Horoscope Today | ಆರು ರಾಶಿಯವರಿಗೆ ಇಂದು ಶುಭ ದಿನ; ನಿಮ್ಮ ರಾಶಿ ಭವಿಷ್ಯ ಹೀಗಿದೆ - Vistara News

ಪ್ರಮುಖ ಸುದ್ದಿ

Horoscope Today | ಆರು ರಾಶಿಯವರಿಗೆ ಇಂದು ಶುಭ ದಿನ; ನಿಮ್ಮ ರಾಶಿ ಭವಿಷ್ಯ ಹೀಗಿದೆ

ಶುಭಕೃತ ನಾಮ ಸಂವತ್ಸರ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷದ ತ್ರಯೋದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (21-12-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ.

ತಿಥಿ: ತ್ರಯೋದಶಿ 22:15 ವಾರ: ಬುಧವಾರ
ನಕ್ಷತ್ರ: ವಿಶಾಖ 08:32/ಅನುರಾಧ 30:32 ಯೋಗ: ಧೃತಿ 21:24
ಕರಣ: ಗರಜ 11:35 ಇಂದಿನ ವಿಶೇಷ: ಪ್ರದೋಷ, ಮಾಸಶಿವರಾತ್ರಿ
ಅಮೃತಕಾಲ: ರಾತ್ರಿ 09 ಗಂಟೆ 01 ನಿಮಿಷದಿಂದ 10 ಗಂಟೆ 29 ನಿಮಿಷದವರೆಗೆ.

ಸೂರ್ಯೋದಯ: 06 : 37    ಸೂರ್ಯಾಸ್ತ: 05 : 59

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಅನೇಕ ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ, ಮಾನಸಿಕ ಒತ್ತಡದಿಂದ ಮುಕ್ತರಾಗಿ, ದೊಡ್ಡ ಯೋಜನೆಗಳತ್ತ ಗಮನ ಹರಿಸುವಿರಿ. ಬಹಳ ದಿನಗಳ ನಂತರ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಸಾಮಾನ್ಯ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಕುಟುಂಬದ ಸದಸ್ಯರ ವರ್ತನೆ ನಿಮಗೆ ಹಿಡಿಸದಿರಬಹುದು, ಆದರೆ ವಿನಾ ಕಾರಣ ಮಾತಿಗಿಳಿದು ಮನಸ್ಸು ಕೆಡಿಸಿಕೊಳ್ಳುವುದು ಬೇಡ. ನಂಬಿದ ವ್ಯಕ್ತಿಗಳು ನಿಮ್ಮನ್ನು ನಿರಾಸೆ ಮಾಡಬಹುದು. ಉದ್ಯೋಗದ ಸ್ಥಳದಲ್ಲಿ ನಿಮ್ಮ ಕಾರ್ಯದ ಯಶಸ್ಸು ಬೇರೆಯವರ ಪಾಲಾಗದಂತೆ ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಹಣಕಾಸು ಪ್ರಗತಿ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಮಿಥುನ: ಆರೋಗ್ಯದ ಕಡೆಗೆ ಹೆಚ್ಚು ಗಮನ ಹರಿಸುವುದು ಉತ್ತಮ. ಅದರಲ್ಲೂ ಗರ್ಭಿಣಿಯರು ಹೆಚ್ಚು ಕಾಳಜಿ ವಹಿಸಿ. ಯಾವುದೇ ಹೊಸ ಒಪ್ಪಂದ ಮಾಡಿಕೊಳ್ಳುವುದು ಇಂದಿನ ಮಟ್ಟಿಗೆ ಬೇಡ. ಆತುರದಲ್ಲಿ ಯಾವ ತಿರ್ಮಾನಗಳನ್ನೂ ತೆಗೆದುಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕಟಕ: ಬಿಡುವಿಲ್ಲದ ಕಾರ್ಯ ಯೋಜನೆ, ಅಪಾರ ಯಶಸ್ಸನ್ನು ಹಾಗೂ ಕೀರ್ತಿಯನ್ನು ತಂದು ಕೊಡುವುದು. ಪ್ರಯಾಣದ ಕುರಿತಾಗಿ ಯೋಜನೆ ರೂಪಿಸುವಿರಿ. ಹೂಡಿಕೆ ವ್ಯವಹಾರ ಇಂದು ಹೆಚ್ಚು ಲಾಭ ತರುವುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿಶ್ವಾಸದಿಂದ ಕಾರ್ಯ ಸಿದ್ಧಿ. ಲಾಭದ ಹೂಡಿಕೆ ಕುರಿತಾಗಿ ಆಲೋಚನೆ. ಕುಟುಂಬದ ಜೊತೆಗೆ ಕಾಲ ಕಳೆಯಲು ಹೆಚ್ಚು ಸಮಯ ವಿನಿಯೋಗಿಸುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಲಾಭ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಮಸ್ಯೆಗಳು ಪರಿಹಾರವಾಗುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ತುಲಾ: ಭರವಸೆಯ ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಸೌಂದರ್ಯದ ಕುರಿತು ಕಾಳಜಿ. ಆರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಲಾಭ. ಕುಟುಂಬದ ಸದಸ್ಯರಿಂದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಮಾನಸಿಕ ಒತ್ತಡದಿಂದ ದೂರವಾಗಲು ಧ್ಯಾನ ಮಾಡಿ. ವೃತಾ ಚಿಂತೆ ನಿಮ್ಮನ್ನು ಮತ್ತಷ್ಟು ಖಿನ್ನತೆಗೆ ದೂಡುವುದು. ಆದ್ದರಿಂದ ಸಕಾರಾತ್ಮಕ ಆಲೋಚನೆಗಳನ್ನು ಮಾಡಿ. ಕೌಟುಂಬಿಕ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ, ಮನೆಯ ವಾತಾವರಣ ಹದಗೆಡಬಹುದು. ಮೌನದಿಂದ ಕಾರ್ಯ ಸಿದ್ಧಿಸಿಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಪ್ರಭಾವಿ ವ್ಯಕ್ತಿಗಳ ವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಅನಿರೀಕ್ಷಿತ ಖರ್ಚು, ಇದರ ಹೊರಾತಾಗಿಯೂ ಲಾಭ ಪಡೆಯುವಿರಿ. ಮಾತಿನ ಮೇಲೆ ಹಿಡಿತವಿರಲಿ. ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು ಕಾರ್ಯದಲ್ಲಿ ಮುನ್ನುಗ್ಗಿ. ಮಾನಸಿಕ ಒತ್ತಡ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟು ಆಗುವ ಸಾಧ್ಯತೆ. ಕೋಪದಿಂದ ಮಾತನಾಡುವುದು ಬೇಡ. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ನಿಮ್ಮ ಸಹಾಯ ಮಾಡುವ ಗುಣಕ್ಕೆ ಇತರರಿಂದ ಪ್ರಶಂಸೆ ದೊರೆಯಲಿದೆ.ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮೀನ: ಉದ್ಯೋಗದಲ್ಲಿ ಹೊಸ ಭರವಸೆ ಮೂಡಲಿದೆ. ಅರೋಗ್ಯ ಪರಿಪೂರ್ಣ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Weekly Horoscope | ಈ ವಾರ ತುಲಾ ರಾಶಿಗೆ ಗುರು ಬಲವಿದೆ; ನಿಮ್ಮ ವಾರ ಭವಿಷ್ಯ ಹೇಗಿದೆ ನೋಡಿಕೊಳ್ಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

T20 World Cup : ಆಸ್ಟ್ರೇಲಿಯಾ ವಿರುದ್ಧ 24 ರನ್​ಗಳ ಭರ್ಜರಿ ಗೆಲುವು ಸಾಧಿಸಿ ಸೇಡು ತೀರಿಸಿಕೊಂಡ ಭಾರತ

T20 World Cup : ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 5 ವಿಕೆಟ್​ ನಷ್ಟಕ್ಕೆ 205 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತನ್ನ ಪಾಲಿನ 20 ಒವರ್​ಗಳಲ್ಲಿ 7 ವಿಕೆಟ್​ಗೆ 181 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

VISTARANEWS.COM


on

Rohit Sharma
Koo

ಸೇಂಟ್​ ಲೂಸಿಯಾ: ರೋಹಿತ್ ಶರ್ಮಾ ಅವರ (92 ರನ್​, 41 ಎಸೆತ, 8 ಸಿಕ್ಸರ್, 7 ಫೋರ್​) ಪ್ರಚಂಡ ಬ್ಯಾಟಿಂಗ್ ನೆರವಿನಿಂದ ಮಿಂಚಿದ ಭಾರತ ತಂಡ ಟಿ20 ವಿಶ್ವ ಕಪ್​ನ 2024ನೇ (T20 World Cup) ಆವೃತ್ತಿಯ ಸೂಪರ್ 8 ಹಂತದಲ್ಲಿ ಆಸ್ಟ್ರೇಲಿಯಾ ವಿರುದ್ದ (IND vs AUS) 24 ರನ್​ಗಳ ಗೆಲುವು ದಾಖಲಿಸಿತು. ಈ ಮೂಲಕ ವಿಶ್ವ ಟೆಸ್ಟ್​ ಚಾಂಪಿಯನ್​ಷಿಪ್ ಹಾಗೂ 2023ರ ಏಕ ದಿನ ವಿಶ್ವ ಕಪ್ ಪಂದ್ಯದ ಸೋಲಿಗೆ ಸೇಡು ತೀರಿಸಿಕೊಂಡಿತು. ಈ ಸೋಲಿನೊಂದಿಗೆ ಆಸ್ಟ್ರೇಲಿಯಾ ತಂಡದ ಟಿ 20 ವಿಶ್ವ ಕಪ್​ ಸೆಮಿಫೈನಲ್ ಹಾದಿ ಕಠಿಣಗೊಂಡಿತು. ಇದೇ ವೇಳೆ ಟಿ20 ವಿಶ್ವ ಕಪ್​​ನಲ್ಲಿ ಭಾರತ ತಂಡದ ಅಜೇಯ ಓಟ ಮುಂದುವರಿಯಿತು. ಸೂಪರ್​ 8 ಹಂತದಲ್ಲಿ ಗುಂಪು ಎ ಯಿಂದ ಒಟ್ಟು ಮೂರು 3 ಗೆಲುವಿನೊಂದಿಗೆ 6 ಅಂಕಗಳ ಸಮೇತ ಸೆಮಿಫೈನಲ್​​ಗೆ ಪ್ರವೇಶ ಪಡೆಯಿತು.

ಇಲ್ಲಿನ ಡ್ಯಾರೆನ್​ ಸಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 5 ವಿಕೆಟ್​ ನಷ್ಟಕ್ಕೆ 205 ರನ್ ಬಾರಿಸಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತನ್ನ ಪಾಲಿನ 20 ಒವರ್​ಗಳಲ್ಲಿ 7 ವಿಕೆಟ್​ಗೆ 181 ರನ್​ ಬಾರಿಸಿ ಸೋಲೊಪ್ಪಿಕೊಂಡಿತು.

ಗುರಿ ಬೆನ್ನಟ್ಟಲು ಹೊರಟ ಆಸ್ಟ್ರೇಲಿಯಾ 6 ರನ್​ಗೆ ಮೊದಲ ವಿಕೆಟ್​ ಕಳೆದುಕೊಂಡಿತು. ಡೇವಿಡ್​ ವಾರ್ನರ್​ 6 ರನ್ ಬಾರಿಸಿ ಅರ್ಶ್​ದೀಪ್​ಗೆ ವಿಕೆಟ್​ ಒಪ್ಪಿಸಿದರು. ಆದರೆ, ನಂತರದಲ್ಲಿ ಟ್ರಾವಿಸ್​ ಹೆಡ್​ (76ರನ್​ ) ಹಾಗೂ ಮಿಚೆಲ್ ಮಾರ್ಷ್​ (37 ರನ್​) ರನ್ ವೇಗ ಕುಸಿಯದಂತೆ ನೋಡಿಕೊಂಡರು. ಟ್ರಾವಿಸ್ ಹೆಡ್​ ಹೋರಾಟ ನಡೆಸಿದ ಭಾರತ ತಂಡದಿಂದ ಗೆಲುವು ಕಸಿಯಲು ಯತ್ನಿಸಿದರು. ಅದರೆ, ಕುಲ್ದೀಪ್​ ಯಾದವ್​ (2 ವಿಕೆಟ್​), ಅರ್ಶ್​ದೀಪ್​ ಸಿಂಗ್​ (3 ವಿಕೆಟ್​) ಆಸೀಸ್ ತಂಡದ ಓಟಕ್ಕೆ ತಡೆಯೊಡ್ಡಿತು. ಮ್ಯಾಕ್ಸ್​ವೆಲ್​ 20 ರನ್ ಬಾರಿಸಿದರೆ, ಟಿಮ್ ಡೇವಿಡ್​ 15 ರನ್ ಬಾರಿಸಿದರು.

ಭಾರತದ ಉತ್ತಮ ಬ್ಯಾಟಿಂಗ್​

ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆಘಾತ ಕೊಟ್ಟಿದ್ದು ವಿರಾಟ್ ಕೊಹ್ಲಿ. ಐದು ಎಸೆತಗಳನ್ನು ಎದುರಿಸಿದ ಅವರು ಶೂನ್ಯಕ್ಕೆ ಔಟಾಗಿ ಬೇಸರ ಮೂಡಿಸಿದರು. ಆದರೆ, ಇನ್ನೊಂದು ಬದಿಯಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ ರನ್ ಪೇರಿಸುತ್ತಲೇ ಹೋದರು. ಭಾರತ ಕೇವಲ 29 ಎಸೆತಗಳಲ್ಲಿ 50 ರನ್ ಬಾರಿಸಿದರೆ ಬಳಿಕ ರೋಹಿತ್ ಶರ್ಮಾ 19 ಎಸೆತಕ್ಕೆ ಅರ್ಧ ಶತಕ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ರಿಷಭ್​ ಪಂತ್​ 14 ಎಸೆತಕ್ಕೆ 15 ರನ್ ಬಾರಿಸಿದರು. ಆದರೆ, ನಂತರ ಆಡಲು ಬಂದ ಸೂರ್ಯಕುಮಾರ್​ ಯಾದವ್​ ರೋಹಿತ್ ಶರ್ಮಾಗೆ ಉತ್ತಮ ಬೆಂಬಲ ಕೊಟ್ಟರು. ಆದರೆ, ಅವರು 16 ಎಸೆತಕ್ಕೆ 36 ರನ್ ಬಾರಿಸಿ ಔಟಾದರು.

ಇದನ್ನೂ ಓದಿ: Rohit Sharma : ಆಸ್ಟ್ರೇಲಿಯಾದ ವೇಗಿ ​ ಸ್ಟಾರ್ಕ್​ ಬೆಂಡೆತ್ತಿದ ರೋಹಿತ್​; ಒಂದೇ ಓವರ್​​ನಲ್ಲಿ 29 ರನ್​

ಸೂರ್ಯ ಔಟಾಗುತ್ತಿದ್ದಂತೆ ಭಾರತದ ಸ್ಕೋರ್ ಗಳಿಕೆ ನಿಧಾನಗೊಂಡಿತು. ಆದಾಗ್ಯೂ ಶಿವಂ ದುಬೆ 1 ಸಿಕ್ಸರ್ ಹಾಗೂ 2 ಫೋರ್ ಸಮೇತ 28 ರನ್ ಬಾರಿಸಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಔಟಾಗದೇ 17 ಎಸೆತಕ್ಕೆ 27 ರನ್ ಬಾರಿಸಿದರು. ರವೀಂದ್ರೆ ಜಡೇಜಾ 5 ಎಸೆತಕ್ಕೆ 9 ರನ್ ಬಾರಿಸಿದರು.

Continue Reading

ದೇಶ

Nita Ambani: ಕಾಶಿ ವಿಶ್ವನಾಥ ದೇಗುಲಕ್ಕೆ ತೆರಳಿ ಮಗನ ಮದುವೆಗೆ ದೇವರನ್ನು ಆಮಂತ್ರಿಸಿದ ನೀತಾ ಅಂಬಾನಿ!

Nita Ambani: ನೀತಾ ಅಂಬಾನಿ ಅವರು ಕಾಶಿ ವಿಶ್ವನಾಥ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶಿವನ ಎದುರು ಮಗನ ಮದುವೆಯ ಆಮಂತ್ರಣ ಪತ್ರಿಕೆಯನ್ನು ದೇವರ ಎದುರು ಇರಿಸಿ, ವಿಶೇಷ ಪೂಜೆ ಸಲ್ಲಿಸಿ, ತಾವು ನಂಬುವ ದೇವರನ್ನು ಆಹ್ವಾನಿಸಿದ್ದಾರೆ. ಕಾಶಿ ವಿಶ್ವನಾಥ ಕಾರಿಡಾರ್‌, ಘಾಟ್‌ಗಳಲ್ಲಿ ಕೈಗೊಂಡಿರುವ ಸ್ವಚ್ಛತೆ ಕುರಿತು ನೀತಾ ಅಂಬಾನಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Nita Ambani
Koo

ವಾರಾಣಸಿ: ರಿಲಯನ್ಸ್ ಇಂಡಸ್ಟ್ರೀಸ್‌ ಲಿಮಿಟೆಡ್‌ ಮುಖ್ಯಸ್ಥ ಮುಕೇಶ್‌ ಅಂಬಾನಿ (Mukesh Ambani) ಹಾಗೂ ನೀತಾ ಅಂಬಾನಿ ಪುತ್ರ ಅನಂತ್‌ ಅಂಬಾನಿ (Anant Ambani) ಮತ್ತು ರಾಧಿಕಾ ಮರ್ಚಂಟ್‌ (Radhika Merchant) ಅವರ ಮದುವೆಗೆ ದಿನಗಣನೆ ಆರಂಭವಾಗಿದೆ. ಇದರ ಮಧ್ಯೆಯೇ, ನೀತಾ ಅಂಬಾನಿ (Nita Ambani) ಅವರು ಕಾಶಿ ವಿಶ್ವನಾಥ ದೇವಾಲಯಕ್ಕೆ (Kashi Vishwanath Temple) ಭೇಟಿ ನೀಡಿದ್ದು, ಮಗನ ಮದುವೆಗೆ ದೇವರನ್ನು ಆಮಂತ್ರಿಸಿದ್ದಾರೆ. ಜುಲೈ 12ರಂದು ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರು ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದಾರೆ.

ಕಳೆದ 10 ವರ್ಷಗಳಲ್ಲಿ ಮೊದಲ ಬಾರಿಗೆ ನೀತಾ ಅಂಬಾನಿ ಅವರು ಕಾಶಿ ವಿಶ್ವನಾಥ ದೇವಾಲಯಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಶಿವನ ಎದುರು ಮಗನ ಮದುವೆಯ ಆಮಂತ್ರಣ ಪತ್ರಿಕೆಯನ್ನು ದೇವರ ಎದುರು ಇರಿಸಿ, ವಿಶೇಷ ಪೂಜೆ ಸಲ್ಲಿಸಿ, ತಾವು ನಂಬುವ ದೇವರನ್ನು ಆಹ್ವಾನಿಸಿದ್ದಾರೆ. ಅಷ್ಟೇ ಅಲ್ಲ, ಗಂಗಾರತಿ ಕಾರ್ಯಕ್ರಮದಲ್ಲೂ ನೀತಾ ಅಂಬಾನಿ ಭಾಗವಹಿಸಿದರು. ಇದಾದ ನಂತರ ಅವರು ಕಾಶಿ ವಿಶ್ವನಾಥ ಕಾರಿಡಾರ್‌ ಹಾಗೂ ನಮೋ ಘಾಟ್‌ನಲ್ಲಿರುವ ಸ್ವಚ್ಛತೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು.

“ನಮ್ಮ ಕುಟುಂಬವು ಕಾಶಿ ವಿಶ್ವನಾಥನನ್ನು ಆರಾಧಿಸುತ್ತದೆ. ನಾನು ಅನಂತ್‌ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್‌ ಅವರ ವೆಡ್ಡಿಂಗ್‌ ಕಾರ್ಡ್‌ ತೆಗೆದುಕೊಂಡು ಇಲ್ಲಿಗೆ ಬಂದಿದ್ದೇನೆ. ನಾನು ಆರಾಧಿಸುವ ದೇವರನ್ನು ಮಗನ ಮದುವೆಗೆ ಆಹ್ವಾನಿಸಿದ್ದೇನೆ. ಇಲ್ಲಿನ ಅಭಿವೃದ್ಧಿ, ಧಾರ್ಮಿಕ ವಿಧಿವಿಧಾನಗಳನ್ನು ನೋಡಿ ನನಗೆ ಖುಷಿಯಾಯಿತು. ಮಗನ ಮದುವೆ ಬಳಿಕ ಇಲ್ಲಿಗೆ ಮತ್ತೆ ಆಗಮಿಸುತ್ತೇನೆ” ಎಂದು ನೀತಾ ಅಂಬಾನಿ ಅವರು ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚೆಂಟ್ ಜುಲೈ 12 ರಂದು ಹಿಂದೂ ವೈದಿಕ ಸಮಾರಂಭದ ಪ್ರಕಾರ ಮದುವೆಯಾಗಲಿದ್ದಾರೆ. ವಿವಾಹ ಆಮಂತ್ರಣ ಪತ್ರಿಕೆಯ ಚಿತ್ರ ಬಹಿರಂಗಗೊಂಡಿದ್ದು ಅದರ ಪ್ರಕಾರ ಮೂರು ಸಮಾರಂಭಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಮುಂಬೈನ ಬಾಂದ್ರಾ-ಕುರ್ಲಾ ಕಾಂಪ್ಲೆಕ್ಸ್ (ಬಿಕೆಸಿ) ನಲ್ಲಿರುವ ಭವ್ಯವಾದ ಜಿಯೋ ವರ್ಲ್ಡ್ ಕನ್ವೆನ್ಷನ್ ಸೆಂಟರ್​ನಲ್ಲಿ ಮದುವೆ ನಡೆಯಲಿದೆ.

ಜುಲೈ 12 ರಿಂದ ಮೂರು ದಿನಗಳ ಕಾಲ ವಿವಾಹ ಉತ್ಸವಗಳು ನಡೆಯಲಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. 12ರಂದು ರಂದು ವಿವಾಹದೊಂದಿಗೆ ಆಚರಣೆಗೆ ಚಾಲನೆ ಸಿಗಲಿದೆ. ಅಂದು ಅತಿಥಿಗಳು ಭಾರತೀಯ ಸಾಂಪ್ರದಾಯಿಕ ಉಡುಪನ್ನು ಧರಿಸುವ ನಿರೀಕ್ಷೆಯಿದೆ. ಮದುವೆಯ ನಂತರ, ಮುಂದಿನ ಕಾರ್ಯಕ್ರಮವು ಜುಲೈ 13 ರಂದು ಶುಭ ಆಶಿರ್ವಾದ್ ಅಥವಾ ದೈವಿಕ ಆಶೀರ್ವಾದ ಕಾರ್ಯಕ್ರಮ. ಅಂದು ಡ್ರೆಸ್ ಕೋಡ್ ಭಾರತೀಯ ಕ್ಯಾಶುವಲ್ ಡ್ರೆಸ್​ ಆಗಿದೆ. ಜುಲೈ 14 ರಂದು ಆಯೋಜಿಸಲಾಗುವ ವಿವಾಹ ಆರತಕ್ಷತೆ ಅಥವಾ ಮಂಗಲ್ ಉತ್ಸವ್ ನಡೆಯಲಿದೆ. ಅಂದು ಅತಿಥಿಗಳು ಭಾರತೀಯ ಚಿಕ್ ಉಡುಪನ್ನು ಧರಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ: Sonakshi-Zaheer wedding: ಸೋನಾಕ್ಷಿ-ಜಹೀರ್ ಆರತಕ್ಷತೆ ವೇಳೆ ನಟಿ ರೇಖಾ ಕಾಲಿಗೆ ನಮಸ್ಕರಿಸಿದ ಸಿದ್ಧಾರ್ಥ್!

Continue Reading

ದೇಶ

Tapan Kumar Deka: ಗುಪ್ತಚರ ಇಲಾಖೆ ಮುಖ್ಯಸ್ಥ ತಪನ್‌ ಕುಮಾರ್‌ ದೇಕಾ ಅವಧಿ 1 ವರ್ಷ ವಿಸ್ತರಣೆ; ಇವರ ಹಿನ್ನೆಲೆ ಏನು?

Tapan Kumar Deka: ತಪನ್‌ ಕುಮಾರ್‌ ದೇಕಾ ಅವರ ಅಧಿಕಾರದ ಅವಧಿಯನ್ನು ವಿಸ್ತರಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯವು ಆದೇಶ ಹೊರಡಿಸಿದೆ. ಇವರ ಅಧಿಕಾರ ಅವಧಿ ವಿಸ್ತರಣೆಗೆ ನೇಮಕಾತಿಗಳ ಕುರಿತ ಸಂಪುಟ ಸಮಿತಿಯು ಅನುಮೋದನೆ ನೀಡಿತ್ತು. ‘ಕ್ರೈಸಿಸ್‌ ಮ್ಯಾನ್’‌ ಎಂದೇ ಖ್ಯಾತಿಯಾಗಿರುವ ತಪನ್‌ ಕುಮಾರ್‌ ದೇಕಾ ಅವರು 1988ರ ಬ್ಯಾಚ್‌, ಹಿಮಾಚಲ ಪ್ರದೇಶ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿದ್ದಾರೆ.

VISTARANEWS.COM


on

Tapan Kumar Deka
Koo

ನವದೆಹಲಿ: ಭಯೋತ್ಪಾದನೆ ನಿಗ್ರಹ, ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಸ್ಥಾಪನೆ, ನಕ್ಸಲರನ್ನು ಮಟ್ಟಹಾಕುವಲ್ಲಿ ಮಹತ್ವದ ಪಾತ್ರ ನಿರ್ವಹಿಸಿದ ಐಪಿಎಸ್‌ ಅಧಿಕಾರಿ (IPS Officer), ಗುಪ್ತಚರ ಇಲಾಖೆ (Intelligence Bureau) ಮುಖ್ಯಸ್ಥ ತಪನ್‌ ಕುಮಾರ್‌ ದೇಕಾ (Tapan Kumar Deka) ಅವರ ಅಧಿಕಾರದ ಅವಧಿಯನ್ನು ಕೇಂದ್ರ ಸರ್ಕಾರವು (Central Government) ಒಂದು ವರ್ಷ ವಿಸ್ತರಿಸಿದೆ. 2024ರ ಜೂನ್‌ 30ಕ್ಕೆ ತಪನ್‌ ಕುಮಾರ್‌ ದೇಕಾ ಅವರ ಅವಧಿ ಮುಗಿಯಬೇಕಿತ್ತು. ಈಗ ಕೇಂದ್ರ ಸರ್ಕಾರವು ಅವರ ಅವಧಿಯನ್ನು 2025ರ ಜೂನ್‌ 30ರವರೆಗೆ ವಿಸ್ತರಣೆ ಮಾಡಿದೆ.

ತಪನ್‌ ಕುಮಾರ್‌ ದೇಕಾ ಅವರ ಅಧಿಕಾರದ ಅವಧಿಯನ್ನು ವಿಸ್ತರಿಸಿ ಕೇಂದ್ರ ಸಿಬ್ಬಂದಿ ಸಚಿವಾಲಯವು ಆದೇಶ ಹೊರಡಿಸಿದೆ. ಇವರ ಅಧಿಕಾರ ಅವಧಿ ವಿಸ್ತರಣೆಗೆ ನೇಮಕಾತಿಗಳ ಕುರಿತ ಸಂಪುಟ ಸಮಿತಿಯು ಅನುಮೋದನೆ ನೀಡಿತ್ತು. ಈಶಾನ್ಯ ರಾಜ್ಯಗಳಲ್ಲಿ ಗಲಭೆಯನ್ನು ನಿಯಂತ್ರಿಸುವುದು, ಬಸ್ತಾರ್‌ನಲ್ಲಿ ಮಾವೋವಾದಿಗಳನ್ನು ನಿಗ್ರಹಿಸುವುದು ಸೇರಿ ಹಲವು ಕಾರ್ಯಾಚರಣೆಗಳ ರೂವಾರಿ ಆಗಿರುವ ಇವರ ಅಧಿಕಾರವನ್ನು ಮುಂದುವರಿಸುವ ಕುರಿತು ಕೇಂದ್ರ ಸರ್ಕಾರ ಮಹತ್ವದ ತೀರ್ಮಾನ ತೆಗೆದುಕೊಂಡಿದೆ.

ಯಾರಿವರು ತಪನ್‌ ಕುಮಾರ್‌ ದೇಕಾ?

‘ಕ್ರೈಸಿಸ್‌ ಮ್ಯಾನ್’‌ ಎಂದೇ ಖ್ಯಾತಿಯಾಗಿರುವ ತಪನ್‌ ಕುಮಾರ್‌ ದೇಕಾ ಅವರು 1988ರ ಬ್ಯಾಚ್‌, ಹಿಮಾಚಲ ಪ್ರದೇಶ ಕೇಡರ್‌ನ ಐಪಿಎಸ್‌ ಅಧಿಕಾರಿಯಾಗಿದ್ದಾರೆ. 2009ರಲ್ಲಿ ಮುಂಬೈನಲ್ಲಿ ನಡೆದ ಉಗ್ರರ ದಾಳಿಯ ವೇಳೆ ಇವರು ಉಗ್ರರ ನಿಗ್ರಹ ಕಾರ್ಯಾಚರಣೆಯ ನೇತೃತ್ವವನ್ನು ವಹಿಸಿಕೊಂಡಿದ್ದರು. ಜಮ್ಮು-ಕಾಶ್ಮೀರದಲ್ಲಿ ಇಂಡಿಯನ್‌ ಮುಜಾಹಿದ್ದೀನ್‌ ಉಗ್ರರ ನಿಗ್ರಹ, ಈಶಾನ್ಯ ರಾಜ್ಯಗಳಲ್ಲಿ ಗಲಭೆಕೋರರ ನಿಯಂತ್ರಣ, ಛತ್ತೀಸ್‌ಗಢದ ಬಸ್ತಾರ್‌ನಲ್ಲಿ ಮಾವೋವಾದಿಗಳ ಹೆಡೆಮುರಿ ಕಟ್ಟುವುದು ಸೇರಿ ಹಲವು ಯಶಸ್ವಿ ಕಾರ್ಯಾಚರಣೆಗಳಿಗೆ ಇವರೇ ರೂವಾರಿಯಾಗಿದ್ದಾರೆ.

ಜಮ್ಮು-ಕಾಶ್ಮೀರ ಸರ್ಕಾರಕ್ಕೆ ಇವರು ಪ್ರಮುಖ ಸಲಹೆಗಾರರಾಗಿದ್ದರು. ಅದರಲ್ಲೂ, ಪಾಕಿಸ್ತಾನ ಪೋಷಿತ ಉಗ್ರವಾದವನ್ನು ನಿಗ್ರಹಿಸುವ ದಿಸೆಯಲ್ಲಿ ಇವರು ತೋರಿದ ಮಾರ್ಗದರ್ಶನವು ಸೇನೆಯ ಯಶಸ್ಸಿಗೆ ಕಾರಣವಾಗಿದೆ ಎಂದೇ ಹೇಳಲಾಗುತ್ತಿದೆ. ಅಸ್ಸಾಂ ಮೂಲದವರಾದ ಇವರನ್ನು 2019ರಲ್ಲಿ ಪೌರತ್ವ ತಿದ್ದುಪಡಿ ಜಾರಿಗೆ ಕೇಂದ್ರ ಸರ್ಕಾರ ಮುಂದಾದಾಗ ಅಸ್ಸಾಂನಲ್ಲಿ ಗಲಭೆ ಉಂಟಾಗಿತ್ತು. ಇದನ್ನು ನಿಯಂತ್ರಿಸಲು ಅಮಿತ್‌ ಶಾ ಅವರೇ ತಪನ್‌ ಕುಮಾರ್‌ ದೇಕಾ ಅವರನ್ನು ಅಸ್ಸಾಂಗೆ ಕಳುಹಿಸಿದ್ದರು. ಕೆಲ ದಿನಗಳ ಹಿಂದಷ್ಟೇ ಕೇಂದ್ರ ಸರ್ಕಾರವು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಅವರ ಅಧಿಕಾರದ ಅವಧಿಯನ್ನು ಮೂರನೇ ಅವಧಿಗೆ ವಿಸ್ತರಣೆ ಮಾಡಿತ್ತು.

ಇದನ್ನೂ ಓದಿ: Ajit Doval: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿ ಅಜಿತ್‌ ದೋವಲ್‌ 3ನೇ ಅವಧಿಗೆ ನೇಮಕ; ಉಗ್ರರಿಗೆ ನಡುಕ

Continue Reading

ಪ್ರಮುಖ ಸುದ್ದಿ

Rohit Sharma : ಆಸ್ಟ್ರೇಲಿಯಾದ ವೇಗಿ ​ ಸ್ಟಾರ್ಕ್​ ಬೆಂಡೆತ್ತಿದ ರೋಹಿತ್​; ಒಂದೇ ಓವರ್​​ನಲ್ಲಿ 29 ರನ್​

Rohit Sharma: ಪಂದ್ಯಾವಳಿಯಲ್ಲಿ ಕಡಿಮೆ ಸ್ಕೋರ್​ಗಳನ್ನು ಬಾರಿಸಿದ್ದ ರೋಹಿತ್ ಶರ್ಮಾ, ಬ್ಯಾಟ್​ ಮೂಲಕ ಅಬ್ಬರಿಸಿ ತಮ್ಮ ಟೀಕಾಕಾರರನ್ನು ಮೌನವಾಗಿಸಿದರು. ಡೇರೆನ್ ಸಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭದಿಂದಲೂ ಆಸ್ಟ್ರೇಲಿಯಾದ ಬೌಲರ್​ಗಳನ್ನು ಹಿಮ್ಮೆಟ್ಟಿಸಿದರು.

VISTARANEWS.COM


on

Rohit Sharma
Koo

ಬೆಂಗಳೂರು: 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ (Rohit Sharma) ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಸೇಂಟ್ ಲೂಸಿಯಾದ ಗ್ರೋಸ್ ಐಸ್ಲೆಟ್​​ನಲ್ಲಿರುವ ಡೇರೆನ್ ಸಾಮಿ ರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ತಂಡಗಳ ನಡುವಿನ ಪಂದ್ಯಾವಳಿಯ ಸೂಪರ್ 8 ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ರೋಹಿತ್​ ಅಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. 41 ಎಸೆತಕ್ಕೆ 92 ರನ್ ಬಾರಿಸಿ ಔಟಾದರು. ಈ ಮೂಲಕ ಅವರು ಮೊಟ್ಟ ಮೊದಲ ಟಿ2 ವಿಶ್ವ ಕಪ್​ ಶತಕದ ಅವಕಾಶ ನಷ್ಟ ಮಾಡಿಕೊಂಡರು.

ಪಂದ್ಯಾವಳಿಯಲ್ಲಿ ಕಡಿಮೆ ಸ್ಕೋರ್​ಗಳನ್ನು ಬಾರಿಸಿದ್ದ ರೋಹಿತ್ ಶರ್ಮಾ, ಬ್ಯಾಟ್​ ಮೂಲಕ ಅಬ್ಬರಿಸಿ ತಮ್ಮ ಟೀಕಾಕಾರರನ್ನು ಮೌನವಾಗಿಸಿದರು. ಡೇರೆನ್ ಸಾಮಿ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರಂಭದಿಂದಲೂ ಆಸ್ಟ್ರೇಲಿಯಾದ ಬೌಲರ್​ಗಳನ್ನು ಹಿಮ್ಮೆಟ್ಟಿಸಿದರು.

ರೋಹಿತ್ ಶರ್ಮಾ ಮೂರನೇ ಓವರ್​ ಎಸೆತ ಮಿಚೆಲ್ ಸ್ಟಾರ್ಕ್ ಅವರನ್ನು ಮೌನವಾಗಿಸಿದರು. ಒಂದೇ ಓವರ್​ನಲ್ಲಿ 29 ರನ್ ಬಾರಿಸಿದರು. ಭಾರತದ ನಾಯಕ ಕವರ್ ಏರಿಯಾ ಮೇಲೆ ಬೃಹತ್ ಸಿಕ್ಸರ್ ಬಾರಿಸಿದರು. ಎರಡನೇ ಎಸೆತದಲ್ಲಿ ರೋಹಿತ್ ಶರ್ಮಾ ಕೂಡ ಇದೇ ರೀತಿಯ ಶಾಟ್ ಬಾರಿಸಿದರು. ಎರಡು ಸಿಕ್ಸರ್​ಗಳ ನಂತರ ಒಂದು ಎಸೆತ ನಷ್ಟ ಮಾಡಿಕೊಂಡರು.

ರೋಹಿತ್ ಶರ್ಮಾ ಅಲ್ಲಿಗೆ ನಿಲ್ಲಲಿಲ್ಲ . ನಾಲ್ಕನೇ ಎಸೆತಕ್ಕೆ ಮತ್ತೊಂದು ಬೃಹತ್​ ಸಿಕ್ಸರ್ ಬಾರಿಸಿದರು. ಅದು 96 ಮೀಟರ್​ ಸಿಕ್ಸರ್. ಓವರ್ ನ ಕೊನೆಯ ಎಸೆತದಲ್ಲಿ ಮಿಚೆಲ್ ಸ್ಟಾರ್ಕ್ ಅವರು ಫುಲ್ ಟಾಸ್ ಎಸೆದರು. ರೋಹಿತ್ ಶರ್ಮಾ ಅವರು ಬೃಹತ್ ಸಿಕ್ಸರ್ ಗಾಗಿ ಥರ್ಡ್​ ಮ್ಯಾನ್ ಕಡೆ ಹಾರಿಸಿದರು. ಅಲ್ಲಿಗೆ ಒಂದೇ ಓವರ್​ನಲ್ಲಿ 29 ರನ್​ ಬಾರಿಸಿದರು.

205 ರನ್ ಬಾರಿಸಿದ ಭಾರತ

ಇಲ್ಲಿನ ಡ್ಯಾರೆನ್​ ಸಮಿ ಕ್ರಿಕೆಟ್ ಸ್ಟೇಡಿಯಮ್​ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಅಂತೆಯೇ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ಆರಂಭದಿಂದಲೇ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ನೀಡಿ 5 ವಿಕೆಟ್​ ನಷ್ಟಕ್ಕೆ 205 ರನ್ ಬಾರಿಸಿತು. ವಿರಾಟ್​ ಕೊಹ್ಲಿ ಶೂನ್ಯಕ್ಕೆ ಔಟಾಗಿರುವ ಹೊರತಾಗಿಯೂ ಭಾರತ ತಂಡ ದೊಡ್ಡ ಮೊತ್ತ ಪೇರಿಸಿದೆ.

ಇದನ್ನೂ ಓದಿ: Virat Kohli : ವಿರಾಟ್​​ ಕೊಹ್ಲಿ ಕತೆ ಮುಗೀತು… ಮತ್ತೆ ಶೂನ್ಯಕ್ಕೆ ಔಟಾದ ಸ್ಟಾರ್​ ಬ್ಯಾಟರ್​!

ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ಆಘಾತ ಕೊಟ್ಟಿದ್ದು ವಿರಾಟ್ ಕೊಹ್ಲಿ. ಐದು ಎಸೆತಗಳನ್ನು ಎದುರಿಸಿದ ಅವರು ಶೂನ್ಯಕ್ಕೆ ಔಟಾಗಿ ಬೇಸರ ಮೂಡಿಸಿದರು. ಆದರೆ, ಇನ್ನೊಂದು ಬದಿಯಲ್ಲಿ ಅಬ್ಬರಿಸಿದ ರೋಹಿತ್ ಶರ್ಮಾ ರನ್ ಪೇರಿಸುತ್ತಲೇ ಹೋದರು. ಭಾರತ ಕೇವಲ 29 ಎಸೆತಗಳಲ್ಲಿ 50 ರನ್ ಬಾರಿಸಿದರೆ ಬಳಿಕ ರೋಹಿತ್ ಶರ್ಮಾ 19 ಎಸೆತಕ್ಕೆ ಅರ್ಧ ಶತಕ ಬಾರಿಸಿದರು. ಮೂರನೇ ಕ್ರಮಾಂಕದಲ್ಲಿ ಆಡಲು ಬಂದ ರಿಷಭ್​ ಪಂತ್​ 14 ಎಸೆತಕ್ಕೆ 15 ರನ್ ಬಾರಿಸಿದರು. ಆದರೆ, ನಂತರ ಆಡಲು ಬಂದ ಸೂರ್ಯಕುಮಾರ್​ ಯಾದವ್​ ರೋಹಿತ್ ಶರ್ಮಾಗೆ ಉತ್ತಮ ಬೆಂಬಲ ಕೊಟ್ಟರು. ಆದರೆ, ಅವರು 16 ಎಸೆತಕ್ಕೆ 36 ರನ್ ಬಾರಿಸಿ ಔಟಾದರು.

ಸೂರ್ಯ ಔಟಾಗುತ್ತಿದ್ದಂತೆ ಭಾರತದ ಸ್ಕೋರ್ ಗಳಿಕೆ ನಿಧಾನಗೊಂಡಿತು. ಆದಾಗ್ಯೂ ಶಿವಂ ದುಬೆ 1 ಸಿಕ್ಸರ್ ಹಾಗೂ 2 ಫೋರ್ ಸಮೇತ 28 ರನ್ ಬಾರಿಸಿದರು. ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಔಟಾಗದೇ 17 ಎಸೆತಕ್ಕೆ 27 ರನ್ ಬಾರಿಸಿದರು. ರವೀಂದ್ರೆ ಜಡೇಜಾ 5 ಎಸೆತಕ್ಕೆ 9 ರನ್ ಬಾರಿಸಿದರು.

Continue Reading
Advertisement
Kannada New movie Ee Pada Punya Pada title unveiling
ಕರ್ನಾಟಕ4 hours ago

Kannada New Movie: ಸಿದ್ದು ಪೂರ್ಣಚಂದ್ರ ನಿರ್ದೇಶನದ ನೂತನ ಚಿತ್ರ ‘ಈ ಪಾದ ಪುಣ್ಯ ಪಾದ’ ಶೀರ್ಷಿಕೆ ಅನಾವರಣ

bagilige bantu sarkara sevege irali sahakara programme in channapattana
ರಾಮನಗರ4 hours ago

DK Shivakumar: ವಿವಿಧ ಸಮಸ್ಯೆ ಹೊತ್ತು ಬಂದವರಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದ ಡಿ.ಕೆ. ಶಿವಕುಮಾರ್

Lecture and interaction program by Akhil Bharatiya Sahitya Parishad at Yallapur
ಉತ್ತರ ಕನ್ನಡ4 hours ago

Uttara Kannada News: ರಾಮಮಂದಿರವಾಗಲಿ, ನಳಂದ ವಿವಿಯಾಗಲಿ ಜಾತಿ, ಧರ್ಮ, ಪಂಥಗಳಿಗೆ ಸೀಮಿತವಾದುದಲ್ಲ: ಹರಿಪ್ರಕಾಶ್‌ ಕೋಣೆಮನೆ

Rohit Sharma
ಪ್ರಮುಖ ಸುದ್ದಿ4 hours ago

T20 World Cup : ಆಸ್ಟ್ರೇಲಿಯಾ ವಿರುದ್ಧ 24 ರನ್​ಗಳ ಭರ್ಜರಿ ಗೆಲುವು ಸಾಧಿಸಿ ಸೇಡು ತೀರಿಸಿಕೊಂಡ ಭಾರತ

Nita Ambani
ದೇಶ4 hours ago

Nita Ambani: ಕಾಶಿ ವಿಶ್ವನಾಥ ದೇಗುಲಕ್ಕೆ ತೆರಳಿ ಮಗನ ಮದುವೆಗೆ ದೇವರನ್ನು ಆಮಂತ್ರಿಸಿದ ನೀತಾ ಅಂಬಾನಿ!

Tapan Kumar Deka
ದೇಶ5 hours ago

Tapan Kumar Deka: ಗುಪ್ತಚರ ಇಲಾಖೆ ಮುಖ್ಯಸ್ಥ ತಪನ್‌ ಕುಮಾರ್‌ ದೇಕಾ ಅವಧಿ 1 ವರ್ಷ ವಿಸ್ತರಣೆ; ಇವರ ಹಿನ್ನೆಲೆ ಏನು?

Rohit Sharma
ಪ್ರಮುಖ ಸುದ್ದಿ5 hours ago

Rohit Sharma : ಆಸ್ಟ್ರೇಲಿಯಾದ ವೇಗಿ ​ ಸ್ಟಾರ್ಕ್​ ಬೆಂಡೆತ್ತಿದ ರೋಹಿತ್​; ಒಂದೇ ಓವರ್​​ನಲ್ಲಿ 29 ರನ್​

IND vs AUS
ಪ್ರಮುಖ ಸುದ್ದಿ6 hours ago

IND vs AUS : ಟಿ20 ವಿಶ್ವ ಕಪ್​ 2024ರಲ್ಲಿ ಗರಿಷ್ಠ ಸ್ಕೋರ್ ಬಾರಿಸಿದ ಭಾರತ ತಂಡ; 5 ವಿಕೆಟ್​ಗೆ 205

Ram Mandir
ದೇಶ6 hours ago

Ram Mandir: ಸೋರುತಿಹುದು ಅಯೋಧ್ಯೆ ರಾಮಮಂದಿರ ಮಾಳಿಗೆ; ದೇಗುಲದ ಮುಖ್ಯ ಅರ್ಚಕರ ಆತಂಕ

Bengaluru Power Cut
ಬೆಂಗಳೂರು7 hours ago

Bengaluru Power Cut: ಜೂನ್‌ 26ರಂದು ಬೆಂಗಳೂರಿನ ಜೆ.ಸಿ.ನಗರ, ಮಾರಪ್ಪ ಗಾರ್ಡನ್ ಸೇರಿ ಹಲವೆಡೆ ವಿದ್ಯುತ್‌ ವ್ಯತ್ಯಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ9 hours ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ3 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ4 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ4 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು1 week ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು1 week ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

ಟ್ರೆಂಡಿಂಗ್‌