ಇಂದಿನ ಪಂಚಾಂಗ (೦6-೦೧-202೩)
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಶುಕ್ಲ ಪಕ್ಷ.
ತಿಥಿ: ಹುಣ್ಣಿಮೆ 28:36 ವಾರ: ಶುಕ್ರವಾರ
ನಕ್ಷತ್ರ: ಆರಿದ್ರಾ 24:12 ಯೋಗ: ಬ್ರಹ್ಮ 08:09
ಕರಣ: ವಿಷ್ಟಿ (ಭದ್ರ) 15:24
ಸೂರ್ಯೋದಯ: 06: 58 ಸೂರ್ಯಾಸ್ತ: 0೬ : 06
ರಾಹುಕಾಲ : ಪ್ರಾತಃ ಕಾಲ 10.30 ರಿಂದ 12.00
ಗುಳಿಕಕಾಲ: ಪ್ರಾತಃ ಕಾಲ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಕಠಿಣ ಸಮಸ್ಯೆಗಳಿಂದ ಹೊರಬರುತ್ತಿರಿ. ಈ ಹಿಂದೆ ಹೊಡಿಕೆ ಮಾಡಿದ ಹಣ ನಿಮ್ಮ ಕೈಸೇರಲಿದೆ. ಇದರಿಂದ ಆರ್ಥಿಕವಾಗಿ ಪ್ರಗತಿ. ದಿನದ ಮಧ್ಯಭಾಗದಲ್ಲಿ ಆಪ್ತರೊಂದಿಗೆ ವಾದಕ್ಕಿಳಿಯುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಆರೋಗ್ಯ ಪರಿಪೂರ್ಣ ವಾಗಿರಲಿದೆ. ಉದ್ಯೋಗಿಗಳಿಗೆ ಶುಭಪ್ರದ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ವೃಷಭ: ಆಧ್ಯಾತ್ಮಿಕ ಜೀವನ ಪೂರ್ವಾಪೇಕ್ಷಿತವಾಗಿರುವಂತಹ ನಿಮ್ಮ ಮಾನಸಿಕ ಆರೋಗ್ಯವನ್ನು ಮತ್ತು ದೈಹಿಕ ಆರೋಗ್ಯವನ್ನು ಹೆಚ್ಚಿಸುತ್ತದೆ. ಜೀವನದ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸಹಾಯ ಮಾಡುತ್ತದೆ. ಹಣದ ಆಗಮನವು ನಿಮ್ಮನ್ನು ಯಾವುದೇ ಸಮಸ್ಯೆಗಳಿಂದ ಮುಕ್ತಗೊಳಿಸಬಹುದು. ಪೂರ್ವಜರ ಆಸ್ತಿಯ ಉತ್ತರಾಧಿಕಾರಿತ್ವದ ಸುದ್ದಿ ಇಡೀ ಕುಟುಂಬವನ್ನು ಸಂತುಷ್ಟಗೊಳಿಸಬಹುದು. ಉದ್ಯೋಗಿಗಳಿಗೆ ಕೊಂಚ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಮಿಥುನ: ನಿಮ್ಮ ಜ್ಞಾನ ಮತ್ತು ಒಳ್ಳೆಯ ಹಾಸ್ಯ ನಿಮ್ಮಡಗೆ ಜನರನ್ನು ಆಕರ್ಷಿಸಬಹುದು. ಇಂದು ನೀವು ಅಂದುಕೊಂಡಿದ್ದಕ್ಕಿಂತಲೂ ಹೆಚ್ಚು ನಿಮ್ಮ ಜೀವನದಲ್ಲಿ ತೆರೆಮರೆಯಲ್ಲಿ ನಡೆಯುತ್ತಿದೆ. ಮುಂದಿನ ಕೆಲವು ದಿನಗಳಲ್ಲಿ ನಿಮಗೆ ಒಳ್ಳೆಯ ಅವಕಾಶಗಳು ಸಿಗಲಿವೆ.ಆರೋಗ್ಯ ಪರಿಪೂರ್ಣ. ಆರ್ಥಿಕ ಪ್ರಗತಿ ಸಾಧಾರಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕಟಕ: ಇತರರ ವಿರುದ್ಧ ದ್ವೇಷ ಕಾರುವುದು ಮಾನಸಿಕ ಒತ್ತಡವನ್ನು ನೀಡುತ್ತದೆ.
ಕೆಲಸ ಕಾರ್ಯಗಳಲ್ಲಿ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ತಾಳ್ಮೆ ಇರಲಿ. ಅಗತ್ಯಕ್ಕಾಗಿ ಯಾರದಾದರೂ ಹಣದ ಸಹಾಯ ಬೇಡುವ ಸಾಧ್ಯತೆ, ಆಲೋಚಿಸಿ ಮುಂದುವರಿಯಿರಿ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕ ಪ್ರಗತಿ ಸಾಧಾರಣ ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ಸಿಂಹ: ಇತರರು ನಿಮ್ಮ ಕಾರ್ಯಗಳಿಗೆ ಪ್ರಶಂಸೆ ವ್ಯಕ್ತಪಡಿಸುವರು. ಹೊಸ ಅವಕಾಶಗಳು ಹುಡುಕಿಕೊಂಡು ಬರಲಿವೆ. ಆಪ್ತರಿಂದ ಆರ್ಥಿಕವಾಗಿ ಸಹಾಯ ಸಿಗಲಿದೆ.
ಉದ್ಯೋಗ, ಆರೋಗ್ಯ, ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಕನ್ಯಾ: ಅನಿವಾರ್ಯವಾಗಿ ನಿಮ್ಮ ಒತ್ತಡವನ್ನು ಇತತರರ ಮೇಲೆ ಹಾಕಿ ಕೋಪಗೊಳ್ಳುವುದು ಬೇಡ. ಸಮಾಧಾನದಿಂದ ವರ್ತಿಸಿ.ಆರ್ಥಿಕವಾಗಿ ಸಾಧಾರಣ. ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ತುಲಾ: ಆಪ್ತರೊಂದಿಗೆ ಬಾಲ್ಯದ ನೆನಪು ಹಂಚಿಕೊಳ್ಳುವಿರಿ. ನಿಮ್ಮ ಮನಸ್ಸಿನ ಒತ್ತಡ ಈ ಮೂಲಕ ಹೊರಹಾಕುವಿರಿ. ಆರೋಗ್ಯ ಮಧ್ಯಮ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಉತ್ತಮ ಫಲಿತಾಂಶ. ಯಾವುದಾದರೂ ಮೂಲಗಳಿಂದ ಆರ್ಥಿಕವಾಗಿ ಪ್ರಗತಿ ಸಾಧಿಸಲಿದ್ದೀರಿ. ನಿಮ್ಮ ದಿನನಿತ್ಯದ ಕಾರ್ಯದಲ್ಲಿ ನಿಧಾನ.ಉದ್ಯೋಗಿಗಳಿಗೆ ಒತ್ತಡ ಇರಲಿದೆ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಪ್ರಗತಿ.ನಿಮ್ಮ ನಿರೀಕ್ಷೆಗೆ ತಕ್ಕಂತೆ ಪ್ರತಿಫಲ ಸಿಗುವುದು ಕಟ್ಟಿಟ್ಟ ಬುತ್ತಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ ಇರುವುದರಿಂದ ಆದಷ್ಟು ಮೌನಕ್ಕೆ ಜಾರುವುದು ಒಳಿತು. ಈ ಹಿಂದೆ ನಿಮ್ಮನ್ನು ದ್ವೇಷಿಸುತ್ತಿದ್ದ ಜನರು ನಿಮ್ಮೊಂದಿಗೆ ಪ್ರೀತಿಯಿಂದ ವರ್ತಿಸುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6
ಧನಸ್ಸು: ಆಪ್ತರೊಂದಿಗೆ ಸಮಯ ಕಳೆಯುವ ಸಾಧ್ಯತೆ. ಹೊಸ ಸ್ನೇಹಿತರ ಪರಿಚಯ ಆಗಲಿದೆ. ಚುರುಕುತನದಿಂದ ಕಾರ್ಯದಲ್ಲಿ ಯಶಸ್ಸು ಸಿಗಲಿದೆ. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಲಾಭವಾಗಲಿದೆ. ಆರೋಗ್ಯ ಪರಿಪೂರ್ಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಮಕರ: ನಿಮ್ಮ ಸ್ನೇಹಿತರು ಆರ್ಥಿಕ ಸಹಾಯ ಕೇಳುವ ಸಾಧ್ಯತೆ.ಇಂದು ಅನಿವಾರ್ಯ ಪ್ರಸಂಗಗಳ ಕಾರಣ ಸಮಯ ವ್ಯರ್ಥಮಾಡಿ ಕೊರಗುವುದು ಬೇಡ. ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ. ಉತ್ತಮ ಆಲೋಚನೆಗಳು ಇರಲಿ. ಹಳೆಯ ನೆನಪುಗಳು ಮಾನಸಿಕ ಒತ್ತಡ ಉಂಟುಮಾಡುವ ಸಾಧ್ಯತೆ. ದೈಹಿಕ ಆರೋಗ್ಯ ಉತ್ತಮ. ವಿನಾಕಾರಣ ಕುಟುಂಬದ ಸದಸ್ಯರೊಂದಿಗೆ ಕಲಹಗಳು ಸೃಷ್ಟಿ ಆಗುವ ಸಾಧ್ಯತೆಯಿರುವುದರಿಂದ ಮಾತಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3
ಕುಂಭ: ಅನಿವಾರ್ಯ ಕಾರಣಗಳಿಂದ ಖರ್ಚು ಸಾಧ್ಯತೆ. ಅಧಿಕ ಶ್ರಮದಿಂದ ಆರೋಗ್ಯ ಕೊಂಚ ಹದಗೆಡುವ ಸಾಧ್ಯತೆ,ಕಾಳಜಿ ಇರಲಿ. ಸಾಂಕ್ರಮಿಕ ರೋಗವು ಬಾಧಿಸುವ ಸಾಧ್ಯತೆಗಳಿವೆ. ಆದಷ್ಟು ಮುಂಜಾಗ್ರತೆ ವಹಿಸಿ. ಸ್ನೇಹಿತರು, ಕುಟುಂಬದ ಸದಸ್ಯರ ಸಂಪೂರ್ಣ ಸಹಕಾರ ಸಿಗಲಿದೆ.
ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಮೀನ: ಬೇರೆ ಬೇರೆ ಮೂಲಗಳಿಂದ ಆರ್ಥಿಕವಾಗಿ ಪ್ರಗತಿ ಸಾಧಿಸಲಿದ್ದೀರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ಮಾಡಿಕೊಡಬೇಡಿ. ಉದ್ಯೋಗದಲ್ಲಿ ಹೊಸ ಭರವಸೆ ಮೂಡಿದರೂ ಸಹೋದ್ಯೋಗಿಗಳಿಂದ ಕಿರಿಕಿರಿ ಸಾಧ್ಯತೆ. ಮನಸ್ಸಿನ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ಸಾಧನೆಯಿಂದ ತಂದುಕೊಳ್ಳಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ |Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?; ಇಲ್ಲಿದೆ ವರ್ಷ ಭವಿಷ್ಯ