Site icon Vistara News

Horoscope Today | ಮಿಥುನ ರಾಶಿಯ ಅದೃಷ್ಟ ಸಂಖ್ಯೆ 6; ನಿಮ್ಮ ಅದೃಷ್ಟ ಸಂಖ್ಯೆ ಎಷ್ಟು?

rashi bhavishya today in kannada

Horoscope Today

ಇಂದಿನ ಪಂಚಾಂಗ (28-12-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ.

ತಿಥಿ: ಷಷ್ಠಿ 20:43 ವಾರ: ಬುಧವಾರ
ನಕ್ಷತ್ರ: ಶತತಾರ 12:44 ಯೋಗ: ಸಿದ್ಧಿ 14:19
ಕರಣ: ಕೌಲವ 09:43 ಇಂದಿನ ವಿಶೇಷ: ತುಳು ಷಷ್ಠಿ
ಅಮೃತಕಾಲ: ಮುಂಜಾನೆ 06 ಗಂಟೆ 04 ನಿಮಿಷದಿಂದ 07 ಗಂಟೆ 33 ನಿಮಿಷದವರೆಗೆ.

ಸೂರ್ಯೋದಯ: 06 : 40    ಸೂರ್ಯಾಸ್ತ: 0೬ : 02

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ವಿಶೇಷ ಅತಿಥಿಗಳ ಆಗಮನ, ಭೇಟಿ ಹರುಷ ತರುವುದು. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವೃಷಭ: ದೈಹಿಕವಾಗಿ ಮತ್ತು ಮಾನಸಿಕವಾಗಿ ಇಂದು ಕೊಂಚಮಟ್ಟಿಗೆ ಬಳಲುವ ಸಾಧ್ಯತೆ. ಕುಟುಂಬದಲ್ಲಿ ಹೊಸ ಅತಿಥಿಗಳ ಆಗಮನ ಸಂತಸ ಹೆಚ್ಚಿಸಲಿದೆ. ಆರ್ಥಿಕವಾಗಿ ಪ್ರಗತಿ. ಆತುರದಲ್ಲಿ ಮಾಡುವ ಕೆಲಸ ಅಪಾಯ ತಂದೀತು ಎಚ್ಚರಿಕೆ ಇರಲಿ. ಆರೋಗ್ಯದ ಕುರಿತು ವಿಶೇಷ ಕಾಳಜಿ ಇರಲಿ. ಉದ್ಯೋಗಿಗಳಿಗೆ ಅಧಿಕಾರಿಗಳಿಂದ ಕಿರುಕುಳ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಮಿಥುನ: ಹಳೆಯ ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಪೋಷಕರಿಂದ ಹಣಕಾಸು ವಿಷಯದಲ್ಲಿ ಬೆಂಬಲ ದೊರೆಯಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಇಂದು ಒತ್ತಡದ ದಿನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಕಟಕ: ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ದಿನಕ್ಕಿಂತಲೂ ಹೆಚ್ಚಿನ ಪ್ರಗತಿ ಸಾಧಿಸಲಿದ್ದೀರಿ. ಅತಿಥಿಗಳ ಆಗಮನ ಸಂತಸ ತರುವುದು. ಸಂಗಾತಿಯ ಮಾತುಗಳು ಅಹಿತಕರವೆನಿಸುವವು. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ, ಪ್ರೋತ್ಸಾಹ ಸಿಗುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಹಿಂದೆ ಮಾಡಿದ ತಪ್ಪಿನ ಅರಿವಾಗುವುದು. ಕುಟುಂಬದ ಸದಸ್ಯರೊಂದಿಗೆ ಪ್ರವಾಸ ಬೆಳೆಸುವ ಸಾಧ್ಯತೆ. ವಿನಾಕಾರಣ ಸಂಬಂಧಿಕರೊಂದಿಗೆ ಮಾತಿಗೆ ಇಳಿದು ಅಪಾಯ ತಂದುಕೊಳ್ಳುವುದು ಬೇಡ. ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯ ಪರಿಪೂರ್ಣ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಹೆಚ್ಚಿದ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ. ಇದರಿಂದ ಮನಸ್ಸಿಗೆ ಸಮಾಧಾನ ಸಿಗಲಿದೆ. ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚು. ಉದ್ಯೋಗಿಗಳಿಗೆ ಯಶಸ್ಸಿನ ದಿನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ತುಲಾ: ಬಿಡುವಿರದ ಕಾರ್ಯದ ಒತ್ತಡ, ಅದರ ಹೊರತಾಗಿಯೂ ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು. ಉದ್ಯೋಗಿಗಳಿಗೆ ಶುಭ ಫಲ. ದಿನದ ಕೊನೆಯಲ್ಲಿ ಮನೆಯ ಸದಸ್ಯರ ನಡುವೆ ಭಿನ್ನಾಭಿಪ್ರಾಯ. ಇದು ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ವೃಶ್ಚಿಕ: ಇಂದು ಎಲ್ಲಿಲ್ಲದ ಉತ್ಸಾಹ, ಸಂತಸ ಇರಲಿದೆ. ನಿಮ್ಮ ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯುವುದು. ಯಾರಾದರೂ ನಿಮ್ಮ ಸಹಾಯವನ್ನು ಬೇಡುವ ಸಾಧ್ಯತೆ, ಯೋಚಿಸಿ ಸಹಾಯ ಮಾಡಿ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸಾಧಾರಣ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರ ಫಲ.
ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಧನಸ್ಸು: ನಿರಂತರ ಪರಿಶ್ರಮದಿಂದ ಇಂದು ವಿಶ್ರಾಂತಿ ಸಿಗಲಿದೆ. ದಿನದ ಮಧ್ಯ ಭಾಗದಲ್ಲಿ ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ನಡೆಯುವ ಸಾಧ್ಯತೆ. ಎಚ್ಚರಿಕೆ ಇರಲಿ. ಆರ್ಥಿಕವಾಗಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಮಕರ: ಒತ್ತಡಗಳಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ. ಇದರಿಂದ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ. ಆರ್ಥಿಕವಾಗಿ ಸದೃಢ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಸಿಗಲಿವೆ. ದಿನದ ಮಟ್ಟಿಗೆ ಸಣ್ಣ ಪ್ರಯಾಣ ಬೆಳೆಸಲಿದ್ದೀರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಕುಂಭ: ದೀರ್ಘಕಾಲದ ಪ್ರಯಾಣದಿಂದ ಆರೋಗ್ಯದಲ್ಲಿ ವ್ಯತ್ಯಾಸ. ಹೂಡಿಕೆ ವ್ಯವಹಾರಗಳಲ್ಲಿ ಪ್ರಗತಿ. ಕುಟುಂಬದ ಸದಸ್ಯರು ಸಕಾರಾತ್ಮಕವಾಗಿ ಸ್ಪಂದಿಸುವರು. ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು. ಉದ್ಯೋಗಿಗಳಿಗೆ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಮೀನ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಕೆಲಸದ ಸ್ಥಳದಲ್ಲಿ ಅಥವಾ ವ್ಯಾಪಾರದಲ್ಲಿ ನಿಮ್ಮ ಯಾವುದೇ ಅಜಾಗರೂಕತೆ ಇಂದು ನಿಮಗೆ ಆರ್ಥಿಕ ನಷ್ಟವನ್ನು ಉಂಟುಮಾಡಬಹುದು. ಅತಿಥಿಗಳ ಆಗಮನ ನಿಮ್ಮ ಮನಸ್ಸಿಗೆ ಸಮಾಧಾನ ತರುವುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?; ಇಲ್ಲಿದೆ ವರ್ಷ ಭವಿಷ್ಯ

Exit mobile version