ಇಂದಿನ ಪಂಚಾಂಗ (23-09-2022)
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು, ಭಾದ್ರಪದ ಮಾಸ, ಕೃಷ್ಣ ಪಕ್ಷ
ತಿಥಿ: ತ್ರಯೋದಶಿ 26:30 ವಾರ: ಶುಕ್ರವಾರ
ನಕ್ಷತ್ರ: ಮಘಾ 27:49 ಯೋಗ: ಸಿದ್ದಿ 09:53
ಕರಣ: ಗರಜ 13:57 ದಿನ ವಿಶೇಷ: ಪ್ರದೋಷ
ಅಮೃತಕಾಲ: ಪ್ರಾತಃಕಾಲ 1 ಗಂಟೆ 16 ನಿಮಿಷದಿಂದ 02 ಗಂಟೆ 59 ನಿಮಿಷದವರೆಗೆ.
ಸೂರ್ಯೋದಯ: 06: 17 ಸೂರ್ಯಾಸ್ತ: 06: 30
ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಬಹಳ ದಿನಗಳ ಕನಸು ನನಸಾಗುವ ದಿನ. ವ್ಯಾಜ್ಯ ಪ್ರಕರಣಗಳು ಪರಿಹಾರವಾಗುವ ಸಾಧ್ಯತೆ. ಆರ್ಥಿಕ ಪ್ರಗತಿ. ಕುಟುಂಬ ಸದಸ್ಯರ ಸಹಕಾರದಿಂದ ಮನೆಯಲ್ಲಿ ನೆಮ್ಮದಿ. ಆರೋಗ್ಯ ಉತ್ತಮ. ಉದ್ಯೋಗದಲ್ಲಿ ಮತ್ತು ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ಬಂಧು ಮಿತ್ರರಿಂದ ಸಹಕಾರ. ಆರ್ಥಿಕ ಪ್ರಗತಿ ಸಾಧಾರಣ. ನಿಮ್ಮ ವ್ಯಕ್ತಿತ್ವ ಇತತರನ್ನು ಆಕರ್ಷಿಸಿ, ಕಾರ್ಯದಲ್ಲಿ ಯಶಸ್ಸು ತಂದು ಕೊಡಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಬಾಗಿ. ಆರೋಗ್ಯ ಉತ್ತಮವಾಗಿದ್ದು, ಉದ್ಯೋಗ ಸ್ಥಳದಲ್ಲಿ ಸ್ವಲ್ಪ ಕಿರಿಕಿರಿ ಎದುರಿಸಬೇಕಾಗಬಹುದು. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3
ಮಿಥುನ: ಇಂದು ನೀವು ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ. ಬಹಳ ದಿನಗಳ ಬಾಕಿ ಇರುವಕ ಕಾರ್ಯವು ಪೂರ್ಣವಾಗುವ ಸಾಧ್ಯತೆಗಳಿವೆ. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು. ಉತ್ಸಾಹದ ದಿನವಿದು. ಉದ್ಯೋಗದಲ್ಲಿ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣ ವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ. ಮಡದಿಯ ಪ್ರೀತಿಗೆ ಸೋಲುವಿರಿ. ಕುಟುಂಬದಲ್ಲಿ ನೆಮ್ಮದಿ. ಆರೋಗ್ಯವೂ ಉತ್ತಮವಾಗಿರಲಿದೆ.
ಅದೃಷ್ಟ ಸಂಖ್ಯೆ: 5
ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಉದ್ಯೋಗ ದೊರೆಯುವ ಭರವಸೆ ಮೂಡಲಿದೆ. ಆರ್ಥಿಕ ಪ್ರಗತಿ. ಪರಿಶ್ರಮಕ್ಕೆ ತಕ್ಕ ಪ್ರತಿ ಫಲ ದೊರೆಯುವುದು. ಮನೆಯವರ ಪ್ರೀತಿ ಸಹಕಾರ ಸಿಗಲಿದೆ. ಕುಟುಂಬದಲ್ಲಿ ನೆಮ್ಮದಿ. ಆರೋಗ್ಯದಲ್ಲಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ಮನೆಯಲ್ಲಿ ಕುಟುಂಬದ ಸದಸ್ಯರ ನಡುವೆ ನಡೆಯುವ ಕಲಹದಿಂದ ವಾತಾವರಣ ಹದಗೆಡಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ, ಎಚ್ಚರಿಕೆ ವಹಿಸಿ. ಆರ್ಥಿಕ ಪ್ರಗತಿ. ಆರೋಗ್ಯದ ಕಡೆಗೂ ಗಮನ ನೀಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಮಾಡಲು ಮುಂದಾಗಬೇಡಿ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಾಗಿರುವ ಸಾಧ್ಯತೆ. ಮನೆಯಲ್ಲಿ ಸಂತೋಷದ ವಾತಾವರಣವಿರಲಿದೆ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ನೀವು ಮಾಡುವ ಕೆಲಸಕ್ಕೆ ನಿಮ್ಮ ಆಪ್ತ ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನದಂತೆ ನಡೆಯುವುದು ಒಳ್ಳೆಯದು. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿದರೆ ಇಂದು ಯಶಸ್ಸು ಸಿಗುವುದು. ಆರೋಗ್ಯ ಉತ್ತಮ ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರಲಿದೆ.
ಅದೃಷ್ಟ ಸಂಖ್ಯೆ: 3
ಧನಸ್ಸು: ಕುಟುಂಬ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟು ಮಾಡಬಹುದು. ಯಾವುದೇ ಕೆಲಸದಲ್ಲಿ ಉದಾಸೀನತೆ ಮಾಡುವುದು ಬೇಡ. ಆಶಾವಾದಿಗಳಾಗಿರಿ, ಎಲ್ಲವೂ ಒಳ್ಳೆಯದಾಗುವ ಕಾಲ ಬರಲಿದೆ. ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಮಕರ: ಉದ್ಯೋಗದಲ್ಲಿ ಅಧಿಕಾರಿಗಳ ಕಿರಿಕಿರಿ ನಿಮಗೆ ಒತ್ತಡವನ್ನುಂಟು ಮಾಡುವ ಸಾಧ್ಯತೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡದಿಂದ ಮನೆಯ ಸದಸ್ಯರ ಮೇಲೆ ಕೋಪ ಮಾಡಿಕೊಂಡು ಮನೆಯ ವಾತಾವರಣ ಹದಗೆಡಲು ಅವಕಾಶ ಮಾಡಿಕೊಡಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರುವುದು. ಅನ್ಯರು ಆಡುವ ಕುಹುಕದ ಮಾತುಗಳಿಗೆ ಪ್ರತಿಕ್ರಿಯಿಸಬೇಡಿ. ಆರೋಗ್ಯದ ಕಡೆಗೆ ಹೆಚ್ಚಿನ ಗಮನ ಕೊಡಿ. ಉದ್ಯೋಗ ಸ್ಥಳದಲ್ಲಿ ಮಿಶ್ರ ಫಲ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9
ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ. ನಿಮ್ಮ ಗೌಪ್ಯ ವಿಷಯಗಳು ಬಹಿರಂವಾಗದಿರಲಿ. ಆರ್ಥಿಕ ನಷ್ಟ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸುದು. ಆರೋಗ್ಯ ಉತ್ತಮ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ | Astrology: ನಿಮ್ಮ ರಾಶಿಗೆ ಸಾಡೇಸಾತಿ ಮತ್ತು ಶನಿ ದೆಸೆ ಯಾವಾಗ ಇದೆ ಗೊತ್ತೆ?