Site icon Vistara News

Horoscope Today | ಇಂದು ಸಿಂಹ ರಾಶಿಯಲ್ಲಿ ರವಿ; ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡಿ

Horoscope Today

Horoscope Today

ಇಂದಿನ ಪಂಚಾಂಗ (16-09-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು, ಭಾದ್ರಪದ
ಮಾಸ, ಕೃಷ್ಣ ಪಕ್ಷ
ತಿಥಿ: ಷಷ್ಠಿ 12:18 ವಾರ: ಶುಕ್ರವಾರ
ನಕ್ಷತ್ರ: ಕೃತ್ತಿಕಾ 09:54 ಯೋಗ: ವಜ್ರ 29:48
ಕರಣ: ವಿಷ್ಟಿ (ಭದ್ರ) 25:12 ದಿನ ವಿಶೇಷ: ಚಂದನಷಷ್ಠಿ, ವಿಶ್ವ ಓಝೋನ್ ದಿನ
ಅಮೃತಕಾಲ: ಬೆಳಗ್ಗೆ 07 ಗಂಟೆ 22 ನಿಮಿಷದಿಂದ 9 ಗಂಟೆ 05 ನಿಮಿಷದವರೆಗೆ.

ಸೂರ್ಯೋದಯ: 06: 18     ಸೂರ್ಯಾಸ್ತ: 06: 29

ರಾಹುಕಾಲ: ಪ್ರಾತಃ ಕಾಲ 10.30 ರಿಂದ 12.00
ಗುಳಿಕಕಾಲ: ಪ್ರಾತಃ ಕಾಲ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ನಿಮ್ಮ ವರ್ತನೆ ಇತರರ ಮೇಲೆ ಒತ್ತಡ ಉಂಟುಮಾಡುವ ಸಾಧ್ಯತೆ. ಹಣಕಾಸು ಪ್ರಗತಿ ಉತ್ತಮ. ಧಾರ್ಮಿಕ ವ್ಯಕ್ತಿಗಳ ಭೇಟಿ, ಕ್ಷೇತ್ರ ದರ್ಶನ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಅಸಮಾಧಾನ ತರುವುದರೊಂದಿಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಮಿಥುನ: ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವವು. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ. ಅನಾವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆತುರದಲ್ಲಿ ಇತರರನ್ನು ಟೀಕೆ ಮಾಡುವುದು ಬೇಡ. ನ್ಯಾಯಾಲಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ಎಚ್ಚರಿಕೆ ಅಗತ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋಯಿಸುವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಬೇಡ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಗುರು ದತ್ತಾತ್ರೇಯನನ್ನು ಆರಾಧಿಸಿ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಗಾಗಿ ಆಲೋಚನೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ದೀರ್ಘಕಾಲದ ಪ್ರಯಾಣ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮ. ನಿಮ್ಮ ಆರ್ಥಿಕ ಸ್ಥಿತಿ ಉತ್ತಮವಾಗಿರುತ್ತದೆ. ಇಂದು ಆತ್ಮೀಯರೊಂದಿಗೆ ಸಮಯ ಕಳೆಯುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಕರ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು. ಆರೋಗ್ಯದ ಕಡೆ ವಿಶೇಷ ಗಮನ ಕೊಡಿ.
ಅದೃಷ್ಟ ಸಂಖ್ಯೆ: 6

ಕುಂಭ: ಆಲಸ್ಯದಿಂದ ಕಾರ್ಯ ಹಾನಿ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸೃಜನಾತ್ಮಕವಾಗಿ ಕೆಲಸ ಮಾಡಿ. ಉದ್ಯೋಗಿಗಳಿಗೆ ಕಚೇರಿಯಲ್ಲಿ ಸಮಸ್ಯೆಗಳಿದ್ದರೆ ಇಂದು ಪರಿಹಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | ಭಾವಾಶ್ರಿತ ಗ್ರಹಫಲ | ಚಂದ್ರನು ನೀಡುವ ಫಲಗಳೇನು?

Exit mobile version