ಇಂದಿನ ಪಂಚಾಂಗ (22-11-2022)
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು, ಕಾರ್ತಿಕ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 08:48 ವಾರ: ಮಂಗಳವಾರ
ನಕ್ಷತ್ರ: ಸ್ವಾತಿ 23:11 ಯೋಗ: ಸೌಭಾಗ್ಯ 18:35
ಕರಣ: ವಣಿಜ 08:48 ಇಂದಿನ ವಿಶೇಷ : ಸತ್ಯಸಾಯಿಬಾಬಾ ಜಯಂತಿ.
ಅಮೃತಕಾಲ: ಮಧ್ಯಾಹ್ನ 02 ಗಂಟೆ 47 ನಿಮಿಷದಿಂದ 04 ಗಂಟೆ 19 ನಿಮಿಷದವರೆಗೆ.
ಸೂರ್ಯೋದಯ: 06: 21 ಸೂರ್ಯಾಸ್ತ: 05 : 50
ರಾಹುಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಸಾಧ್ಯತೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನದಿಂದ ನಿಮ್ಮ ಯೋಜಿತ ಕಾರ್ಯ ವಿಳಂಬವಾಗುವ ಸಾಧ್ಯತೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪ್ರಶಂಸೆ ಸಿಗುವುದು. ದಿನದ ಮಟ್ಟಿಗೆ ಖರ್ಚು. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ಕೆರಳಿಸಿಕೊಂಡು ಮನಸ್ಸಿಗೆ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ಮಿಥುನ: ನಿಮ್ಮ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗವ ಸಾಧ್ಯತೆ, ಇದರಿಂದ ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಕಟಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ನಿಮ್ಮ ಆಕರ್ಷಕ ಮಾತುಗಳಿಂದ ಇತರರನ್ನು ಆಕರ್ಷಿಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸಂಗಾತಿಯ ಮಾತುಗಳು ಮಧುರವೇನಿಸುವವು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೆ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ತುಲಾ: ಇತರರು ನಿಮ್ಮ ಕಾರ್ಯಗಳನ್ನು ಪ್ರಶಂಸೆ ಮಾಡುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರ ಮಾಡಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣ. ವಿನಾಕಾರಣ ನಿಮ್ಮ ಸಿಟ್ಟು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2
ಮಕರ: ನಿಮ್ಮ ಕೋಪದ ಸ್ವಭಾವದಿಂದಾಗಿ ಇತರರೊಂದಿಗೆ ವಾದಕ್ಕಿಳಿಯಬೇಡಿ. ಆತುರದಲ್ಲಿ ಆಡಿದ ಅತಿರೇಕದ ಮಾತುಗಳು ಜಗಳ ತಂದೀತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು. ಅತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಕುಂಭ: ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದಿಂದ ಯಾವುದೇ ಮಾತುಗಳನ್ನು ಆಡುವುದು ಸರಿಯಲ್ಲ, ತಾಳ್ಮೆಯಿಂದ ವರ್ತಿಸಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಗೊಂದಲದ ವಿಷಯಗಳಿಗೆ ಹಿರಿಯರಿಂದ ಸೂಕ್ತ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ | ಗುರು ಗ್ರಹ ನೀಡುವ ಭಾವಫಲಗಳ ಬಗ್ಗೆ ಮಾಹಿತಿ ಇದೆಯೇ?