Horoscope Today | ಬಲಿಪಾಡ್ಯಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today | ಬಲಿಪಾಡ್ಯಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ

ಶುಭಕೃತ ನಾಮ ಸಂವತ್ಸರ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷದ ಪಾಡ್ಯದ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (26 -10-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ.

ತಿಥಿ: ಪಾಡ್ಯ 14:41 ವಾರ: ಬುಧವಾರ
ನಕ್ಷತ್ರ: ಸ್ವಾತಿ 13:23 ಯೋಗ: ಪ್ರೀತಿ 10:06
ಕರಣ: ಭವ 14:41 ದಿನ ವಿಶೇಷ: ಬಲಿಪಾಡ್ಯಮಿ, ವಿಕ್ರಮ ಶಕೆ ಆರಂಭ, ಬಲೀಂದ್ರ ಪೂಜೆ, ಗೋಪೂಜೆ,
ಜೈನರ ಹೊಸ ವರ್ಷ (ಪಾಡವಾ).
ಅಮೃತಕಾಲ: ಗುರುವಾರದ ಬೆಳಗ್ಗೆ 03 ಗಂಟೆ 50 ನಿಮಿಷದಿಂದ 05 ಗಂಟೆ 21 ನಿಮಿಷದವರೆಗೆ.

ಸೂರ್ಯೋದಯ: 06: 12     ಸೂರ್ಯಾಸ್ತ: 05:55

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಆಪ್ತರ ವರ್ತನೆಯಿಂದ ನಿಮ್ಮ ಮನಸ್ಸಿಗೆ ನೋವಾಗುವ ಸಾಧ್ಯತೆ, ತಾಳ್ಮೆಯಿಂದ ಇರಿ.
ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ತಲೆದೋರಬಹುದು, ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವೃಷಭ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಹರಿಸಿ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ ಪ್ರಗತಿಯೊಂದಿಗೆ ಲಾಭ ಪಡೆಯುವಿರಿ. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ. ನಿಮ್ಮ ಶ್ರಮಕ್ಕೆ ಪ್ರತಿಫಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಮಿಥುನ: ಯಾರಾದರೂ ನಿಮ್ಮ ಸಹಾಯ ಬೇಡಿ ಬರುವರು, ಪರಿಶೀಲಿಸಿ ಸಹಾಯ ಮಾಡಿ. ಆರ್ಥಿಕ ಪ್ರಗತಿ ದಿನದ ಮಟ್ಟಿಗೆ ಸಾಧಾರಣ. ಯಾರಾದರೂ ನಿಮ್ಮ ಭಾವನೆಗಳನ್ನು ನಿರಾಸೆ ಮಾಡುವ ಸಾಧ್ಯತೆ, ಅವರ ಮಾತನ್ನು ಲಕ್ಷಿಸದೇ ಕಾರ್ಯದಲ್ಲಿ ಮುನ್ನುಗ್ಗಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಹೊಸ ಭರವಸೆಯ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ಕಟಕ: ಕೆಲವು ಆಘಾತಗಳನ್ನು ಎದುರಿಸಬೇಕಾಗಿ ಬರಬಹುದು ಧೈರ್ಯದಿಂದ ಇರಿ. ನಿಮ್ಮ ಆಸೆ-ಆಕಾಂಕ್ಷೆಗಳು ಯಶಸ್ಸನ್ನು ತಂದುಕೊಡಲಿವೆ. ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದೀತು, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಸಿಂಹ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಹುಡುಕಲು ಇಂದು ಸಾಧ್ಯವಾಗಬಹುದು. ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕವಾಗಿ ಲಾಭ ಕಡಿಮೆ. ಹೊಸ ಆಲೋಚನೆಗಳು ನಿಮ್ಮನ್ನು ಸೃಜನಾತ್ಮಕವಾಗಿ ಏನಾದರೂ ಮಾಡಲು ಪ್ರಯತ್ನಿಸುವಂತೆ ಪ್ರೇರೇಪಿಸುತ್ತವೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಕನ್ಯಾ: ಕುಟುಂಬದ ಆಪ್ತರೊಂದಿಗೆ ಸಂತಸ ಹಂಚಿಕೊಳ್ಳುವಿರಿ. ಹಣಕಾಸು ಪರಿಸ್ಥಿತಿ ಸಾಧಾರಣ, ದಿನದ ಮಟ್ಟಿಗೆ ಖರ್ಚು. ದುಬಾರಿ ವಸ್ತುಗಳನ್ನು ಖರೀದಿಸುವ ಮುನ್ನ ನಿಮ್ಮ ಹಣಕಾಸಿನ ಪರಿಸ್ಥಿತಿ ನೋಡಿಕೊಂಡು ಹಾಸಿಗೆ ಇದ್ದಷ್ಟು ಕಾಲು ಚಾಚಿ.ಆರೋಗ್ಯ ಮಧ್ಯಮ, ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ತುಲಾ: ಪ್ರಭಾವಿ ಜನರ ಬೆಂಬಲ ದೊರೆಯಲಿದೆ. ಇದರಿಂದ ನೈತಿಕ ಸ್ಥೈರ್ಯ ಹೆಚ್ಚಾಗಲಿದೆ. ಒಡಹುಟ್ಟಿದವರ ಸಹಕಾರ ಸಿಗಲಿದೆ. ಆತುರದಲ್ಲಿ ಯಾರೊಂದಿಗೂ ಅತಿರೇಕದ ಮಾತುಗಳನ್ನು ಆಡಿ, ಅಪಾಯ ತಂದುಕೊಳ್ಳುವುದು ಬೇಡ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಶ್ಚಿಕ: ಸಕಾರಾತ್ಮಕ ಆಲೋಚನೆಗಳು ಪುಷ್ಟಿ ನೀಡಿ, ಕೆಲಸ ಕಾರ್ಯಗಳಲ್ಲಿ ಯಶಸ್ಸು ತಂದು ಕೊಡಲಿವೆ. ಇಂದು ಹಣಕಾಸಿನ ಹೂಡಿಕೆ ವ್ಯವಹಾರ ಮಾಡುವುದು ಬೇಡ. ವ್ಯಾಪಾರದಲ್ಲಿ ಯಶಸ್ಸು ದೊರೆಯಲಿದೆ. ಪ್ರಯಾಣದಿಂದ ಲಾಭ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಧನಸ್ಸು: ಭಾವನಾ ಜೀವಿಗಳಾದ ನೀವು ನಕಾರಾತ್ಮಕ ಆಲೋಚನೆಗಳಿಂದ ದೂರ ಇರಿ. ಅಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ, ಕ್ಷೇತ್ರ ದರ್ಶನ ಪಡೆದು ಮಾನಸಿಕ ನೆಮ್ಮದಿ ತಂದುಕೊಳ್ಳುವುದು ಅವಶ್ಯಕ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಮಕರ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸ್ನೇಹಿತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ನಿಮ್ಮ ಶಕ್ತಿ ಸಾಮರ್ಥ್ಯವನ್ನು ಕೆಲಸ ಕಾರ್ಯಗಳಲ್ಲಿ ಬಳಸಿಕೊಂಡರೆ ಇನ್ನೂ ಹೆಚ್ಚು ಯಶಸ್ಸು ಪಡೆಯಬಹುದು. ಆರೋಗ್ಯ ಉತ್ತಮ. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಕುಂಭ: ಅತಿಥಿಗಳ ಆಗಮನ ಸಂತಸ ತರುವುದು. ಆತ್ಮವಿಶ್ವಾಸದ ಹೊಸ ಭರವಸೆ ಮೂಡಲಿದೆ. ಹೂಡಿಕೆಯ ಲಾಭ ಇಂದು ಉಪಯೋಗಕ್ಕೆ ಬರುವುದು. ದೀರ್ಘಕಾಲದ ಪ್ರಯತ್ನ ಇಂದು ಯಶಸ್ಸು ತಂದು ಕೊಡಲಿದೆ. ಆರೋಗ್ಯ, ಉದ್ಯೋಗದಲ್ಲಿ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಮೀನ: ಅತಿರೇಕದಲ್ಲಿ ಏನೇನೋ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಕೋಪಕ್ಕೆ ಕಾರಣವಾಗುವ ವಿಷಯಗಳಿಂದ ದೂರ ಇರಿ. ತಾಳ್ಮೆಯಿಂದ ವರ್ತಿಸಿ. ಉದ್ಯೋಗಿಗಳಿಗೆ ಬಡ್ತಿ ಸಿಗುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Deepavali 2022 | ಆಧ್ಯಾತ್ಮಿಕವಾಗಿಯೂ ಮಹತ್ವ ಪಡೆದ ಪರ್ವ ಈ ದೀಪಾವಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Lok Sabha Election 2024

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Narendra Modi: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಮೇಲೆ ನಡೆದ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದ್ದಾರೆ,

VISTARANEWS.COM


on

Congress ties with Aurangzeb supporters and Girls killed under his rule says Narendra Modi
Koo

ಬೆಳಗಾವಿ: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ (Karnataka Congress Government) ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಔರಂಗಜೇಬ್‌ ಬೆಂಬಲಿಗರ ಜತೆ ಕಾಂಗ್ರೆಸ್‌ ದೋಸ್ತಿ ಮಾಡಿದೆ. ಅಲ್ಲದೆ, ಕರ್ನಾಟಕದಲ್ಲಿ ಹೆಣ್ಣು ಮಗಳ ಕೊಲೆಯಾಗುತ್ತದೆ, ಜೈನ ಮುನಿಯ ಹತ್ಯೆಯಾಗುತ್ತದೆ, ಬಾಂಬ್‌ ಸ್ಫೋಟವಾಗುತ್ತದೆ. ಆದರೆ, ಈ ಸರ್ಕಾರ ತುಷ್ಟೀಕರಣದಲ್ಲಿ ತೊಡಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಬೆಳಗಾವಿಯಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಬೆಳಗಾವಿ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರಿನಲ್ಲಿ ಬಾಂಬ್‌ ಸ್ಫೋಟ ನಡೆದರೂ ಸಹ ಅದನ್ನು ಗಂಭೀರವಾಗಿ ಪರಿಗಣಿಸಲಿಲ್ಲ. ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣವಾಗಿ ಹಾಳಾಗಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಪ್ರಕರಣಗಳು ನಡೆದಿವೆ. ಇನ್ನು ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹೆಣ್ಣು ಮಗಳ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಮಾಡಲು ಹೊರಟಿದೆ ಎಂದು ಕಿಡಿಕಾರಿದರು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರ ಬಂತೋ ಆಗ ಇಡೀ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಇದೇ ಬೆಳಗಾವಿಯ ವಂಟಮೂರಿಯ ಬಡ ದಲಿತ ಮಹಿಳೆ ಮೇಲೆ ಆದ ದೌರ್ಜನ್ಯ, ಜೈನ ಮುನಿ ಕೊಲೆ ಮೇಲೆ ನಡೆದ ಕೃತ್ಯ ಎಂಥದ್ದು? ಹುಬ್ಬಳ್ಳಿಯಲ್ಲಿ ನಮ್ಮ ಹೆಣ್ಣು ಮಗಳ ವಿರುದ್ಧ ನಡೆದ ಕೊಲೆ ಪ್ರಕರಣ ಏನನ್ನು ಹೇಳುತ್ತದೆ? ಆ ಹುಡುಗಿಯ ಪೋಷಕರು ಕಠಿಣ ಕ್ರಮಕ್ಕೆ ಆಗ್ರಹಿಸಿದರೂ ಕಾಂಗ್ರೆಸ್‌ ಸರ್ಕಾರ ತುಷ್ಟೀಕರಣ ಕಾರಣದಿಂದ ಸೂಕ್ತ ಕ್ರಮ ವಹಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.

ನಿಮ್ಮ ನರೇಂದ್ರ ಮೋದಿ ಬದುಕಿರುವವರೆಗೂ ಕಾಂಗ್ರೆಸ್‌ ದುಷ್ಟ ನೀತಿಯನ್ನು ಕೈಗೊಳ್ಳಲು ಬಿಡುವುದಿಲ್ಲ. ನಿಮ್ಮ ಮಂಗಳ ಸೂತ್ರವನ್ನು ರಕ್ಷಣೆ ಮಾಡುವ ಹೊಣೆಯೂ ನಮ್ಮದು ಎಂದು ನರೇಂದ್ರ ಮೋದಿ ಭರವಸೆ ನೀಡಿದರು.

ಕಾಂಗ್ರೆಸ್‌ನಿಂದ ತುಷ್ಟೀಕರಣ ರಾಜಕಾರಣ

ಸುಲ್ತಾನರು, ನವಾಬರು ಹಲವಾರು ಜನರನ್ನು ಅತ್ಯಾಚಾರ ಮಾಡಿದರು. ಆದರೆ, ಅದರ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಇದರ ಬಗ್ಗೆ ಮಾತನಾಡಲು ಧೈರ್ಯವೂ ಅವರಿಗೆ ಇಲ್ಲ. ರಾಜ ಮಹಾರಾಜರ ಸಾಧನೆ ಬಗ್ಗೆ ಕಾಂಗ್ರೆಸ್‌ ಮಾತನಾಡಲ್ಲ. ಸುಲ್ತಾನರ ದುರಾಡಳಿತದ ಬಗ್ಗೆ ಬಾಯಿ ಬಿಡುವುದಿಲ್ಲ. ಗಾಯಕ್‌ವಾಡ್‌ ಮಹಾರಾಜರು ಇಲ್ಲದಿದ್ದರೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರ ವಿದೇಶ ವ್ಯಾಸಂಗ ಆಗುತ್ತಿತ್ತಾ? ಮಹಾರಾಣಿ ಅಹಲ್ಯಾ ಬಾಯಿ ಇಲ್ಲದಿದ್ದರೆ ದೇಶಗಳಲ್ಲಿ ದೇವಸ್ಥಾನ, ಮಂದಿರಗಳ ನಿರ್ಮಾಣ ಆಗುತ್ತಿತ್ತಾ? ಅಲ್ಲದೆ, ಶಿವಾಜಿ ಮಹಾರಾಜರು, ಕಿತ್ತೂರು ರಾಣಿ ಚೆನ್ನಮ್ಮ ಅವರನ್ನು ಅವಮಾನ ಮಾಡುತ್ತಾ ಬರಲಾಗಿದೆ. ಇಂಡಿ ಅಲೆಯನ್ಸ್‌ ಅನ್ನು ಮೆಚ್ಚಿಸಲು ಕಾಂಗ್ರೆಸ್‌ ಏನೆಲ್ಲ ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರಶ್ನೆ ಮಾಡಿದರು.

ಕೊರೊನಾ ಕಾಲದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಎಲ್ಲರಿಗೂ ಗೊತ್ತಿದೆ. ಕೊರೊನಾ ವ್ಯಾಕ್ಸಿನ್‌ ಕಂಡು ಹಿಡಿದರೆ ಅದನ್ನೂ ವಿರೋಧ ಮಾಡಿದರು. ಇದು ಬಿಜೆಪಿ ವ್ಯಾಕ್ಸಿನ್‌ ಎಂದು ದೂರಿತು. ಇನ್ನು ಇವಿಎಂ ವಿಚಾರದಲ್ಲಿ ಕಳೆದ 2 ದಿನಗಳ ಹಿಂದೆ ಕಾಂಗ್ರೆಸ್‌ಗೆ ಸುಪ್ರೀಂ ಕೋರ್ಟ್‌ನಲ್ಲಿ ತರಾಟೆಗೆ ತೆಗೆದುಕೊಳ್ಳಲಾಗಿದೆ. ಇನ್ನು ಕಾಂಗ್ರೆಸ್‌ ಉದ್ದೇಶ ಏನೆಂದರೆ ದೇಶಕ್ಕೆ ನಷ್ಟವಾಗುವ ರೀತಿ ಜನರನ್ನು ಎತ್ತಿಕಟ್ಟುವ ಕೆಲಸವಾಗಿದೆ. ಆದರೆ, ಬಿಜೆಪಿಯು ದೇಶದ ನಾಗರಿಕರಿಗೋಸ್ಕರ ಸರಳ ಜೀವನಕ್ಕಾಗಿ ಸಾಕಷ್ಟು ಕೆಲಸವನ್ನು ಮಾಡುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಪಿಎಫ್‌ಐ ಆತಂಕವಾದಿ ಸಂಘಟನೆಯನ್ನು ಬಿಜೆಪಿ ಬ್ಯಾನ್‌ ಮಾಡಿದೆ. ಆದರೆ, ಕಾಂಗ್ರೆಸ್‌ ವೋಟ್‌ ಬ್ಯಾಂಕ್‌ ರಾಜಕಾರಣ ಮಾಡಲು ಅವರ ಜತೆಯೇ ಕೈಜೋಡಿಸುತ್ತದೆ. ಕೇರಳದ ವಯನಾಡಿನಲ್ಲಿ ಒಂದು ಕ್ಷೇತ್ರವನ್ನು ಗೆಲ್ಲಲು ಏನೆಲ್ಲ ಮಾಡಲಾಗಿದೆ? ಪಿಎಫ್‌ಐ, ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಕೈಜೋಡಿಸಿದೆ. ಅವರಿಗೆ ಶರಣಾಗತಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಆಕ್ರೋಶ ಹೊರಹಾಕಿದರು.

ಇದು ರೈತರ ವಿರೋಧಿ ಸರ್ಕಾರ

ಕಾಂಗ್ರೆಸ್‌ ಸರ್ಕಾರವು ಅಧಿಕಾರಕ್ಕೆ ಬಂದಾಗ ರೈತರನ್ನು ಕಡೆಗಣಿಸಿದೆ. ನಮ್ಮ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆ ಅಡಿ ರೈತರಿಗೆ ವರ್ಷಕ್ಕೆ ನೀಡುತ್ತಿರುವ 10 ಸಾವಿರ ರೂಪಾಯಿ ಜತೆಗೆ ಈ ಹಿಂದೆ ಬಿಜೆಪಿ ಸರ್ಕಾರವು 4 ಸಾವಿರ ರೂಪಾಯಿ ಸೇರಿಸಿ ಕೊಡುತ್ತಿತ್ತು. ಕಾಂಗ್ರೆಸ್‌ ಮತ ಕೇಳುವಾಗ ಇದರ ಬಗ್ಗೆ ಏನೂ ಹೇಳಲಿಲ್ಲ. ಯಾವಾಗ ಮತ ಬಂದು ಗೆದ್ದರೂ ಆ ನಾಲ್ಕು ಸಾವಿರ ರೂಪಾಯಿಯನ್ನು ನಿಲ್ಲಿಸಿಬಿಟ್ಟರು. ಇದು ರೈತ ವಿರೋಧಿ ಸರ್ಕಾರವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದರು.

ನಿಮ್ಮ ಆಸ್ತಿ ಮೇಲೆ ಕಣ್ಣಿಟ್ಟ ಸರ್ಕಾರ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ನಿಮ್ಮ ಆಸ್ತಿಯಲ್ಲವೂ ಅನ್ಯರ ಪಾಲಾಗುತ್ತದೆ. ನೀವು ಮಾಡಿಟ್ಟ ಮನೆ, ಆಸ್ತಿ, ಚಿನ್ನ ಎಲ್ಲವೂ ಅನ್ಯರ ಪಾಲಾಗಿದೆ. ಕಾಂಗ್ರೆಸ್‌ ಹೇಳುವ ಮಾತು ಕೇಳಿದರೆ ನಿಮ್ಮ ನಿದ್ದೆ ಗೆಡುತ್ತದೆ. ಅವರು ದಿಲ್ಲಿಯಲ್ಲಿ ಆಡಳಿತಕ್ಕೆ ಬಂದರೆ ನಿಮ್ಮ ಆಸ್ತಿಯನ್ನು ವಶಕ್ಕೆ ಪಡೆಯುತ್ತದೆ. ನೀವು ನಿಮ್ಮ ಮಕ್ಕಳಿಗಾಗಿ ಪೈಸೆ ಪೈಸೆ ಕೂಡಿಟ್ಟು ಮಾಡಿದ ಆಸ್ತಿಯಲ್ಲಿ ಶೇಕಡಾ 55 ಪರ್ಸೆಂಟ್‌ ಅನ್ನು ಕಾಂಗ್ರೆಸ್‌ ವಶಕ್ಕೆ ಪಡೆಯಲಿದೆ. ಈ ಮೂಲಕ ನಿಮ್ಮ ಆಸ್ತಿಯು ನಿಮ್ಮ ಮಕ್ಕಳಿಗೆ ಸಿಗುವುದಿಲ್ಲ. ಹೀಗಾಗಿ ನಿಮ್ಮ ಆಸ್ತಿಯ ಬಹುದೊಡ್ಡ ಪಾಲು ಕಾಂಗ್ರೆಸ್‌ ಸರ್ಕಾರದ್ದಾಗುತ್ತದೆ ಎಂದು ಕಾಂಗ್ರೆಸ್‌ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ನೇರ ವಾಗ್ದಾಳಿ ನಡೆಸಿದರು.

Continue Reading

ಪ್ರಮುಖ ಸುದ್ದಿ

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

Gold Rate: ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

VISTARANEWS.COM


on

Gold Rate
Koo

ಬೆಂಗಳೂರು: ಬಂಗಾರದ ಬೆಲೆ (Gold Rate) ದಿನದಿಂದ ದಿನಕ್ಕೆ ಏರುತ್ತಲೇ ಸಾಗುತ್ತಿದೆ. ಭಾನುವಾರವೂ ಶನಿವಾರದ ದರವೇ ಮುಂದುವರಿದಿದೆ. ರಾಜ್ಯದಲ್ಲಿ ಶನಿವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಗ್ರಾಮ್​ಗೆ ಕ್ರ ಮವಾಗಿ ₹20 ಹಾಗೂ ₹22 ಏರಿಕೆಯಾಗಿತ್ತು. ಅದೇ ಬೆಲೆ ಭಾನುವಾರವೂ ಮುಂದುವರಿದಿದೆ.

ಭಾನುವಾರ ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,685ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹53,480 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ಅನುಕ್ರಮವಾಗಿ ₹66,850 ಮತ್ತು ₹6,68,500 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,293 ಆಗಿದ್ದರೆ, ಎಂಟು ಗ್ರಾಂ ಬೆಲೆ ₹58,344 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹72, 930 ಮತ್ತು ₹7,20,300 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹83.50, ಎಂಟು ಗ್ರಾಂ ₹840 ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹8,400 ಮತ್ತು 1 ಕಿಲೋಗ್ರಾಂಗೆ ₹84,00 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ67,00073,080
ಮುಂಬಯಿ66,85072,930
ಬೆಂಗಳೂರು66,850₹72,930
ಚೆನ್ನೈ67,70072,760

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

Continue Reading

Lok Sabha Election 2024

PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

PM Narendra Modi: ಶಿರಸಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ವಿಐಪಿ ಗೇಟ್ ಮುಖಾಂತರ ವೇದಿಕೆಯತ್ತ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮುಖಂಡರು ಆಗಮಿಸುತ್ತಿದ್ದರು. ಈ ವೇಳೆ ಭದ್ರತೆ ತಪಾಸಣೆ ಹಿನ್ನೆಲೆಯಲ್ಲಿ ಕೆಲವರು ಪೊಲೀಸರು ತಡೆದಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಕಾಗೇರಿ, ತಪಾಸಣೆ ಹೆಸರಲ್ಲಿ ಜನರನ್ನು ಏಕೆ ತಡಿಯುತ್ತಿದ್ದೀರಿ? ಕಾರ್ಯಕ್ರಮ ಯಶಸ್ವಿಯಾಗಬಾರದು ಎಂದು ರಾಜ್ಯ ಸರ್ಕಾರ ಹೇಳಿದೆಯಾ ಎಂದು ತರಾಟೆಗೆ ತಗೆದುಕೊಂಡಿದ್ದಾರೆ.

VISTARANEWS.COM


on

Has Karnataka Congress government suggested PM Narendra Modi programme should not be success Kageri question to police
Koo

ಶಿರಸಿ: ಲೋಕಸಭಾ ಚುನಾವಣೆ (Lok Sabha Election 2024) ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಈಗಾಗಲೇ ಒಂದು ಸುತ್ತಿನ ಮತ ಬೇಟೆ ಮುಗಿಸಿ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಎರಡನೇ ಹಂತದ ಚುನಾವಣೆಗೆ ಮೋದಿ ರಿಎಂಟ್ರಿ (Modi in Karnataka) ಕೊಟ್ಟಿದ್ದಾರೆ. ಈಗಾಗಲೇ ಬೆಳಗಾವಿ ಸಮಾವೇಶದಲ್ಲಿ ಭಾಗಿಯಾಗಿದ್ದಾರೆ. ಬಳಿಕ ಉತ್ತರ ಕನ್ನಡ ಜಿಲ್ಲೆಯ ಶಿರಸಿಗೆ ಆಗಮಿಸಿ ಬೃಹತ್‌ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ. ಈ ಸಮಾವೇಶಕ್ಕೆ ಸಂಬಂಧಪಟ್ಟಂತೆ ಪೊಲೀಸರ ಮೇಲೆ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಗರಂ ಆಗಿದ್ದಾರೆ. ಈ ಕಾರ್ಯಕ್ರಮವನ್ನು ಯಶಸ್ವಿಯಾಗದಂತೆ ತಡೆಯಲು ರಾಜ್ಯ ಸರ್ಕಾರ ನಿಮಗೆ ನಿರ್ದೇಶನ ಕೊಟ್ಟಿದೆಯೇ ಎಂದು ಕಿಡಿಕಾರಿದ್ದರು.

ಶಿರಸಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ವಿಐಪಿ ಗೇಟ್ ಮುಖಾಂತರ ವೇದಿಕೆಯತ್ತ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಸೇರಿದಂತೆ ಹಲವು ಮುಖಂಡರು ಆಗಮಿಸುತ್ತಿದ್ದರು. ಈ ವೇಳೆ ಭದ್ರತೆ ತಪಾಸಣೆ ಹಿನ್ನೆಲೆಯಲ್ಲಿ ಕೆಲವರು ಪೊಲೀಸರು ತಡೆದಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಕಾಗೇರಿ, ತಪಾಸಣೆ ಹೆಸರಲ್ಲಿ ಜನರನ್ನು ಏಕೆ ತಡಿಯುತ್ತಿದ್ದೀರಿ? ಕಾರ್ಯಕ್ರಮ ಯಶಸ್ವಿಯಾಗಬಾರದು ಎಂದು ರಾಜ್ಯ ಸರ್ಕಾರ ಹೇಳಿದೆಯಾ ಎಂದು ತರಾಟೆಗೆ ತಗೆದುಕೊಂಡರು.

ಬಳಿಕ ಪೊಲೀಸರಿಗೆ ಬ್ಯಾರಿಕೇಡ್ ಸರಿಸಲು ಹೇಳಿ ಜನರನ್ನು ಒಳಗೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಕಳುಹಿಸಿದರು. ಜನರನ್ನು ವೇದಿಕೆ ಮುಂದೆ ಕಳುಹಿಸಿದ ಬಳಿಕ ತಾವು ವೇದಿಕೆಗೆ ಬಂದರು.

ಏಪ್ರಿಲ್‌ 28ರಂದು ಎಲ್ಲೆಲ್ಲಿ ರ‍್ಯಾಲಿ?

ಏಪ್ರಿಲ್‌ 28ರಂದು ಬೆಳಗಾವಿಯಲ್ಲಿ ಬೆಳಗ್ಗೆ 10 ಗಂಟೆಗೆ ನಡೆಯುವ ಸಮಾವೇಶದಲ್ಲಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ. ಇಲ್ಲಿ ಜಗದೀಶ್‌ ಶೆಟ್ಟರ್‌ ಪರ ಮತಯಾಚಿಸಲಿರುವ ಅವರು ಬಳಿಕ 12 ಗಂಟೆಗೆ ಉತ್ತರ ಕನ್ನಡದ ಶಿರಸಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ ಮತಯಾಚನೆ ಮಾಡಲಿದ್ದಾರೆ. ಇನ್ನು ಮಧ್ಯಾಹ್ನ 2 ಗಂಟೆಗೆ ದಾವಣಗೆರೆಯ ಹೈಸ್ಕೂಲ್‌ ಗ್ರೌಂಡ್‌ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಂಜೆ 4 ಗಂಟೆಗೆ ಬಳ್ಳಾರಿಯ ಸಮಾವೇಶದ ಮೂಲಕ ಇಡೀ ದಿನದ ಪ್ರಚಾರಕ್ಕೆ ತೆರೆ ಎಳೆಯಲಿದ್ದಾರೆ.

ಇದನ್ನೂ ಓದಿ: Narendra Modi : ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಪ್ರಧಾನಿ ನರೇಂದ್ರ ಮೋದಿ ಅವರ ಬೆಳಗಾವಿ ಸಮಾವೇಶದ ಲೈವ್‌ ವಿಡಿಯೊ ಇಲ್ಲಿದೆ

ಏಪ್ರಿಲ್‌ 29ರಂದು ಒಂದೇ ಸಮಾವೇಶ

ಬಳ್ಳಾರಿಯಲ್ಲಿ ಪ್ರಚಾರ ಮುಗಿಸುವ ನರೇಂದ್ರ ಮೋದಿ ಅವರು ಏಪ್ರಿಲ್‌ 29ರಂದು ಬಾಗಲಕೋಟೆಯಲ್ಲಿ ನಡೆಯುವ ಒಂದೇ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಅವರು ಮಹಾರಾಷ್ಟ್ರಕ್ಕೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ. ಕರ್ನಾಟಕದಲ್ಲಿ 2ನೇ ಹಂತದ ಚುನಾವಣೆ ಪ್ರಚಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರೆಸುವ ಮೂಲಕ ಕಾಂಗ್ರೆಸ್‌ಗೆ ಸೆಡ್ಡು ಹೊಡೆಯಲು ಬಿಜೆಪಿ ಇಷ್ಟೆಲ್ಲ ಪ್ಲಾನ್‌ ಮಾಡಿದೆ. ಉತ್ತರ ಕರ್ನಾಟಕ ಸೇರಿದಂತೆ ಹಲವು ಕಡೆ ಮೋದಿ ಅಭಿಮಾನಿಗಳು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಅಲ್ಲದೆ, ಯುವ ಸಮುದಾಯಕ್ಕೆ ಮೋದಿ ಅಚ್ಚುಮೆಚ್ಚು. ಇಂತಹ ಯುವ ವರ್ಗದ ಮತಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಸೆಳೆಯಲು ಪ್ಲ್ಯಾನ್‌ ಮಾಡಿಕೊಳ್ಳಲಾಗಿದೆ.

Continue Reading

ಪ್ರಮುಖ ಸುದ್ದಿ

Congress MLA : ಕಾಂಗ್ರೆಸ್​ ಶಾಸಕರಿಗೆ ಘೇರಾವ್ ಕೂಗಿದ ಬಿಜೆಪಿ ಕಾರ್ಯಕರ್ತರು; ಮಾತಿನ ಚಕಮಕಿ

Congress MLA: ಶಾಸಕ ಎಂ.ವೈ.ಪಾಟೀಲ್ ಅವರಿಗೆ ರಸ್ತೆ ಮಾಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ರಸ್ತೆ ಮಾಡಿ ಅಂದಾಗ ಎಲ್ಲಿ ಹೋಗಿದ್ರಿ ಅಂತಾ ಕೈ ಶಾಸಕರಿಗೆ ಬಿಜೆಪಿ ಕಾರ್ಯಕರ್ತರು ಜೋರಾಗಿ ಪ್ರಶ್ನಿಸಿದ್ದಾರೆ. ಅಲ್ಲದೆ ಜೈ ಶ್ರೀರಾಮ ಘೋಷಣೆ ಹಾಕಿರು. ಈ ವೇಳೆ ಕಾಂಗ್ರೆಸ್​ ಹಾಗೂ ಕಮಲ ಕಾರ್ಯಕರ್ತರ ನಡುವೆ ಚಕಮಕಿ ನಡೆದಿದೆ.

VISTARANEWS.COM


on

Congress MLA
Koo

ಕಲಬುರಗಿ: ಅಫಜಲಪುರ ಶಾಸಕ (Congress MLA) ಎಂ.ವೈ ಪಾಟೀಲ್ ಅವರು ಚುನಾವಣಾ ಪ್ರಚಾರಕ್ಕೆ ಹೋಗುತ್ತಿದ್ದ ವೇಳೆ ಅವರಿಗೆ ಬಿಜೆಪಿ ಕಾರ್ಯಕರ್ತರು ಘೇರಾವ್ ಕೂಗಿದ ಘಟನೆ ನಡೆದಿದೆ ಈ ವೇಳೆ ಕಾಂಗ್ರೆಸ್​​ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.

ಕೈ ಅಭ್ಯರ್ಥಿ ಪರ ಪ್ರಚಾರಕ್ಕಾಗಿ ಬಡದಾಳ ಗ್ರಾಮಕ್ಕೆ ತೆರಳಿದ ಶಾಸಕ ಎಂ.ವೈ.ಪಾಟೀಲ್ ಅವರಿಗೆ ರಸ್ತೆ ಮಾಡುವಂತೆ ಕಾರ್ಯಕರ್ತರು ಆಗ್ರಹಿಸಿದ್ದಾರೆ. ರಸ್ತೆ ಮಾಡಿ ಅಂದಾಗ ಎಲ್ಲಿ ಹೋಗಿದ್ರಿ ಅಂತಾ ಕೈ ಶಾಸಕರಿಗೆ ಬಿಜೆಪಿ ಕಾರ್ಯಕರ್ತರು ಜೋರಾಗಿ ಪ್ರಶ್ನಿಸಿದ್ದಾರೆ. ಅಲ್ಲದೆ ಜೈ ಶ್ರೀರಾಮ ಘೋಷಣೆ ಹಾಕಿರು. ಈ ವೇಳೆ ಕಾಂಗ್ರೆಸ್​ ಹಾಗೂ ಕಮಲ ಕಾರ್ಯಕರ್ತರ ನಡುವೆ ಚಕಮಕಿ ನಡೆದಿದೆ.

ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ ಅನ್ನುತ್ತಿದ್ದಂತೆ ಜೈ ಕಾಂಗ್ರೆಸ್ ಅಂತಾ ಕೈ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಈ ವೇಳೆ ಎರಡು ಪಕ್ಷದ ಕಾರ್ಯಕರ್ತರ ನಡುವೆ‌ ಮಾತಿನ‌ ಚಕಮಕಿ ನಡೆದಿದೆ.

ಪ್ರಧಾನಿ ವಿಮಾನ ಹಾರಾಟ ಹಿನ್ನೆಲೆ; ಸಿಎಂ ವಿಮಾನಕ್ಕೆ ಬೆಳಗಾವಿಯಲ್ಲಿ ಅನುಮತಿ ನಿರಾಕರಣೆ

ಬೆಳಗಾವಿ: ಸಿಎಂ ಸಿದ್ದರಾಮಯ್ಯ ವಿಶೇಷ ವಿಮಾನಕ್ಕೆ ಬೆಳಗಾವಿ ವಿಮಾನ ನಿಲ್ದಾಣ ಎಂಟ್ರಿಗೆ ನಿರಾಕರಣೆ ಮಾಡಲಾಗಿದೆ.ಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರ ವಿಮಾನ ಇದೇ ಏರ್​ಪೋರ್ಟ್​​ನಲ್ಲಿರುವ ಕಾರಣ ಸಿಎಂ ವಿಮಾನಕ್ಕೆ ಅನುಮತಿ ದೊರಕಿಲ್ಲ.

ಸಿಎಂ ಸಿದ್ದರಾಮಯ್ಯ ಅವರು ವಿಶೇಷ ವಿಮಾನದ ಮೂಲಕ ಬೆಳಗಾವಿಗೆ ಹೊರಟಿದ್ದರು. ಆದರೆ, ಅಲ್ಲಿ ಲ್ಯಾಂಡಿಂಗ್ ಗೆ ಅನುಮತಿ ಸಿಕ್ಕಿಲ್ಲ. ಬೆಳಗ್ಗೆ 11.05ಕ್ಕೆ ಬೆಂಗಳೂರಿನಿಂದ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಸಿಎಂ ವಿಮಾನ ಬರಬೇಕಿತ್ತು. ಅಲ್ಲಿಂದ ಅವರು ಶಿರಸಿಗೆ ತೆರಳಲು ಯೋಜನೆ ಹಾಕಲಾಗಿತ್ತು. ಆದರೆ ಪಿಎಂ ವಿಮಾನ ಇರುವ ಕಾರಣ ಅಲ್ಲಿ ಅವಕಾಶ ಸಿಕ್ಕಿಲ್ಲ.

ಇದನ್ನೂ ಓದಿ: Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣ ಬದಲಿಗೆ ಪಕ್ಕದ ಕೊಲ್ಲಾಪುರ ವಿಮಾನ ನಿಲ್ದಾಣದಲ್ಲಿ ಸಿಎಂ ವಿಮಾನ ಲ್ಯಾಂಡ್ ಆಗಲಿದೆ. ಮಧ್ಯಾಹ್ನ 12 ಗಂಟೆಗೆ ಕೊಲ್ಲಾಪುರದ ಛತ್ರಪತಿ ರಾಜಾರಾಮ್ ಮಹಾರಾಜ್ ವಿಮಾನ ನಿಲ್ದಾಣದಲ್ಲಿ ಅವರ ವಿಮಾನ ಇಳಿಯಲಿದೆ. ಬಳಿಕ ಹೆಲಿಕಾಪ್ಟರ್ ಮೂಲಕ ಕಾಗವಾಡ ತಾಲೂಕಿನ ಉಗಾರ್ ಖುರ್ದ ಗೆ ಅವರು ಹೋಗಲಿದ್ದಾರೆ.

Continue Reading
Advertisement
Congress ties with Aurangzeb supporters and Girls killed under his rule says Narendra Modi
Lok Sabha Election 202418 mins ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Gold Rate
ಪ್ರಮುಖ ಸುದ್ದಿ30 mins ago

Gold Rate : ಏರುಗತಿಯಲ್ಲಿದೆ ಬಂಗಾರದ ಬೆಲೆ; ಇನ್ನೂ ಏರುವ ಮೊದಲು ಖರೀದಿ ಸೂಕ್ತ

ದೇಶ34 mins ago

School Teacher: ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಶಿಕ್ಷಕಿ ಪುಂಡಾಟ; ನೆರೆಮನೆಯವರ ಮೇಲೂ ಹಲ್ಲೆ

Varalaxmi Sarathkumar negative comments on fiance
ಕಾಲಿವುಡ್42 mins ago

Varalaxmi Sarathkumar: ನನ್ನ ತಂದೆ ಎರಡು ಮದುವೆಯಾದರು, ಹಾಗೇ ನಾನೂ ಕೂಡ ಎಂದ ನಟ ಶರತ್‌ಕುಮಾರ್ ಪುತ್ರಿ!

Viral Video
ವೈರಲ್ ನ್ಯೂಸ್46 mins ago

Viral Video: ವಧುವಿಗೆ ಹೂಮಾಲೆ ಹಾಕಲು ವರ ಮಾಡಿರುವ ಕಿತಾಪತಿ ಏನು ನೋಡಿ!

Outdoor Exercise
ಆರೋಗ್ಯ50 mins ago

Outdoor Exercise: ಹೊರಾಂಗಣ ವ್ಯಾಯಾಮ ಖಿನ್ನತೆಯನ್ನು ದೂರ ಮಾಡುವುದೇ?

Has Karnataka Congress government suggested PM Narendra Modi programme should not be success Kageri question to police
Lok Sabha Election 202454 mins ago

PM Narendra Modi: ಮೋದಿ ಕಾರ್ಯಕ್ರಮ ವಿಫಲಗೊಳಿಸಲು ರಾಜ್ಯ ಸರ್ಕಾರ ಸೂಚಿಸಿದೆಯೇ? ಪೊಲೀಸರಿಗೆ ಕಾಗೇರಿ ಪ್ರಶ್ನೆ

Congress MLA
ಪ್ರಮುಖ ಸುದ್ದಿ1 hour ago

Congress MLA : ಕಾಂಗ್ರೆಸ್​ ಶಾಸಕರಿಗೆ ಘೇರಾವ್ ಕೂಗಿದ ಬಿಜೆಪಿ ಕಾರ್ಯಕರ್ತರು; ಮಾತಿನ ಚಕಮಕಿ

Prajwal Revanna Pen Drive Case Prajwal Revanna accused of sex scandal No interference in SIT probe says Parameshwara
Lok Sabha Election 20241 hour ago

Prajwal Revanna Pen Drive: ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣ ಆರೋಪ​; ಎಸ್​​ಐಟಿ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ: ಪರಮೇಶ್ವರ್

ರಾಜಕೀಯ2 hours ago

Lok Sabha election 2024: ದಿಲ್ಲಿಯಲ್ಲಿ ಆಪ್‌-ಕಾಂಗ್ರೆಸ್‌ ಮೈತ್ರಿಯಲ್ಲಿ ಒಡಕು; ರಾಜ್ಯಾಧ್ಯಕ್ಷ ರಾಜೀನಾಮೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress ties with Aurangzeb supporters and Girls killed under his rule says Narendra Modi
Lok Sabha Election 202418 mins ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ3 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 202420 hours ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ1 day ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

Lok Sabha Election 2024 Woman suffers cardiac arrest at polling booth Doctor who came to cast his vote saved life
Lok Sabha Election 20242 days ago

Lok Sabha Election 2024: ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಮತ ಹಾಕಲು ಬಂದಿದ್ದ ವೈದ್ಯನಿಂದ ಪ್ರಾಣ ರಕ್ಷಣೆ

Lok Sabha Election 2024 Youth Congress protest
Lok Sabha Election 20242 days ago

Lok Sabha Election 2024 : ಮತಗಟ್ಟೆ ಬಳಿ ಚೆಂಬು, ಗ್ಯಾಸ್ ಸಿಲಿಂಡರ್ ಪ್ರದರ್ಶಿಸಿದ ಯೂತ್‌ ಕಾಂಗ್ರೆಸ್‌

Dina bhavishya
ಭವಿಷ್ಯ2 days ago

Dina Bhavishya : ಅಪರಿಚಿತರೊಂದಿಗೆ ಅತಿಯಾದ ಸಲುಗೆ ಅಪಾಯ ತಂದಿತು ಎಚ್ಚರ

ಟ್ರೆಂಡಿಂಗ್‌