Site icon Vistara News

Horoscope Today | ನವರಾತ್ರಿಯ ಐದನೇ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ?

Horoscope Today

Horoscope Today

ಇಂದಿನ ಪಂಚಾಂಗ (30-09-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು, ಆಶ್ವಯುಜ ಮಾಸ, ಶುಕ್ಲ ಪಕ್ಷ

ತಿಥಿ: ಪಂಚಮಿ 22:34 ವಾರ: ಶುಕ್ರವಾರ
ನಕ್ಷತ್ರ: ಅನುರಾಧ 28:17 ಯೋಗ: ಪ್ರೀತಿ 22:31
ಕರಣ: ಭವ 11:23 ದಿನ ವಿಶೇಷ: ಶರನ್ನವರಾತ್ರಿ ಮಹೋತ್ಸವದ ಐದನೇ ದಿನ. ಸ್ಕಂದ ಮಾತಾ ಅವತಾರ. ಉಪಾಂಗಲಲಿತಾ ವ್ರತ. ವರ್ಣ: ಹಸಿರು
ಅಮೃತಕಾಲ: ಸಂಜೆ 06 ಗಂಟೆ 18 ನಿಮಿಷದಿಂದ 07 ಗಂಟೆ 51 ನಿಮಿಷದವರೆಗೆ.

ಸೂರ್ಯೋದಯ: 06: 20     ಸೂರ್ಯಾಸ್ತ: 06: 20

ರಾಹುಕಾಲ: ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ಹಣಕಾಸಿನ ಹರಿವು ಇದ್ದರೂ ಖರ್ಚು ಹೆಚ್ಚು. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಷಭ: ನಕಾರಾತ್ಮಕ ಆಲೋಚನೆಗಳು ಹೆಚ್ಚು ಆರೋಗ್ಯದ ಮೇಲೆ ಪರಿಣಾಮ ಬೀರುತ್ತವೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಆಪ್ತರಿಂದ ಉಡುಗೊರೆ ದೊರೆಯಬಹುದು. ಅನೇಕ ಸಮಸ್ಯೆಗಳು ಪರಿಹಾರವಾಗಲಿವೆ. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಅನಾವಶ್ಯಕವಾಗಿ ಒತ್ತಡ ಸೃಷ್ಟಿಯಾಗಬಹುದು. ಆರೋಗ್ಯದ ಕುರಿತು ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ. ಆರಂಭಿಸಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಪಡೆಯಲು ಆಲಸ್ಯವನ್ನು ಬಿಡಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕಟಕ: ನಿಮ್ಮ ವರ್ತನೆ ಇತರರಿಗೆ ಮುಜುಗರ ಉಂಟುಮಾಡುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಆಪ್ತರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗದಲ್ಲಿಯೂ ಯಶಸ್ಸನ್ನು ಪಡೆಯುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಆರ್ಥಿಕವಾಗಿ ಹೂಡಿಕೆ ಮಾಡುವುದು ದಿನದ ಮಟ್ಟಿಗೆ ಬೇಡ. ವ್ಯಾಪಾರ ವ್ಯವಹಾರ ಸಾಧಾರಣ. ಮಕ್ಕಳಿಂದ ನಿರಾಸೆ ಅನುಭವಿಸಬೇಕಾಗಿ ಬರಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯ ಹಾಗೂ ಉದ್ಯೋಗ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕನ್ಯಾ: ಇತರರನ್ನು ಟೀಕಿಸುವ ಭರದಲ್ಲಿ ನೀವು ಟೀಕೆಗೆ ಒಳಗಾಗುವುದು ಬೇಡ. ನೀವು ನೀಡಿದ್ದ ಹಣ ಮರಪಾವತಿಯಾಗಲಿದೆ‌. ಆರ್ಥಿಕ ಪ್ರಗತಿ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ವ್ಯತ್ಯಾಸ. ಉದ್ಯೋಗಿಗಳಿಗೆ ಯಶಸ್ಸು ದೊರೆಯಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ತುಲಾ: ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸುವುದು ಉತ್ತಮ. ಯಾವುದೇ ಆತುರದಲ್ಲಿ ಹೂಡಿಕೆ ಮಾಡುವುದು ಬೇಡ. ಕುಟುಂಬದವರೊಂದಿಗೆ ಚರ್ಚಿಸಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ: ದಿನದ ಮಟ್ಟಿಗೆ ಒತ್ತಡ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಆರೋಗ್ಯ ಸಾಧಾರಣ. ವ್ಯಾಪಾರ ವ್ಯವಹಾರದಲ್ಲಿ ಮಧ್ಯಮ ಫಲ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ಧನಸ್ಸು: ಆಪ್ತರ ಸಲಹೆ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಪ್ರಯಾಣದ ಕುರಿತು ಆಲೋಚನೆ. ಆರೋಗ್ಯ ಉತ್ತಮ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಮಕರ: ಆರೋಗ್ಯ ಉತ್ತಮ. ಬಾಕಿ ಇರುವ ವ್ಯವಹಾರಗಳು ಯಶಸ್ಸು ನೀಡಲಿವೆ. ದುರಸ್ತಿ ಕಾರ್ಯಗಳಿಗಾಗಿ ಖರ್ಚು ಮಾಡುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಸಂದೇಶ ಸಿಗಲಿದೆ. ಹಳೆಯ ಪ್ರೇಮ ಪ್ರಕರಣಗಳ ನೆನಪು ಮರಕಳಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಕುಂಭ: ಆರ್ಥಿಕವಾಗಿ ಲಾಭ ಪಡೆಯುವಿರಿ. ವಿವಾಹಿತರಲ್ಲಿ ಪರಸ್ಪರರ ಮಧ್ಯೆ ಅರ್ಥ ಮಾಡಿಕೊಳ್ಳವ ಮನಸ್ಥಿತಿ. ಕುಟುಂಬದಲ್ಲಿ ಸಾಮರಸ್ಯ ಮೂಡಲಿದೆ. ಗೌಪ್ಯ ವಿಷಯಗಳನ್ನು ಯಾರೊಂದಿಗೂ ಚರ್ಚಿಸುವುದು ಸರಿಯಲ್ಲ. ಉದ್ಯೋಗದಲ್ಲಿ ಮತ್ತು ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಮೀನ: ಆರೋಗ್ಯ ಉತ್ತಮವಾಗಿರಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ವ್ಯಾಪಾರದಲ್ಲಿ ನಿರೀಕ್ಷಿತ ಲಾಭ ಪಡೆಯಬಹುದು. ಅಪೇಕ್ಷಿತರಿಂದ ಆಮಂತ್ರಣ ಸಿಗಬಹುದು. ತಾಳ್ಮೆ ಮಿತಿ ಮೀರುವ ಸಾಧ್ಯತೆ. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Navaratri 2022 | ಎರಡನೇ ದಿನ ಆರಾಧಿಸಲ್ಪಡುವ ದೇವಿ ಯಾರು? ಯಾವ ವರ್ಣದ ವಸ್ತ್ರ ಶ್ರೇಷ್ಠ?

Exit mobile version