Site icon Vistara News

Horoscope Today | ದಶಮಿಯ ಈ ದಿನ ಯಾವ ರಾಶಿಗೆಲ್ಲಾ ಶುಭ, ಅಶುಭ ಫಲಗಳಿವೆ?

horoscope today

ಇಂದಿನ ಭವಿಷ್ಯ

ಇಂದಿನ ಪಂಚಾಂಗ (18-12-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ.

ತಿಥಿ: ದಶಮಿ 27:31 ವಾರ: ಭಾನುವಾರ
ನಕ್ಷತ್ರ: ಹಸ್ತಾ 10:17 ಯೋಗ: ಶೋಭನ 29:22
ಕರಣ: ವಣಿಜ 15:42
ಅಮೃತಕಾಲ: ಸೋಮವಾರದ ಮುಂಜಾನೆ 04 ಗಂಟೆ 04 ನಿಮಿಷದಿಂದ 05 ಗಂಟೆ 40 ನಿಮಿಷದವರೆಗೆ.

ಸೂರ್ಯೋದಯ: 06 : 35    ಸೂರ್ಯಾಸ್ತ: 05 : 57

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ಅತಿಯಾದ ಒತ್ತಡ ಉಂಟಾಗಲಿದೆ. ಇದನ್ನು ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವವರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಬಂಧುಗಳು ಟೀಕೆಗಳನ್ನು ಮಾಡುವ ಸಾಧ್ಯತೆ. ಈ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಡಿ. ದಿನದ ಮಟ್ಟಿಗೆ ಒತ್ತಡ. ಇದರಿಂದ ಮಾನಸಿಕ ನೆಮ್ಮದಿ ಹಾಳಾಗುವ ಸಾಧ್ಯತೆ. ಎಲ್ಲ ಪರಿಸ್ಥಿತಿಯಲ್ಲಿಯೂ ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯಲು ಅವಕಾಶ ದೊರೆಯಲಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಉತ್ತಮ ಆರೋಗ್ಯ. ಸಹದ್ಯೋಗಿಗಳಿಂದ ಕಿರಿಕಿರಿ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕಟಕ: ಮಿತಿ ಮೀರಿದ ಕೆಲಸದ ಒತ್ತಡದಿಂದಾಗಿ ದಣಿವು, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಸಿಂಹ: ಇಂದಿನ ನಿಮ್ಮೆಲ್ಲಾ ಕೆಲಸಗಳಿಗೆ ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದ ತಿರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಕನ್ಯಾ: ಇಂದು ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಯಾರೊಂದಿಗೂ ಮಾತಿಗೆ ಮಾತು ಬೆಳೆಸುವುದು ಬೇಡ. ಸಂಯಮದಿಂದಿರಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ತುಲಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಆರೋಗ್ಯದಲ್ಲಿ ವ್ಯತ್ಯಾಸವಾಗಬಹುದು, ಎಚ್ಚರಿಕೆಯಿಂದಿರಿ. ಹಣಕಾಸು ಪ್ರಗತಿ ಉತ್ತಮ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ವೃಶ್ಚಿಕ: ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಧನಸ್ಸು: ಇಂದು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತ- ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಉದ್ಯೋಗದಲ್ಲಿ ಇಂದು ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮಕರ: ಕುಟುಂಬದ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು, ಆದಷ್ಟು ಅವುಗಳಿಂದ ದೂರ ಇರಲು ಪ್ರಯತ್ನಿಸಿ. ದಿನದ ಮಟ್ಟಿಗೆ ಖರ್ಚು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ಯಾರಾದರೂ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ. ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಮೀನ: ನಿಮಗಿಂದು ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ದೊರೆಯಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಆರೋಗ್ಯ ಉತ್ತಮವಾಗಿರಲಿದೆ. ಅನಿರೀಕ್ಷಿತ ಖರ್ಚು ಹೆಚ್ಚು. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | ಭಾವಾಶ್ರಿತ ಗ್ರಹಫಲ | ಸೂರ್ಯನು ದಶಮ ಭಾವದಲ್ಲಿದ್ದರೆ ಬಲಿಷ್ಠ

Exit mobile version