ಇಂದಿನ ಪಂಚಾಂಗ (23-10-2022)
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು, ಆಶ್ವಯುಜ ಮಾಸ, ಕೃಷ್ಣ ಪಕ್ಷ.
ತಿಥಿ: ತ್ರಯೋದಶಿ 18:02 ವಾರ: ಭಾನುವಾರ
ನಕ್ಷತ್ರ: ಉತ್ತರಾ 14:33 ಯೋಗ: ಇಂದ್ರ 16:05
ಕರಣ: ವಣಿಜ 18:02 ದಿನ ವಿಶೇಷ: ನೀರು ತುಂಬುವ ಹಬ್ಬ, ಧನ ತ್ರಯೋದಶಿ, ಧನ್ವಂತರಿ ಜಯಂತಿ,
ಮಾಸ ಶಿವರಾತ್ರಿ.
ಅಮೃತಕಾಲ: ಬೆಳಗ್ಗೆ 07 ಗಂಟೆ 09 ನಿಮಿಷದಿಂದ 08 ಗಂಟೆ 48 ನಿಮಿಷದವರೆಗೆ.
ಸೂರ್ಯೋದಯ: 06: 11 ಸೂರ್ಯಾಸ್ತ: 05 : 57
ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಬಹಳ ದಿನಗಳ ಕನಸು ನನಸಾಗುವ ದಿನ. ವ್ಯಾಜ್ಯ ಪ್ರಕರಣಗಳು ಪರಿಹಾರವಾಗುವ ಸಾಧ್ಯತೆ. ಆರ್ಥಿಕ ಪ್ರಗತಿ. ಕುಟುಂಬ ಸದಸ್ಯರ ಸಹಕಾರದಿಂದ ಮನೆಯಲ್ಲಿ ನೆಮ್ಮದಿ. ನೀವಿಂದು ಉತ್ತಮ ಆರೋಗ್ಯವನ್ನು ಹೊಂದಿರುತ್ತೀರಿ.
ಅದೃಷ್ಟ ಸಂಖ್ಯೆ: 4
ವೃಷಭ: ಬಂಧು ಮಿತ್ರರಿಂದ ಸಹಕಾರ. ಆರ್ಥಿಕ ಪ್ರಗತಿ ಸಾಧಾರಣ. ನಿಮ್ಮ ವ್ಯಕ್ತಿತ್ವ ಇತರರನ್ನು ಆಕರ್ಷಿಸಿ, ಕಾರ್ಯದಲ್ಲಿ ಯಶಸ್ಸು ತಂದು ಕೊಡಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಬಾಗಿ, ಕುಟುಂಬದಲ್ಲಿ ನೆಮ್ಮದಿ. ಆರೋಗ್ಯ ಪರಿಪೂರ್ಣ.
ಅದೃಷ್ಟ ಸಂಖ್ಯೆ: 3
ಮಿಥುನ: ನೀವಿಂದು ಜೀವನದ ಸಂತಸದ ಕ್ಷಣಗಳನ್ನು ಕಳೆಯುವಿರಿ. ಆರ್ಥಿಕ ಪ್ರಗತಿ.
ಬಹಳ ದಿನಗಳ ಬಾಕಿ ಇರುವ ಕಾರ್ಯವು ಪೂರ್ಣವಾಗುವುದು. ಆರೋಗ್ಯ ಉತ್ತಮವಾಗಿರಲಿದೆ. ಮನೆಯಲ್ಲಿ ಪರಸ್ಪರ ಸಹಕಾರ ಸಿಗುವುದು, ಉತ್ಸಾಹದ ದಿನವಿದು.
ಅದೃಷ್ಟ ಸಂಖ್ಯೆ: 1
ಕಟಕ: ಆಕರ್ಷಕ ವ್ಯಕ್ತಿತ್ವ ಹೊಂದಿರುವ ನೀವು ಇಂದು ಇತರರನ್ನು ಆಕರ್ಷಿಸುವಿರಿ. ಆರ್ಥಿಕ ಪ್ರಗತಿ ಸಾಧಾರಣ ವಿದ್ದರೂ ಸಮರ್ಥವಾಗಿ ನಿರ್ವಹಿಸುವಿರಿ. ಉದ್ಯೋಗದಲ್ಲಿ ಪ್ರಗತಿ. ಮಡದಿಯ ಪ್ರೀತಿಗೆ ಸೋಲುವಿರಿ. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5
ಸಿಂಹ: ಉದ್ಯೋಗ ಅಪೇಕ್ಷಿತರಿಗೆ ಇಂದು ಕೆಲಸ ಸಿಗುವ ಭರವಸೆ. ಆರ್ಥಿಕ ಪ್ರಗತಿ. ಪರಿಶ್ರಮಕ್ಕೆ ತಕ್ಕ ಪ್ರತಿ ಫಲ ಸಿಗುವುದು. ಮನೆಯವರ ಪ್ರೀತಿ ಸಹಕಾರ ದೊರೆಯಲಿದೆ. ಆರೋಗ್ಯ ಪರಿಪೂರ್ಣ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 3
ಕನ್ಯಾ: ಮನೆಯಲ್ಲಿ ಪರಸ್ಪರರ ಮಧ್ಯೆ ಕಲಹದಿಂದ ವಾತಾವರಣ ಹದಗೆಡಬಹುದು. ಕೆಲಸದಲ್ಲಿ ಹಿರಿಯರಿಂದ ಒತ್ತಡ, ಎಚ್ಚರಿಕೆ ವಹಿಸಿ. ಬಹಳ ಹಿಂದಿನಿಂದ ಇರುವ ಆರೋಗ್ಯದ ಸಮಸ್ಯೆಗಳು ಮರುಕಳಿಸಬಹುದು. ಆರ್ಥಿಕ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ತುಲಾ: ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಯಾವುದೇ ಹೂಡಿಕೆ ಬೇಡ. ಬಂಧು ಮಿತ್ರರಿಂದ ಸಹಕಾರ ಸಿಗಲಿದೆ. ಆರೋಗ್ಯದಲ್ಲಿ ಉತ್ತಮ. ಮನೆಯಲ್ಲಿ ಸಂತೋಷದ ದಿನ. ನೀವಂದುಕೊಂಡಿರುವ ಕೆಲಸವನ್ನು ಇಂದು ಮಾಡಿ ಮುಗಿಸುವಿರಿ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಮಿತ್ರರಿಂದ ಸಹಕಾರ ಸಿಗಲಿದೆ. ಆರ್ಥಿಕವಾಗಿ ಪ್ರಗತಿ ಹೊಂದಲು ಹಿರಿಯರು ಮಾರ್ಗದರ್ಶನ ನೀಡುವರು. ಧೈರ್ಯದಿಂದ ಕಾರ್ಯದಲ್ಲಿ ಮುನ್ನುಗ್ಗಿ ಯಶ ಸಿಗುವುದು. ಆರೋಗ್ಯದಲ್ಲಿ ಸಾಧಾರಣ ಫಲ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 5
ಧನಸ್ಸು: ಕುಟುಂಬದ ಸದಸ್ಯರ ಆರೋಗ್ಯ ಸಂಬಂಧಿ ವಿಷಯಗಳು ತಮಗೆ ಒತ್ತಡ ಉಂಟುಮಾಡಬಹುದು. ನಿಮ್ಮ ಆರೋಗ್ಯದ ಕುರಿತೂ ಕಾಳಜಿ ವಹಿಸಿ. ಉದಾಸಿನ ಮಾಡುವುದು ಬೇಡ. ಆಶಾವಾದಿಗಳಾಗಿರಿ ಕುಲದೇವರನ್ನು ಸ್ಮರಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಮಕರ: ಉದ್ಯೋಗದಲ್ಲಿ ಅಧಿಕಾರಿಗಳು ಕಿರಿಕಿರಿ ಉಂಟುಮಾಡುವ ಸಾಧ್ಯತೆ. ಆಲಸ್ಯದಿಂದ ದೂರವಿದ್ದು ಕಾರ್ಯ ಪೂರ್ಣ ಮಾಡಿ. ಕೆಲಸದ ಒತ್ತಡವನ್ನು ಮನೆಯ ಸದಸ್ಯರ ಮೇಲೆ ಹಾಕಿ, ವಾತಾವರಣ ಹದಗೆಡಲು ಕಾರಣವಾಗಬೇಡಿ. ಗುರುಗಳ ಆರಾಧನೆ ಮಾಡಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಕುಂಭ: ಭೂ ಸಂಬಂಧಿ ವ್ಯವಹಾರದಲ್ಲಿ ಪ್ರಗತಿ. ಬಹಳ ದಿನಗಳ ಕನಸು ನನಸಾಗುವ ದಿನ. ಇಂದು ನೀವಂದುಕೊಂಡಿರುವುದಕ್ಕೆ ಕಾಲ ಕೂಡಿ ಬರುವುದು. ಅನ್ಯರು ಆಡುವ ಕುಹುಕದ ಮಾತುಗಳಿಗೆ ಬೇಸರ ಮಾಡಿಕೊಳ್ಳಬೇಡಿ. ಆರೋಗ್ಯ ಉತ್ತಮ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 9
ಮೀನ: ನಿಮ್ಮ ಮಹತ್ವಾಕಾಂಕ್ಷೆಯ ಕೆಲಸ ಕಾರ್ಯಗಳು ಕುಂಠಿತವಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂವಾಗದಿರಲಿ. ಆರ್ಥಿಕ ನಷ್ಟ ತಪ್ಪಿಸಿಕೊಳ್ಳಿ. ಸಂಗಾತಿಯ ಮಾತುಗಳು ಹಿತವೆನಿಸದು. ಆರೋಗ್ಯದ ಬಗ್ಗೆ ಕಾಳಜಿ ಇರಲಿ. ಕುಟುಂಬದಲ್ಲಿ ನೆಮ್ಮದಿ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ | ಭಾವಾಶ್ರಿತ ಗ್ರಹಫಲ | ಚಂದ್ರನು ನೀಡುವ ಫಲಗಳೇನು?