Site icon Vistara News

Horoscope Today | ದ್ವಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ

Horoscope Today daily horoscope

Horoscope Today

ಇಂದಿನ ಪಂಚಾಂಗ (07-09-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು, ಭಾದ್ರಪದ
ಮಾಸ, ಶುಕ್ಲ ಪಕ್ಷ
ತಿಥಿ: ದ್ವಾದಶಿ 24:04 ವಾರ: ಬುಧವಾರ
ನಕ್ಷತ್ರ: ಉತ್ತರಾಷಾಢ 15:59 ಯೋಗ: ಶೋಭನ 25:14
ಕರಣ: ಭವ 13:35 ದಿನ ವಿಶೇಷ: ವಾಮನ ಜಯಂತಿ, ಕ್ಷೀರ ವ್ರತಾರಂಭ
ಅಮೃತಕಾಲ: ಬೆಳಗ್ಗೆ 10 ಗಂಟೆ 09 ನಿಮಿಷದಿಂದ 11 ಗಂಟೆ 36 ನಿಮಿಷದವರೆಗೆ.

ಸೂರ್ಯೋದಯ: 06: 02     ಸೂರ್ಯಾಸ್ತ: 06:25

ರಾಹು ಕಾಲ: ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಪ್ರಾತಃ ಕಾಲ 10.30 ರಿಂದ 12.00
ಯಮಗಂಡಕಾಲ: ಪ್ರಾತಃ ಕಾಲ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಆರೋಗ್ಯದಲ್ಲಿ ಪ್ರಗತಿ. ವ್ಯಾಪಾರ ವ್ಯವಹಾರದಲ್ಲಿ ಲಾಭ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಪರಿಸ್ಥಿತಿ ಹದಗೆಡಲು ನೀವೇ ದಾರಿ ಮಾಡಿಕೊಡುವುದು ಬೇಡ, ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳಲ್ಲಿ ನಿಧಾನ. ಆರೋಗ್ಯ ಉತ್ತಮ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ದೊರೆಯಲಿದೆ. ಆರ್ಥಿಕವಾಗಿ ಬಲ ವಂತರಾಗುವಿರಿ. ದ್ವಿಸ್ವಭಾವದವರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯದಲ್ಲಿ ಪ್ರಗತಿ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತಿರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನೆಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಉದ್ಯೋಗದಲ್ಲಿ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ. ಆರೋಗ್ಯದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ತುಲಾ: ಆಪ್ತರ ಮಾತುಗಳು ಅಗಾದ ಪರಿಣಾಮ ಬೀರುವ ಸಾಧ್ಯತೆ. ಹಣಕಾಸ ವ್ಯವಹಾರದಲ್ಲಿ ಕುಂಠಿತ. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ದೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ. ನಿಮ್ಮ ಉದಾರ ಸ್ವಭಾವವನ್ನು ಬೆರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ. ಶಿಕ್ಷಣ ಮತ್ತು ಸ್ಪರ್ಧೆಯಲ್ಲಿ ಯಶಸ್ವಿಯಾಗುತ್ತೀರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 6

ಧನಸ್ಸು: ದೈಹಿಕ ಆಯಾಸವಾಗುವುದು. ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಇಂದು ಧೈರ್ಯ ಮತ್ತು ಆತ್ಮವಿಶ್ವಾಸದಿಂದ ಯಾವುದೇ ಕೆಲಸ ಮಾಡುವಿರಿ. ಆದರೆ ಕೆಲಸಕಾರ್ಯಗಳಲ್ಲಿ ನಿಧಾನ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಮಕರ: ಆರೋಗ್ಯದ ದೃಷ್ಟಿಯಿಂದ ಉತ್ತಮವಾದ ದಿನ. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ಸಿಗಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ. ಇಂದು ವೈವಾಹಿಕ ಜೀವನದಲ್ಲಿ ಮಧುರತೆ ಇರುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ಆಸ್ತಿ ಮತ್ತು ಹಣದ ವ್ಯವಹಾರಗಳಲ್ಲಿ ಇಂದು ಬಹಳ ಜಾಗರೂಕರಾಗಿರಿ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಎಲ್ಲ ಕಾರ್ಯದಲ್ಲಿ ಪ್ರಗತಿ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | ಗುರು ಗ್ರಹ ನೀಡುವ ಭಾವಫಲಗಳ ಬಗ್ಗೆ ಮಾಹಿತಿ ಇದೆಯೇ?

Exit mobile version