Site icon Vistara News

Horoscope Today | ತುಲಾ ರಾಶಿಯವರಿಗೆ ಪ್ರಭಾವಿಗಳ ಬೆಂಬಲವಿದೆ; ನಿಮ್ಮ ಭವಿಷ್ಯ ಹೇಗಿದೆ?

horoscope today

ಇಂದಿನ ಪಂಚಾಂಗ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ
ದಕ್ಷಿಣಾಯನ, ಗ್ರೀಷ್ಮ ಋತು, ಆಷಾಢ ಮಾಸ, ಕೃಷ್ಣ ಪಕ್ಷ

ತಿಥಿ: ತ್ರಯೋದಶಿ 18:46 ವಾರ:   ಮಂಗಳವಾರ
ನಕ್ಷತ್ರ: ಆರಿದ್ರಾ 28:08 ಯೋಗ: ವ್ಯಾಘಾತ 16:05
ಕರಣ: ವಣಿಜ 18:46 ದಿನ ವಿಶೇಷ : ಸಂತ ನಾಮದೇವ ಜಯಂತಿ, ಕಾರ್ಗಿಲ್‌ ವಿಜಯ ದಿವಸ

ಸೂರ್ಯೋದಯ:  06:09     ಸೂರ್ಯಾಸ್ತ: 06:59

ರಾಹು ಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಪ್ರಾತಃ ಕಾಲ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವಾಗುವ ಸಾಧ್ಯತೆಗಳು ಹೆಚ್ಚು, ತಾಳ್ಮೆಯಿಂದ ಇರಿ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು, ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ, ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ಯೋಚಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ, ಅವರ ಮಾತನ್ನು ಲಕ್ಷಿಸದೇ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ದಿನ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ಕಟಕ: ಕೆಲವು ಆಘಾತಗಳನ್ನು ಎದುರಿಸಬೇಕಾಗಿ ಬರಬಹುದು ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ಅಪರಿಚರೊಂದಿಗೆ ಅತಿಯಾದ ಸಲುಗೆ ಅಪಾಯ ತಂದೀತು ಎಚ್ಚರಿಕೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಧೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಪ್ರೇರೇಪಿಸುತ್ತದೆ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳವಿರಿ. ಹಣಕಾಸು ಪರಿಸ್ಥಿತಿ ಸಾಧಾರಣ, ದಿನದ ಮಟ್ಟಿಗೆ ಖರ್ಚು. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಳ್ಳಿ. ಹಾಸಿಗೆ ಇದ್ದಷ್ಟು ಕಾಲು ಚಾಚುವುದು ಒಳ್ಳೆಯದು. ಆರೋಗ್ಯ ಮಧ್ಯಮ, ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ತುಲಾ: ಪ್ರಭಾವಿ ಜನರ ಬೆಂಬಲ ಸಿಗಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪರದಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದಿಂದ ಲಾಭ. ಆರೋಗ್ಯ ಪರಿಪೂರ್ಣ. ಉದ್ಯೋಗದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಅಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಪಡೆಯಬಹುದು. ನಿಮ್ಮ ಆಕರ್ಷಕ ವ್ಯಕ್ತಿತ್ವ ವಿಕಸನ ಆಗುತ್ತದೆ. ಆರೋಗ್ಯ ಉತ್ತಮ. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು .ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ ಮತ್ತು ಉದ್ಯೋಗದಲ್ಲಿ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಮೀನ: ಅತಿರೇಕದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಕ್ಕೆ ಕಾರಣವಾಗುವ ವಿಷಯಗಳಿಂದ ದೂರ ಇರಿ. ಎಲ್ಲ ವ್ಯವಹಾರಗಳಲ್ಲಿ ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Saturn In Astrology | ಜಾತಕದಲ್ಲಿ ಶನಿ ಲಗ್ನದಲ್ಲಿದ್ದರೆ ರಾಜನಂತೆ ಮೆರೆಯಬಹುದು! ಉಳಿದ ಮನೆಗಳಲ್ಲಿದ್ದರೆ ಏನು ಫಲ?

Exit mobile version