Site icon Vistara News

Horoscope Today | ಏಕಾದಶಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡಿ

horoscope today

Horoscope Today

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು, ಆಷಾಢ ಮಾಸ, ಶುಕ್ಲ ಪಕ್ಷ.

ತಿಥಿ: ಏಕಾದಶಿ 14:13 ವಾರ: ಭಾನುವಾರ
ನಕ್ಷತ್ರ: ವಿಶಾಖ 09:54 ಯೋಗ: ಶುಭ 24:43
ಕರಣ: ವಿಷ್ಟಿ (ಭದ್ರ) 14:13 ದಿನ ವಿಶೇಷ: ಬಕ್ರೀದ್‌

ಸೂರ್ಯೋದಯ: 0೬.೦೩  ಸೂರ್ಯಾಸ್ತ: 07.೦೦

ರಾಹು ಕಾಲ : ಸಾಯಂಕಾಲ 4.30 ರಿಂದ 6.00
ಗುಳಿಕಕಾಲ:  ಸಾಯಂಕಾಲ 3.00 ರಿಂದ 10.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಅನೇಕ ರೀತಿಯ ಒತ್ತಡಗಳನ್ನು ಇಂದು ಅನುಭವಿಸುವಿರಿ. ಇತರರ ಮೇಲೆ ವಿನಾ ಕಾರಣ ಹಗೆ ಸಾಧಿಸಿ ಮಾನಸಿಕ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ.ಆರ್ಥಿಕವಾಗಿ ಸಮಸ್ಯೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಕೊಂಚ ಮಟ್ಟಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವೃಷಭ: ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯಕ. ವಿನಾ ಕಾರಣ ಎಲ್ಲದಕ್ಕೂ ಮೂಗು ತೂರಿಸುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಹೂಡಿಕೆಯ ಕುರಿತು ಆಲೋಚನೆ. ಆಪ್ತರ ಆರೋಗ್ಯ ವಿಚಾರಿಸುವಿರಿ. ಉದ್ಯೋಗಿಗಳಿಗೆ ಮಿಶ್ರಫಲ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ, ಆರ್ಥಿಕ ಲಾಭ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ಮಿಥುನ: ಕೆಲಸಕಾರ್ಯಗಳಲ್ಲಿ ನಿಧಾನಗತಿ. ಆರೋಗ್ಯ ಮಧ್ಯಮ. ಅನೇಕ ವಿಚಾರಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡುವ ಸಾಧ್ಯತೆ. ಆರ್ಥಿಕ ಲಾಭ ಸಾಧಾರಣ. ವ್ಯಾಪಾರ-ವ್ಯವಹಾರದಲ್ಲಿ ಮಿಶ್ರಫಲ. ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ಕಟಕ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗಲಿದೆ. ಆರ್ಥಿಕವಾಗಿ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಹಳೆಯ ಸ್ನೇಹಿತರು, ಕುಟುಂಬದ ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ಸಿಂಹ: ಆರೋಗ್ಯ ಕಾಳಜಿ ಇರಲಿ ಅವಶ್ಯಕ. ಒತ್ತಡದಿಂದ ಹೊರಬರಲು ವ್ಯಸನಗಳಿಗೆ ಬಲಿಯಾಗುವವರು ಹೆಚ್ಚು. ಆದ್ದರಿಂದ ನೀವು ಈ ಹಾದಿ ಹಿಡಿಯಬೇಡಿ. ಆರ್ಥಿಕವಾಗಿ ಕೊಂಚ ಲಾಭ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಹೊಸ ಭರವಸೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ಶುಭ ಕಾರ್ಯಗಳಿಗಾಗಿ ಖರ್ಚು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಾರಣಾಂತರಗಳಿಂದ ಒತ್ತಡ. ಜವಾಬ್ದಾರಿಗಳು ಹೆಚ್ಚಾಗಲಿದೆ, ಕೋಪದಿಂದ ವರ್ತಿಸುವ ಸಾಧ್ಯತೆ. ಆತುರದಲ್ಲಿ ಮಾತುಗಳು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ತುಲಾ: ಆರೋಗ್ಯ ಪರಿಪೂರ್ಣ. ಕುಟುಂಬದ ಹಿರಿಯರಿಂದ ಒತ್ತಡ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಆರ್ಥಿಕ ಲಾಭ. ಹಿಂದೆ ನೀಡಿದ ಸಾಲ ಮರಳುವ ಸಾಧ್ಯತೆ. ಆಪ್ತರಿಂದ ಸಲಹೆ ಸಹಕಾರ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ವೃಶ್ಚಿಕ: ಸಂಗಾತಿಯ ಆರೋಗ್ಯದ ಸಲವಾಗಿ ಖರ್ಚು. ವೃತಾ ಕಾಲಹರಣ ಮಾಡುವ ಆಲೋಚನೆಗಳಿಂದ ದೂರವಿರಿ. ಸಹೋದ್ಯೋಗಿಗಳಿಂದ ಕಿರಿಕಿರಿ. ವ್ಯಾಪಾರ ವ್ಯವಹಾರ ಸಾಧಾರಣ. ಹೂಡಿಕೆಯ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ:

ಧನಸ್ಸು: ಆಪ್ತರಿಂದ ಬೆಂಬಲ. ಕೆಲಸಕಾರ್ಯಗಳಲ್ಲಿ ಪ್ರಗತಿ. ಆಪ್ತರಿಂದ ಹಣದ ಸಹಾಯದ ಕೋರಿಕೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಮಕರ: ಉತ್ಸಾಹಭರಿತ ಜೀವನ. ಆರ್ಥಿಕವಾಗಿ ಲಾಭ. ಹೂಡಿಕೆ ವ್ಯವಹಾರಗಳಲ್ಲಿ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ. ಯಾವುದಾದರೂ ಸಭೆ-ಸಮಾರಂಭಗಳಿಗೆ ಭಾಗವಹಿಸುವ ಆಮಂತ್ರಣ. ನಿರೀಕ್ಷೆಯ ಹೊಸ ಭರವಸೆಗಳು ಮೂಡಲಿವೆ. ಆಪ್ತರೊಂದಿಗೆ ಮಾತುಕತೆ. ಕುಟುಂಬದ ಸದಸ್ಯರಿಗೆ ಸಲಹೆ ಸಹಕಾರ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ:

ಕುಂಭ: ಇತರರನ್ನು ಟೀಕಿಸುತ್ತ ಸಮಯ ವ್ಯರ್ಥ ಮಾಡುವುದು ಬೇಡ. ಭೂಮಿಗೆ ಸಂಬಂಧಿಸಿದಂತೆ ವ್ಯಾಪಾರ ವ್ಯವಹಾರದಲ್ಲಿ ಲಾಭ. ಪ್ರಯಾಣ ಸಾಧ್ಯತೆ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಮೀನ: ಆರೋಗ್ಯ ಪರಿಪೂರ್ಣ. ಉದ್ಯೋಗಕ್ಕೆ ಸಂಬಂಧಿಸಿದಂತೆ ಖರ್ಚು. ಹೊಸ ವ್ಯಕ್ತಿಗಳ ಪರಿಚಯವಾಗಲಿದೆ. ನಿಮ್ಮ ನಿರೀಕ್ಷೆಗೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ. ಕುಟುಂಬದ ಸದಸ್ಯರಿಂದ ಒತ್ತಡ. ಸಂಗಾತಿಯ ವರ್ತನೆ ನಿಮ್ಮ ಖ್ಯಾತಿಯ ಮೇಲೆ ಪರಿಣಾಮ ಬೀರಬಹುದು. ಆರೋಗ್ಯ ಪರಿಪೂರ್ಣ. ದಿಡೀರ್ ಧನಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

Exit mobile version