Site icon Vistara News

Horoscope Today | ವೈಕುಂಠ ಏಕಾದಶಿಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ

Horoscope Today

ಇಂದಿನ ಭವಿಷ್ಯ

ಇಂದಿನ ಪಂಚಾಂಗ (೦2-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ.

ತಿಥಿ: ಏಕಾದಶಿ 20:22 ವಾರ: ಸೋಮವಾರ
ನಕ್ಷತ್ರ: ಭರಣಿ 14:22 ಯೋಗ: ಸಿದ್ದಿ 06:55
ಕರಣ: ವಣಿಜ 07:43 ಇಂದಿನ ವಿಶೇಷ: ವೈಕುಂಠ ಏಕಾದಶಿ
ಅಮೃತಕಾಲ: ಬೆಳಗ್ಗೆ 09 ಗಂಟೆ 17 ನಿಮಿಷದಿಂದ 10 ಗಂಟೆ 59 ನಿಮಿಷದವರೆಗೆ.

ಸೂರ್ಯೋದಯ: 06 : 42    ಸೂರ್ಯಾಸ್ತ: 0೬ : 05

ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ಕೆಲವು ನಿರ್ಧಾರಗಳು ಹತಾಶೆ ಮತ್ತು ಮಾನಸಿಕ ಪ್ರಕ್ಷುಬ್ಧತೆಗೆ ಕಾರಣವಾಗುತ್ತವೆ. ಆಪ್ತರಿಂದ ಸಹಾಯದ ಕೋರಿಕೆ. ಒತ್ತಡದ ಕೆಲಸದಿಂದಾಗಿ ದೈಹಿಕವಾಗಿ ಬಳಲುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಸದೃಢ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ವೃಷಭ: ಆಂತರಿಕ ಭಯ ನಿಮ್ಮ ಸಂತೋಷವನ್ನು ಹಾಳುಗೆಡವಬಹುದು. ನಕಾರಾತ್ಮಕ ಆಲೋಚನೆಗಳನ್ನು ಮಾಡದಿರಿ. ದಿನದ ಕೊನೆಯ ಭಾಗದಲ್ಲಿ ಯಾವುದಾದರೂ ಶುಭ ಸುದ್ದಿ ಕೇಳುವ ಸಾಧ್ಯತೆ. ಆರೋಗ್ಯ ಕೊಂಚಮಟ್ಟಿಗೆ ಹದಗೆಡುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮಿಥುನ: ಬೇರೆಯವರ ಮಾತನ್ನು ಕೇಳಿಕೊಂಡು, ನಿಮ್ಮನ್ನು ಪ್ರೀತಿಯಿಂದ ಕಾಣುವ ವ್ಯಕ್ತಿಗಳನ್ನು ದ್ವೇಷಿಸುವುದು ಬೇಡ. ಇತರರ ಸಮಸ್ಯೆಗಳನ್ನು ಪರಿಹರಿಸಲು ನೀವು ಮಧ್ಯಪ್ರವೇಶ ಮಾಡುವ ಸಾಧ್ಯತೆ. ದಿಢೀರ್‌ ಪ್ರಯಾಣ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಅನಾವಶ್ಯಕ ಖರ್ಚು. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿಯೂ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕಟಕ: ಅನಿವಾರ್ಯ ಪ್ರಸಂಗಗಳು ನಿಮಗೆ ಕೋಪವನ್ನು ತರಿಸಿವ ಸಾಧ್ಯತೆ, ಭಾವನೆಗಳನ್ನು ನಿಯಂತ್ರಣಕ್ಕೆ ತೆಗೆದುಕೊಂಡರೆ ಉತ್ತಮ. ಕಠಿಣ ಪರಿಶ್ರಮ ನಿಮಗೆ ಫಲ ನೀಡಲಿದೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಆರೋಗ್ಯದಲ್ಲಿ ವ್ಯತ್ಯಾಸ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಕೆಲಸದ ಸ್ಥಳದಲ್ಲಿ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ನಿಮ್ಮ ಸಭ್ಯ ನಡವಳಿಕೆ ಇತರರಿಂದ ಮೆಚ್ಚುಗೆ ಪಡೆಯುತ್ತದೆ. ಅನೇಕ ಜನರು ನಿಮ್ಮನ್ನು ಹೊಗಳುತ್ತಾರೆ. ಇಂದು ನೀವು ಯಾವುದಾದರೂ ರೀತಿಯಲ್ಲಿ ಆರ್ಥಿಕ ನಷ್ಟವನ್ನು ಹೊಂದಬಹುದು, ಇದರಿಂದ ನಿಮ್ಮ ಮನಸ್ಸಿಗೆ ಬೇಸರವಾಗುವ ಸಾಧ್ಯತೆ. ಇತರರಿಗೆ ಸಹಾಯ ಮಾಡುವ ನಿಮ್ಮ ಗುಣ ಪ್ರತಿಫಲ ತರುತ್ತದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ದಿನ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ಒತ್ತಡದಿಂದ ಮುಕ್ತಿ ಹೊಂದಿ, ಆರಾಮದ ಸಂತೋಷವನ್ನು ಅನುಭವಿಸಲಿದ್ದೀರಿ. ದೀರ್ಘಕಾಲದ ಹೂಡಿಕೆಯಿಂದ ಲಾಭ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದ ಸಂಪೂರ್ಣ ಸಹಕಾರ ಸಿಗಲಿದೆ. ಉದ್ಯೋಗಿಗಳಿಗೆ ಅದೃಷ್ಟ ಖುಲಾಯಿಸಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ತುಲಾ: ದಿಢೀರ್‌ ಧನಾಗಮನದಿಂದ ಸಂತೋಷ ಇಮ್ಮಡಿಯಾಗಲಿದೆ. ಅನೇಕ ಸಮಸ್ಯೆಗಳು ಇಂದು ಪರಿಹಾರವಾಗುವುದು. ಆರೋಗ್ಯ ಪರಿಪೂರ್ಣ. ಬಹಳ ದಿನಗಳಿಂದ ಕಂಡ ಕನಸು ನನಸಾಗಲಿದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ಇಂದು ಪ್ರಮುಖ ನಿರ್ಧಾರಗಳಿಂದಾಗಿ ಮಾನಸಿಕವಾಗಿ ನೀವು ಬಳಲುವ ಸಾಧ್ಯತೆ. ಅನಾವಶ್ಯಕ ಖರ್ಚು ಮಾಡಿ ಕೊರಗುವ ಸಾಧ್ಯತೆ. ಆದಷ್ಟು ನಿಯಂತ್ರಣದಲ್ಲಿರಿ. ಸಂಗಾತಿಯ ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಧನಸ್ಸು: ಆರೋಗ್ಯದ ಆರೈಕೆ ಇಂದು ಅಗತ್ಯವಿದೆ. ಆಪ್ತರೊಂದಿಗೆ ಸೇರಿಕೊಂಡು ಮಾಡುವ ವ್ಯಾಪಾರ ನಷ್ಟ ತಂದೀತು, ಆದಷ್ಟು ಎಚ್ಚರಿಕೆಯಿಂದ ಹೆಜ್ಜೆ ಇಡಿ. ನಿಮ್ಮ ಆಂತರಿಕ ಶಕ್ತಿ ದಿನದ ಕೆಲಸವನ್ನು ಉತ್ತಮಗೊಳಿಸುವಲ್ಲಿ ನಿಮಗೆ ಸಹಕಾರಿಯಾಗಿರುತ್ತದೆ. ಉದ್ಯೋಗಿಗಳಿಗೆ ಮಧ್ಯಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಮಕರ: ಆಹಾರ ಕ್ರಮದ ವ್ಯತ್ಯಾಸದಿಂದಾಗಿ ಆರೋಗ್ಯದಲ್ಲಿ ಕೊಂಚ ಏರುಪೇರು ಸಾಧ್ಯತೆ, ಸೇವನೆ ಆದಷ್ಟು ನಿಯಂತ್ರಣದಲ್ಲಿರಲಿ. ಅನಿವಾರ್ಯ ಕಾರಣಗಳಿಂದ ಖರ್ಚು. ಕುಟುಂಬದ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ದಿಢೀರ್ ಪ್ರಯಾಣ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

ಕುಂಭ: ನಿಮ್ಮ ಸಾಧನೆಗೆ ಇಂದು ಪ್ರೋತ್ಸಾಹ ಸಿಗಲಿದೆ. ಅನೇಕ ಹಣಕಾಸಿನ ಸಮಸ್ಯೆಗಳು ಪರಿಹಾರವಾಗಲಿವೆ. ವ್ಯಾಪಾರದ ಉದ್ದೇಶಕ್ಕಾಗಿ ಕೈಕೊಂಡ ಪ್ರಯಾಣ ಲಾಭವನ್ನು ತಂದು ಕೊಡಲಿದೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಮಿಶ್ರ ಫಲ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮೀನ: ಅನಗತ್ಯ ಆಲೋಚನೆಗಳು ನಿಮ್ಮ ಮನಸ್ಸನ್ನು ಆವರಿಸಬಹುದು. ಆದಷ್ಟು ಸಕಾರಾತ್ಮಕವಾಗಿ ಆಲೋಚಿಸಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಆರ್ಥಿಕವಾಗಿ ಪ್ರಗತಿ. ನಿಮ್ಮ ಸಹೋದ್ಯೋಗಿಗಳು ನಿಮ್ಮನ್ನು ಟೀಕಿಸುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ |Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?; ಇಲ್ಲಿದೆ ವರ್ಷ ಭವಿಷ್ಯ

Exit mobile version