Site icon Vistara News

Horoscope Today | ವೃಷಭ ರಾಶಿಯವರಿಗೆ ಆರೋಗ್ಯ ಪರಿಪೂರ್ಣ; ನಿಮ್ಮ ಭವಿಷ್ಯ ಹೇಗಿದೆ?

Horoscope Today

ಇಂದಿನ ಪಂಚಾಂಗ (03-09-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು, ಭಾದ್ರಪದ
ಮಾಸ, ಶುಕ್ಲ ಪಕ್ಷ
ತಿಥಿ: ಸಪ್ತಮಿ 12:27 ವಾರ: ಶನಿವಾರ
ನಕ್ಷತ್ರ: ಅನುರಾಧ 22:56 ಯೋಗ: ವೈಧೃತಿ 16:58
ಕರಣ: ವಿಷ್ಟಿ (ಭದ್ರ)23:36 ದಿನ ವಿಶೇಷ: ಅಮುಕ್ತಾಭರಣ ಸಪ್ತಮಿ
ಅಮೃತಕಾಲ: ಮಧ್ಯಾಹ್ನ 12 ಗಂಟೆ 53 ನಿಮಿಷದಿಂದ 2 ಗಂಟೆ 25 ನಿಮಿಷದವರೆಗೆ

ಸೂರ್ಯೋದಯ:  06: 15     ಸೂರ್ಯಾಸ್ತ: 06: 45

ರಾಹು ಕಾಲ :ಪ್ರಾತಃ ಕಾಲ 9.00 ರಿಂದ 10.30
ಗುಳಿಕಕಾಲ:ಪ್ರಾತಃ ಕಾಲ  6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ನಿಮ್ಮ ಬಾಲ್ಯದ ನೆನಪುಗಳು ಕಾಡಲಿವೆ. ಅನಗತ್ಯ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯದ ಕುರಿತು ಕಾಳಜಿ ಇರಲಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ವೃಷಭ: ಉತ್ಸಾಹದಿಂದ ಕಾಲ ಕಳೆಯುವಿರಿ. ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು. ಯೋಚಿಸಿ, ಸಹಾಯ ಮಾಡಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಆರೋಗ್ಯ ಪರಿಪೂರ್ಣ. ದಿನದ ಮಟ್ಟಿಗೆ ಖರ್ಚು ‌ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ. ಸಕಾರಾತ್ಮಕವಾಗಿ ಆಲೋಚಿಸಿ. ನಿಮ್ಮಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ಆರೋಗ್ಯ ಮಧ್ಯಮ. ಹಣಕಾಸು ಪ್ರಗತಿ ಉತ್ತಮ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಉತ್ತಮ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಅನೇಕ ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುರಿ. ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಸಿಂಹ: ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ವಿಚಲಿತರಾಗುವಂತೆ ಮಾಡಬಹುದು. ಕುಲ ದೇವರ ಆರಾಧನೆ, ಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಸಾಧಾರಣ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಖರ್ಚು. ಜವಾಬ್ದಾರಿ ಹೆಚ್ಚಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ತುಲಾ: ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಮಾನಸಿಕ ಒತ್ತಡದಿಂದ ದೂರವಿರಲು ಯೋಗ, ಪ್ರಾಣಾಯಾಮ, ಧ್ಯಾನ ಮಾಡಿ. ಆರ್ಥಿಕ ಸಹಾಯದ ಬೇಡಿಕೆ ಬರಲಿದೆ. ಆಪ್ತರೊಂದಿಗೆ ಸಮಯ ಕಳೆಯಲು ಅವಕಾಶ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಶ್ಚಿಕ: ಅನಿರೀಕ್ಷಿತ ಪ್ರಯಾಣ. ದೇಹದ ಆಯಾಸ ಹೆಚ್ಚಾಗುವ ಸಾಧ್ಯತೆ. ಒತ್ತಡದಿಂದ ಮನಸ್ಸಿನ ಹತೋಟಿ ತಪ್ಪುವ ಸಾಧ್ಯತೆ. ತಾಳ್ಮೆ ಅವಶ್ಯ. ವ್ಯಾಪಾರ ವ್ಯವಹಾರದಲ್ಲಿ ಇಮ್ಮಡಿ ಲಾಭ. ಆರ್ಥಿಕವಾಗಿ ಬಲಿಷ್ಠ. ಆದಾಯದ ಮೂಲಗಳು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ಆರೋಗ್ಯದ ಕಡೆಗೆ ಹೆಚ್ಚು ಗಮನ ಇರಲಿ. ಅನಿವಾರ್ಯ ಕಾರಣಗಳಿಂದ ಖರ್ಚು. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಅನಿವಾರ್ಯ ಕಾರಣಗಳಿಂದ ಖರ್ಚು. ಆಪ್ತರೊಂದಿಗೆ ಸಮಯ ಕಳೆಯವಿರಿ. ಅನೇಕ ಭಿನ್ನಾಭಿಪ್ರಾಯಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡಬಹುದು, ಮಾನಸಿಕ ಆರೋಗ್ಯಕ್ಕಾಗಿ ದತ್ತಾತ್ರೇಯ ಗುರುಗಳ ಆರಾಧನೆ ಮಾಡಿ. ಆರೋಗ್ಯ ಮಾಧ್ಯಮ. ಕೌಟುಂಬಿಕವಾಗಿ ಉತ್ತಮ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಅನಾವಶ್ಯಕವಾಗಿ ಒತ್ತಡಕ್ಕೆ ಒಳಗಾಗುವುದು ಬೇಡ. ಆರ್ಥಿಕ ಪ್ರಗತಿ. ಆರೋಗ್ಯ ಪರಿಪೂರ್ಣ. ಆಪ್ತರಿಂದ ಉಡುಗೊರೆ ಸಿಗುವುದು. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವ ಬುದ್ಧಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಮೀನ: ದೈಹಿಕ ಆರೋಗ್ಯ ಉತ್ತಮ, ಮಾನಸಿಕ ಆರೋಗ್ಯ ಸ್ಥಿತಿ ಇರಲು ನೀವು ನಡೆದಿರುವ ಘಟನೆ ನೆನಪಿಸಿ ಕೊರಗುವುದು ಬೇಡ. ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದು. ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು. ಆಪ್ತರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?

Exit mobile version