Site icon Vistara News

Horoscope Today | ಮಿಥುನ ರಾಶಿಯವರಿಗೆ ಉತ್ಸಾಹದ ದಿನ; ಇಂದು ನಿಮ್ಮ ಭವಿಷ್ಯ ಹೇಗಿದೆ?

nava pancham yoga

nava pancham yoga

ಇಂದಿನ ಪಂಚಾಂಗ (30-12-2022)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ.

ತಿಥಿ: ಅಷ್ಟಮಿ 18:33 ವಾರ: ಶುಕ್ರವಾರ
ನಕ್ಷತ್ರ: ಉತ್ತರಭಾದ್ರಪದ 11:23 ಯೋಗ: ವರಿಯಾನ 09:44
ಕರಣ: ಭವ 18:33
ಅಮೃತಕಾಲ: ಮುಂಜಾನೆ 06 ಗಂಟೆ 40 ನಿಮಿಷದಿಂದ 08 ಗಂಟೆ 15 ನಿಮಿಷದವರೆಗೆ.

ಸೂರ್ಯೋದಯ: 06 :41    ಸೂರ್ಯಾಸ್ತ: 0೬ : 03

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ಬಣ್ಣದ ಮಾತುಗಳನ್ನು ನಂಬಿ ಇಂದು ಯಾವುದೇ ಹೂಡಿಕೆ ವ್ಯವಹಾರಗಳಲ್ಲಿ ತೊಡಗುವುದು ಬೇಡ. ಒತ್ತಡದ ದಿನದ ಹೊರತಾಗಿಯೂ ಆರೋಗ್ಯ ಪರಿಪೂರ್ಣವಾಗಿರುತ್ತದೆ. ನಿಮ್ಮ ಆಪ್ತರಿಗೆ ನಿಮ್ಮ ಮಾತುಗಳು ಬೇಸರ ತರಿಸಬಹುದು. ಅನಾವಶ್ಯಕ ವಾದದಲ್ಲಿ ಸಿಲಿಕಿಕೊಳ್ಳುವ ಸಾಧ್ಯತೆ ಎಚ್ಚರಿಕೆ ಇರಲಿ. ದಿಢೀರ್‌ ಪ್ರಯಾಣ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವೃಷಭ: ಹಾಸ್ಯಪ್ರಜ್ಞೆಯ ನಡವಳಿಕೆಯಿಂದಾಗಿ ನೀವು ಇತರರನ್ನು ಚುಂಬಕದಂತೆ ಆಕರ್ಷಿಸಿ ಕೆಲಸ ಕಾರ್ಯಗಳನ್ನು ಯಶಸ್ವಿಯಾಗಿ ಪೂರೈಸಿಕೊಳ್ಳುವಿರಿ. ಭೂ ಹಾಗೂ ಹೂಡಿಕೆ ವ್ಯವಹಾರಗಳಲ್ಲಿ ದಿನದ ಮಟ್ಟಿಗೆ ತೊಡುಗುವುದು ಬೇಡ, ಇದರಿಂದ ಆರ್ಥಿಕವಾಗಿ ಬಳಲುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಉತ್ಸಾಹ ತುಂಬಿದ ವಾತಾವರಣ. ಇಂದು ನೀವು ಚೈತನ್ಯಯುಕ್ತವಾಗಿರುತ್ತೀರಿ. ಅನಾವಶ್ಯಕ ಖರ್ಚು ಮಾಡಿ ಆಮೇಲೆ ಹಳಹಳಿಸುವುದು ಬೇಡ. ಕುಟುಂಬದ ಯಜಮಾನನ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಒತ್ತಡದ ದಿನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕಟಕ: ನೀವು ಇತರರನ್ನು ಶ್ಲಾಘಿಸುವ ಮೂಲಕ ಯಶಸ್ಸನ್ನು ಆನಂದಿಸುವ ಸಾಧ್ಯತೆ. ವ್ಯಾಪಾರ ಹಾಗೂ ಉದ್ಯೋಗದಲ್ಲಿ ಆರ್ಥಿಕ ಲಾಭವನ್ನು ಪಡೆಯುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಆರ್ಥಿಕವಾಗಿ ಪ್ರಗತಿ. ಪ್ರೇಮಿಗಳಿಗೆ ಶುಭ ಸುದ್ದಿ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಪ್ರಗತಿ. ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ, ಆದಷ್ಟು ಮಾತಿನ ಮೇಲೆ ಹಿಡಿತವಿರಲಿ. ವಿದ್ಯಾರ್ಥಿಗಳು ಉಜ್ವಲ ಭವಿಷ್ಯಕ್ಕಾಗಿ ಮನರಂಜನೆಗೆ ಕಡಿವಾಣ ಹಾಕುವುದು ಉತ್ತಮ. ಆರೋಗ್ಯ ಪರಿಪೂರ್ಣ. ಅನಿವಾರ್ಯ ಕಾರಣಗಳಿಂದ ಖರ್ಚು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ಸಕಾರಾತ್ಮಕ ಆಲೋಚನೆಗಳು ನಿಮಗೆ ಪುಷ್ಟಿ ನೀಡಲಿವೆ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದ ಪ್ರಸಿದ್ಧಿ ಮತ್ತು ಗುರುತಿಸುವಿಕೆಯನ್ನು ಪಡೆಯುವ ಒಂದು ಯಶಸ್ವಿ ದಿನ. ವಿವಾಹ ಅಪೇಕ್ಷಿತರಿಗೆ ಶುಭ ಸೂಚನೆ ಸಿಗಲಿದೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸದೃಢರಾಗುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ತುಲಾ: ಅತಿಯಾದ ಒತ್ತಡದಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವ ಸಾಧ್ಯತೆ. ಜೀವನದ ಪ್ರಮುಖ ನಿರ್ಧಾರಗಳ ಕುರಿತು ನೀವು ಕುಟುಂಬದೊಂದಿಗೆ ಚರ್ಚಿಸುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವೃಶ್ಚಿಕ: ಹಳೆಯ ಸ್ನೇಹಿತರೊಂದಿಗೆ ಆತ್ಮೀಯವಾಗಿ ಮಾತುಕತೆಯಾಡುವಿರಿ. ಭವಿಷ್ಯದ ಜೀವನಕ್ಕಾಗಿ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ಸಂಗಾತಿಯಿಂದ ಸಲಹೆ ಪಡೆಯುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಸಾಧಾರಣ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಧನಸ್ಸು: ಅನೇಕ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಕೋರ್ಟ್ ಕಚೇರಿ ವ್ಯಾಜ್ಯಗಳು ವಿಜಯವನ್ನು ತಂದು ಕೊಡಲಿವೆ. ದಿನದ ಕೊನೆಯಲ್ಲಿ ಯಾವುದಾದರೂ ಕಾರಣದಿಂದ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ, ಆರ್ಥಿಕವಾಗಿ ಪ್ರಗತಿ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಮಕರ: ಆರೋಗ್ಯ ಪರಿಪೂರ್ಣವಾಗಿರುತ್ತದೆ. ಯಾವುದೋ ಮೂಲದಿಂದ ಆರ್ಥಿಕವಾಗಿ ಬಲಗೊಳ್ಳಲಿದ್ದೀರಿ. ಕುಟುಂಬದ ಸದಸ್ಯರ ಅಪಸ್ವರದಿಂದಾಗಿ ಮಾನಸಿಕವಾಗಿ ಒತ್ತಡಕ್ಕೆ ಒಳಗಾಗುವ ಸಾಧ್ಯತೆ. ಮಾತಿಗೆ ವಿರಾಮ ನೀಡಿ. ಉದ್ಯೋಗಿಗಳಿಗೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಕುಂಭ: ನಿಮ್ಮ ಕೋಪದ ಮನಸ್ಥಿತಿ ಇತರರ ಮೇಲೆ ಪ್ರಭಾವ ಬೀರಬಹುದು. ಅನಿವಾರ್ಯ ಕಾರಣಗಳಿಂದ ಸ್ನೇಹಿತರ ಸಹಾಯ ಬೇಡವ ಸಾಧ್ಯತೆ. ನಿಮ್ಮ ಕೆಲಸದ ಮೇಲೆ ಗಮನ ಹರಿಸಿದಲ್ಲಿ ಯಶಸ್ಸು ಮತ್ತು ಮನ್ನಣೆ ನಿಮ್ಮದಾಗುತ್ತದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ ಹೊಂದಲಿದ್ದೀರಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮೀನ: ಅನಿವಾರ್ಯ ಕಾರಣಗಳಿಂದ ಕುಟುಂಬದ ಸದಸ್ಯರೊಂದಿಗೆ ಮನಸ್ತಾಪ, ಆದಾಗ್ಯೂ ನೀವು ನಿಮ್ಮ ಶಾಂತ ಸ್ವಭಾವದಿಂದ ಎಲ್ಲವನ್ನೂ ಸರಿಪಡಿಸಬಹುದು. ಆರೋಗ್ಯ ಪರಿಪೂರ್ಣ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ |Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?; ಇಲ್ಲಿದೆ ವರ್ಷ ಭವಿಷ್ಯ

Exit mobile version