Horoscope Today | ಕಟಕ ರಾಶಿಯವರಿಗೆ ಇಂದು ಶುಭ ಫಲ; ನಿಮ್ಮ ರಾಶಿ ಭವಿಷ್ಯ ಹೇಗಿದೆ? - Vistara News

ಪ್ರಮುಖ ಸುದ್ದಿ

Horoscope Today | ಕಟಕ ರಾಶಿಯವರಿಗೆ ಇಂದು ಶುಭ ಫಲ; ನಿಮ್ಮ ರಾಶಿ ಭವಿಷ್ಯ ಹೇಗಿದೆ?

ಶುಭಕೃತ ನಾಮ ಸಂವತ್ಸರ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷದ ಏಕಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (20-11-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.

ತಿಥಿ: ಏಕಾದಶಿ 10:40 ವಾರ: ಭಾನುವಾರ
ನಕ್ಷತ್ರ: ಹಸ್ತಾ 24:34 ಯೋಗ: ಪ್ರೀತಿ 23:01
ಕರಣ: ಬಾಲವ 10:40 ಇಂದಿನ ವಿಶೇಷ : ಉತ್ಪನ್ನ ಏಕಾದಶಿ, ಅಮೃತಸಿದ್ಧಿಯೋಗ
ಅಮೃತಕಾಲ: ಸಂಜೆ 06 ಗಂಟೆ 31 ನಿಮಿಷದಿಂದ 08 ಗಂಟೆ 08 ನಿಮಿಷದವರೆಗೆ.

ಸೂರ್ಯೋದಯ: 06: 20    ಸೂರ್ಯಾಸ್ತ: 05 : 50

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ನಿಮ್ಮ ಹಾಸ್ಯದ ಮನೋಭಾವ ಇತರರನ್ನು ಆಕರ್ಷಿಸುವುದು. ಹಣಕಾಸು ಪ್ರಗತಿ ಉತ್ತಮ. ಧಾರ್ಮಿಕ ಸ್ಥಳಗಳ ಭೇಟಿ, ಧಾರ್ಮಿಕ ವ್ಯಕ್ತಿಗಳ ಮಾರ್ಗದರ್ಶನ ದೊರೆಯುವ ಸಾಧ್ಯತೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದೆ ಆಗ ಬೇಕಾದ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಕಟಕ: ಹಣದ ಹರಿವು ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರುವವು. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಇರಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೇ ಮಾತನಾಡಿ, ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಖರ್ಚು ಹೆಚ್ಚಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಮಾನಸಿಕ ಕಿರಿಕಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

Horoscope Today

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸು ಪ್ರಗತಿ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಉತ್ತಮ ಆರೋಗ್ಯ, ಉದ್ಯೋಗದಲ್ಲಿ ಸಾಧಾರಣ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ನಿಮಗಿಂದು ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಬಿರುಕು ಮೂಡುವ ಸಾಧ್ಯತೆ. ಅನಗತ್ಯ ಖರ್ಚು ಹೆಚ್ಚು. ಆರೋಗ್ಯ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಅನಿರೀಕ್ಷಿತ ಪ್ರಯಾಣ. ಆತುರದಿಂದ ಆಡಿದ ಅತಿರೇಕದ ಮಾತುಗಳಿಂದ ಜಗಳ ಆಗಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ, ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ಆರೋಗ್ಯ ಉತ್ತಮವಾಗಿರಲಿದೆ. ಆತ್ಮವಿಶ್ವಾಸದಿಂದ ಮಾಡುವ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆಗಳಿವೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಶುಭ ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ:ಆಹಾರದ ಕ್ರಮ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು. ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | ಗುರು ಗ್ರಹ ನೀಡುವ ಭಾವಫಲಗಳ ಬಗ್ಗೆ ಮಾಹಿತಿ ಇದೆಯೇ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

LPL 2024: ಐಪಿಎಲ್​​ನಲ್ಲಿ ವೀರೋಚಿತ ಪ್ರದರ್ಶನ ನೀಡಿದ ನಂತರ ಮಥೀಶಾ ಪಥಿರಾನಾ ಟಿ 20 ಕ್ರಿಕೆಟ್​ನಲ್ಲಿ ಅತ್ಯಂತ ಜನಪ್ರಿಯ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಅವರು 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​​ ಪರ ಸಹಿ ಹಾಕಿದರು ಮತ್ತು ಅಂದಿನಿಂದ ಆ ತಂಡದಲ್ಲೇ ಇದ್ದಾರೆ.

VISTARANEWS.COM


on

LPL 2024
Koo

ಕೊಲಂಬೊ: ಶ್ರೀಲಂಕಾದ ಸ್ಟಾರ್ ಆಟಗಾರ ಮಥೀಶಾ ಪಥಿರಾನಾ ಅವರು ಲಂಕಾ ಪ್ರೀಮಿಯರ್ ಲೀಗ್ (LPL 2024) ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಕೊಲಂಬೊ ಮೂಲದ ತಂಡವು ಬಲಗೈ ವೇಗಿಯನ್ನು 120,000 ಯುಎಸ್ ಡಾಲರ್​ (1 ಕೋಟಿ ರೂಪಾಯಿ) ಒಪ್ಪಂದ ಮಾಡಿಕೊಂಡಿದೆ. ಅವರು ಹರಾಜು ಪಟ್ಟಿಯ ಅತಿದೊಡ್ಡ ಹೆಸರುಗಳಲ್ಲಿ ಒಬ್ಬರಾಗಿದ್ದರು. ಕೊಲಂಬೊ ಸ್ಟ್ರೈಕರ್ಸ್ ಅವರನ್ನು ರೈಟ್ ಟು ಮ್ಯಾಚ್ ಕಾರ್ಡ್ ಮೂಲಕ ಮರು ಸಹಿ ಮಾಡುವ ಮೊದಲು ಹಲವಾರು ತಂಡಗಳು ಅವರನ್ನು ತೆಕ್ಕೆಗೆ ತೆಗೆದುಕೊಳ್ಳುವುದಕ್ಕೆ ಅತ್ಯುತ್ತಮ ಪ್ರಯತ್ನ ಮಾಡಿದವು. ಇದಕ್ಕೆಲ್ಲ ಕಾರಣ ಅವರು ಐಪಿಎಲ್​ನ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಪರ ಮಿಂಚಿದ್ದು.

ಮಥೀಶಾ ಪತಿರಾನಾ ಅವರ ಮೂಲ ಬೆಲೆ 50,000 ಯುಎಸ್ ಡಾಲರ್ ಮತ್ತು ಡಂಬುಲ್ಲಾ ಥಂಡರ್ 70,000 ಯುಎಸ್ ಡಾಲರ್ ಗೆ ಬಿಡ್ಡಿಂಗ್ ಪ್ರಾರಂಭಿಸಿತು. ಗಾಲೆ ಮಾರ್ವೆಲ್ಸ್ ಶೀಘ್ರದಲ್ಲೇ ರೇಸ್​​ಗೆ ಸೇರಿಕೊಂಡಿತು ಮತ್ತು ವೇಗಿಯ ಬೆಲೆಯನ್ನು ಯುಎಸ್ 100,000 ಡಾಲರ್​ಗೆ ಕೊಂಡೊಯ್ಯುವ ಮೂಲಕ ಎಲ್​ಪಿಎಲ್​ ದಾಖಲೆ ಮುರಿದರು. ಕೊಲಂಬೊ ಸ್ಟ್ರೈಕರ್ಸ್ ಪಂದ್ಯದ ಹಕ್ಕನ್ನು ಚಲಾಯಿಸಿದರು. ಎಲ್ಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎಂಬ ದಾಖಲೆಯನ್ನು ಈ ಹಿಂದೆ ಶ್ರೀಲಂಕಾದ ವೇಗಿ ದಿಲ್ಶಾನ್ ಮಧುಶಂಕಾ ಹೊಂದಿದ್ದರು. ಎಡಗೈ ವೇಗಿಯನ್ನು ಕಳೆದ ಹರಾಜಿನಲ್ಲಿ ಜಾಫ್ನಾ ಕಿಂಗ್ಸ್ 92,000 ಯುಎಸ್ ಡಾಲರ್​ಗೆ ಸೇಲ್​ ಆಗಿದ್ದರು.

ಐಪಿಎಲ್​ನಲ್ಲಿ ಮಿಂಚಿದ ಮಥೀಶಾ ಪತಿರಾನಾ

ಐಪಿಎಲ್​​ನಲ್ಲಿ ವೀರೋಚಿತ ಪ್ರದರ್ಶನ ನೀಡಿದ ನಂತರ ಮಥೀಶಾ ಪಥಿರಾನಾ ಟಿ 20 ಕ್ರಿಕೆಟ್​ನಲ್ಲಿ ಅತ್ಯಂತ ಜನಪ್ರಿಯ ಆಟಗಾರರಲ್ಲಿ ಒಬ್ಬರಾಗಿದ್ದಾರೆ. ಅವರು 2022 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್​​ ಪರ ಸಹಿ ಹಾಕಿದರು ಮತ್ತು ಅಂದಿನಿಂದ ಆ ತಂಡದಲ್ಲೇ ಇದ್ದಾರೆ. 2022 ರಲ್ಲಿ, ಅವರು ಕೇವಲ ಎರಡು ಪಂದ್ಯಗಳನ್ನು ಆಡಿದರು ಮತ್ತು ಅಂತಿಮವಾಗಿ ಕಳೆದ ವರ್ಷ ಐಪಿಎಲ್​​ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು.

ಇದನ್ನೂ ಓದಿ: IPL 2024 : ಕೆಕೆಆರ್​ 4ನೇ ಬಾರಿ ಐಪಿಎಲ್​​ನ​ ಫೈನಲ್​ಗೆ, ಎಸ್ಆರ್​ಎಚ್​ಗೆ ಇನ್ನೊಂದು ಅವಕಾಶ

12 ಪಂದ್ಯಗಳನ್ನಾಡಿರುವ ಮಥೀಶಾ ಪಥಿರಾನಾ 19 ವಿಕೆಟ್ ಕಬಳಿಸಿ ಸಿಎಸ್​ಕೆ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅವರು ತಮ್ಮ ವಿಕೆಟ್ ತೆಗೆದುಕೊಳ್ಳುವ ಸಾಮರ್ಥ್ಯದಿಂದ ಮಾತ್ರವಲ್ಲದೆ ಎಕನಾಮಿಕಲ್​ ಸ್ಪೆಲ್​ಗಳನ್ನು ಎಸೆಯುವ ಸಾಮರ್ಥ್ಯದಿಂದ ಎಲ್ಲರನ್ನೂ ಆಕರ್ಷಿಸಿದ್ದರು. 21 ವರ್ಷದ ಆಟಗಾರ ಪ್ರಸಕ್ತ ಋತುವಿನಲ್ಲಿಯೂ ಉತ್ತಮ ಫಾರ್ಮ್​ನಲ್ಲಿದ್ದರು. ಆದರೆ, ಅವರಿಗೆ ಗಾಯದ ಸಮಸ್ಯೆ ಬಾಧಿಸಿತ್ತು.

ಸ್ನಾಯುಸೆಳೆತದ ಗಾಯದಿಂದಾಗಿ ಹೊರಗುಳಿಯುವ ಮೊದಲು ಅವರು ಐಪಿಎಲ್ 2024 ರಲ್ಲಿ ಕೇವಲ ಆರು ಪಂದ್ಯಗಳನ್ನು ಆಡಲು ಸಾಧ್ಯವಾಯಿತು. ಆ 6 ಪಂದ್ಯಗಳಲ್ಲಿ, ಪಥಿರಾನಾ 8 ಕ್ಕಿಂತ ಕಡಿಮೆ ಎಕಾನಮಿ ರೇಟ್ ಕಾಯ್ದುಕೊಂಡು 13 ವಿಕೆಟ್​​ಗಳನ್ನು ಪಡೆದರು. ಮುಂಬರುವ ಐಪಿಎಲ್ ಮೆಗಾ ಹರಾಜಿಗೆ ಮುಂಚಿತವಾಗಿ ಅವರನ್ನು ಸಿಎಸ್​ಕೆ ಉಳಿಸಿಕೊಳ್ಳುವ ಸಾಧ್ಯತೆಯಿದೆ.

Continue Reading

ಸಂಪಾದಕೀಯ

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

ಎಲ್ಲಿಯವರೆಗೆ ದುರ್ಬಲರು ನ್ಯಾಯ ಪಡೆಯದೆ, ಸಬಲರು ನ್ಯಾಯಾಂಗದ ಎಲ್ಲ ಲಾಭವನ್ನೂ ಪಡೆಯುತ್ತಾರೋ ಅಲ್ಲಿಯವರೆಗೂ ನ್ಯಾಯಾಂಗಕ್ಕೂ ಪೊಲೀಸ್‌ ವ್ಯವಸ್ಥೆಗೂ ಅಂಟಿದ ಸಬಲ ಪಕ್ಷಪಾತಿ ಎಂಬ ಕಳಂಕ ತಪ್ಪುವುದಿಲ್ಲ. ಅಪರಾಧದ ಗಂಭೀರತೆ ಪರಿಗಣಿಸಿ ಶೀಘ್ರ ಶಿಕ್ಷೆ, ತ್ವರಿತ ನ್ಯಾಯದಾನ ಸಾಧ್ಯವಾಗಬೇಕು.

VISTARANEWS.COM


on

Porsche
Koo

ಪುಣೆಯಲ್ಲಿ ಒಬ್ಬಾತ ಅಪ್ರಾಪ್ತ ವಯಸ್ಕ ಸ್ಪೋರ್ಟ್ಸ್‌ ಕಾರು ಅತಿ ವೇಗದಲ್ಲಿ ಯದ್ವಾತದ್ವಾ ಓಡಿಸಿ ಇಬ್ಬರ ಸಾವಿನ ಕಾರಣನಾಗಿದ್ದಾನೆ. ವಿಶೇಷ ಎಂದರೆ, ಇವನಿಗೆ ಬಂಧನವಾದ 15 ಗಂಟೆಯೊಳಗೇ ಜಾಮೀನು ದೊರೆತಿದೆ. 17 ವರ್ಷದ ಈತ ಶನಿವಾರ ಪುಣೆಯಲ್ಲಿ ಚಲಾಯಿಸುತ್ತಿದ್ದ ಪೋರ್ಷೆ ಕಾರು ಕೋರೆಗಾಂವ್ ಪಾರ್ಕ್‌ ಸಮೀಪ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪುರುಷ ಮತ್ತು ಮಹಿಳೆ ಮೃತಪಟ್ಟಿದ್ದರು. ಇವರಿಬ್ಬರೂ ಐಟಿ ಎಂಜಿನಿಯರ್ ಗಳಾಗಿದ್ದರು. ಈ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಆತನಿಗೆ ಜಾಮೀನು ನೀಡಿದ್ದಲ್ಲದೆ, ಕೆಲವು ಸರಳ ಶಿಕ್ಷೆಗಳನ್ನು ಆತನಿಗೆ ವಿಧಿಸಿದೆ. ಯೆರವಾಡಾದ ಸಂಚಾರ ಪೊಲೀಸರೊಂದಿಗೆ 15 ದಿನಗಳ ಕಾಲ ಕೆಲಸ ಮಾಡಬೇಕು, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಬೇಕು, ಕುಡಿತದ ಅಭ್ಯಾಸಕ್ಕೆ ಚಿಕಿತ್ಸೆ ಪಡೆಯಬೇಕು ಮತ್ತು ಮನೋವೈದ್ಯಕೀಯ ಮೌಲ್ಯಮಾಪನ ಹಾಗೂ ಚಿಕಿತ್ಸೆಗೆ ಒಳಗಾಗಬೇಕು ಎಂಬುದು ಷರತ್ತು. ಈತ ಪುಣೆಯ ಪ್ರಮುಖ ರಿಯಲ್ ಎಸ್ಟೇಟ್ ಉದ್ಯಮಿಯ ಮಗ ಹಾಗೂ ಪ್ರಭಾವಿ. ಪಬ್‌ನಲ್ಲಿ ಪಾರ್ಟಿ ಮಾಡಿ ಪಾನಮತ್ತನಾಗಿ ಹಿಂದಿರುಗುತ್ತಿದ್ದ. ಸಮಾಧಾನದ ವಿಷಯ ಎಂದರೆ ಪುಣೆ ಪೊಲೀಸರು ಜಾಮೀನು ಆದೇಶದ ವಿರುದ್ಧ ಮೇಲಿನ ನ್ಯಾಯಾಲಯದ ಮೊರೆ ಹೋಗಲಿದ್ದಾರೆ. ಈ ಪ್ರಕರಣದ ಬಗ್ಗೆ ಜನಾಕ್ರೋಶ ಭುಗಿಲೆದ್ದ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಬಾಲಕನ ತಂದೆ ಮತ್ತು ಆತನಿಗೆ ಮದ್ಯ ಪೂರೈಸಿದ ಬಾರ್ ಮಾಲೀಕನನ್ನು ಬಂಧಿಸಿದ್ದಾರೆ. ಇವರು ಕೂಡ ಬೇಗನೆ ಜಾಮೀನಿನ ಮೇಲೆ ಬಿಡುಗಡೆಯಾದರೆ ಆಶ್ಚರ್ಯವಿಲ್ಲ.

ಇದು ನಮ್ಮ ಕಾನೂನು ಹಾಗೂ ನ್ಯಾಯಾಂಗ ವ್ಯವಸ್ಥೆಯ ಛಿದ್ರಗಳು ಎಲ್ಲಿವೆ ಎಂಬುದನ್ನು ಬೆಟ್ಟು ಮಾಡಿ ತೋರಿಸುವಂತಿದೆ. ಕರ್ನಾಟಕದಲ್ಲಿಯೂ ಹೀಗೇ ಆಗಿದೆ; ಲೈಂಗಿಕ ದೌರ್ಜನ್ಯ ಹಾಗೂ ಕಿಡ್‌ನ್ಯಾಪ್‌ ಪ್ರಕರಣದಲ್ಲಿ ಬಂಧಿತರಾದ ಮಾಜಿ ಸಚಿವರು ಆರು ದಿನಗಳಲ್ಲಿ ಜಾಮೀನು ಪಡೆಯುತ್ತಾರೆ. ವಿಶೇಷ ತನಿಖಾ ದಳದ ವಕೀಲರು ಎಷ್ಟು ಪ್ರಯತ್ನಿಸಿದರೂ ಜಾಮೀನು ತಪ್ಪಿಸಲು ಆಗುವುದಿಲ್ಲ. ಪ್ರಕರಣದ ಪ್ರಮುಖ ಆರೋಪಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದಾರೆ. ಆತನನ್ನು ಕರೆದು ತರುವಲ್ಲಿ ಇಲ್ಲಿನ ಕಾನೂನು ಹಾಗೂ ನ್ಯಾಯಾಂಗ ವ್ಯವಸ್ಥೆಗಳು ಸದ್ಯಕ್ಕೆ ಅಸಹಾಯಕವಾಗಿವೆ. ಇದು ಈ ಪ್ರಕರಣದ ಒಂದು ಮುಖ.

ಪ್ರಭಾವಿಗಳು ಏನು ಮಾಡಿದರೂ ಕಾನೂನಿನ ಕೈಗಳಿಂದ ತಪ್ಪಿಸಿಕೊಳ್ಳುತ್ತಾರೆ ಎಂಬ ಪರಿಸ್ಥಿತಿ ಸೃಷ್ಟಿಯಾಗಿರುವಂತಿದೆ. ನಗರಗಳಲ್ಲಿ ಇತ್ತೀಚೆಗೆ ನಡೆಯುವ ಅಪರಾಧ ಸ್ವರೂಪಗಳನ್ನು ನೋಡುವುದಾದರೆ, ಕುಬೇರರು ಬಡವರ ಮೇಲೆ ಕೈ ಮಾಡುವುದು, ಹಲ್ಲೆ ನಡೆಸಿಯೂ ಪಾರಾಗುವುದು ಸರ್ವೇ ಸಾಮಾನ್ಯ ಎಂಬಂತಾಗಿದೆ. ಯಮಕನಮರಡಿಯಲ್ಲಿ ಇತ್ತೀಚೆಗೆ ನಡೆದ ಒಂದು ಅಪರಾಧ ನೋಡಿದರೆ, ಸಾಲ ಪಾವತಿ ಮಾಡಲಿಲ್ಲ ಎಂದು ರೈತನ ಪತ್ನಿ- ಮಗನನ್ನು ಒಬ್ಬಾಕೆ ಗೃಹಬಂಧನದಲ್ಲಿಟ್ಟಿದ್ದಾಳೆ. ಇದರಿಂದ ನೊಂದ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಿಗ ಮಹಿಳೆಯ ಮೇಲೆ ಪೊಲೀಸ್‌ ಕ್ರಮ ಕೈಗೊಂಡಂತಿಲ್ಲ. ಶ್ರೀಮಂತರು ಸಾಕಿದ ನಾಯಿಗಳು ಬೀದಿಯಲ್ಲಿ ಬಡವರ ಮಕ್ಕಳನ್ನು ಕಚ್ಚಿ ತಿನ್ನುತ್ತಿವೆ. ನಿರ್ಲಕ್ಷ್ಯದಿಂದ ಮಕ್ಕಳ ಜೀವಕ್ಕೆ ಎರವಾದವರಿಗೂ ಶಿಕ್ಷೆಯಾದ ಹಾಗಿಲ್ಲ.

ಇನ್ನು ಟ್ರಾಫಿಕ್‌ ಅಪರಾಧಗಳ ಕತೆಯೂ ಇದೇ ಮಾದರಿಯಲ್ಲಿದೆ. ಹಿಟ್‌ ಆಂಡ್‌ ರನ್‌ಗಳು ಹೆಚ್ಚುತ್ತಿವೆ. ದೊಡ್ಡ ವಾಹನಗಳನ್ನು ಯದ್ವಾತದ್ವಾ ಓಡಿಸಿ, ದ್ವಿಚಕ್ರ ವಾಹನ ಸವಾರರ ಜೀವ ತೆಗೆಯುವವರ ಸಂಖ್ಯೆ ಹೆಚ್ಚಿದೆ. ರೋಡ್‌ ರೇಜ್‌ ಪ್ರಕರಣಗಳಲ್ಲಿ ಸಬಲರು ದುರ್ಬಲರ ಮೇಲೆ ವಿನಾಕಾರಣ ಹಲ್ಲೆ ಮಾಡುತ್ತಿದ್ದಾರೆ. ಇವರ್ಯಾರಿಗೂ ಶೀಘ್ರವಾಗಿ ಶಿಕ್ಷೆಯಾಗುತ್ತಿಲ್ಲ. ಸುಲಭವಾಗಿ ಜಾಮೀನೂ ದೊರೆಯುತ್ತಿದೆ. ದುರ್ಬಲ ಸೆಕ್ಷನ್‌ಗಳು, ದುರ್ಬಲ ಸಾಕ್ಷಿಗಳು, ವಿಲಂಬಿತ ನ್ಯಾಯಾಂಗ ಪ್ರಕ್ರಿಯೆ ಇವುಗಳಿಂದಾಗಿ ಸಂತ್ರಸ್ತರು ಮತ್ತಷ್ಟು ಸಂತ್ರಸ್ತರೇ ಆಗುತ್ತಿದ್ದಾರೆ. ನ್ಯಾಯದಾನ ವಿಳಂಬವಾದಷ್ಟೂ ಸಾಕ್ಷಿಗಳು, ಕಕ್ಷಿದಾರರು ಕೇಸ್‌ನಲ್ಲಿ ಆಸಕ್ತಿ ಕಳೆದುಕೊಳ್ಳುತ್ತಾರೆ. ಕೆಲವು ದಾಖಲೆ ಪತ್ರಗಳು ನಾಶವಾಗಬಹುದು, ಸಾಕ್ಷಿಗಳು ಇಲ್ಲವಾಗಬಹುದು. ಕಾಲದ ಹೊಡೆತಕ್ಕೆ ಸಿಲುಕಿ, ಪ್ರತಿ ತಿಂಗಳೂ ಕೋರ್ಟಿಗೆ ಅಲೆದು ಹೈರಾಣಾಗುವ ಪರಿಸ್ಥಿತಿಯಿಂದ ರೋಸಿಹೋಗಿ ರಾಜಿ ಮಾಡಿಕೊಂಡ ಎಷ್ಟೋ ಪ್ರಕರಣಗಳು ಇವೆ. ಇದು ನ್ಯಾಯ ಬೇಡವೆಂದಲ್ಲ, ಶಿಕ್ಷೆಗಿಂತಲೂ ನಿಷ್ಕರುಣಿಯಾಗಿರುವ ಕಟಕಟೆಯ ಸಹವಾಸ ಬೇಡವೆಂದು.

ಎಲ್ಲಿಯವರೆಗೆ ದುರ್ಬಲರು ನ್ಯಾಯ ಪಡೆಯದೆ, ಸಬಲರು ನ್ಯಾಯಾಂಗದ ಎಲ್ಲ ಲಾಭವನ್ನೂ ಪಡೆಯುತ್ತಾರೋ ಅಲ್ಲಿಯವರೆಗೂ ನ್ಯಾಯಾಂಗಕ್ಕೂ ಪೊಲೀಸ್‌ ವ್ಯವಸ್ಥೆಗೂ ಅಂಟಿದ ಸಬಲ ಪಕ್ಷಪಾತಿ ಎಂಬ ಕಳಂಕ ತಪ್ಪುವುದಿಲ್ಲ. ಅಪರಾಧದ ಗಂಭೀರತೆ ಪರಿಗಣಿಸಿ ಶೀಘ್ರ ಶಿಕ್ಷೆ, ತ್ವರಿತ ನ್ಯಾಯದಾನ ಸಾಧ್ಯವಾಗಬೇಕು.

ಇದನ್ನೂ ಓದಿ: Porsche Crash: 2 ಕಾರು, 4 ನಗರ, 1 ಸಿಮ್‌ ಕಾರ್ಡ್;‌ ಮಗ ಕಾರು ಗುದ್ದಿದ ಬಳಿಕ ಅಪ್ಪನ ಪ್ಲಾನ್‌ ಏನು? ಇಲ್ಲಿದೆ ಭೀಕರ ಮಾಹಿತಿ

Continue Reading

ಕ್ರೀಡೆ

IPL 2024 : ಕೆಕೆಆರ್​ 4ನೇ ಬಾರಿ ಐಪಿಎಲ್​​ನ​ ಫೈನಲ್​ಗೆ, ಎಸ್ಆರ್​ಎಚ್​ಗೆ ಇನ್ನೊಂದು ಅವಕಾಶ

IPL 2024: ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲ ಬ್ಯಾಟ್​ ಮಾಡಲು ನಿರ್ಧರಿಸಿತು. ಆದರೆ, ಕೆಕೆಆರ್ ತಂಡದ ಪ್ರಚಂಡ ಬೌಲಿಂಗ್ ಮುಂದೆ ಎಸ್​ಆರ್​​ಎಚ್ ಬ್ಯಾಟರ್​ಗಳು ತಲೆ ಬಾಗಿ 19.3 ಓವರ್​ಗಳಲ್ಲಿ 159 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಕೆಕೆಆರ್​ ತಂಡ ಕೇವಲ 13.4 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 162 ರನ್ ಬಾರಿಸಿ ಗೆಲುವು ಸಾಧಿಸಿತು.

VISTARANEWS.COM


on

IPL 2024
Koo

ಅಹಮದಾಬಾದ್​​: ಮಿಚೆಲ್​ ಸ್ಟಾರ್ಕ್​ (4 ವಿಕೆಟ್​ 34ರನ್​​ ) ಅವರ ಮಾರಕ ಬೌಲಿಂಗ್ ಹಾಗೂ ಶ್ರೇಯಸ್​ ಅಯ್ಯರ್​ (58 ರನ್​ 24 ಎಸೆತ), ವೆಂಕಟೇಶ್​ ಅಯ್ಯರ್ (51 ರನ್​ 28 ಎಸೆತ) ಜೋಡಿಯ ಅರ್ಧ ಶತಕಗಳ ನೆರವು ಪಡೆದ ಕೋಲ್ಕೊತಾ ನೈಟ್​ ರೈಡರ್ಸ್ ತಂಡ ಐಪಿಎಲ್​ 17ನೇ ಆವೃತ್ತಿಯ (IPL 2024) ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್​ ರೈಸರ್ಸ್​ ಹೈದರಾಬಾದ್ ತಂಡದ ವಿರುದ್ಧ ಅಮೋಘ 8 ವಿಕೆಟ್​ಗಳ ಗೆಲುವು ಸಾಧಿಸಿದೆ. ಇದರೊಂದಿಗೆ ಕೋಲ್ಕೊತಾ ಮೂಲದ ತಂಡ ಐಪಿಎಲ್​​ನಲ್ಲಿ ನಾಲ್ಕನೇ ಬಾರಿ ಫೈನಲ್​ಗೆ ಪ್ರವೇಶ ಮಾಡಿದೆ. ಈ ಹಿಂದೆ ಮೂರು ಬಾರಿ ಪ್ರವೇಶಿಸಿ ಎರಡು ಬಾರಿ ಟ್ರೋಫಿ ಗೆದ್ದಿತ್ತು. ಒಂದು ಬಾರಿ ವೈಫಲ್ಯ ಕಂಡಿತ್ತು.

ಈ ಪಂದ್ಯದಲ್ಲಿ ಸೋಲು ಕಂಡಿರುವ ಎಸ್​ಆರ್​ಎಚ್ ತಂಡಕ್ಕೆ ಎಲಿಮಿನೇಟರ್​ ಪಂದ್ಯದ ವಿಜೇತರ ವಿರುದ್ಧ ಮತ್ತೊಂದು ಪಂದ್ಯವಾಡುವ ಅವಕಾಶವಿದೆ. ಅಲ್ಲಿ ಗೆದ್ದರೆ ಫೈನಲ್​ಗೆ ಫೈನಲ್​ಗೆ ಪ್ರವೇಶ ಮಾಡಬಹುದು. ಆದಾಗ್ಯೂ ಈ ಪಂದ್ಯವು ಸಂಪೂರ್ಣವಾಗಿ ಏಕಮುಖವಾಗಿತ್ತು. ಎಸ್​ಆರ್​ಎಚ್​​ ಈ ಪಂದ್ಯದಲ್ಲಿ ಗೆದ್ದಿರುವುದು ಕೇವಲ ಟಾಸ್​ ಮಾತ್ರ. ಉಳಿದೆಲ್ಲ ಕ್ಷಣಗಳು ಕೆಕೆಆರ್​ ಪರವಾಗಿದ್ದವು.

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಎಸ್​ಆರ್​ಎಚ್​ ತಂಡ ಮೊದಲ ಬ್ಯಾಟ್​ ಮಾಡಲು ನಿರ್ಧರಿಸಿತು. ಆದರೆ, ಕೆಕೆಆರ್ ತಂಡದ ಪ್ರಚಂಡ ಬೌಲಿಂಗ್ ಮುಂದೆ ಎಸ್​ಆರ್​​ಎಚ್ ಬ್ಯಾಟರ್​ಗಳು ತಲೆ ಬಾಗಿ 19.3 ಓವರ್​ಗಳಲ್ಲಿ 159 ರನ್​ಗಳಿಗೆ ಆಲ್​ಔಟ್​ ಆಯಿತು. ಪ್ರತಿಯಾಗಿ ಬ್ಯಾಟ್​ ಮಾಡಿದ ಕೆಕೆಆರ್​ ತಂಡ ಕೇವಲ 13.4 ಓವರ್​ಗಳಲ್ಲಿ 2 ವಿಕೆಟ್​ ನಷ್ಟಕ್ಕೆ 162 ರನ್ ಬಾರಿಸಿ ಗೆಲುವು ಸಾಧಿಸಿತು.

ಇದನ್ನೂ ಓದಿ: IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

ಭರ್ಜರಿ ಬ್ಯಾಟಿಂಗ್​

ಸ್ಪರ್ಧಾತ್ಮಕ ಗುರಿಯನ್ನು ಬೆನ್ನಟ್ಟಲು ಹೊರಟ ಕೆಕೆಆರ್​ಗೆ ಉತ್ತಮ ಆರಂಭ ದೊರಕಿತು. ರಹ್ಮನುಲ್ಲಾ ಗುರ್ಬಾಜ್​ 23 ರನ್ ಬಾರಿಸಿದರೆ ಸುನೀಲ್​ ನರೈನ್​ 21 ರನ್​ ಬಾರಿಸಿದರು. ಹೀಗಾಗಿ ಮೊದಲ ವಿಕೆಟ್​​ಗೆ 41 ರನ್ ದೊರಕಿತು. ಬಳಿಕ ಬಂದ ವೆಂಕಟೇಶ್ ಅಯ್ಯರ್​ ಎಸ್​ಆರ್​ಎಚ್​ ಬೌಲರ್​ಗಳಿಗೆ ಚೇತರಿಸಿಕೊಳ್ಳಲು ಅವಕಾಶ ಕೊಡಲಿಲ್ಲ. 5 ಫೋರ್​ ಮತ್ತು 4 ಸಿಕ್ಸರ್ ಸಮೇತ ಅಜೇಯ 51 ರನ್ ಬಾರಿಸಿದರು. ಬಳಿಕ ಬಂದ ನಾಯಕ ಶ್ರೇಯಸ್​ ಅಯ್ಯರ್​ 5 ಫೋರ್ 4 ಸಿಕ್ಸರ್ ಸಮೇತ 5 ಅಜೇಯ 58 ರನ್ ಬಾರಿಸಿ ಪಂದ್ಯ ಬೇಗ ಮುಗಿಯುವಂತೆ ನೋಡಿಕೊಂಡರು.

ಬ್ಯಾಟಿಂಗ್ ವೈಫಲ್ಯ

ಮೊದಲು ಬ್ಯಾಟ್ ಮಾಡಲು ಮುಂದಾದ ಎಸ್​ಆರ್​ಎಚ್ ತಂಡಕ್ಕೆ ಆಸೀಸ್​ ವೇಗಿ ಸ್ಟಾರ್ಕ್​ ಆಘಾತ ಕೊಟ್ಟರು. ಹೊಡೆಬಡಿಯ ಬ್ಯಾಟರ್ ಟ್ರಾವಿಸ್​ ಹೆಡ್​ ಶೂನ್ಯಕ್ಕೆ ಪೆವಿಲಿಯನ್​ಗೆ ಸಾಗುವಂತೆ ಅವರು ಮಾಡಿದರು. ಅಭಿಷೇಕ್ ಶರ್ಮಾ 3 ವಿಕೆಟ್​ಗೆ ಔಟಾಗುವುದರೊಂದಿಗೆ ತಂಡದ ವಿಕೆಟ್​ ಪತನದ ಕತೆ ಶುರುವಾಯಿತು. ನಿತಿಶ್ ಕುಮಾರ್​ 9 ರನ್​ಗೆ ಔಟಾದರೆ ಶಹಬಾಜ್​ ಅಹಮದ್​ ಡಕ್​ಔಟ್ ಆದರು. ರಾಹುಲ್ ತ್ರಿಪಾಠಿ (55 ರನ್​) ಅರ್ಧ ಶತಕ ಬಾರಿಸಿ ತಂಡಕ್ಕೆ ನೆರವಾಗಲು ಯತ್ನಿಸಿದರೂ ಅವರು ಪ್ರಯತ್ನ ಕೈಗೂಡಲಿಲ್ಲ. ಕ್ಲಾಸೆನ್​ 32 ರನ್ ಬಾರಿಸಿ ಔಟಾದರು. ಕೊನೆಯಲ್ಲಿ ನಾಯಕ ಪ್ಯಾಟ್ ಕಮಿನ್ಸ್​ 30 ರನ್​ ಬಾರಿಸುವ ಮೂಲಕ ಸ್ಪರ್ಧಾತ್ಮಕ ಮೊತ್ತ ಗಳಿಸಲು ನೆರವಾದರು. ಆದಾಗ್ಯೂ ದೈತ್ಯ ಕೆಕೆಆರ್​ಗೆ ಆ ರನ್ ಸವಾಲಾಗಲೇ ಇಲ್ಲ.

Continue Reading

ದೇಶ

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

Robert Vadra: ಸೋನಿಯಾ ಗಾಂಧಿ ಅಳಿಯ ರಾಬರ್ಟ್‌ ವಾದ್ರಾ ಅವರು ಅಮೇಥಿ ಅಥವಾ ರಾಯ್‌ಬರೇಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ, ಅವರೀಗ ರಾಜಕೀಯ ಪ್ರವೇಶಿಸುವ ಕುರಿತು ಸ್ಪಷ್ಟನೆ ನೀಡಿದ್ದಾರೆ. “ನಾನು ರಾಜಕೀಯಕ್ಕೆ ಬರುವುದಾದರೆ, ನನ್ನ ಹೆಸರು ಬಳಸಿಕೊಂಡು ಬರುತ್ತೇನೆ. ಗಾಂಧಿ ಕುಟುಂಬದ ಹೆಸರಿನಲ್ಲಿ ರಾಜಕೀಯ ಮಾಡಲ್ಲ” ಎಂದಿದ್ದಾರೆ.

VISTARANEWS.COM


on

Robert Vadra
Koo

ನವದೆಹಲಿ: ದೇಶದ ಕುತೂಹಲ ಕೆರಳಿಸಿರುವ ಲೋಕಸಭೆ ಚುನಾವಣೆಯು (Lok Sabha Election 2024) ಕೊನೆಯ ಹಂತಕ್ಕೆ ಬಂದಿದೆ. ಈಗಾಗಲೇ ಐದು ಹಂತದ ಮತದಾನ ಮುಕ್ತಾಯಗೊಂಡಿದ್ದು, ಇನ್ನೂ ಎರಡು ಹಂತದ ಮತದಾನ ಬಾಕಿ ಇದೆ. ಜೂನ್‌ 1ರಂದು ಚುನಾವಣೆ ಮುಗಿಯಲಿದ್ದು, ಜೂನ್‌ 4ರಂದು ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆಯೇ, ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ (Priyanka Vadra) ಅವರ ಪತಿ ರಾಬರ್ಟ್‌ ವಾದ್ರಾ (Robert Vadra) ಅವರು ರಾಜಕೀಯ ಪ್ರವೇಶಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲ, “ನನ್ನ ಹೆಸರು, ನನ್ನ ಕೆಲಸದಿಂದ ರಾಜಕೀಯ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ (Gandhi Family) ಹೆಸರು ಬಳಸಿ ರಾಜಕೀಯಕ್ಕೆ ಬರಲ್ಲ” ಎಂದಿದ್ದಾರೆ.

ಎಎನ್‌ಐ ಜತೆ ಮಾತನಾಡುವಾಗ, ನೀವು ರಾಜಕೀಯ ಪ್ರವೇಶಿಸಲು ಬಯಸುತ್ತೀರಾ ಎಂಬ ಪ್ರಶ್ನೆಗೆ ಅವರು ಉತ್ತರಿಸಿದರು. “ನಾನು ದೇಶದ ಸೇವೆ ಮಾಡುತ್ತಿದ್ದೇನೆ. ನಾನು ರಾಜಕೀಯ ಪ್ರವೇಶಿಸುವುದಿದ್ದರೆ, ನನ್ನ ಸಮಾಜ ಸೇವೆ, ನನ್ನ ಕೆಲಸ ಹಾಗೂ ನನ್ನ ಹೆಸರು ಬಳಸಿ ಪ್ರವೇಶಿಸುತ್ತೇನೆ. ಗಾಂಧಿ ಕುಟುಂಬದ ಹೆಸರು ಬಳಸಿಕೊಂಡು ನಾನು ರಾಜಕೀಯ ಪ್ರವೇಶಿಸುವುದಿಲ್ಲ. ಹೀಗೆ ಹೇಳಿದ ಮಾತ್ರಕ್ಕೆ ನಾನು ಗಾಂಧಿ ಕುಟುಂಬದ ಸದಸ್ಯ ಅಲ್ಲ ಎಂಬ ಅರ್ಥವಲ್ಲ. ಆದರೆ, ನನ್ನ ಹೆಸರು ಬಳಸಿಯೇ ನಾನು ರಾಜಕೀಯ ಪ್ರವೇಶಿಸುತ್ತೇನೆ” ಎಂದು ಹೇಳಿದರು.

“ರಾಜಕೀಯದಲ್ಲಿ ಬದಲಾವಣೆಯಾಗಬೇಕಿದೆ. ನಾನು ರೈತರು, ಬಡವರ ಸೇವೆಯಲ್ಲಿ ತೊಡಗಿಸಿಕೊಂಡಿದ್ದೇನೆ. ಹೌದು, ಸೋನಿಯಾ ಗಾಂಧಿ ಸೇರಿ ಗಾಂಧಿ ಕುಟುಂಬದ ಹೆಸರು ಬಳಸಿದರೆ, ಅವರಿಂದ ಸಲಹೆ ಪಡೆದರೆ ನನಗೆ ಅನುಕೂಲವಾಗಬಹುದು. ಆದರೆ, ನನ್ನ ಕೆಲಸದಿಂದ ನಾನು ರಾಜಕೀಯಕ್ಕೆ ಬರಲು ಇಷ್ಟಪಡುತ್ತೇನೆ. ಹಾಗಂತ, ರಾಜಕೀಯ ಪ್ರವೇಶಿಸಲು ನಾನು ಸಮಾಜ ಸೇವೆ ಮಾಡುತ್ತಿಲ್ಲ. ಸೇವೆಯು ನನಗೆ ಖುಷಿ ಕೊಡುವ ವಿಚಾರವಾಗಿದೆ” ಎಂದು ಸಂದರ್ಶನದ ವೇಳೆ ಹೇಳಿದರು.

ಇದೇ ವೇಳೆ, ಕೇಂದ್ರ ಸರ್ಕಾರದ ವಿರುದ್ಧ ಕೂಡ ರಾಬರ್ಟ್‌ ವಾದ್ರಾ ವಾಗ್ದಾಳಿ ನಡೆಸಿದರು. “ಕಳೆದ 10 ವರ್ಷಗಳಿಂದ ದೇಶದ ರಾಜಕೀಯ ವ್ಯವಸ್ಥೆಯನ್ನು ಜನ ನೋಡಿದ್ದಾರೆ. ಅಭಿವೃದ್ಧಿ ಹೊರತುಪಡಿಸಿ, ಧರ್ಮದ ಆಧಾರದ ಮೇಲೆ ರಾಜಕೀಯ ನಡೆಯುತ್ತಿದೆ. ನಾನು ಉದ್ಯಮದಲ್ಲಿ ತೊಡಗಿಸಿಕೊಳ್ಳಲು ಬಿಡುತ್ತಿಲ್ಲ. ಚುನಾವಣೆ ಸಂದರ್ಭದಲ್ಲಿ ಇ.ಡಿ ದಾಳಿ ನಡೆಯುತ್ತದೆ. ಆದರೆ, ಇದೆಲ್ಲದರ ಮಧ್ಯೆ ನಾನು ಸೇವೆ ಮುಂದುವರಿಸಿದ್ದೇನೆ. ನಾನು ರಾಜಕೀಯಕ್ಕೆ ಬಂದ ತಕ್ಷಣ ಎಲ್ಲವೂ ಬದಲಾಗಲಿದೆ ಎಂದು ಹೇಳುವುದಿಲ್ಲ. ಸೇವೆಗಾಗಿ ನಾನು ರಾಜಕೀಯ ಪ್ರವೇಶಿಸಲು ಬಯಸುತ್ತೇನೆ” ಎಂದು ಹೇಳಿದರು. ರಾಬರ್ಟ್‌ ವಾದ್ರಾ ಅವರು ಅಮೇಥಿ ಅಥವಾ ರಾಯ್‌ಬರೇಲಿ ಲೋಕಸಭೆ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.

ಇದನ್ನೂ ಓದಿ: Narendra Modi: ಡ್ರಮ್‌, ಜಾಗಟೆ ಬಾರಿಸಿ, ಹಾಡು ಹಾಡಿ; ಮತದಾನ ಹೆಚ್ಚಿಸಲು ಸ್ತ್ರೀಯರಿಗೆ ಕರೆ ಕೊಟ್ಟ ಮೋದಿ

Continue Reading
Advertisement
LPL 2024
ಪ್ರಮುಖ ಸುದ್ದಿ18 mins ago

LPL 2024 : ಐಪಿಎಲ್ ಎಫೆಕ್ಟ್​, ಸಿಕ್ಕಾಪಟ್ಟೆ ದುಡ್ಡು ಬಾಚಿದ ಮಹೀಶ್ ಪತಿರಾನಾ

Porsche
ಸಂಪಾದಕೀಯ20 mins ago

ವಿಸ್ತಾರ ಸಂಪಾದಕೀಯ: ಸಬಲರ ಎದುರು ದುರ್ಬಲ ಕಾನೂನು; ಅಮಾಯಕರ ಜೀವಕ್ಕೆ ಬೆಲೆಯೇ ಇಲ್ಲ

Hajj pilgrimage
ಬೆಂಗಳೂರು27 mins ago

Hajj Pilgrimage: ಹಜ್ ಯಾತ್ರಿಗಳನ್ನು ಬೀಳ್ಕೊಟ್ಟ ಸಿಎಂ ಸಿದ್ದರಾಮಯ್ಯ; ಹಜ್ ಭವನ ನಿರ್ಮಾಣಕ್ಕೆ ಅನುದಾನ

IPL 2024
ಕ್ರೀಡೆ40 mins ago

IPL 2024 : ಕೆಕೆಆರ್​ 4ನೇ ಬಾರಿ ಐಪಿಎಲ್​​ನ​ ಫೈನಲ್​ಗೆ, ಎಸ್ಆರ್​ಎಚ್​ಗೆ ಇನ್ನೊಂದು ಅವಕಾಶ

Robert Vadra
ದೇಶ1 hour ago

Robert Vadra: ಸ್ವಂತ ಬಲದಿಂದ ರಾಜಕೀಯಕ್ಕೆ ಬರುವೆ, ಗಾಂಧಿ ಹೆಸರು ಬಳಸಲ್ಲ; ರಾಬರ್ಟ್‌ ವಾದ್ರಾ ಶಪಥ!

IPL 2024
ಕ್ರೀಡೆ2 hours ago

IPL 2024 : ರನ್​ ಔಟ್​​ ಆಗಿದ್ದಕ್ಕೆ ಸಿಟ್ಟಿಗೆದ್ದ ಕಾವ್ಯಾ ಮಾರನ್​, ಕಣ್ಣೀರು ಹಾಕಿದ ರಾಹುಲ್ ತ್ರಿಪಾಠಿ

Talking Digital Safety for Teens programme by Meta in Bengaluru
ಕರ್ನಾಟಕ2 hours ago

Meta: ಮೆಟಾದಿಂದ ಯುವ ಜನರಿಗೆ ಡಿಜಿಟಲ್ ಸುರಕ್ಷಾ ಪಾಠ

MLC Election North East Graduates Constituency Election Prohibitory order imposed in Vijayanagar district from June 1
ವಿಜಯನಗರ2 hours ago

MLC Election: ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ವಿಜಯನಗರ ಜಿಲ್ಲೆಯಲ್ಲಿ ಜೂ.1ರಿಂದ ನಿಷೇಧಾಜ್ಞೆ ಜಾರಿ

Artificially ripened fruits
ಕರ್ನಾಟಕ2 hours ago

Artificially Ripened Fruits: ಬಾಳೆ, ಮಾವಿನ ಹಣ್ಣಿನಿಂದ ಕ್ಯಾನ್ಸರ್: ದೂರು ಸಲ್ಲಿಕೆ

Legal action if drought relief money is credited to farmers loans says Dr Sushila
ಯಾದಗಿರಿ2 hours ago

Yadgiri News: ಬರ ಪರಿಹಾರದ ಹಣ ರೈತರ ಸಾಲಕ್ಕೆ ಜಮಾ ಮಾಡಿಕೊಂಡರೆ ಕಾನೂನು ಕ್ರಮ: ಡಿಸಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ6 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು11 hours ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು12 hours ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 day ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ2 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ2 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ2 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ4 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ5 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

ಟ್ರೆಂಡಿಂಗ್‌