Site icon Vistara News

Horoscope Today | ಮೀನ ರಾಶಿಯವರಿಗೆ ಕುಟುಂಬದ ಬೆಂಬಲ; ನಿಮ್ಮ ರಾಶಿ ಭವಿಷ್ಯ ಹೇಗಿದೆ?

nava pancham yoga

nava pancham yoga

ಇಂದಿನ ಪಂಚಾಂಗ (16-12-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ.

ತಿಥಿ: ಅಷ್ಟಮಿ 27:01 ವಾರ:ಶುಕ್ರವಾರ
ನಕ್ಷತ್ರ: ಪೂರ್ವಾ 07:33 ಯೋಗ: ಪ್ರೀತಿ 07:44
ಕರಣ: ಬಾಳವ 14:25 ಇಂದಿನ ವಿಶೇಷ: ಕಾಲಭೈರವ ಜಯಂತಿ.
ಅಮೃತಕಾಲ: ಮಧ್ಯರಾತ್ರಿ 01 ಗಂಟೆ 35 ನಿಮಿಷದಿಂದ 03 ಗಂಟೆ 18 ನಿಮಿಷದವರೆಗೆ.

ಸೂರ್ಯೋದಯ: 06: 34    ಸೂರ್ಯಾಸ್ತ: 05 : 56

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ನಿಮ್ಮ ವರ್ತನೆ ಇತರರಿಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಹಣಕಾಸು ಪ್ರಗತಿ ಉತ್ತಮ. ಧಾರ್ಮಿಕ ನಾಯಕರ ಭೇಟಿ, ಕ್ಷೇತ್ರ ದರ್ಶನ. ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ದ್ವೇಷದ ಭಾವನೆ ನಿಮ್ಮ ಮನಸ್ಸಿಗೆ ಕಿರಿಕಿರಿಯುಂಟುಮಾಡುವುದರಿಂದ ಮಾನಸಿಕವಾಗಿ ಒತ್ತಡಕ್ಕೊಳಗಾಗುವ ಸಾಧ್ಯತೆ. ಕುಟುಂಬದ ಸದಸ್ಯರೊಂದಿಗೆ ಸಮಾಧಾನದಿಂದ ವರ್ತಿಸಿ. ಹೆಚ್ಚು ಸಮಯ ಮೌನದಿಂದ ಇರುವುದು ಒಳಿತು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಮಿಥುನ: ನಿಮ್ಮ ಮಹತ್ವಾಕಾಂಕ್ಷೆಯ ಯೋಜನೆಗಳು ಸಫಲವಾಗುವವು. ಮಕ್ಕಳಿಗಾಗಿ ಖರ್ಚು ಮಾಡುವ ಅನಿವಾರ್ಯತೆ ಸೃಷ್ಟಿಯಾಗಲಿದೆ. ಅನಾವಶ್ಯಕವಾಗಿ ಒತ್ತಡ ತೆಗೆದುಕೊಂಡು ಜೀವನದ ಮಹತ್ವದ ವಿಷಯಗಳ ಬಗ್ಗೆ ಆಲಸ್ಯ ಮಾಡುವುದು ಬೇಡ. ಆರ್ಥಿಕವಾಗಿ ಉತ್ತಮ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಕಟಕ: ಬಿಡುವಿಲ್ಲದ ಕೆಲಸದಿಂದ ಒತ್ತಡ, ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ, ಮನಸ್ಸಿಗೆ ನೋವುಂಟು ಮಾಡಬಹುದು. ಆಪ್ತರೊಂದಿಗೆ ನಿಮ್ಮೆಲ್ಲಾ ಭಾವನೆ ಹಂಚಿಕೊಳ್ಳುವಿರಿ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಸಾಮಾಜಿಕವಾಗಿ ಮನ್ನಣೆ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ ಪಡೆದು ಕಾರ್ಯದಲ್ಲಿ ಯಶಸ್ಸು ಪಡೆಯುವಿರಿ. ಬಹುದಿನಗಳ ಕನಸು ನನಸಾಗುವ ಸಮಯ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಉದ್ಯೋಗದಲ್ಲಿ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕನ್ಯಾ: ಸಂತೋಷದಿಂದ ಇದ್ದು, ಇತರರಿಗೆ ಸಂತಸ ಹಂಚಿಕೊಳ್ಳಲು ಹವಣಿಸುವಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಹಿಂದೆ-ಮುಂದೆ ನೋಡದೆ ಇತರರನ್ನು ಟೀಕೆ ಮಾಡುವುದು ಬೇಡ. ಉದ್ಯೋಗದಲ್ಲಿ ಯಶಸ್ಸು ಕಾಣುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ತುಲಾ: ನಿಮ್ಮ ಹರಿತವಾದ ಮಾತುಗಳಿಂದ ಇತರರ ಮನಸ್ಸು ನೋಯಿಸುವುದು ಬೇಡ, ಆಲೋಚಿಸಿ ಮಾತನಾಡಿ. ಕುಟುಂಬದ ಪ್ರತಿಯೊಂದು ವಿಷಯದಲ್ಲೂ ತಪ್ಪು ಹುಡುಕುವುದು ಸರಿಯಲ್ಲ, ಇದರಿಂದ ಮನಸ್ಸು ಘಾಸಿಯಾಗುವುದು. ಆಧ್ಯಾತ್ಮದ ಹಾದಿ ದಾರಿ ತೋರಿತು. ಶ್ರೀ ಗುರು ದತ್ತಾತ್ರೇಯನನ್ನು ಆರಾಧಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಸಮಯ ನೀಡುವಿರಿ. ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವಿರಿ. ಭೂಮಿ, ಆಸ್ತಿ ಖರೀದಿಸುವ ಕುರಿತು ಆಲೋಚಿಸುವಿರಿ. ಆರೋಗ್ಯ ಉತ್ತಮವಾಗಿರಲಿದೆ. ಉದ್ಯೋಗದಲ್ಲಿ ಮಿಶ್ರ ಫಲವಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ದೀರ್ಘಕಾಲದ ಪ್ರಯಾಣ ಮಾಡುವ ಸಾಧ್ಯತೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಹೊಸ ಕೆಲಸಗಳಲ್ಲಿ ದಿನದ ಮಟ್ಟಿಗೆ ತೊಡಗುವುದು ಬೇಡ. ಆರೋಗ್ಯ ಉತ್ತಮ ವಾರಿರಲಿದೆ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಬೆಂಬಲ ದೊರೆಯಲಿದೆ. ವ್ಯಾಪಾದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಕರ: ನಿಮಗಿಂದು ಅತ್ಯಂತ ಪ್ರಭಾವಿ ಜನರ ಬೆಂಬಲ ದೊರೆತು, ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಹಿಂದೆ ಮಾಡಿದ ಹೂಡಿಕೆ ವ್ಯವಹಾರವು ಇಮ್ಮಡಿ ಲಾಭ ತರುವುದು. ಮುಂಗೋಪದಿಂದ ನಷ್ಟ ಸಾಧ್ಯತೆ. ಸ್ನೇಹಿತರ ಸಲಹೆ ಸಹಕಾರ ಸಿಗುವುದು.
ಅದೃಷ್ಟ ಸಂಖ್ಯೆ: 6

ಕುಂಭ: ಆಲಸ್ಯದಿಂದ ಕಾರ್ಯ ಹಾನಿ. ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಹಣಕಾಸು ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಸೃಜನಾತ್ಮಕವಾಗಿ ಕೆಲಸ ಮಾಡಿದರೆ ಯಶಸ್ಸು. ಉದ್ಯೋಗದಲ್ಲಿ ಹಿಡಿದ ಕೆಲಸ ಪೂರ್ಣಗೊಳಿಸಿ, ಎಲ್ಲರ ಮೆಚ್ಚುಗೆಗೆ ಪಾತ್ರರಾಗುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮೀನ: ಹೊಸ ಅವಕಾಶಗಳು ಗರಿಗೆದರಲಿವೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ನಿಮ್ಮ ಹಿಂದೆ ಟೀಕೆಗಳನ್ನು ಮಾಡುವ ಜನರಿಂದ ದೂರ ಇರಿ. ದಿನದ ಮಟ್ಟಿಗೆ ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಆಗುವ ಸಾಧ್ಯತೆ. ಸಂಗಾತಿಯ ಸ್ವಾರ್ಥದಿಂದ ಕುಟುಂಬದ ವಾತಾವರಣದಲ್ಲಿ ವ್ಯತ್ಯಾಸ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | ಭಾವಾಶ್ರಿತ ಗ್ರಹಫಲ | ಸೂರ್ಯನು ದಶಮ ಭಾವದಲ್ಲಿದ್ದರೆ ಬಲಿಷ್ಠ

Exit mobile version