Site icon Vistara News

Horoscope Today | ದ್ವಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ

nava pancham yoga

nava pancham yoga

ಇಂದಿನ ಪಂಚಾಂಗ (09-08-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಶುಕ್ಲ ಪಕ್ಷ

ತಿಥಿ: ದ್ವಾದಶಿ 17:45 ವಾರ:  ಮಂಗಳವಾರ
ನಕ್ಷತ್ರ: ಮೂಲಾ 12:16 ಯೋಗ: ವಿಷ್ಕುಂಭ 23:34
ಕರಣ: ಭವ 07:25 / ಬಾಲವ 17:45 ದಿನ ವಿಶೇಷ: ಮೊಹರಂ 10ನೇ ದಿನ/ ಚಾತುರ್ಮಾಸ್ಯ ದಧಿ ವ್ರತಾರಂಭ

ಸೂರ್ಯೋದಯ:  06: ೧2     ಸೂರ್ಯಾಸ್ತ: 06: 54

ರಾಹು ಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಪ್ರಾತಃ ಕಾಲ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಕಿರಿಕಿರಿ. ಆರೋಗ್ಯ ಮಧ್ಯಮ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು, ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು, ಕೀರ್ತಿ, ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.
ಮುಂದೆಯಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ದೀರ್ಘಕಾಲದ ಕೆಲಸಕಾರ್ಯಗಳಲ್ಲಿ ಯಶಸ್ಸು. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ, ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಮಕರ: ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯದಲ್ಲಿ ಕೊಂಚ ಏರು-ಪೇರು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು. ಅಮೂಲ್ಯ ವಸ್ತುಗಳ ಕುರಿತು ಲಕ್ಷ್ಯ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Saturn In Astrology | ಜಾತಕದಲ್ಲಿ ಶನಿ ಲಗ್ನದಲ್ಲಿದ್ದರೆ ರಾಜನಂತೆ ಮೆರೆಯಬಹುದು! ಉಳಿದ ಮನೆಗಳಲ್ಲಿದ್ದರೆ ಏನು ಫಲ?

Exit mobile version