Site icon Vistara News

Horoscope Today | ಕಟಕ ರಾಶಿಯವರಿಗೆ ಇಂದು ಶುಭ ದಿನ; ನಿಮ್ಮ ಭವಿಷ್ಯ ಹೇಗಿದೆ?

Horoscope Today

Horoscope Today

ಇಂದಿನ ಪಂಚಾಂಗ (18-11-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.

ತಿಥಿ: ನವಮಿ 09:32 ವಾರ: ಶುಕ್ರವಾರ
ನಕ್ಷತ್ರ: ಹುಬ್ಬಾ 23:07 ಯೋಗ: ವೈಧೃತಿ 25:09
ಕರಣ: ಗರಜ 09:32
ಅಮೃತಕಾಲ: ಸಂಜೆ 04 ಗಂಟೆ 16 ನಿಮಿಷದಿಂದ 05 ಗಂಟೆ 59 ನಿಮಿಷದವರೆಗೆ.

ಸೂರ್ಯೋದಯ: 06: 19    ಸೂರ್ಯಾಸ್ತ: 05 : 50

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ಕಾರಣಾಂತರಗಳಿಂದ ಮೋಸ ಹೋಗುವ ಸಾಧ್ಯತೆ. ಹಣಕಾಸು ಪ್ರಗತಿ ಸಾಧಾರಣ. ಹೊಸದೊಂದು ವಸ್ತು ಖರೀದಿಯಿಂದ ಸಂತೋಷ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಯಶಸ್ಸು ದೊರೆಯಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವೃಷಭ: ಶಾಂತ ಮನಸ್ಥಿತಿ ಉತ್ಸಾಹ ತುಂಬಿ ಕಾರ್ಯದಲ್ಲಿ ಯಶಸ್ಸು ಸಿಗುವುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಪ್ರೀತಿ ಪಾತ್ರರಿಂದ ಕಿರಿಕಿರಿ ಸಾಧ್ಯತೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣಲಿದೆ. ದಿನದ ಕೊನೆಯಲ್ಲಿ ಯಾವುದಾದರೂ ಸುದ್ದಿ ದುಃಖ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

ಮಿಥುನ: ಜೀವನದಲ್ಲಿನ ಅಭದ್ರತೆ ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ಹೂಡಿಕೆಗೆ ಸಂಬಂಧಿಸಿದ ವ್ಯವಹಾರದಲ್ಲಿ ಪ್ರಗತಿ. ಕಚೇರಿ ಕೆಲಸಗಳು ನಿಧಾನವಾಗಿ ಸಾಗುವವು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಕಟಕ: ಬಿಡುವಿಲ್ಲದ ಕೆಲಸದಿಂದ ಆಯಾಸ. ಕುಟುಂಬದ ಸಂತಸ ಹೆಚ್ಚಿಸಲು ಪ್ರಯತ್ನ ಪಡುವಿರಿ. ಸಭೆ-ಸಮಾರಂಭಗಳಲ್ಲಿ ಭಾಗಿಯಾಗುವ ಸಾಧ್ಯತೆ. ಸ್ವಲ್ಪ ಖರ್ಚಿನ ದಿನ. ಬಹುದಿನಗಳ ಕನಸು ನನಸಾಗುವ ಸಮಯವೂ ಹೌದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಸಿಂಹ: ಆಪ್ತರು ನಿಮ್ಮ ತಾಳ್ಮೆ ಪರಿಕ್ಷಿಸುವರು. ಯಾವುದೇ ವಿಷಯಗಳಲ್ಲಿ ದೃಢ ನಿರ್ಧಾರ, ರಾಜಿಯಾಗದ ಗುಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ದಿನದ ಮಧ್ಯಭಾಗದಲ್ಲಿ ಸ್ವಲ್ಪ ಮಾನಸಿಕ ಒತ್ತಡ. ಉದ್ಯೋಗ ಆರೋಗ್ಯದಲ್ಲಿ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕನ್ಯಾ: ಆಪ್ತರೊಂದಿಗೆ ಅನೇಕ ವಿಚಾರಗಳನ್ನು ಹಂಚಿಕೊಳ್ಳುವಿರಿ. ಅತಿಯಾದ ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಹಣಕಾಸು ಪ್ರಗತಿ ಸಾಧಾರಣ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ದೊರೆಯಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ತುಲಾ: ಆರೋಗ್ಯ ಉತ್ತಮವಾಗಿರಲಿದೆ. ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ. ನಿಮ್ಮ ಹಿಂದೆ ಪಿತೂರಿ ಮಾಡುವ ಜನರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ವೃಶ್ಚಿಕ: ಆಹಾರದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಆಪ್ತರೊಂದಿಗಿನ ಮಾತುಕತೆಯಲ್ಲಿ ವ್ಯತಿರಿಕ್ತವಾದ ಪರಿಣಾಮದಿಂದಾಗಿ ಜಗಳವಾಗುವ ಸಾಧ್ಯತೆ, ಆದಷ್ಟು ಮಾತು ನಿಯಂತ್ರಣದಲ್ಲಿರಲಿ. ಇದರ ಮಧ್ಯೆ ಉದ್ಯೋಗದ ಸ್ಥಳದಲ್ಲಿ ಕೌಶಲ್ಯದ ಕೆಲಸ ನಿಮಗೆ ಯಶಸ್ಸು ತಂದು ಕೊಡುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಧನಸ್ಸು: ಅತಿಯಾದ ಒತ್ತಡದ ಕಾರ್ಯ ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ಆಪ್ತರೊಂದಿಗೆ ಪ್ರಯಾಣ ಮಾಡುವ ವಿಚಾರ ಬರಬಹುದು. ಉದ್ಯೋಗದಲ್ಲಿ ಮಿಶ್ರ ಫಲ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಮಕರ: ನಿಸ್ವಾರ್ಥ ಮನೋಭಾವದ ಕಾರ್ಯ ಸಿದ್ಧಿಯಾಗುವುದು .ಈ ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವ ಸಾಧ್ಯತೆಗಳು ಹೆಚ್ಚು. ಅನಗತ್ಯವಾಗಿ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅಗತ್ಯ. ಅಧಿಕ ರಕ್ತದೊತ್ತಡ ಹಾಗೂ ಸಕ್ಕರೆ ಕಾಯಿಲೆ ಇರುವವರು ಹೆಚ್ಚು ಆರೋಗ್ಯದ ಕಡೆಗೆ ಕಾಳಜಿ ವಹಿಸಿ. ವ್ಯಾಪಾರದಲ್ಲಿ ಪ್ರಗತಿ. ಹೊಸದಾಗಿ ಕಾರ್ಯ ಪ್ರಾರಂಭಿಸುವುದು ದಿನದ ಮಟ್ಟಿಗೆ ಬೇಡ. ಜೀವನದ ಭವಿಷ್ಯದ ಬಗೆಗೆ ಅತಿಯಾಗಿ ಚಿಂತಿಸಿ ಮನಸ್ಥಿತಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಮೀನ: ಕುಟುಂಬದ ಸದಸ್ಯರೊಂದಿಗೆ ಭಿನ್ನಾಭಿಪ್ರಾಯದಿಂದ ಮಾನಸಿಕ ಅಸಮತೋಲನ. ನಡೆದು ಹೋದ ಘಟನೆಗಳ ಬಗ್ಗೆ ಚಿಂತಿಸಿ ಫಲವಿಲ್ಲ. ಅತಿಥಿಗಳ ಆಗಮನ ಹರ್ಷ ತರುವುದು. ಉದ್ಯೋಗದಲ್ಲಿ ಸಾಧಾರಣ ಯಶಸ್ಸು. ಕೌಟಂಬಿಕ ವ್ಯಾಜ್ಯಗಳು ಹುಟ್ಟುವ ಸಾಧ್ಯತೆ. ಕೌಟಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | ಗುರು ಗ್ರಹ ನೀಡುವ ಭಾವಫಲಗಳ ಬಗ್ಗೆ ಮಾಹಿತಿ ಇದೆಯೇ?

Exit mobile version