ಇಂದಿನ ಪಂಚಾಂಗ (23-08-2022)
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು, ಶ್ರಾವಣ ಮಾಸ, ಕೃಷ್ಣ ಪಕ್ಷ
ತಿಥಿ: ದ್ವಾದಶಿ ವಾರ: ಮಂಗಳವಾರ
ನಕ್ಷತ್ರ: ಆರಿದ್ರಾ 10:42 ಯೋಗ: ಸಿದ್ಧಿ 24:36
ಕರಣ: ಕೌಲವ19:19 ದಿನ ವಿಶೇಷ : ಮಂಗಳ ಗೌರೀ ವ್ರತ
ಸೂರ್ಯೋದಯ: 06: 14 ಸೂರ್ಯಾಸ್ತ: 06: 48
ರಾಹು ಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಪ್ರಾತಃ ಕಾಲ 9.00 ರಿಂದ 10.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಬಹಳ ದಿನಗಳ ಕನಸು ನನಸಾಗುವ ದಿನ. ವ್ಯಾಜ್ಯ ಪ್ರಕರಣಗಳು ಪರಿಹಾರವಾಗುವ ಸಾಧ್ಯತೆ. ಆರ್ಥಿಕ ಪ್ರಗತಿ. ಕುಟುಂಬ ಸದಸ್ಯರ ಸಹಕಾರದಿಂದ ಮನೆಯಲ್ಲಿ ನೆಮ್ಮದಿ. ಜನರೊಂದಿಗೆ ಸಂಬಂಧಗಳು ಉತ್ತಮಗೊಳ್ಳುತ್ತವೆ. ವ್ಯಾಪಾರಿಗಳಿಗೆ, ವ್ಯವಹಾರ ಮಾಡುವವರಿಗೆ ಇಂದು ಅನುಕೂಲಕರವಾದ ದಿನ.
ಅದೃಷ್ಟ ಸಂಖ್ಯೆ: 4
ವೃಷಭ: ಬಂಧು ಮಿತ್ರರಿಂದ ಸಹಕಾರ. ಆರ್ಥಿಕ ಪ್ರಗತಿ ಸಾಧಾರಣ. ನಿಮ್ಮ ವ್ಯಕ್ತಿತ್ವ ಇತತರನ್ನು ಆಕರ್ಷಿಸಿ ಕಾರ್ಯದಲ್ಲಿ ಯಶಸ್ಸು. ಧಾರ್ಮಿಕ ಕಾರ್ಯಗಳಲ್ಲಿ ಬಾಗಿ, ಕುಟುಂಬದಲ್ಲಿ ನೆಮ್ಮದಿ. ಆರೋಗ್ಯದ ವಿಷಯದಲ್ಲಿ ಸ್ವಲ್ಪ ಎಚ್ಚರಿಕೆ ವಹಿಸಿ. ಖರ್ಚುಗಳು ಹೆಚ್ಚಾಗಬಹುದು.
ಅದೃಷ್ಟ ಸಂಖ್ಯೆ: 3
ಮಿಥುನ: ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ. ಬಹಳ ದಿನಗಳ ಬಾಕಿ ಇರುವ ಕಾರ್ಯವು ಪುರ್ಣವಾಗುವುದು. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು. ಸ್ನೇಹಿತರ ಸಹಾಯದಿಂದ ನೀವು ಹಿಡಿದ ಕಾರ್ಯದಲ್ಲಿ ಯಶಸ್ಸು ಪಡೆಯುತ್ತೀರಿ.
ಅದೃಷ್ಟ ಸಂಖ್ಯೆ: 5
ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣ ವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ. ಆರ್ಥಿಕವಾಗಿ ಉತ್ತಮ ಫಲ ಪಡೆಯುವಿರಿ.
ಅದೃಷ್ಟ ಸಂಖ್ಯೆ: 5
ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗದ ಭರವಸೆ. ಆರ್ಥಿಕ ಪ್ರಗತಿ. ಪರಿಶ್ರಮಕ್ಕೆ ಪ್ರತಿ ಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ. ಗೌಪ್ಯ ವಿಷಯಗಳನ್ನು ಬೇರೆಯವರೊಂದಿಗೆ ಹಂಚಿಕೊಳ್ಳಬೇಡಿ. ವ್ಯಾಪಾರಸ್ಥರು ವ್ಯವಹಾರ ಮಾಡುವಾಗ ಎಚ್ಚರಿಕೆ ವಹಿಸುವುದು ಅವಶ್ಯ.
ಅದೃಷ್ಟ ಸಂಖ್ಯೆ: 3
ಕನ್ಯಾ: ಮನೆಯಲ್ಲಿ ಪರಸ್ಪರರ ಮಧ್ಯೆ ಕಲಹದಿಂದ ವಾತಾವರಣ ಹದಗೆಡಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ, ಎಚ್ಚರಿಕೆ ವಹಿಸಿ. ಆರೋಗ್ಯದಲ್ಲಿ ಉತ್ತಮ ಫಲ, ಆರ್ಥಿಕ ಪ್ರಗತಿ. ನೀವು ಹಿಡಿದ ಕಾರ್ಯದಲ್ಲಿ ಯಶಸ್ಸು ಪಡೆಯಬಹುದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಮಾಡುವುದು ಬೇಡ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಉತ್ತಮ. ಮನೆಯಲ್ಲಿ ಸಂತೋಷದ ದಿನ. ಇಂದು ವಾಹನವನ್ನು ಓಡಿಸುವಾಗ ಎಚ್ಚರಿಕೆಯಿಂದಿರಿ. ಕೆಲಸ ಕಾರ್ಯಗಳಲ್ಲಿ ಯಶಸ್ಸನ್ನು ಪಡೆಯಬಹುದು.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ಮಾಡುವುರು. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶ ಸಿಗುವುದು. ಕುಟುಂಬದಲ್ಲಿ ನೆಮ್ಮದಿ. ಆರ್ಥಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟು ಮಾಡಬಹುದು. ಉದಾಸಿನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ. ಆರೋಗ್ಯ ಉತ್ತಮವಾಗಿರುತ್ತದೆ.
ಅದೃಷ್ಟ ಸಂಖ್ಯೆ: 2
ಮಕರ: ಉದ್ಯೋಗದಲ್ಲಿ ಅಧಿಕಾರಿಗಳ ಕಿರಿಕಿರಿ ಒತ್ತಡ ಉಂಟುಮಾಡುವ ಸಾಧ್ಯತೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗ ಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು. ಅನ್ಯರು ಆಡುವ ಟೀಕೆಗಳಿಗೆ ಹೆದರಬೇಡಿ. ಆರೋಗ್ಯ ಉತ್ತಮ. ವಿದ್ಯಾರ್ಥಿಗಳು ಓದಿನ ವಿಷಯದಲ್ಲಿ ತೊಂದರೆ ಎದುರಿಸಬೇಕಾಗಿ ಬರಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂವಾಗದಿರಲಿ. ಆರ್ಥಿಕ ನಷ್ಟ ತಪ್ಪಿಸಿಕೊಳ್ಳಿ. ಹೂಡಿಕೆ ಮಾಡುವಾಗ ಎಚ್ಚರ ವಹಿಸಿ. ಸಂಗಾತಿಯ ಮಾತುಗಳು ಹಿತವೆನಿಸದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ | ಬಹುತೇಕ ಶುಭಫಲಗಳನ್ನೇ ನೀಡುವ ಬುಧನ ಭಾವಫಲಗಳು ಹೀಗಿವೆ