇರಿದೆ. ಇದೇ ವೇಳೆ ಕಳೆದ ಆವೃತ್ತಿಯ ರನ್ನರ್​ ಅಪ್​ ತಂಡ ಗುಜರಾತ್​ ಕೊನೇ ಸ್ಥಾನಕ್ಕೆ ಇಳಿದಿದೆ.

ಇಲ್ಲಿನ ಐತಿಹಾಸಿಕ ವಾಂಖೆಡೆ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಹಣಾಹಣಿಯಲ್ಲಿ ಟಾಸ್​ ಗೆದ್ದ ಮುಂಬಯಿ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಸನ್​ ರೈಸರ್ಸ್​ ತಂಡ ತನ್ನ ಪಾಲಿನ 20 ಓವರ್​ಗಳಲ್ಲಿ 8 ವಿಕೆಟ್​ಗೆ 173 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಮುಂಬೈ ತಂಡ ಆರಂಭಿಕ ಹಿನ್ನಡೆ ಹೊರತಾಗಿಯೂ ಸೂರ್ಯಕುಮಾರ್ ಯಾದವ್ ಅವರ ಅದ್ಭುತ್ ಇನಿಂಗ್ಸ್​ ನೆರವಿನಿಂದ ಇನ್ನೂ 7 ಎಸೆತಗಳು ಬಾಕಿ ಇರುವಂತೆಯೇ 3 ವಿಕೆಟ್ ಕಳೆದುಕೊಂಡು 174 ರನ್ ಬಾರಿಸಿ ಗೆಲುವು ಸಾಧಿಸಿತು.

Continue Reading

ದೇಶ

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

ಯಾವಾಗ ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊ ಅಪ್‌ಲೋಡ್‌ ಮಾಡಿದ ಇಬ್ಬರಿಗೆ ನೋಟಿಸ್‌ ನೀಡಲಾಯಿತೋ, ಆಗ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಯಿತು. ನಾನು ಕೂಡ ಈ ವಿಡಿಯೊ ಅಪ್‌ಲೋಡ್‌ ಮಾಡಿದ್ದೇನೆ, ನನ್ನ ವಿಳಾಸ ಇದು, ನನಗೂ ನೋಟಿಸ್‌ ಕಳುಹಿಸಿ ಎಂದು ಬಿಜೆಪಿ ನಾಯಕರು ಸೇರಿ ಹಲವರು ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಹಂಚಿಕೊಂಡರು. ಇದೇ ವೇಳೆ ಮೋದಿ ಅವರು ತಮ್ಮ ಬಗ್ಗೆ ಮಾಡಲಾದ ಟ್ರೋಲ್‌ ವಿಡಿಯೊವನ್ನು ಇಷ್ಟಪಟ್ಟಿದ್ದಾರೆ.

VISTARANEWS.COM


on

PM Narendra Modi
Koo

ನವದೆಹಲಿ: ಸೋಷಿಯಲ್‌ ಮೀಡಿಯಾ ಜಮಾನದಲ್ಲಿ ಗಣ್ಯರ ಕುರಿತು ಟ್ರೋಲ್‌ (Troll) ಮಾಡುವುದು, ಮೀಮ್‌ಗಳ (Meme) ಮೂಲಕ ಅವರ ಕಾಲೆಳೆಯುವುದು ಸಾಮಾನ್ಯ. ವಿಡಿಯೊ ಅಥವಾ ರೀಲ್ಸ್‌ ನೋಡಿ, ನಕ್ಕು, ಮುಂದೆ ಹೋಗುವಂತಹ ಟ್ರೋಲ್‌ಗಳು ವೈರಲ್‌ (Viral Video) ಆಗುತ್ತವೆ. ಆದರೆ, ಆರ್ಟಿಫಿಷಿಯಲ್‌ ಇಂಟಲಿಜೆನ್ಸ್‌ ಮೂಲಕ ಮಮತಾ ಬ್ಯಾನರ್ಜಿ (Mamata Banerjee) ಅವರನ್ನು ಟ್ರೋಲ್‌ ಮಾಡಿದ್ದಕ್ಕೆ ಇಬ್ಬರು ಸಾಮಾಜಿಕ ಜಾಲತಾಣಗಳ ಬಳಕೆದಾರರಿಗೆ ಪಶ್ಚಿಮ ಬಂಗಾಳ ಪೊಲೀಸರು ನೋಟಿಸ್‌ ನೀಡಿದ್ದಾರೆ. ಇದರ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು, ತಮ್ಮ ಬಗ್ಗೆ ಮಾಡಿದ ಟ್ರೋಲ್‌ ವಿಡಿಯೊವನ್ನು ಮೆಚ್ಚಿಕೊಂಡಿದ್ದಾರೆ.

ಸಾವಿರಾರು ಜನರ ಮಧ್ಯೆ ವ್ಯಕ್ತಿಯೊಬ್ಬ ಅತ್ಯುತ್ಸಾಹದಿಂದ ಬಂದು ಡಾನ್ಸ್‌ ಮಾಡುತ್ತಾನೆ. ಆ ವ್ಯಕ್ತಿಯ ಬದಲಿಗೆ ಆರ್ಟಿಫಿಶಿಯಲ್‌ ಇಂಟಲಿಜೆನ್ಸ್‌ ಬಳಸಿ ಮೋದಿ ಅವರು ಡಾನ್ಸ್‌ ಮಾಡುವಂತೆ ಎಡಿಟ್‌ ಮಾಡಲಾಗಿದೆ. ಈ ಟ್ರೋಲ್‌ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ ವ್ಯಕ್ತಿಯೊಬ್ಬ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾನೆ. “ಸರ್ವಾಧಿಕಾರಿ ನರೇಂದ್ರ ಮೋದಿ ಅವರು ಈ ವಿಡಿಯೊವನ್ನು ಅಪ್‌ಲೋಡ್‌ ಮಾಡಿದ್ದಕ್ಕೆ ನನ್ನನ್ನು ಬಂಧಿಸಲಿಕ್ಕಿಲ್ಲ” ಎಂದು ಕ್ರಿಪ್ಟಿಕ್‌ ಆಗಿ ಪೋಸ್ಟ್‌ ಮಾಡಿದ್ದಾನೆ. ಆದರೆ, ಆ ವಿಡಿಯೊವನ್ನೇ ಶೇರ್‌ ಮಾಡಿದ ಮೋದಿ, ಅದನ್ನು ಮೆಚ್ಚಿಕೊಂಡಿದ್ದಾರೆ.

ಮೋದಿ ಪ್ರತಿಕ್ರಿಯಿಸಿದ್ದು ಹೀಗೆ…

“ನಿಮ್ಮಂತೆ, ನಾನು ಕೂಡ ನಾನೇ ನೃತ್ಯ ಮಾಡಿದಂತೆ ಬಿಂಬಿಸಿರುವ ವಿಡಿಯೊವನ್ನು ನೋಡಿ ಎಂಜಾಯ್‌ ಮಾಡಿದ್ದೇನೆ. ಇಂತಹ ಕ್ರಿಯೇಟಿವಿಯಿಂದ ಕೂಡಿರುವ ಟ್ರೋಲ್‌ಗಳು ಚುನಾವಣೆ ಕಣವನ್ನು ಮತ್ತಷ್ಟು ರಂಗೇರಿಸುವಂತೆ ಮಾಡಿವೆ” ಎಂದು ಹೇಳುವ ಮೂಲಕ ನರೇಂದ್ರ ಮೋದಿ ಅವರು ತಮ್ಮ ಬಗ್ಗೆ ಮಾಡಿದ ಟ್ರೋಲ್‌ಅನ್ನು ಕೂಡ ಸಕಾರಾತ್ಮಕವಾಗಿ ತೆಗೆದುಕೊಂಡಿದ್ದಾರೆ. ನರೇಂದ್ರ ಮೋದಿ ಅವರ ಸಕಾರಾತ್ಮಕ ಮನೋಭಾವ, ಮೀಮರ್‌ಗಳನ್ನು ಕೂಡ ಹೊಗಳುವ ರೀತಿಗೆ ಜನ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಟ್ರೋಲ್‌ ಸಹಿಸದ ದೀದಿ

ನರೇಂದ್ರ ಮೋದಿ ಅವರು ಡಾನ್ಸ್‌ ಮಾಡುವ ರೀತಿ ಬಿಂಬಿಸಿದ ರೀತಿಯೇ ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಮೊದಲು ಹಂಚಿಕೊಳ್ಳಲಾಗಿತ್ತು. ತಮಾಷೆಗಾಗಿ ಮಾಡಿದ ವಿಡಿಯೊ ಕಂಡ ಪಶ್ಚಿಮ ಬಂಗಾಳ ಪೊಲೀಸರು, ಪೋಸ್ಟ್‌ ಮಾಡಿದ ಇಬ್ಬರಿಗೆ ಕಠಿಣ ಕ್ರಮದ ಎಚ್ಚರಿಕೆ ಜತೆಗೆ ನೋಟಿಸ್‌ ನೀಡಿದ್ದಾರೆ.

ಯಾವಾಗ ಟ್ರೋಲ್‌ ವಿಡಿಯೊ ಅಪ್‌ಲೋಡ್‌ ಮಾಡಿದ ಇಬ್ಬರಿಗೆ ನೋಟಿಸ್‌ ನೀಡಲಾಯಿತೋ, ಆಗ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಆರಂಭವಾಯಿತು. ನಾನು ಕೂಡ ಈ ವಿಡಿಯೊ ಅಪ್‌ಲೋಡ್‌ ಮಾಡಿದ್ದೇನೆ, ನನ್ನ ವಿಳಾಸ ಇದು, ನನಗೂ ನೋಟಿಸ್‌ ಕಳುಹಿಸಿ ಎಂದು ಬಿಜೆಪಿ ನಾಯಕರು ಸೇರಿ ಹಲವರು ಮಮತಾ ಬ್ಯಾನರ್ಜಿ ಅವರ ಟ್ರೋಲ್‌ ವಿಡಿಯೊವನ್ನು ಹಂಚಿಕೊಂಡರು. ಆ ಮೂಲಕ ಮಮತಾ ಬ್ಯಾನರ್ಜಿ ಅವರಿಗೆ ತಿರುಗೇಟು ನೀಡಿದರು.

ಇದನ್ನೂ ಓದಿ: Trinamool Congress: ಮಮತಾ ಬ್ಯಾನರ್ಜಿಯನ್ನು ಅರೆಸ್ಟ್‌ ಮಾಡಿ; ಟಿಎಂಸಿ ಉಗ್ರ ಸಂಘಟನೆ ಎಂದು ಘೋಷಿಸಿ-ಬಿಜೆಪಿ ಆಗ್ರಹ

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

ಶಿಕ್ಷಣ ಎಂದರೆ ಮಕ್ಕಳು ನಲಿಯುತ್ತ ಕಲಿಯುವುದು. ಆಡುತ್ತ, ನಲಿಯುತ್ತ, ಎಲ್ಲರೊಂದಿಗೆ ಬೆರೆಯುತ್ತ ಜ್ಞಾನವನ್ನು ವೃದ್ಧಿಸಿಕೊಳ್ಳುವುದು. ಆದರೆ, ಬದಲಾದ ಕಾಲಘಟ್ಟದಲ್ಲಿ ಮಕ್ಕಳು ಅಂಕಗಳ ಹಿಂದೆ ಓಡಬೇಕಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ಮುನ್ನಡೆ ಸಾಧಿಸುವ, ಮೊದಲ ರ‍್ಯಾಂಕ್‌ ಪಡೆಯುವ, ಆಟ ಬಿಟ್ಟು ಪಾಠದತ್ತ ಹೆಚ್ಚು ಗಮನ ಹರಿಸುವ, ಎಫರ್ಟ್‌ ಹೆಸರಲ್ಲಿ, ಅಂಕ ಸಾಧನೆ ಹೆಸರಲ್ಲಿ ಇನ್ನಿಲ್ಲದ ಒತ್ತಡ ಅವರ ಮೇಲಿದೆ. ಇಂತಹ ಸಮಸ್ಯೆಗಳ ಮಧ್ಯೆಯೇ, ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಪ್ರಕರಣಗಳು ಇತ್ತೀಚೆಗೆ ಹೆಚ್ಚಾಗಿರುವುದು ಮಕ್ಕಳ ಶೈಕ್ಷಣಿಕ ಏಳಿಗೆ, ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ. ಹಾಗಾಗಿ, ಇ-ಮೇಲ್‌ ಮೂಲಕ ಬೆದರಿಕೆ ಹಾಕುವ, ಭಯವನ್ನು ಹುಟ್ಟಿಸುವ ‘ಭಯೋತ್ಪಾದಕರಿಗೆ’ ತಕ್ಕ ಶಾಸ್ತಿ ಆಗಬೇಕಿದೆ.

VISTARANEWS.COM


on

School Children
Koo

ಶಾಲೆಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಇ-ಮೇಲ್‌ (E-Mail) ಮೂಲಕ ಬೆದರಿಕೆ ಒಡ್ಡುವುದು, ಆ ಮೂಲಕ ಮಕ್ಕಳು, ಪೋಷಕರು, ಶಿಕ್ಷಕರು ಆತಂಕಕ್ಕೀಡಾಗುವುದು, ಇದರಿಂದ ಎಲ್ಲೆಡೆ ಇದು ಸುದ್ದಿಯಾಗುವಂತೆ ಮಾಡುವ ಹೀನಾತಿಹೀನ ಪ್ರಕರಣಗಳು ಇತ್ತೀಚೆಗೆ ಹೆಚ್ಚು ಸುದ್ದಿಯಾಗುತ್ತಿವೆ. ಸೋಮವಾರ (ಮೇ 6) ಅಹಮದಾಬಾದ್‌ನಲ್ಲಿ ಹಲವು ಶಾಲೆಗಳಲ್ಲಿ ಬಾಂಬ್‌ ಇರಿಸಲಾಗಿದೆ ಎಂದು ಇ-ಮೇಲ್‌ ಮೂಲಕ ಬೆದರಿಕೆ ಹಾಕಲಾಗಿದೆ. ಇನ್ನು, ಮೇ 1ರಂದು ದೆಹಲಿ ಹಾಗೂ ರಾಷ್ಟ್ರ ರಾಜಧಾನಿ ವ್ಯಾಪ್ತಿಯ (NRC) ಸುಮಾರು 200ಕ್ಕೂ ಅಧಿಕ ಶಾಲೆಗಳಿಗೆ ಈ ರೀತಿಯ ಹುಸಿ ಬಾಂಬ್‌ ಬೆದರಿಕೆಯ ಮೇಲ್‌ಗಳನ್ನು (Hoax Bomb Threat) ಕಳುಹಿಸಲಾಗಿತ್ತು. ಸಹಜವಾಗಿಯೇ ಇದು ದೇಶಾದ್ಯಂತ ಸುದ್ದಿಯಾಯಿತು. ಶಾಲೆಗಳಿಂದ ಮಕ್ಕಳನ್ನು ಕೂಡಲೇ ಮನೆಗೆ ಕಳುಹಿಸಲಾಯಿತು. ಪೋಷಕರೂ ಶಾಲೆಗಳಿಗೆ ಓಡೋಡಿ ಬಂದು ಮಕ್ಕಳನ್ನು ಕರೆದುಕೊಂಡು ಹೋದರು. ಈಗಲೂ ಪೋಷಕರು ಮಕ್ಕಳನ್ನು ಶಾಲೆಗಳಿಗೆ ಕಳುಹಿಸಲು ಆಗುತ್ತಿಲ್ಲ. ಕರೆಸಿಕೊಳ್ಳಲು ಶಿಕ್ಷಕರಿಗೂ ಧೈರ್ಯ ಸಾಲುತ್ತಿಲ್ಲ. ಒಟ್ಟಿನಲ್ಲಿ ಕಿಡಿಗೇಡಿಗಳು ಮಾಡುವ ಉಪದ್ವ್ಯಾಪದಿಂದ ಶಾಲೆಗಳ ಆಡಳಿತ ಮಂಡಳಿ, ಶಿಕ್ಷಕರು, ಪೋಷಕರು ಹಾಗೂ ಮಕ್ಕಳು ಆತಂಕದಲ್ಲಿಯೇ ಮುಳುಗಿದ್ದಾರೆ. ಹಾಗಾಗಿ, ಇ-ಮೇಲ್‌ ಮೂಲಕ ಹುಸಿ ಬಾಂಬ್ ಬೆದರಿಕೆಯೊಡ್ಡುವ ಕಿಡಿಗೇಡಿಗಳಿಗೆ ತಕ್ಕ ಶಾಸ್ತಿ ಮಾಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.

ಅನಾಮಧೇಯ ವ್ಯಕ್ತಿಗಳು ಮೇಲ್‌ ಮಾಡುವುದು, ತನಿಖೆ ಬಳಿಕ ಅದು ಹುಸಿ ಬಾಂಬ್‌ ಬೆದರಿಕೆ ಎಂದು ಪೊಲೀಸರು ಸ್ಪಷ್ಟಪಡಿಸುವುದು, ಇಂತಹ ಪ್ರಕರಣಗಳು ದೇಶಾದ್ಯಂತ ನಡೆಯುತ್ತಿರುವುದರಿಂದ ಇದೊಂದು ದೊಡ್ಡ ವಿಷಯ ಅಲ್ಲ, ನಿರ್ಲಕ್ಷಿಸುವುದು ಒಳಿತು ಎಂದು ಎನಿಸಿದರು, ಹುಸಿ ಬೆದರಿಕೆಗಳು ಅತಿ ಹೆಚ್ಚು ಆತಂಕ ಸೃಷ್ಟಿಸುತ್ತಿವೆ, ಮಕ್ಕಳ ಜತೆಗೆ ಪೋಷಕರ ಮೇಲೂ ಪರಿಣಾಮ ಬೀರುತ್ತಿವೆ. ಆಧುನಿಕ ಕಾಲದಲ್ಲಿ ತಂತ್ರಜ್ಞಾನ ತುಂಬ ಮುಂದುವರಿದಿದೆ. ಸೈಬರ್‌ ಅಪರಾಧ ವಿಭಾಗವನ್ನೂ ತೆರೆಯಲಾಗಿದೆ. ಹಾಗಾಗಿ, ಸೈಬರ್‌ ಕ್ರೈಂ ಪೊಲೀಸರು ಇಂತಹ ಇ-ಮೇಲ್‌ ಕಡಿಗೇಡಿಗಳನ್ನು ಮಟ್ಟಹಾಕಬೇಕು. ಬೆಂಗಳೂರು, ಅಹಮದಾಬಾದ್‌, ದೆಹಲಿ ಎನ್ನದೆ, ದೇಶಾದ್ಯಂತ ಇಂತಹ ಪ್ರಕರಣಗಳನ್ನು ತಡೆಯಲು ಕಠಿಣ ಕ್ರಮ ತೆಗೆದುಕೊಳ್ಳಬೇಕು. ಮೇಲ್ನೋಟಕ್ಕೆ ಬೇರೆ ದೇಶದ ವಿಪಿಎನ್‌ (VPN) ಬಳಸಿ ಇ-ಮೇಲ್‌ ಬೆದರಿಕೆ ಒಡ್ಡಲಾಗುತ್ತಿದೆ ಎಂಬುದು ಗೊತ್ತಾದರೂ, ಸುಧಾರಿತ ತಂತ್ರಜ್ಞಾನವನ್ನು ಬಳಸಿ ಉಪದ್ವ್ಯಾಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.

ಹುಸಿ ಬಾಂಬ್‌ ಬೆದರಿಕೆ ಕರೆಗಳು ಹತ್ತಾರು ಪರಿಣಾಮಗಳನ್ನು ಬೀರುತ್ತಿವೆ. ನಗರಗಳಲ್ಲಿ ಮಕ್ಕಳು ಪ್ರಾಣ ಭಯದಲ್ಲಿಯೇ ಶಾಲೆಗಳಿಗೆ ತೆರಳುವಂತಾಗಿದೆ. ಪೋಷಕರಂತೂ ಜೀವ ಹಿಡಿದುಕೊಂಡು ಮಕ್ಕಳನ್ನು ಶಾಲೆಗಳಿಗೆ ಕಳುಹಿಸುವಂತಾಗಿದೆ. ಕೆಲ ತಿಂಗಳ ಹಿಂದಷ್ಟೇ ಬೆಂಗಳೂರಿನಲ್ಲಿ ಸುಮಾರು 48 ಶಾಲೆಗಳಿಗೆ ಬಾಂಬ್‌ ಬೆದರಿಕೆ ಒಡ್ಡಲಾಗಿತ್ತು. ಇದು ನೂರಾರು ಶಾಲೆಗಳಲ್ಲಿ ಆತಂಕ ಸೃಷ್ಟಿಸಿತ್ತು. ಎಷ್ಟೋ ದಿನಗಳವರೆಗೆ ಪೋಷಕರು ಮಕ್ಕಳನ್ನು ಶಾಲೆಗಳಿಗೇ ಕಳುಹಿಸರಲಿಲ್ಲ. ಶಾಲೆಗಳ ಆಡಳಿತ ಮಂಡಳಿಗಳೂ ಅಷ್ಟೇ, ಸುಮ್ಮನೆ ಅಪಾಯವನ್ನು ಮೇಲೆ ಎಳೆದುಕೊಳ್ಳುವುದು ಬೇಡ ಎಂದು ಮಕ್ಕಳನ್ನು ಹಲವು ದಿನಗಳವರೆಗೆ ಶಾಲೆಗೆ ಕರೆಸಿರಲಿಲ್ಲ. ಈಗ, ದೆಹಲಿ ಹಾಗೂ ಅಹಮದಾಬಾದ್‌ ಶಾಲೆಗಳು, ಮಕ್ಕಳು ಮತ್ತು ಪೋಷಕರ ಪರಿಸ್ಥಿತಿಯೂ ಇದರಿಂದ ಹೊರತಾಗಿಲ್ಲ.

ಮಕ್ಕಳಿಗೆ ಜೀವ ಭಯ, ಪೋಷಕರು ಹಾಗೂ ಶಿಕ್ಷಕರಿಗೆ ಆತಂಕ ಮಾತ್ರವಲ್ಲ, ಹುಸಿ ಬಾಂಬ್‌ ಬೆದರಿಕೆ ಪ್ರಕರಣಗಳು ಮಕ್ಕಳ ಶೈಕ್ಷಣಿಕ ಏಳಿಗೆಯ ಮೇಲೆಯೇ ವ್ಯತಿರಿಕ್ತ ಪರಿಣಾಮಗಳನ್ನು ಬೀರುತ್ತಿದೆ. ಪದೇಪದೆ ಬೆದರಿಕೆ ಒಡ್ಡಿದರೆ ಮಕ್ಕಳು ಶಾಲೆಗಳಿಗೆ ಹೋಗುವುದಿಲ್ಲ. ಇದರಿಂದ ಅವರು ಪಠ್ಯವನ್ನು ಸರಿಯಾಗಿ ಅಭ್ಯಾಸ ಮಾಡಲು ಆಗುವುದಿಲ್ಲ. ಇನ್ನು, ಎಳೆಯ ವಯಸ್ಸಿನಲ್ಲೇ ಅವರು ಆತಂಕದಲ್ಲಿ ಶಾಲೆಗೆ ಹೋದರೆ, ಅದು ಅವರ ಮನಸ್ಸಿನ ಮೇಲೆ ಅಗಾಧವಾದ ಪರಿಣಾಮ ಬೀರುತ್ತದೆ. ಈಗಾಗಲೇ ಅತಿಯಾದ ಹೋಮ್‌ ವರ್ಕ್‌, ಆಟ-ಪಾಠಗಳಿಗೆ ಕಡಿಮೆ ಸಮಯ ಸಿಗುತ್ತಿದೆ. ಅತಿಯಾದ ಸ್ಪರ್ಧೆಯಿಂದ ಮಕ್ಕಳು ಅಂಕಗಳ ಹಿಂದೆ ಓಡಬೇಕಾದ, ರ‍್ಯಾಂಕ್‌ ಪಡೆಯಲೇಬೇಕಾದ ಅನಿವಾರ್ಯಕ್ಕೆ ಸಿಲುಕಿದ್ದಾರೆ. ಇದರಿಂದ ಮಕ್ಕಳು ನಾಲ್ಕೈದು ವರ್ಷದಿಂದಲೇ ಒತ್ತಡಕ್ಕೆ ಸಿಲುಕುತ್ತಿದ್ದಾರೆ.

ಅಷ್ಟಕ್ಕೂ ಶಿಕ್ಷಣ ಎಂದರೆ, ನಲಿಯುತ್ತ ಕಲಿಯುವುದಾಗಿದೆ. ಒತ್ತಡವಿಲ್ಲದೆ, ಆಡುತ್ತ, ನಲಿಯುತ್ತ, ಬೆರೆಯುತ್ತ ಜ್ಞಾನ ಸಂಪಾದಿಸುವುದಾಗಿದೆ. ಆದರೆ, ಈಗ ಬಾಂಬ್‌ ಬೆದರಿಕೆಯ ಆತಂಕವೂ ಮಕ್ಕಳಲ್ಲಿ ಮೂಡಿದರೆ, ಅದು ಸುದೀರ್ಘ ಅವಧಿಗೆ ಅವರನ್ನು ಕಾಡಲಿದೆ. ಶೈಕ್ಷಣಿಕ ಏಳಿಗೆಯ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಮಾನಸಿಕವಾಗಿಯೂ ಅವರು ಕುಗ್ಗಿಹೋಗಲಿದ್ದಾರೆ. ಇದರ ಮಧ್ಯೆಯೇ, ಹುಸಿ ಬಾಂಬ್‌ ಬೆದರಿಕೆ ನಿಗ್ರಹಕ್ಕಾಗಿ ಕೇಂದ್ರ ಸರ್ಕಾರವು ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು (SOP) ರಚಿಸಬೇಕು ಹಾಗೂ ವಿಸ್ತೃತ ಶಿಷ್ಟಾಚಾರಗಳನ್ನು ಸಿದ್ಧಪಡಿಸಬೇಕು ಎಂಬುದಾಗಿ ಆದೇಶ ಹೊರಡಿಸಿರುವುದು ಸ್ವಾಗತಾರ್ಹ ನಿರ್ಧಾರವಾಗಿದೆ. ಆದರೆ, ಈ ಸಮಸ್ಯೆಗೊಂದು ಕ್ಷಿಪ್ರವಾಗಿ ಕಾಯಂ ಪರಿಹಾರವನ್ನು ಕಂಡುಕೊಳ್ಳಬೇಕಿದೆ. ಅದರಲ್ಲೂ, ಶೈಕ್ಷಣಿಕ ವಾತಾವರಣವನ್ನೇ ಹಾಳುತ್ತಿರುವ ‘ಇ-ಮೇಲ್‌ ಭಯೋತ್ಪಾದಕರಿಗೆ’ ಕಠಿಣ ಶಿಕ್ಷೆಯಾಗಬೇಕಿದೆ.

ಇದನ್ನೂ ಓದಿ: ಶಾಲೆಗಳಿಗೆ ಇ-ಮೇಲ್‌ ಮೂಲಕ ಹುಸಿ ಬಾಂಬ್‌ ಬೆದರಿಕೆ; ಕಠಿಣ ಕ್ರಮಕ್ಕೆ ಮುಂದಾದ ಕೇಂದ್ರ ಸರ್ಕಾರ!

Continue Reading
Advertisement
Bengaluru Rain
ಕರ್ನಾಟಕ18 mins ago

Bengaluru Rain: ಸಿಲಿಕಾನ್‌ ಸಿಟಿಯಲ್ಲಿ ವರುಣನ ಆರ್ಭಟ; ಜಲಾವೃತವಾದ ರಸ್ತೆಗಳು, ನೆಲಕ್ಕುರುಳಿದ 16 ಮರ

Rohit Sharma
ಪ್ರಮುಖ ಸುದ್ದಿ26 mins ago

Rohit Sharma : 4 ರನ್​ಗೆ ಔಟಾಗಿ ಕಣ್ಣೀರು ಸುರಿಸಿದ ರೋಹಿತ್​ ಶರ್ಮಾ; ಇಲ್ಲಿದೆ ವಿಡಿಯೊ

PM Narendra Modi
ದೇಶ36 mins ago

ತಮ್ಮ ಬಗ್ಗೆ ಟ್ರೋಲ್‌ ಮಾಡಿದ್ದನ್ನೂ ಮೆಚ್ಚಿದ ಮೋದಿ; ಮಮತಾ ಬ್ಯಾನರ್ಜಿ ನೋಟಿಸ್; ಯಾರು ಸರ್ವಾಧಿಕಾರಿ?

School Children
ಸಂಪಾದಕೀಯ37 mins ago

ವಿಸ್ತಾರ ಸಂಪಾದಕೀಯ: ಶಾಲೆಗಳಿಗೆ ಹುಸಿ ಬಾಂಬ್‌ ಬೆದರಿಕೆ, ಇ-ಮೇಲ್‌ ಕಿಡಿಗೇಡಿಗಳಿಗೆ ಕಠಿಣ ಪಾಠ ಕಲಿಸಬೇಕಿದೆ

IPL 2024
ಕ್ರೀಡೆ45 mins ago

IPL 2024 : ಸೂರ್ಯನ ಪ್ರತಾಪಕ್ಕೆ ಮಂಕಾದ ಸನ್​; ಮುಂಬೈಗೆ 7 ವಿಕೆಟ್​ ಭರ್ಜರಿ ಗೆಲುವು

Narendra Modi
ದೇಶ1 hour ago

Maldives: ಭಾರತೀಯರೇ, ದಯಮಾಡಿ ಬನ್ನಿ ಎಂದ ಮಾಲ್ಡೀವ್ಸ್‌ ಸಚಿವ; ಬಾಯ್ಕಾಟ್‌ ಪೆಟ್ಟಿಗೆ ಥಂಡಾ!

DK Shivakumar
ಕರ್ನಾಟಕ1 hour ago

Prajwal Revanna Case: ದೇವರಾಜೇಗೌಡ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ ಎಂದ ಡಿಕೆಶಿ

T20 World Cup 2024
ಕ್ರೀಡೆ1 hour ago

T20 World Cup 2024 : ಕೇಸರಿಯ ರಂಗು; ಟೀಮ್​ ಇಂಡಿಯಾದ ಟಿ20 ವಿಶ್ವ ಕಪ್​​ ಜೆರ್ಸಿ ಬಿಡುಗಡೆ

108 Ambulance
ಕರ್ನಾಟಕ2 hours ago

108 Ambulance: 108 ಸಿಬ್ಬಂದಿಗೆ ಸರ್ಕಾರದಿಂದ ವೇತನ ಬಾಕಿ ಉಳಿಸಿಕೊಂಡಿಲ್ಲ: ದಿನೇಶ್ ಗುಂಡೂರಾವ್

IPL 2024
ಪ್ರಮುಖ ಸುದ್ದಿ2 hours ago

IPL 2024 : ಮುಂಬೈ ಚಾ ರಾಜಾ ರೋಹಿತ್​ ಶರ್ಮಾ ಎಂದು ಕೂಗಿದ ಹೇಡನ್​ ಪುತ್ರಿ ಗ್ರೇಸ್​​; ಇಲ್ಲಿದೆ ವಿಡಿಯೊ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ5 hours ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ6 hours ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ6 hours ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ1 day ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ1 day ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ1 day ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ3 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ3 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

ಟ್ರೆಂಡಿಂಗ್‌