Horoscope Today | ಆರಿದ್ರಾ ನಕ್ಷತ್ರದ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡಿ - Vistara News

ಪ್ರಮುಖ ಸುದ್ದಿ

Horoscope Today | ಆರಿದ್ರಾ ನಕ್ಷತ್ರದ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡಿ

ಶುಭಕೃತ ನಾಮ ಸಂವತ್ಸರ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ಪಂಚಮಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (13-11-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.

ತಿಥಿ: ಪಂಚಮಿ 24:50 ವಾರ: ಭಾನುವಾರ
ನಕ್ಷತ್ರ: ಆರಿದ್ರಾ 10:16 ಯೋಗ: ಸಾಧ್ಯ 22:48
ಕರಣ: ಕೌಲವ 11:36 ಇಂದಿನ ವಿಶೇಷ: ವಿಶ್ವ ದಯೆ ದಿನ
ಅಮೃತಕಾಲ: ಸಂಜೆ 04 ಗಂಟೆ 18 ನಿಮಿಷದಿಂದ 05 ಗಂಟೆ 04 ನಿಮಿಷದವರೆಗೆ.

ಸೂರ್ಯೋದಯ: 06: 17    ಸೂರ್ಯಾಸ್ತ: 05 : 50

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಕೆಲವು ಬಿಕ್ಕಟ್ಟುಗಳು ಮತ್ತು ಭಿನ್ನಾಭಿಪ್ರಾಯಗಳು ನಿಮಗೆ ಕಿರಿಕಿರಿ ಹಾಗೂ ಆತಂಕವನ್ನು ತರಬಹುದು. ಯಾರಾದರೂ ನಿಮ್ಮ ಸಹಾಯ ಕೇಳಬಹುದು. ನಿಮ್ಮ ಜ್ಞಾನದಾಹ ನಿಮಗೆ ಹೊಸ ಸ್ನೇಹಿತರನ್ನು ಪಡೆಯಲು ಸಹಾಯ ಮಾಡುತ್ತದೆ. ಪ್ರೇಮಿಗಳಿಗೆ ಇಂದು ಹೊಸ ಆಶಾಭಾವನೆ ಮೂಡಲಿದೆ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಷಭ: ನಿಮ್ಮ ಅಪಾರ ವಿಶ್ವಾಸ ಮತ್ತು ಸುಲಭದ ಕೆಲಸ ಇಂದು ವಿಶ್ರಾಂತಿಗೆ ಸಾಕಷ್ಟು ಸಮಯ ನೀಡುತ್ತದೆ. ಸಹೋದ್ಯೋಗಿಗಳೊಂದಿಗೆ ಸಂಯಮದಿಂದ ವರ್ತಿಸಿ. ಸಾಮಾಜಿಕ ಕಾರ್ಯಗಳಲ್ಲಿ ಹಾಜರಾಗಲು ಅವಕಾಶಗಳು ಬರಹುದು ಹಾಗೂ ಇದು ನಿಮ್ಮನ್ನು ಪ್ರಭಾವಿ ವ್ಯಕ್ತಿಗಳ ಜೊತೆ ನಿಕಟ ಸಂಪರ್ಕ ಹೊಂದುವಂತೆ ಮಾಡಬಹುದು. ಇಂದು ನಿಮ್ಮ ಕಲಾತ್ಮಕ ಮತ್ತು ಸೃಜನಶೀಲ ಸಾಮರ್ಥ್ಯ ಬಹಳಷ್ಟು ಮೆಚ್ಚುಗೆ ತರುತ್ತದೆ ಮತ್ತು ನಿಮಗೆ ಅನಿರೀಕ್ಷಿತ ಪ್ರತಿಫಲಗಳನ್ನು ನೀಡುತ್ತದೆ. ಆರೋಗ್ಯ ಪರಿಪೂರ್ಣ, ಹಣಕಾಸು ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಮಧ್ಯಮ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಹಣಕಾಸು ಯೋಜನೆಗಳ ಕುರಿತಾಗಿ ಆಲೋಚನೆ, ನಿಮ್ಮ ಸಂಗಾತಿ ನಿಮ್ಮ ಬಗ್ಗೆ ಒಳ್ಳೆಯದನ್ನು ಯೋಚಿಸುತ್ತಾರೆ, ಆದ್ದರಿಂದ ಕೆಲವೊಮ್ಮೆ ನಿಮ್ಮ ಮೇಲೆ ಕೋಪವನ್ನು ಸಹ ತೋರಿಸಬಹುದು. ಅವರ ಕೋಪಕ್ಕೆ ಕೋಪಗೊಳ್ಳುವುದಕ್ಕಿಂತ ಅವರ ಮಾತುಗಳನ್ನು ನೀವು ಅರ್ಥಮಾಡಿಕೊಳ್ಳುವುದು ಉತ್ತಮ. ಹಳೆ ಸ್ನೇಹಿತರ ಭೇಟಿ ಮಾಡುವ ಸಾಧ್ಯತೆ. ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ, ಕೌಟುಂಬಿಕ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಅನಗತ್ಯ ಖರ್ಚಿನ ಹೊರತಾಗಿಯೂ ನಿಮ್ಮ ಆರ್ಥಿಕ ಸ್ಥಿತಿಯು ಬಲವಾಗಿರುತ್ತದೆ. ನಿಮ್ಮ ವ್ಯಕ್ತಿತ್ವ ನೀವು ಹೊಸ ಸ್ನೇಹಿತರನ್ನು ಗಳಿಸಲು ಸಹಾಯ ಮಾಡುತ್ತದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ವಾಹನ ಚಾಲನೆ ಮಾಡುವಾಗ ಜಾಗ್ರತೆ ಅವಶ್ಯ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ. ಮನದ ಬಯಕೆ ಈಡೇರುವ ಆಶಾಭಾವನೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಸಿಂಹ: ಭೂಮಿ ಸಂಬಂಧಿ ವ್ಯವಹಾರ ನಡೆಯುವ ಸಾಧ್ಯತೆ. ಅದು ನಿಮಗೆ ಲಾಭದಾಯಕವಾಗಲಿದೆ. ನಿಮ್ಮ ಪ್ರೀತಿಪಾತ್ರರು ನಿಮಗೆ ಅಪಾರ ಸಂತೋಷ ತರುತ್ತಾರೆ. ಉದ್ಯೋಗಿಗಳಿಗೆ ನಿಧಾನಗತಿಯಿಂದಾಗಿ ಸ್ವಲ್ಪ ಒತ್ತಡ ತರುವ ಸಾಧ್ಯತೆ. ಸಂಗಾತಿಯ ಮಾತುಗಳು ಹಿತವೆನಿಸುವುದು. ಹಣಕಾಸು, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕನ್ಯಾ: ಒತ್ತಡ ಮುಕ್ತವಾಗಿ ಶಾಂತ ವಾತಾವರಣ ನಿರ್ಮಾಣವಾಗಲಿದೆ. ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಲಾಭ. ಅನಿವಾರ್ಯ ಕಾರಣ ನೀವು ಖರ್ಚು ಮಾಡುವ ಸಾಧ್ಯತೆಯಿಂದಾಗಿ ಮನಸ್ಸಿಗೆ ಕೊಂಚ ಬೇಸರ. ಉದ್ಯೋಗ ಆಕಾಂಕ್ಷಿಗಳಿಗೆ ಇಂದು ಅದೃಷ್ಟದ ದಿನದಂತೆ ತೋರುತ್ತದೆ. ನಿಮಗೆ ಅಗತ್ಯವಿಲ್ಲದ ವಿಷಯಗಳ ಮೇಲೆ ಇಂದು ನಿಮ್ಮ ಹೆಚ್ಚಿನ ಸಮಯವನ್ನು ವ್ಯರ್ಥ ಮಾಡವುದು ಬೇಡ. ಆರೋಗ್ಯ ಪರಿಪೂರ್ಣ. ಸಂಗಾತಿಯ ಮಾತುಗಳು ಅಹಿತವೆನಿಬಹುದು. ಕಲಹಗಳಿಗೆ ಆಸ್ಪದ ಕೊಡಬೇಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ತುಲಾ: ನಿಮಗೆ ಇಂದು ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಪ್ರೇಮ ಪ್ರಕರಣ ಹದಗೆಡುವ ಸಾಧ್ಯತೆ. ಅನಿವಾರ್ಯ ಪ್ರಸಂಗಗಳಿಂದಾಗಿ ಪ್ರಯಾಣ ಸಾಧ್ಯತೆ. ಸಂಬಂಧಿಕರ ಹಸ್ತಕ್ಷೇಪ ದಾಂಪತ್ಯ ಜೀವನದಲ್ಲಿ ವೈರತ್ವ ಮೂಡುವಂತೆ ಮಾಡಬಹುದು. ಅದಕ್ಕೆ ಅವಕಾಶ ಕೊಡಬೇಡಿ. ಆರೋಗ್ಯ ಪರಿಪೂರ್ಣ, ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು, ಆರ್ಥಿಕ ಸ್ಥಿತಿ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವೃಶ್ಚಿಕ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರನ್ನು ಆಕರ್ಷಿಸಲಿದೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಪಾಲಕರು ಮತ್ತು ಸ್ನೇಹಿತರು ನಿಮ್ಮನ್ನು ಸಂತೋಷವಾಗಿರಿಸಲು ಅವರಿಗೆ ಸಾಧ್ಯವಾದದ್ದನ್ನೆಲ್ಲ ಮಾಡುತ್ತಾರೆ. ಇದು ಪ್ರೀತಿಯಲ್ಲಿ ನಿಮ್ಮ ಅದೃಷ್ಟದ ದಿನ. ನಿಮ್ಮ ಸಂಗಾತಿ ನಿಮ್ಮ ಬಹುನಿರೀಕ್ಷಿತ ಕಲ್ಪನೆಗಳನ್ನು ಸಾಕ್ಷಾತ್ಕಾರ ಮಾಡುವ ಮೂಲಕ ನಿಮ್ಮನ್ನು ಅಚ್ಚರಿಗೊಳಿಸುತ್ತಾರೆ. ಭವಿಷ್ಯದ ಹೂಡಿಕೆ ಬಗೆಗೆ ಆಲೋಚನೆ. ಆಪ್ತರ ಆಗಮನದಿಂದ ಕಾರ್ಯದಲ್ಲಿ ವಿಳಂಬ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಧನಸ್ಸು: ಇಂದು ಹಣಕಾಸು ಹೂಡಿಕೆ ಬಗೆಗೆ ಆಲೋಚನೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಮನೆಯಲ್ಲಿನ ವ್ಯತಿರಿಕ್ತ ವಾತಾವರಣ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ. ಅದರಿಂದ ದೂರ ಇರಿ. ನಿಮ್ಮ ಆಪ್ತರೊಂದಿಗೆ ನಿಮಗೆ ಸಂಬಂಧಿಸಿದ ವಿಷಯ ಹಂಚಿಕೊಳ್ಳುವ ಸಾಧ್ಯತೆ. ಆದರೆ ಗೌಪ್ಯ ವಿಷಯಗಳು ಗೌಪ್ಯವಾಗಿದ್ದರೆ ಚೆನ್ನ. ದೈಹಿಕ ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಕರ: ನಿಮ್ಮ ಆರೋಗ್ಯದ ಬಗ್ಗೆ ಎಚ್ಚರ ವಹಿಸಿ. ಇಂದು ನೀವು ಹಣಕ್ಕೆ ಸಂಬಂಧಿಸಿದ ಸಮಸ್ಯೆಯ ಕಾರಣದಿಂದ ತೊಂದರೆಗೊಳಗಾಗಬಹುದು. ಅತಿಥಿಗಳ ಆಗಮನ ಕೊಂಚ ಮಟ್ಟಿಗೆ ಸಮಾಧಾನ ತರಿಸಬಹುದು. ಉದ್ಯೋಗದ ಸ್ಥಳದಲ್ಲಿ ಮಾತಿನ ನಿಯಂತ್ರಣ ತಪ್ಪಿ ಅಪಾಯ ತಂದು ಕೊಳ್ಳುವುದು ಬೇಡ. ವಿದ್ಯಾರ್ಥಿಗಳು ಅಭ್ಯಾಸದ ಕಡೆ ಹೆಚ್ಚು ಗಮನ ಹರಿಸಬೇಕು. ವ್ಯಾಪಾರ ವ್ಯವಹಾರಗಳಲ್ಲಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಕುಂಭ: ನಿಮ್ಮ ಅಪಾರ ವಿಶ್ವಾಸ ನಿಮಗೆ ಯಶಸ್ಸು ತಂದುಕೊಡಲಿದೆ. ನೀವು ಪ್ರಯಾಣ ಮಾಡುವ ಮತ್ತು ಹಣ ಖರ್ಚು ಮಾಡುವ ಸಾಧ್ಯತೆ. ದಿನದ ಕೊನೆಯಲ್ಲಿ ಅನಿವಾರ್ಯ ಕಾರಣದಿಂದ ಮನಸ್ಸಿಗೆ ನೋವುಂಟು ಆಗುವ ಸಾಧ್ಯತೆ. ನೀವು ಅತೀ ಉದಾರಿಯಾಗಿದ್ದಲ್ಲಿ-ನಿಮ್ಮ ನಿಕಟ ಜನರು ನಿಮ್ಮ ಅನುಚಿತ ಲಾಭ ತೆಗೆದುಕೊಳ್ಳಬಹುದು. ಸ್ನೇಹಿತರೊಬ್ಬನೊಂದಿಗೆ ಇಂದು ಸಮಯವನ್ನು ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮೀನ: ವೃಥಾ ಗಾಳಿಯಲ್ಲಿ ಗೋಪುರ ಕಟ್ಟಿ ಸಮಯ ವ್ಯರ್ಥ ಮಾಡಿಕೊಳ್ಳುವುದು ಬೇಡ. ಬದಲಿಗೆ ಏನಾದರೂ ಅರ್ಥಪೂರ್ಣವಾದದ್ದನ್ನು ಮಾಡಲು ನಿಮ್ಮ ಶಕ್ತಿ ವ್ಯಯಿಸಿ. ಆಪ್ತರೊಂದಿಗೆ ಅನಿವಾರ್ಯ ಕಾರಣದಿಂದ ಮುನಿಸಿಕೊಳ್ಳುವ ಸಾಧ್ಯತೆ. ಇದಕ್ಕೆ ಅವಕಾಶ ಕೊಡದೆ ನಿಮ್ಮ ಹಾಸ್ಯ ಮನೋಭಾವನೆಯಿಂದ ಸಮಸ್ಯೆ ಪರಿಹರಿಸಿಕೊಳ್ಳಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಸಂಗಾತಿಯ ಮಾತುಗಳು ಹಿತವೆನಿಸುತ್ತದೆ. ಆರೋಗ್ಯ ಮಧ್ಯಮ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Saturn In Astrology | ಜಾತಕದಲ್ಲಿ ಶನಿ ಲಗ್ನದಲ್ಲಿದ್ದರೆ ರಾಜನಂತೆ ಮೆರೆಯಬಹುದು! ಉಳಿದ ಮನೆಗಳಲ್ಲಿದ್ದರೆ ಏನು ಫಲ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

DK Shivakumar: 2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

VISTARANEWS.COM


on

dk shivakumar hd kumarswamy
Koo

ಬೆಂಗಳೂರು: ನಮ್ಮನ್ನು ಸರ್ವನಾಶ ಮಾಡುವುದೇ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರ ನಿತ್ಯದ ಆಲೋಚನೆಯಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ವಿವಿಧ ಯೋಜನೆಗಳ ಬಗ್ಗೆ ಬೆಂಗಳೂರಿನ ಸರ್ವ ಪಕ್ಷ ಶಾಸಕರುಗಳು ಹಾಗೂ ಜನಪ್ರತಿನಿಧಿಗಳ ಸಭೆ ವಿಧಾನಸೌಧದ (Vidhana Soudha) ಸಮ್ಮೇಳನ ಸಭಾಂಗಣದಲ್ಲಿ ನಡೆದ ಬಳಿಕ ಅವರು ಮಾಧ್ಯಮಗಳ ಜೊತೆಗೆ ಮಾತನಾಡಿದರು.

ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಅವರು ಪ್ರತಿಕ್ರಿಯಿಸಿ, “ಕುಮಾರಸ್ವಾಮಿ ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ ಮಾಡಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು” ಎಂದು ವಾಗ್ದಾಳಿ ನಡೆಸಿದರು.

ನಾನು ಬೆಂಗಳೂರು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ, ಮುಖ್ಯಮಂತ್ರಿಯಾದಾಗಲೂ ಇದು ಬೆಂಗಳೂರಾಗಿಯೇ ಇತ್ತು. ಇದು ನಮ್ಮ ಜಿಲ್ಲೆ. ನಾವು ಭಾರತೀಯರು ಎಂದು ಹೇಗೆ ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೋ, ಅದೇ ರೀತಿ ನಾವು ಬೆಂಗಳೂರಿನವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಕುಮಾರಸ್ವಾಮಿ ಅವರು ಅಧಿಕಾರಕ್ಕೆ ಬಂದಾಗ ಜಿಲ್ಲೆಯನ್ನು ಒಡೆದು ಬೇರೆ ಹೆಸರು ಕೊಟ್ಟರು ಎಂದು ತಿಳಿಸಿದರು.

ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದ್ದು ಬೆಂಗಳೂರಿನಲ್ಲಿ, ರಾಮಕೃಷ್ಣ ಹೆಗಡೆ ಅವರು ಬಂದು ನಿಂತಿದ್ದು ಬೆಂಗಳೂರಿನಲ್ಲಿ. ಈ ಬೆಂಗಳೂರು ನಾಲ್ಕೈದು ಮುಖ್ಯಮಂತ್ರಿಗಳನ್ನು ಮಾಡಿದೆ. ನಮ್ಮ ಜಿಲ್ಲೆಯನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡುವಾಗ ಬೆಂಗಳೂರು ಹೆಸರು ಉಳಿಸಿಕೊಳ್ಳುವಂತೆ ನಾವು ಸಲಹೆ ನೀಡಿದ್ದೆವು. ಬೆಂಗಳೂರು ಇಂದು ವಿಶ್ವಮಟ್ಟದಲ್ಲಿ ಹೆಸರು ಮಾಡಿದೆ. ನಮ್ಮ ಪೂರ್ವಜರು ಕೊಟ್ಟಿರುವ ಈ ಹೆಸರನ್ನು ನಾವು ಯಾಕೆ ಕಳೆದುಕೊಳ್ಳಬೇಕು ಎಂದು ಪ್ರಶ್ನಿಸಿದರು.

ಈ ಜಿಲ್ಲೆಯ ಆಡಳಿತ ಕೇಂದ್ರ ರಾಮನಗರದಲ್ಲೇ ಇರುತ್ತದೆ. ಈ ಜಿಲ್ಲೆಯ ಜನಕ್ಕೆ ಹೊಸ ದಿಕ್ಕನ್ನು ನೀಡಬೇಕು, ಹೊಸ ಆಲೋಚನೆ, ಅಭಿವೃದ್ಧಿ ನೀಡಬೇಕು, ಮುಂದಿನ ಪೀಳಿಗೆ ದೃಷ್ಟಿಯಿಂದ ನಾವು ಆಲೋಚನೆ ಮಾಡಿ ಈ ತೀರ್ಮಾನ ಮಾಡಿದ್ದೇವೆ. ನಮ್ಮ ಈ ತೀರ್ಮಾನಕ್ಕೆ ಪಕ್ಷಾತೀತವಾಗಿ ಜನರು ಸಂತೋಷವಾಗಿದ್ದಾರೆ ಎಂದು ತಿಳಿಸಿದರು.

ಕುಮಾರಸ್ವಾಮಿ ಹಣೆಯಲ್ಲಿ ಬರೆದಿಲ್ಲ

2028ರ ಒಳಗೆ ನಾವು ಬಂದು ಮತ್ತೆ ರಾಮನಗರ ಎಂದು ಮರುನಾಮಕರಣ ಮಾಡುತ್ತೇವೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅದು ಅವರ ಹಣೆಯಲ್ಲಿ ಬರೆದಿಲ್ಲ. 2028ರಲ್ಲೂ ಕಾಂಗ್ರೆಸ್ ಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಬೇಕಿದ್ದರೆ ಈ ಮಾತನ್ನು ಬರೆದಿಟ್ಟುಕೊಳ್ಳಿ” ಎಂದು ಸವಾಲೆಸೆದರು.

ಬೃಂದಾವನ ಮೇಲ್ದರ್ಜೆಗೆ ಏರಿಕೆ

ಕೆಆರ್‌ಎಸ್ ಬೃಂದಾವನ ಉದ್ಯಾನವನಕ್ಕೆ ಹೊಸ ರೂಪ ನೀಡಲು ಮುಂದಾಗಿರುವ ಯೋಜನೆಯಿಂದ ಸರ್ಕಾರದ ಹಣ ವ್ಯರ್ಥವಾಗಲಿದೆ ಎಂಬ ವಿಪಕ್ಷ ಟೀಕೆಯ ಬಗ್ಗೆ ಅವರು ಪ್ರತಿಕ್ರಿಯಿಸಿದರು. ಅವರ ಆರೋಪ ಬೋಗಸ್ ಆಗಿದೆ. ಇದು ಸಿದ್ದರಾಮಯ್ಯ ಅವರ ಈ ಹಿಂದಿನ ಸರ್ಕಾರದಲ್ಲಿ ಪ್ರಸ್ತಾವನೆಯಾದ ಯೋಜನೆ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾದಾಗ, ನಾನು ನೀರಾವರಿ ಸಚಿವನಾಗಿದ್ದಾಗ ಈ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಈಗ ಬೃಂದಾವನ ಉದ್ಯಾನವನವನ್ನು ವಿಶ್ವದರ್ಜೆ ಮಟ್ಟಕ್ಕೆ ಹೆಚ್ಚಿಸಲು ಮುಂದಾಗಿದ್ದೇವೆ. ಖಾಸಗಿ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಈ ಯೋಜನೆ ಕೈಗೊಳ್ಳಲಾಗಿದೆ. ಇದರಿಂದ ಪ್ರವಾಸೋದ್ಯಮಕ್ಕೆ ಹೆಚ್ಚಿನ ಉತ್ತೇಜನ ಸಿಗಲಿದೆ. ಗಂಗಾ ಆರತಿ ಮಾದರಿಯಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡುತ್ತಿದ್ದು, ಪ್ರವಾಸೋದ್ಯಮ ಉದ್ದೇಶದಿಂದ ಈ ಯೋಜನೆಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.

ಗ್ರೇಟರ್ ಬೆಂಗಳೂರು

ಗ್ರೇಟರ್ ಬೆಂಗಳೂರು ವಿಧೇಯಕದ ಬಗ್ಗೆ, ಎಲ್ಲಾ ಪಕ್ಷದ ಶಾಸಕರು ಈ ವಿಚಾರವಾಗಿ ವಿಸ್ತೃತ ಚರ್ಚೆಯಾಗಬೇಕು ಎಂದು ತಿಳಿಸಿದರು. ಇದಕ್ಕೆ ನಾನು ಮುಕ್ತವಾಗಿದ್ದೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯವನ್ನು ಕೇಳಬೇಕು. ಇದರಲ್ಲಿ ಯಾವುದೇ ತಪ್ಪು ಆಗಬಾರದು. ಸಂವಿಧಾನದ 73 ಹಾಗೂ 74ನೇ ತಿದ್ದುಪಡಿ ಗಮನದಲ್ಲಿಟ್ಟುಕೊಂಡು ಇದನ್ನು ಮಾಡಬೇಕು. ಬೆಂಗಳೂರಿಗೆ ಪರಿಣಾಮಕಾರಿ ಆಡಳಿತ ನೀಡಬೇಕು. ಇದಕ್ಕೆ ಸಂಬಂಧಿಸಿದಂತೆ ಇಂದು ಎಲ್ಲಾ ಪಕ್ಷಗಳ ಶಾಸಕರ ಸಭೆ ಕರೆಯಲಾಗಿದ್ದು, ಇದಕ್ಕೆ ಸಂಬಂಧಿಸಿದಂತೆ ಸದನ ಸಮಿತಿಯನ್ನು ಸಧ್ಯದಲ್ಲೇ ರಚಿಸಲಾಗುವುದು. ವಿರೋಧ ಪಕ್ಷಗಳ ಸಲಹೆ, ಅಭಿಪ್ರಾಯಗಳನ್ನು ನಾವು ಸ್ವೀಕರಿಸುತ್ತೇವೆ ಎಂದು ತಿಳಿಸಿದರು.

ಇದನ್ನೂ ಓದಿ: DK Shivakumar: `ಲೋಕಾಯುಕ್ತಕ್ಕೆ ಕೊಟ್ಟ ಮೇಲೆ ಸಿಬಿಐಗೇನು ಕೆಲಸ?’ ಅಕ್ರಮ ಆಸ್ತಿ ಕೇಸ್‌ ಬಗ್ಗೆ ಡಿಕೆ ಶಿವಕುಮಾರ್‌ ಪ್ರಶ್ನೆ

Continue Reading

ಪ್ರಮುಖ ಸುದ್ದಿ

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Karnataka High Court: ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

VISTARANEWS.COM


on

karnataka high court
Koo

ಬೆಂಗಳೂರು: ʼಇಡೀ ಜಗತ್ತು ಯುಪಿಐ (UPI) ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿದೆ. ದಿನಸಿ ಅಂಗಡಿಯವರಲ್ಲೂ ಅದು ಇದೆ. ಆದರೆ ನಿಮ್ಮಲ್ಲಿ ಇಲ್ಲ ಎಂಬುದು ವಿಚಿತ್ರವಾದ ಸಂಗತಿʼ ಎಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ- BESCOM) ಅನ್ನು ಕರ್ನಾಟಕ ಹೈಕೋರ್ಟ್ (Karnataka High Court) ಶುಕ್ರವಾರ ತರಾಟೆಗೆ ತೆಗೆದುಕೊಂಡಿದೆ.

ಏಕೀಕೃತ ಪಾವತಿ ಇಂಟರ್ಫೇಸ್ (ಯುಪಿಐ) ಅಥವಾ ಆನ್‌ಲೈನ್ ಪಾವತಿಯ (online payment) ಸೌಲಭ್ಯವನ್ನು ಗ್ರಾಹಕರಿಗೆ ಏಕೆ ಒದಗಿಸಿಲ್ಲ ಎಂಬ ಬಗ್ಗೆ ಆಗಸ್ಟ್ 9ರೊಳಗೆ ಅಫಿಡವಿಟ್ ಸಲ್ಲಿಸುವಂತೆ ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಹೈಕೋರ್ಟ್‌ ನಿರ್ದೇಶನ ನೀಡಿದೆ. ನ್ಯಾಯಮೂರ್ತಿ ಎನ್.ಎಸ್ ಸಂಜಯ್ ಗೌಡ ಅವರಿದ್ದ ಏಕಸದಸ್ಯ ಪೀಠ ಈ ನಿರ್ದೇಶನ ಜಾರಿ ಮಾಡಿದೆ.

2003ರ ವಿದ್ಯುತ್ ಕಾಯ್ದೆಯ ಸೆಕ್ಷನ್ 47(5)ರ ಪ್ರಕಾರ ಪೂರ್ವಪಾವತಿ ಮೀಟರ್ ಒದಗಿಸುವಂತೆ ಮತ್ತು ಯುಪಿಐ ಮೋಡ್‌ನಲ್ಲಿ ಪಾವತಿಯನ್ನು ಸ್ವೀಕರಿಸಲು ಬೆಸ್ಕಾಂಗೆ ನಿರ್ದೇಶನ ನೀಡಬೇಕೆಂದು ಕೋರಿ ಹಿರಿಯ ನಾಗರಿಕರಾದ ಸೀತಾಲಕ್ಷ್ಮಿ ಎಂಬವರು ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿಯ ವಿಚಾರಣೆಯ ವೇಳೆ ಈ ನಿರ್ದೇಶನ ನೀಡಲಾಗಿದೆ.

ಇಡೀ ಜಗತ್ತು ಯುಪಿಐ ಮೂಲಕ ಪಾವತಿಗಳನ್ನು ಸ್ವೀಕರಿಸುತ್ತಿರುವ ಈ ಯುಗದಲ್ಲಿ ಬೆಸ್ಕಾಂ ಯುಪಿಐ ಮೂಲಕ ಹಣವನ್ನು ಸ್ವೀಕರಿಸಲು ನಿರಾಕರಿಸುತ್ತಿರುವುದು ವಿಚಿತ್ರವಾಗಿದೆ. ಯಾರಾದರೂ ನಿಮಗೆ ಹಣವನ್ನು ಪಾವತಿಸಲು ಬಯಸಿದರೆ, ಅದು ಈಗ ಸ್ವೀಕರಿಸಲ್ಪಟ್ಟ ವಿಧಾನವಾಗಿದ್ದರೂ, ನೀವು ಅದನ್ನು ಅಳವಡಿಸಿಕೊಳ್ಳಬೇಕಿದ್ದರೆ ಯಾರಾದರೂ ನ್ಯಾಯಾಲಯಕ್ಕೆ ಬಂದು ರಿಟ್ ಅರ್ಜಿ ಸಲ್ಲಿಸಬೇಕಾಗುತ್ತದೆ. ಯಾರೋ ನಿಮಗೆ ಹಣವನ್ನು ನೀಡಲು ಬಯಸುತ್ತಾರೆ. ಎಲ್ಲರೂ ಡಿಜಿಟಲ್‌ (Digital) ಆಗಿರಿ ಎಂದು ಸರಕಾರ ಘೋಷಿಸುತ್ತದೆ. ಆದರೆ ನೀವು ಕರೆನ್ಸಿ ನೋಟುಗಳನ್ನು ಸಂಗ್ರಹಿಸುವ ಕಾಲಕ್ಕೆ ಹಿಂತಿರುಗಲು ಬಯಸುತ್ತಿದ್ದೀರಿ ಎಂದು ಹೈಕೋರ್ಟ್‌ ಪೀಠ ಬೆಸ್ಕಾಂನ ಕಿವಿ ಹಿಂಡಿತು.

ಪ್ರತಿಯೊಬ್ಬ ದಿನಸಿ ವ್ಯಾಪಾರಿಯೂ ಈಗ ಅವನ ಮುಂದೆ ಯುಪಿಐ ಸ್ಕ್ಯಾನರ್ ಅನ್ನು ಹೊಂದಿದ್ದಾನೆ. ಆದರೆ ನೀವು ಇನ್ನೂ ಅರ್ಜಿದಾರರಿಗೆ ಕ್ಯುಆರ್ ಕೋಡ್ (‌QR Code) ನೀಡಲು ಮೀನಮೇಷ ಎಣಿಸುತ್ತಿದ್ದೀರಿ. ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ನ್ಯಾಯಾಲಯವೇ ಅತ್ಯಂತ ನಿಧಾನವಾಗಿತ್ತು; ನೀವು ನಮಗಿಂತಲೂ ಹಿಂದುಳಿದಿದ್ದೀರಿ ಎಂದು ಕೂಡ ಪೀಠ ಹೇಳಿದೆ.

ವಿಚಾರಣೆಯ ವೇಳೆ ಬೆಸ್ಕಾಂ ಪರ ವಕೀಲರು, ಬೆಸ್ಕಾಂ ಕೌಂಟರ್‌ಗಳಲ್ಲಿ ಯುಪಿಐ ಪಾವತಿ ಮಾಡಲು ಅವಕಾಶವಿಲ್ಲ. ನಗದು ಪಾವತಿಯನ್ನು ಮಾತ್ರ ಸ್ವೀಕರಿಸಲಾಗುತ್ತದೆ ಎಂದು ತಿಳಿಸಿದರು. ಆದರೆ ಗ್ರಾಹಕರು ಬೆಸ್ಕಾಂ ಅಪ್ಲಿಕೇಶನ್ ಮೂಲಕ ಆನ್‌ಲೈನ್/ಯುಪಿಐ ಪಾವತಿಗಳನ್ನು ಮಾಡಬಹುದು. ಹಿರಿಯ ನಾಗರಿಕರು ಮತ್ತು ವಯಸ್ಸಾದವರು ಕೌಂಟರ್‌ಗೆ ಬರುವ ಅಗತ್ಯವಿಲ್ಲದೆ ಮನೆಯಲ್ಲಿ ಕುಳಿತು ಅಪ್ಲಿಕೇಶನ್‌ನಲ್ಲಿ ಇದನ್ನು ಮಾಡಬಹುದು ಎಂದು ಹೇಳಿದರು.

ಅಕ್ಟೋಬರ್ 25, 2023ರಂದು, ಅರ್ಜಿದಾರರು ಮನೆಬಾಡಿಗೆ ಉದ್ದೇಶಗಳಿಂದ ಉಂಟಾಗುವ ಭಾರೀ ಶುಲ್ಕವನ್ನು ಕಟ್ಟಲು ಬೆಸ್ಕಾಂ ಹೊಸಕೋಟೆ ಶಾಖೆಯ ಕ್ಯಾಶ್ ಕೌಂಟರ್‌ಗೆ ಭೇಟಿ ನೀಡಿದ್ದರು. ಯುಪಿಐ ಮೂಲಕ ಪಾವತಿ ಲಭ್ಯವಿಲ್ಲದ ಕಾರಣ ಕರ್ತವ್ಯದಲ್ಲಿದ್ದ ಅಧಿಕಾರಿಗಳು ಅರ್ಜಿದಾರರಿಗೆ ಡಿಡಿ ಮೂಲಕ ಪಾವತಿಸಲು ಸೂಚಿಸಿದ್ದರು.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಶ್ರೀಧರ್ ಪ್ರಭು ಅವರು, ವಯಸ್ಸಾದ ಮಹಿಳೆ ದೈನಂದಿನ ಕೆಲಸಗಳನ್ನು ನಿರ್ವಹಿಸುವಲ್ಲಿ ಸವಾಲುಗಳನ್ನು ಎದುರಿಸುತ್ತಿದ್ದಾರೆ. ಡಿಮ್ಯಾಂಡ್ ಡ್ರಾಫ್ಟ್ (ಡಿಡಿ) ಪಡೆಯಲು ಸರದಿಯಲ್ಲಿ ನಿಂತು ಕಷ್ಟಪಟ್ಟಿದ್ದಾರೆ. ನಂತರ ಪಾವತಿ ಮಾಡಿದ್ದಾರೆ. ಹೀಗಾಗಿ ಅವರು ತಮ್ಮ ಯೂನಿಫೈಡ್ ಪೇಮೆಂಟ್ಸ್ ಇಂಟರ್‌ಫೇಸ್ ಐಡೆಂಟಿಟಿ (ಯುಪಿಐಡಿ) ಅನ್ನು ಒದಗಿಸುವ ಮೂಲಕ ಪ್ರಕ್ರಿಯೆಯನ್ನು ಸುಲಭಗೊಳಿಸುವಂತೆ ಮನವಿ ಮಾಡಿದ್ದಾರೆ ಎಂದರು.

ಇದನ್ನೂ ಓದಿ: ವಿದ್ಯುತ್ ಬಿಲ್‌ನಲ್ಲಿರುವ ಹೆಚ್ಚುವರಿ ಭದ್ರತಾ ಠೇವಣಿ ಕುರಿತು ಗೊಂದಲ; ಗ್ರಾಹಕರ ಪ್ರಶ್ನೆಗಳಿಗೆ ಇಲ್ಲಿದೆ ಬೆಸ್ಕಾಂ ಉತ್ತರ

Continue Reading

ಪ್ರಮುಖ ಸುದ್ದಿ

Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Dog Meat: ಬೆಂಗಳೂರಿನಲ್ಲಿ ಶಂಕಿತ ನಾಯಿ ಮಾಂಸ ಮಾರಾಟ ಪ್ರಕರಣದ ಬಗ್ಗೆ ಮಾತನಾಡಿದ ಪ್ರಮೋದ್‌ ಮುತಾಲಿಕ್, “ಹಿಂದೂಗಳೇ ರುಚಿ-ರುಚಿಯಾದ ಹಂದಿ, ನಾಯಿ, ನರಿ, ಬೆಕ್ಕಿನ ಮಾಂಸ ತಿನ್ನಿರಿ” ಎಂದು ಹಿಂದೂಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು.

VISTARANEWS.COM


on

pramod mutalik dog meat
Koo

ಗದಗ: ಕುರಿ ಮಾಂಸದ (Mutton) ಹೆಸರಿನಲ್ಲಿ ಕಳೆದ 15 ವರ್ಷಗಳಿಂದ ಅಬ್ದುಲ್ ರಜಾಕ್ ಬೆಂಗಳೂರಿಗರಿಗೆ ನಾಯಿ ಮಾಂಸ (Dog meat) ತಿನ್ನಿಸುತ್ತಿದ್ದಾನೆ ಎಂದು ಶ್ರೀರಾಮಸೇನೆ (Sri Rama Sene) ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Mutalik) ಕಿಡಿ ಕಾರಿದ್ದಾರೆ. ಗದಗದಲ್ಲಿ (Gadag news) ಅವರು ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ್ದಾರೆ.

ಬೆಂಗಳೂರಿನಲ್ಲಿ ಶಂಕಿತ ನಾಯಿ ಮಾಂಸ ಮಾರಾಟ ಪ್ರಕರಣದ ಬಗ್ಗೆ ಮಾತನಾಡಿದ ಅವರು, “ಹಿಂದೂಗಳೇ ರುಚಿ-ರುಚಿಯಾದ ಹಂದಿ, ನಾಯಿ, ನರಿ, ಬೆಕ್ಕಿನ ಮಾಂಸ ತಿನ್ನಿರಿ” ಎಂದು ಹಿಂದೂಗಳ ವಿರುದ್ಧವೇ ಆಕ್ರೋಶ ವ್ಯಕ್ತಪಡಿಸಿದರು. ʼʼರೈಲ್ವೆ ಸ್ಟೇಷನ್‌ನಲ್ಲಿ 90 ಮಾಂಸದ ಬಾಕ್ಸ್‌ಗಳು ಸಿಕ್ಕಿವೆ. ಅವು ನಾಯಿ ಮಾಂಸ ಇರುವ ಬಾಕ್ಸ್‌ಗಳು. ಕಳೆದ 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾನೆ. ಇಷ್ಟೆಲ್ಲ ನಡೆಯುತ್ತಿದ್ದರೂ ಬಿಬಿಎಂಪಿಯ ಅಧ್ಯಕ್ಷರು ಕತ್ತೆ ಕಾಯುತ್ತಿದ್ದಾರಾ? ಅಬ್ದುಲ್ ರಜಾಕ್ ದೇಶದ್ರೋಹಿ ಕೆಲಸ ಮಾಡುತ್ತಿದ್ದಾನೆ. ರಾಜಸ್ಥಾನದಿಂದ ನಾಯಿ ಮಾಂಸ ತರಿಸಿ ಮಾರುತ್ತಿದ್ದಾನೆʼʼ ಎಂದು ಮುತಾಲಿಕ್‌ ಹೇಳಿದ್ದಾರೆ.

“ಅಬ್ದುಲ್ ರಜಾಕ್ ಬೆನ್ನಿಗೆ ಸಚಿವ ಜಮೀರ್ ಅಹ್ಮದ್ ನಿಂತಿದ್ದಾರೆ. ಜಮೀರ್ ಅಹ್ಮದ್ ಉತ್ತರ ಕೊಡಬೇಕು. ಹಿಂದೂಗಳು ಈಗಲಾದರೂ ಎಚ್ಚರಗೊಳ್ಳಬೇಕು. ನಾಯಿ ಮಾಂಸದ ಬಾಕ್ಸ್ ಮೇಲೆ ಮೀನಿನ ಮಾಂಸ ಎಂದು ಬರೆದು ಮೋಸ ಮಾಡುತ್ತಿದ್ದಾರೆ. ಇದನ್ನು ಬಹಳ ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದಿದ್ದಾರೆ.

ರಾಮನಗರದ ಹೆಸರು ಬದಲಾವಣೆ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆಯಾಗಿ ಮಾಡಿದ್ದಕ್ಕೆ ನಮ್ಮ ವಿರೋಧ ಇದೆ. ರಾಮನಗರ ಹೆಸರು ಇರುವುದಕ್ಕೆ ನಿಮಗೆ ತೊಂದರೆ ಏನು? ರಾಮನಗರ ಜಿಲ್ಲೆಯ ಹೆಸರು ಪರಿವರ್ತನೆ ಮಾಡಿದ್ದು ಹಿಂದೂ ದ್ರೋಹಿ ಕೆಲಸ. ಕಾಂಗ್ರೆಸ್ ಮೊದಲಿನಿಂದಲೂ ಇದೇ ಕೆಲಸ ಮಾಡುತ್ತಾ ಬಂದಿದೆ. ಕಾಂಗ್ರೆಸ್ ಬಾಬರ್‌ನನ್ನು ಕೂಡ ಬೆಂಬಲಿಸಿದೆ ಎಂದು ಅವರು ಟೀಕಿಸಿದರು.

ರಾಮನಗರವನ್ನು ಬದಲಾವಣೆ ಮಾಡುವುದಾದರೆ ಮಾಡಲಿ. ಹಾಗೇ ಬೆಂಗಳೂರಿನಲ್ಲಿ 32 ಕಡೆಗಳಲ್ಲಿ ಬ್ರಿಟೀಷರ ಹೆಸರು ಇವೆ. ಮೊದಲು ಅವುಗಳನ್ನು ಬದಲಾವಣೆ ಮಾಡಲಿ. ನಿಮಗೆ ನಿಜವಾಗಲೂ ಸ್ವಾಭಿಮಾನ ಇದ್ದರೆ ಬ್ರಿಟಿಷರ ಹೆಸರು ಬದಲಾಯಿಸಿ. ರಾಮನಗರಕ್ಕೆ ತನ್ನದೇ ಆದ ಇತಿಹಾಸ ಇದೆ. ನಾಳೆ ಕಲಬುರಗಿಯಲ್ಲಿ ಇದರ ಬಗ್ಗೆ ಸಭೆ ನಡೆಸಿ ಇಡೀ ರಾಜ್ಯಾದ್ಯಂತ ಹೋರಾಟದ ಯೋಜನೆ ರೂಪಿಸಲಿದ್ದೇವೆ ಎಂದು ಹೇಳಿದರು.

ಅಬ್ದುಲ್ ರಜಾಕ್ ಹೇಳಿಕೆ

ಎರಡು ದಿನಕ್ಕೆ ಒಮ್ಮೆ ಜೈಪುರದಿಂದ ಬೆಂಗಳೂರಿಗೆ ಕುರಿ ಮಾಂಸ ಬರುತ್ತದೆ. ಇವತ್ತು ಎರಡು ಸಾವಿರ ಕೆಜಿ ಮಾಂಸ ಬಂದಿದೆ. ಹನ್ನೆರಡು ವರ್ಷದಿಂದ ಈ ವ್ಯವಹಾರ ನಡೀತಿದೆ. ಯಾವುದೇ ಆಹಾರ ಇಲಾಖೆ ಬಂದು ಚೆಕ್ ಮಾಡಲಿ. ರಾಜಸ್ಥಾನದ ಕುರಿಗಳಿಗೆ ಬಾಲ ಇದೇ ರೀತಿ ಇರುತ್ತೆ. ಪುನೀತ್ ಕೆರೆಹಳ್ಳಿ ಅದನ್ನು ನಾಯಿ ಅಂತಿದ್ದಾರೆ. ಹಣ ವಸೂಲಿ ಮಾಡೋಕೆ ಈ ರೀತಿ ಮಾಡ್ತಾ ಇದಾರೆ. ನಾಳೆ ಈ ಬಗ್ಗೆ ಸುದ್ದಿಗೋಷ್ಠಿ ಮಾಡುತ್ತೇವೆ. ಈ ಬಗ್ಗೆ ಪುನೀತ್ ಕೆರೆಹಳ್ಳಿ ವಿರುದ್ಧ ದೂರು ಕೊಡುತ್ತೇವೆ ಎಂದು ಮಾಂಸ ಸಾಗಾಟಗಾರ ಅಬ್ದುಲ್‌ ರಜಾಕ್‌ ಹೇಳಿದ್ದಾರೆ.

ಇದನ್ನೂ ಓದಿ: Dog Meat: ಬೆಂಗಳೂರಿಗೆ ಬಂತು ಟನ್‌ಗಟ್ಟಲೇ ನಾಯಿ ಮಾಂಸ; ಅಬ್ದುಲ್ ರಜಾಕ್ ವಿರುದ್ಧ ಆರೋಪ!

Continue Reading

ಕ್ರೀಡೆ

Paris Olympic: ರೋಯಿಂಗ್​ನಲ್ಲಿ ಶುಭ ಸುದ್ದಿ; ಶೂಟಿಂಗ್​ನಲ್ಲಿ ನಿರಾಸೆ ಮೂಡಿಸಿದ ಮಿಶ್ರ ತಂಡ

Paris Olympic: 10 ಮೀ. ಏರ್​ ರೈಫಲ್​ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು.

VISTARANEWS.COM


on

Paris Olympic
Koo

ಪ್ಯಾರಿಸ್​: ಒಲಿಂಪಿಕ್ಸ್​(Paris Olympic) ಶೂಟಿಂಗ್​ನಲ್ಲಿ ಪದಕ ನಿರೀಕ್ಷೆ ಮಾಡಿದ್ದ ಭಾರತೀಯ ಕ್ರಿಡಾಭಿಮಾನಿಗಳಿಗೆ ಮೊದಲ ದಿನವೇ ನಿರಾಸೆಯಾಗಿದೆ. ಇಂದು(ಶನಿವಾರ) ನಡೆದ 10 ಮೀ. ಏರ್​ ರೈಫಲ್​ ಮಿಶ್ರ ತಂಡ ವಿಭಾಗದಲ್ಲಿ ಭಾರತ ಸೋಲು ಕಂಡು ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಆದರೆ ರೋಯಿಂಗ್​ನಲ್ಲಿ ಬಾಲರಾಜ್ ಪನ್ವಾರ್(Balraj Panwar) ಹೀಟ್ಸ್​ನಲ್ಲಿ 4ನೇ ಸ್ಥಾನ ಪಡೆಯುವ ಮೂಲಕ ರೆಪೆಚೇಜ್ ರೌಂಡ್​ಗೆ ಅರ್ಹತೆ ಪಡೆದಿದ್ದಾರೆ. ಈ ಪಂದ್ಯ ನಾಳೆ(ಭಾನುವಾ) ನಡೆಯಲಿದೆ.

ಸಂದೀಪ್​ ಸಿಂಗ್​-ಇಲವೆನಿಲ್​ ವಲರಿವನ್​ ಜೋಡಿ 12ನೇ ಸ್ಥಾನ ಪಡೆದರೆ, ಅರ್ಜುನ್​ ಬಬುಟ-ರಮಿತಾ ಜಿಂದಾಲ್ ಜೋಡಿ 6ನೇ ಸ್ಥಾನ ಪಡೆಯಿತು. ಈ ಜೋಡಿ ಒಟ್ಟು 628.7 ಅಂಕಗಳಿಸಿದರೆ, ಸಂದೀಪ್​ ಸಿಂಗ್​-ಇಲವೆನಿಲ್ ಜೋಡಿ 626.3 ಅಂಕ ಗಳಿಸಿತು. ಇದರೊಂದಿಗೆ 10 ಮೀ. ಏರ್​ ರೈಫಲ್​ ಮಿಶ್ರ ಸ್ಪರ್ಧೆಯಲ್ಲಿ ಭಾರತದ ಎರಡೂ ತಂಡಗಳು ಕೂಡ ಪದಕ ಸುತ್ತಿಗೇರುವಲ್ಲಿ ವಿಫಲವಾಯಿತು. ಚೀನಾ, ಕೊರಿಯಾ, ಜರ್ಮನಿ ಮತ್ತು ಕಝಾಕಿಸ್ತಾನ್ ಪದಕ ಸುತ್ತಿಗೆ ಪ್ರವೇಶಿಸಿತು.

ಪುರುಷರ ಸಿಂಗಲ್ ಸ್ಕಲ್ಸ್ ಹೀಟ್ಸ್​ನಲ್ಲಿ ಕಣಕ್ಕಿಳಿದ್ದ ಬಾಲರಾಜ್ ಪನ್ವಾರ್ ಕೊನೆಯ ಹಂತದ ಸುತ್ತಿನವರೆಗೂ ಮೂರನೇ ಸ್ಥಾನ ಕಾಯ್ದುಕೊಂಡಿದ್ದರು. ಆದರೆ ಫಿನಿಶಿಂಗ್​ ಹಂತದ ವೇಳೆ ಹಿನ್ನಡೆ ಅನುಭವಿಸಿ ಅಂತಿಮವಾಗಿ 07:07.11 ನಿಮಿಷದಲ್ಲಿ ಹೀಟ್ಸ್ ಪೂರ್ಣಗೊಳಿಸಿ ನಾಲ್ಕನೇ ಸ್ಥಾನ ಪಡೆದರು.

 

ಇಂದು ನಡೆಯುವ ಪುರುಷರ ಸಿಂಗಲ್ಸ್‌ ಟೆಬಲ್​ ಟೆನಿಸ್​ನಲ್ಲಿ ಅನುಭವಿ ಆಟಗಾರ, 41 ವರ್ಷದ ಶರತ್ ಕಮಲ್ ಅವರು ತಮ್ಮ ಮೊದಲ ಪಂದ್ಯದಲ್ಲಿ ಸ್ಲೊವೆನಿಯಾದ ಡೆನಿ ಕೊಜುಲ್ ವಿರುದ್ಧ ಆಡಲಿದ್ದಾರೆ. ಮತ್ತೋರ್ವ ಭಾರತೀಯ ಆಟಗಾರ, ಗುಜರಾತ್‌ನ 31 ವರ್ಷದ ಹರ್ಮಿತ್ ದೇಸಾಯಿ ಜೋರ್ಡಾನ್‌ನ ಝೈದ್ ಅಬೊ ಯಮನ್ ವಿರುದ್ಧ ಸೆಣಸಲಿದ್ದಾರೆ.

ಮಹಿಳೆಯರ ಸಿಂಗಲ್ಸ್‌ನಲ್ಲಿ ಕಾಮನ್‌ವೆಲ್ತ್‌ ಗೇಮ್ಸ್‌ ಚಿನ್ನದ ಪದಕ ವಿಜೇತೆ, ಈ ಬಾರಿಯ ಪದಕ ಭರಸೆಯ ಆಟಗಾರ್ತಿಯಾಗಿ ಗುರುತಿಸಿಕೊಂಡಿರುವ ಮಣಿಕಾ ಬಾತ್ರಾ ಅವರು ಗ್ರೇಟ್‌ ಬ್ರಿಟನ್‌ನ ಅನಾ ಹರ್ಸೆ ವಿರುದ್ಧ ಸೆಣಸಾಟ ನಡೆಸಲಿದ್ದಾರೆ. ಪಂದ್ಯಾವಳಿ ಆರಂಭಕ್ಕೂ ಮುನ್ನವೇ ಬಾತ್ರ ಕಳೆದ ಬಾರಿಯ ಟೋಕಿಯೊ ಒಲಿಂಪಿಕ್ಸ್​ ತಪ್ಪನ್ನು ಇಲ್ಲಿ ಮರುಕಳಿಸಲ್ಲ ಎಂದು ಹೇಳುವ ಮೂಲಕ ಪದಕ ಗೆಲ್ಲುವು ವಿಶ್ವಾಸ ವ್ಯಕ್ತಪಡಿಸಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ 32ರ ಘಟ್ಟದದ ಪಂದ್ಯದಲ್ಲಿ ಸೋಲು ಕಂಡಿದ್ದರು.

ಪುರುಷರ ತಂಡ ವಿಭಾಗದಲ್ಲಿ ಶರತ್ ಕಮಲ್, ದೇಸಾಯಿ ಮತ್ತು ಮಾನವ್ ಠಕ್ಕರ್ ಕಣಕ್ಕಿಳಿದರೆ, ಮಹಿಳೆಯರ ತಂಡದಲ್ಲಿ ಮಣಿಕಾ, ಶ್ರೀಜಾ ಅಕುಲಾ ಹಾಗೂ ಕರ್ನಾಟಕದ ಅರ್ಚನಾ ಕಾಮತ್ ಸ್ಪರ್ಧಿಸಲಿದ್ದಾರೆ. ಜಿ. ಸತ್ಯನ್, ಐಹಿಕಾ ಮುಖರ್ಜಿ ಮೀಸಲು ಆಟಗಾರರಾಗಿದ್ದಾರೆ. ಶರತ್ ಕಮಲ್ ಅವರಿಗೆ ಇದು ಬಹುತೇಕ ಕೊನಯ ಒಲಿಂಪಿಕ್ಸ್​ ಟೂರ್ನಿಯಾಗಿದೆ. ಹೀಗಾಗಿ ಅವರು ಐತಿಹಾಸಿಕ ಪದಕ ಗೆದ್ದು ತಮ್ಮ ಕ್ರೀಡಾ ವೃತ್ತಿ ಜೀವನನ್ನು ಸ್ಮರಣೀಯಗೊಳಿಸಲಿ ಎನ್ನುವುದು ಭಾರತೀಯರ ಹಾರೈಕೆ.

Continue Reading
Advertisement
Money Guide
ಮನಿ-ಗೈಡ್4 mins ago

Money Guide: ಐಟಿಆರ್ ಇನ್ನೂ ಸಲ್ಲಿಸಿಲ್ಲವೇ? ಕೊನೆಯ ಕ್ಷಣದ ಗೊಂದಲ ತಪ್ಪಿಸಲು ಈ ಟಿಪ್ಸ್‌ ಫಾಲೋ ಮಾಡಿ

Womens Asia Cup Final
ಕ್ರೀಡೆ27 mins ago

Womens Asia Cup Final: 8ನೇ ಪ್ರಶಸ್ತಿ ನಿರೀಕ್ಷೆಯಲ್ಲಿ ಭಾರತ; ನಾಳೆ ಫೈನಲ್​

dk shivakumar hd kumarswamy
ಪ್ರಮುಖ ಸುದ್ದಿ31 mins ago

DK Shivakumar: ನಮ್ಮ ಸರ್ವನಾಶವೇ ಕುಮಾರಸ್ವಾಮಿ ಅವರ ಆಲೋಚನೆ: ಡಿಸಿಎಂ ಡಿಕೆ ಶಿವಕುಮಾರ್

karnataka high court
ಪ್ರಮುಖ ಸುದ್ದಿ58 mins ago

Karnataka High Court: ʼಚಿಲ್ಲರೆ ಅಂಗಡಿಯವರಲ್ಲೂ ಯುಪಿಐ ಇದೆ, ನಿಮ್ಮಲ್ಲೇಕಿಲ್ಲ?ʼ ಬೆಸ್ಕಾಂಗೆ ಹೈಕೋರ್ಟ್‌ ತರಾಟೆ

Ghuspaithia Hindi movie release on August 9
ಕರ್ನಾಟಕ1 hour ago

Ghuspaithiya Hindi Movie: ರಮೇಶ್ ರೆಡ್ಡಿ ನಿರ್ಮಾಣದ ʼಘುಸ್ಪೈಥಿಯಾʼ ಹಿಂದಿ ಸಿನಿಮಾ ಆ. 9ರಂದು ತೆರೆಗೆ

2nd International Airport in Bengaluru Another round of discussion was held by Minister MB Patil
ಕರ್ನಾಟಕ1 hour ago

MB Patil: ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ; ಪರಿಣತರ ಜತೆ ಎಂ.ಬಿ.ಪಾಟೀಲ್‌ ಸಮಾಲೋಚನೆ

Kanwar Yatra
ದೇಶ1 hour ago

Kanwar Yatra: ಕನ್ವರ್ ಯಾತ್ರೆ ಮಾರ್ಗದಲ್ಲಿನ ಮಸೀದಿ ಕಾಣದಂತೆ ಪರದೆ; ವ್ಯಾಪಕ ವಿರೋಧದ ಬಳಿಕ ತೆರವು

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

pramod mutalik dog meat
ಪ್ರಮುಖ ಸುದ್ದಿ2 hours ago

Dog Meat: 15 ವರ್ಷದಿಂದ ಅಬ್ದುಲ್ ರಜಾಕ್ ನಾಯಿ ಮಾಂಸ ತಿನ್ನಿಸುತ್ತಿದ್ದಾರೆ: ಪ್ರಮೋದ್‌ ಮುತಾಲಿಕ್‌ ಶಾಕಿಂಗ್‌ ಹೇಳಿಕೆ

Shiva Rajkumar played the dupe for saikumar in film
ಸ್ಯಾಂಡಲ್ ವುಡ್2 hours ago

Shiva Rajkumar: ಸಾಯಿಕುಮಾರ್‌ಗೆ ಶಿವಣ್ಣ ಡ್ಯೂಪ್ ಆಗಿದ್ದ ಸಿನಿಮಾ ಯಾವುದು? ಆ ದೃಶ್ಯಕ್ಕೆ ಅಭಿಮಾನಿಗಳಿಂದ ಶಿಳ್ಳೆ, ಚಪ್ಪಾಳೆ!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

ramanagara news
ರಾಮನಗರ2 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ2 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ21 hours ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ22 hours ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ23 hours ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ24 hours ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

Actor Darshan
ಸಿನಿಮಾ2 days ago

Actor Darshan: ಆಧ್ಯಾತ್ಮದತ್ತ ವಾಲಿದ ದರ್ಶನ್‌; ಜೈಲಲ್ಲಿ ಹೇಗಿದೆ ಗೊತ್ತಾ ನಟನ ಬದುಕು

ಟ್ರೆಂಡಿಂಗ್‌