ಇಂದಿನ ಪಂಚಾಂಗ (02-11-2022)
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು, ಕಾರ್ತಿಕ ಮಾಸ, ಶುಕ್ಲ ಪಕ್ಷ.
ತಿಥಿ: ನವಮಿ 21:09 ವಾರ: ಬುಧವಾರ
ನಕ್ಷತ್ರ: ಧನಿಷ್ಠ 25:42 ಯೋಗ: ಗಂಡ 10:25
ಕರಣ: ಬಾಲವ 10:04 ದಿನ ವಿಶೇಷ: ಕೃತಯುಗಾದಿ
ಅಮೃತಕಾಲ: ಮಧ್ಯಾಹ್ನ 03 ಗಂಟೆ 49 ನಿಮಿಷದಿಂದ ಸಂಜೆ 05 ಗಂಟೆ 21 ನಿಮಿಷದವರೆಗೆ.
ಸೂರ್ಯೋದಯ: 06: 13 ಸೂರ್ಯಾಸ್ತ: 05 :53
ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ದಿನದ ಮಟ್ಟಿಗೆ ಒತ್ತಡ ಉಂಟುಮಾಡುವ ವಿಚಾರಗಳಿಂದ ಮಾನಸಿಕ ನೆಮ್ಮದಿ ಕಡಿಮೆ. ಆರ್ಥಿಕ ಪ್ರಗತಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಷಭ: ಕೋಪದಿಂದ ವರ್ತಿಸಿ, ನೀವಿರುವ ವಾತಾವರಣ ಹದಗೆಡಲು ಕಾರಣವಾಗುವುದು ಬೇಡ. ಮನೆಯ ಸದಸ್ಯರು ತಮಗೆ ಅಸಹಕಾರ ನೀಡುವ ಸಾಧ್ಯತೆ. ಆರೋಗ್ಯ ಮಧ್ಯಮ. ಖರ್ಚು ಹೆಚ್ಚಾದೀತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಮಿಥುನ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯುವುದು. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಖರ್ಚು ಹೆಚ್ಚು. ಪ್ರಮುಖ ಕೆಲಸ ಕಾರ್ಯಗಳಲ್ಲಿ ಪ್ರಯತ್ನ ವಿಫಲ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕಟಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಣದ ಹರಿವು ಹೆಚ್ಚಾಗಲಿದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಉತ್ತಮ. ಆಪ್ತರನ್ನು ಭೇಟಿ ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಸಿಂಹ: ಇಂದು ನಿಮ್ಮ ಏಕಾಗ್ರತೆಗೆ ಭಂಗ ತರುವ ಸಾಧ್ಯತೆಗಳು ಹೆಚ್ಚು. ಆರೋಗ್ಯ ಪರಿಪೂರ್ಣ. ಮನೆಯಲ್ಲಿ ವಿನಾಕಾರಣ ಕಲಹಗಳು ನಡೆಯುವ ಸಾಧ್ಯತೆ. ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಕನ್ಯಾ: ಶ್ರಮದ ಕಾರಣ, ಆಯಾಸ, ಒತ್ತಡ ಉಂಟಾಗುವ ಸಾಧ್ಯತೆ. ದಿನದ ಮಟ್ಟಿಗೆ ವಿಶ್ರಾಂತಿ ಅತ್ಯಾವಶ್ಯಕ. ಮನೆಯಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ಉದ್ಯೋಗಿಗಳಿಗೆ ಸ್ವಲ್ಪ ಮಟ್ಟಿಗೆ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ತುಲಾ: ಸಕಾರಾತ್ಮಕ ಆಲೋಚನೆಗಳು ಸದಾ ಯಶಸ್ಸು ತಂದು ಕೊಡುವುದು. ಹಣಕಾಸು ಹಾಗೂ ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ಆಕರ್ಷಕ ವರ್ತನೆ ಇತರರ ಗಮನ ಸೆಳೆಯುವುದು. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಹಣದ ಹರಿವು ಹೆಚ್ಚಾಗಲಿದೆ. ಕುಟುಂಬದ ಸದಸ್ಯರ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಧನಸ್ಸು: ಯಾವುದಾದರೂ ಸುದ್ದಿ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಆರ್ಥಿಕ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅಪರಿಚಿತರೊಂದಿಗೆ ವಾದಕ್ಕಿಳಿಯುವುದು ಬೇಡ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಮಕರ: ಒತ್ತಡದ ಮಧ್ಯೆಯೂ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸುವಿರಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಮಾನಸಿಕ ಆರೋಗ್ಯ ಹದಗೆಡುವ ಸಾಧ್ಯತೆ. ಅನಪೇಕ್ಷಿತ ವಿಷಯದ ಕುರಿತು ಚರ್ಚೆ, ಕುಟುಂಬದ ಸದಸ್ಯರ ಮಧ್ಯೆ ಕಲಹ ಮೂಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಕುಂಭ: ಜವಾಬ್ದಾರಿಗಳು ಹೆಚ್ಚಾಗಲಿವೆ. ಸಹನೆ ಮಿತಿ ಮೀರಿ ಕೋಪಗೊಳ್ಳುವ ಸಾಧ್ಯತೆ. ಗೌಪ್ಯ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ದಿನದ ಮಟ್ಟಿಗೆ ಖರ್ಚು. ಆರೋಗ್ಯದ ಕಾಳಜಿ ಅವಶ್ಯ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಮೀನ: ಹಳೆಯ ವ್ಯಾಧಿಯು ಉಲ್ಭಣ ಗೊಳ್ಳುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಪ್ರಯಾಣದಿಂದ ದಿನದ ಮಟ್ಟಿಗೆ ಖರ್ಚು. ನಿಮ್ಮ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ | ವಿಷ್ಣು ಸಹಸ್ರನಾಮ ಪಾರಾಯಣದಿಂದ 100 ವರ್ಷ ಆಯುಷ್ಯ, ಅದು ಹೇಗೆ?