Site icon Vistara News

Horoscope Today | ಸಿಂಹ ರಾಶಿಯವರಿಗೆ ಉದ್ಯೋದಲ್ಲಿ ಶುಭ ಫಲ; ನಿಮ್ಮ ಭವಿಷ್ಯ ಹೀಗಿದೆ

Horoscope Today

ಇಂದಿನ ಭವಿಷ್ಯ

ಇಂದಿನ ಪಂಚಾಂಗ (12-09-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು, ಭಾದ್ರಪದ
ಮಾಸ, ಕೃಷ್ಣ ಪಕ್ಷ
ತಿಥಿ: ಬಿದಿಗೆ 11:34 ವಾರ: ಸೋಮವಾರ
ನಕ್ಷತ್ರ: ಉತ್ತರಭಾದ್ರಪದ 06:58 ಯೋಗ: ಗಂಡ 09:29
ಕರಣ: ಗರಜ 11:34
ಅಮೃತಕಾಲ: ಪ್ರಾತಃಕಾಲ 02 ಗಂಟೆ 25 ನಿಮಿಷದಿಂದ ಪ್ರಾತಃಕಾಲ 03 ಗಂಟೆ 56 ನಿಮಿಷದವರೆಗೆ.

ಸೂರ್ಯೋದಯ: 06: 03     ಸೂರ್ಯಾಸ್ತ: 06: 21

ರಾಹು ಕಾಲ: ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಮಾನಸಿಕ ಒತ್ತಡದಿಂದಾಗಿ ಅಧೈರ್ಯ, ಸಕಾರಾತ್ಮಕ ಆಲೋಚನೆಗಳು ಇರಲಿ. ಆರ್ಥಿಕ ಯೋಜನೆ ರೂಪಿಸುವ ಸಾಧ್ಯತೆ. ದೀರ್ಘಕಾಲದ ಕೆಲಸ ಕಾರ್ಯಗಳು ಇಮ್ಮಡಿ ಫಲ ನೀಡಲಿವೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ವೃಷಭ: ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಅನಿವಾರ್ಯ ಖರ್ಚು. ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟು ಮಾಡುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಮಿಥುನ: ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಮುನ್ನ ಯೋಚಿಸಿ. ಅತಿಯಾದ ಒತ್ತಡ ನಿಮ್ಮನ್ನು ಮಾನಸಿಕವಾಗಿ ತೊಂದರೆಗಳಾಗುವಂತೆ ಮಾಡುವ ಸಾಧ್ಯತೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಕಟಕ: ಅನಿರೀಕ್ಷಿತ ಲಾಭ ದೊರೆಯಲಿದೆ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಮಿಶ್ರ ಫಲ. ವ್ಯಾಪಾರ, ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಸಿಂಹ: ಮಾನಸಿಕ ಒತ್ತಡ ಹೆಚ್ಚಾಗಲಿದೆ. ದೀರ್ಘಕಾಲದ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ಲಾಭ. ಅನೀರಿಕ್ಷಿತ ಲಾಭ. ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳು ಕಲಹಕ್ಕೆ ಕಾರಣವಾಗಬಹುದು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕನ್ಯಾ: ಅನಿರೀಕ್ಷಿತ ಪ್ರಯಾಣದಿಂದ ಆಯಾಸ, ಆರೋಗ್ಯ ಕೊಂಚ ಏರುಪೇರು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಉತ್ತಮ ಯೋಜನೆಯನ್ನು ಮುಂದೆ ಮಾಡಿದರಾಯಿತು ಎಂಬ ಆಲಸ್ಯ ಬೇಡ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ತುಲಾ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಕುಟುಂಬದ ಭವಿಷ್ಯದ ಕುರಿತಾಗಿ ಆರ್ಥಿಕ ಯೋಜನೆ ರೂಪಿಸುವ ಸಾಧ್ಯತೆ. ನೆರೆಹೊರೆಯವರು ಕಲಹ ಸೃಷ್ಟಿಸಬಹುದು. ಮಾತಿನಲ್ಲಿ ಹಿಡಿತವಿರಲಿ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರ್ಥಿಕ ಲಾಭ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ವೃಶ್ಚಿಕ: ಕೆಲಸ ಕಾರ್ಯಗಳು ನಿಧಾನ. ಅತಿಥಿಗಳ ಆಗಮನ ಸಂತಸ ತಂದೀತು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರ್ಥಿಕವಾಗಿ ಬಲಗೊಳ್ಳಲಿದ್ದಿರಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆದು ಕಲಹವಾದೀತು ಎಚ್ಚರಿಕೆಯಿಂದ ಇರಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಧನಸ್ಸು: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರುವವು. ಅನಿವಾರ್ಯ ಪ್ರಸಂಗಗಳಿಂದಾಗಿ ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು, ತಾಳ್ಮೆ ಇರಲಿ. ಹದ್ಯೋಗಿಗಳಿಂದ ಕಿರಿಕಿರಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಮಕರ: ಆರೋಗ್ಯ ಪರಿಪೂರ್ಣವಾಗಿದ್ದರೂ, ತಲೆಯಲ್ಲಿ ಭವಿಷ್ಯದ ಬದುಕಿನ ಚಿಂತೆ ಕಾಡಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು, ಆರ್ಥಿಕ ಪ್ರಗತಿ ಸಾಧಾರಣ. ಕುಟುಂಬದ ಕುರಿತು ಆಲೋಚನೆ. ಉದ್ಯೋಗಿಗಳಿಗೆ ಒತ್ತಡ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ಕುಂಭ: ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಚಿಕ್ಕ ಪುಟ್ಟ ವಿಷಯಗಳಿಂದ ಕಿರಿಕಿರಿ ಮಾಡಿಕೊಳ್ಳುವುದು ಬೇಡ. ಹಿಂದೆ ಮುಂದೆ ವಿಚಾರ ಮಾಡದೆ ಯಾವುದೇ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಅನೇಕ ತರಹದ ಒತ್ತಡ. ವಿವಾಹ ಅಪೇಕ್ಷಿತರಿಗೆ ಕಂಕಣ ಭಾಗ್ಯ. ಕೌಟುಂಬಿಕವಾಗಿ ಶುಭ.
ಅದೃಷ್ಟ ಸಂಖ್ಯೆ: 3

ಮೀನ: ಕೆಲಸದ ಒತ್ತಡ ಮತ್ತು ಮನೆಯಲ್ಲಿ ಅಪಶ್ರುತಿ ಸ್ವಲ್ಪ ಉದ್ವೇಗಕ್ಕೆ ಕಾರಣವಾಗಬಹುದು. ಅರ್ಥಿಕ ಲಾಭ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ಪ್ರೋತ್ಸಾಹ ಸಿಗುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?

Exit mobile version