Site icon Vistara News

Horoscope Today | ಕಟಕ ರಾಶಿಯವರಿಗೆ ಹಿಡಿದ ಕಾರ್ಯದಲ್ಲಿ ಯಶಸ್ಸು; ನಿಮ್ಮ ಭವಿಷ್ಯ ಹೇಗಿದೆ?

Horoscope Today daily horoscope

Horoscope Today

ಇಂದಿನ ಪಂಚಾಂಗ (22-12-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಮಾರ್ಗಶಿರ ಮಾಸ, ಕೃಷ್ಣ ಪಕ್ಷ.

ತಿಥಿ: ಚತುರ್ದಶಿ19:12 ವಾರ: ಗುರುವಾರ
ನಕ್ಷತ್ರ: ಜೇಷ್ಠ 28:01 ಯೋಗ: ಶೂಲ17:42
ಕರಣ: ವಿಷ್ಟಿ (ಭದ್ರ)08:48 ಇಂದಿನ ವಿಶೇಷ: ಮಾರ್ಗಶಿರ ಲಕ್ಷ್ಮೀವ್ರತ
ಅಮೃತಕಾಲ: ರಾತ್ರಿ 08 ಗಂಟೆ 10 ನಿಮಿಷದಿಂದ 09 ಗಂಟೆ 36 ನಿಮಿಷದವರೆಗೆ.

ಸೂರ್ಯೋದಯ: 06 : 37    ಸೂರ್ಯಾಸ್ತ: 05 : 59

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ಸ್ನೇಹಿತರು ಅಥವಾ ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಸಾಧ್ಯತೆ. ಆರೋಗ್ಯದಲ್ಲಿ ಸ್ವಲ್ಪ ಮಟ್ಟಿನ ವ್ಯತ್ಯಾಸದಿಂದ ಖರ್ಚು. ಹಿರಿಯರ ಮಾರ್ಗದರ್ಶನ ಸಿಗಲಿದೆ. ಅತಿಥಿಗಳ ಆಗಮನದಿಂದ ನಿಮ್ಮ ಯೋಜಿತ ಕಾರ್ಯ ವಿಳಂಬವಾಗುವ ಸಾಧ್ಯತೆ. ವೈವಾಹಿಕ ಜೀವನದಲ್ಲಿ ವಿರಸ ಉಂಟಾಗುವ ಸಾಧ್ಯತೆ, ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ವೃಷಭ: ನಿಮ್ಮ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಇಂದು ಪ್ರಶಂಸೆಗೆ ಪಾತ್ರರಾಗುವಿರಿ. ದಿನದ ಮಟ್ಟಿಗೆ ಖರ್ಚು. ಸಂಬಂಧವಿರದ ವಿಷಯಗಳಿಗೆ ಕಿವಿಗೊಡವುದು ಬೇಡ. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಳೆಯ ವಿಚಾರಗಳನ್ನು ನೆನಪಿಸಿಕೊಂಡು ಮನಸ್ಸಿಗೆ ಗಾಯ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಮಿಥುನ: ಇಂದು ನೀವು ಮಂಡಿಸುವ ಅಭಿಪ್ರಾಯಗಳಿಗೆ ವಿರೋಧ ವ್ಯಕ್ತವಾಗವ ಸಾಧ್ಯತೆ, ಆತುರದಲ್ಲಿ ಮಾತನಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಅನಿರೀಕ್ಷಿತ ಖರ್ಚು ಹೆಚ್ಚು. ಆರೋಗ್ಯದ ಕಡೆಗೆ ಗಮನ ನೀಡುವುದು ಉತ್ತಮ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ಕಟಕ: ಇಂದು ನಿಮಗೆ ಹಿಡಿದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಗೃಹ ಬಳಕೆ ಸಾಧನಗಳ ಖರೀದಿ ಸಾಧ್ಯತೆಯಿಂದ ಖರ್ಚು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿಥಿಗಳ ಆಗಮನ ಹರ್ಷ ತರಲಿದೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಸಿಂಹ: ನಿಮ್ಮ ಆಕರ್ಷಕ ಮಾತುಗಳಿಂದ ಇತರರನ್ನು ಆಕರ್ಷಸುವಿರಿ. ನಾಲಿಗೆಯ ರುಚಿಗೆ ಮಾರು ಹೋಗಿ ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ, ಆಹಾರ ಸೇವಿಸುವಾಗ ಮಿತಿಯಿರಲಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಸಂಗಾತಿಯ ಮಾತುಗಳು ಮಧುರವೇನಿಸುವವು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಕನ್ಯಾ: ನಿಮ್ಮ ತ್ಯಾಗದ ಮನೋಭಾವ ನಿಮಗೇ ಸಂತಸ ತರುವುದು. ಯಾರೊಂದಿಗೂ ದಿನದ ಮಟ್ಟಿಗೆ ಹಣಕಾಸಿನ ವ್ಯವಹಾರ ಮಾಡಬೇಡಿ, ವಿನಾಕಾರಣ ವಿವಾದವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದಲ್ಲಿ ಅನಾವಶ್ಯಕ ಮಾತುಗಳಿಂದ ಜಗಳವಾಗಬಹುದು, ಮೌನದಿಂದ ವರ್ತಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ತುಲಾ: ಇತರರು ನಿಮ್ಮ ಕಾರ್ಯಗಳ ಬಗ್ಗೆ ಪ್ರಶಂಸೆ ವ್ಯಕ್ತಪಡಿಸುವರು. ಹಣಕಾಸಿನ ಹರಿವು ಹೆಚ್ಚಾಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಸಹದ್ಯೋಗಿಗಳು ನಿಮ್ಮ ವಿರುದ್ಧ ಪಿತೂರಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ವಿನಾಕಾರಣ ಜಗಳ ಮಾಡಿ ಮನಸ್ಸು ಕೆಡಿಸಿಕೊಳ್ಳುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ವೃಶ್ಚಿಕ: ಇತರರನ್ನು ಟೀಕಿಸಲು ನಿಮ್ಮ ಅಮೂಲ್ಯ ಸಮಯ ವ್ಯರ್ಥ ಮಾಡುವುದು ಬೇಡ. ಅನಾವಶ್ಯಕ ವಿಚಾರಗಳಿಗ ತಲೆ ಕೆಡಿಸಿಕೊಂಡು ಆರೋಗ್ಯ ಹಾಳು ಮಾಡಿಕೊಳ್ಳುವುದು ಬೇಡ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದಲ್ಲಿ ಹಳೆಯ ವಿಚಾರಗಳು ಕಲಹ ಸೃಷ್ಟಿಸಬಹುದು, ಇಂದು ನಿಮ್ಮ ಮಾತು ಮಿತವಾಗಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಮನರಂಜನಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಅಮೂಲ್ಯ ವಸ್ತುಗಳ ಮೇಲೆ ಗಮನವಿರಲಿ. ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಹಣಕಾಸು ಪ್ರಗತಿ ಸಾಧಾರಣ. ವಿನಾಕಾರಣ ನಿಮ್ಮ ಸಿಟ್ಟನ್ನು ಸಂಗಾತಿಯ ಮೇಲೆ ಹಾಕಿ, ಕುಟುಂಬದ ವಾತಾವರಣ ಕೆಡಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 2

ಮಕರ: ನಿಮ್ಮ ಕೋಪದ ಸ್ವಭಾವದಿಂದ ಇತರರೊಂದಿಗೆ ವಾದಕ್ಕಿಳಿಯಬೇಡಿ. ಆತುರದಲ್ಲಿ ಅತಿರೇಕದ ಮಾತುಗಳು ಜಗಳ ತಂದೀತು. ಆರೋಗ್ಯದ ಕಡೆಗೆ ಗಮನವಿರಲಿ. ದಿನದ ಮಟ್ಟಿಗೆ ಖರ್ಚು ಹೆಚ್ಚು. ಅತ್ಮೀಯರೊಂದಿಗೆ ಪ್ರಯಾಣಿಸುವ ಸಾಧ್ಯತೆ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕುಂಭ: ನೀವು ಕೆಲಸಕ್ಕೆ ಹಾಕಿದ ಶ್ರಮ ವ್ಯರ್ಥವಾಗದಂತೆ ಎಚ್ಚರಿಕೆ ವಹಿಸಿ. ಆತುರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ತಾಳ್ಮೆಯಿಂದ ವರ್ತಿಸಿ. ವಿವಾಹ ಅಪೇಕ್ಷಿತರಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮೀನ: ರಹಸ್ಯ ಕಾರ್ಯಗಳು ಯಶಸ್ಸು ತಂದು ಕೊಡಲಿವೆ. ಕುಟುಂಬಕ್ಕೆ ಸಮಯವನ್ನು ನೀಡುವಿರಿ. ವಿನಾಕಾರಣ ಕೋಪಗೊಂಡು ಮನಸ್ಸಿನ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಖರ್ಚು ಹೆಚ್ಚಾಗಲಿದೆ. ಸಂಗಾತಿ ನಿಮ್ಮ ಮನಸ್ಸಿನ ಭಾವನೆಗಳಿಗೆ ಸ್ಪಂದಿಸುವಳು. ಮಧುರ ಪ್ರೇಮ ಅಂಕುರವಾಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Prerane | ಸಂಪೂರ್ಣವಾದ ತೊಡಗುವಿಕೆಯೇ ಆನಂದದ ಮೂಲ

Exit mobile version