Site icon Vistara News

Horoscope Today | ಪುನರ್ವಸು ನಕ್ಷತ್ರದ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Horoscope Today

Horoscope Today

ಇಂದಿನ ಪಂಚಾಂಗ (೦7-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ.

ತಿಥಿ: ಪಾಡ್ಯ ಅಹೋರಾತ್ರಿ ವಾರ: ಶನಿವಾರ
ನಕ್ಷತ್ರ: ಪುನರ್ವಸು 27:06 ಯೋಗ: ಇಂದ್ರ 08:52
ಕರಣ: ಬಾಲವ 17:51 ಇಂದಿನ ವಿಶೇಷ: ಪಂಚೆ (ಧೋತಿ) ದಿನ
ಅಮೃತಕಾಲ: ಮಧ್ಯರಾತ್ರಿ 12 ಗಂಟೆ 27 ನಿಮಿಷದಿಂದ 02 ಗಂಟೆ 14 ನಿಮಿಷದವರೆಗೆ.

ಸೂರ್ಯೋದಯ: 06 : 44    ಸೂರ್ಯಾಸ್ತ: 0೬ : 08

ರಾಹುಕಾಲ : ಬೆಳಗ್ಗೆ 9.00 ರಿಂದ 10.30
ಗುಳಿಕಕಾಲ: ಬೆಳಗ್ಗೆ 6.00 ರಿಂದ 7.30
ಯಮಗಂಡಕಾಲ: ಮಧ್ಯಾಹ್ನ 1.30 ರಿಂದ 3.00

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ಆರೋಗ್ಯದಲ್ಲಿ ಪ್ರಗತಿ. ವ್ಯಾಪಾರ ವ್ಯವಹಾರಗಳಲ್ಲಿ ಲಾಭ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಪರಿಸ್ಥಿತಿ ಹದಗೆಡಲು ಹಾದಿ ಮಾಡಿಕೊಡುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳಲ್ಲಿ ನಿಧಾನ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ಸಿಗಲಿದೆ. ಆರ್ಥಿವಾಗಿ ಬಲಗೊಳ್ಳುವಿರಿ. ದ್ವಿಸ್ವಭಾವದವರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯದಲ್ಲಿ ಪ್ರಗತಿ. ಉದ್ಯೋಗದಲ್ಲಿ ಅಲ್ಪ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತಿರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ. ಆರೋಗ್ಯದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ಇಂದು ನೀವು ಆರೋಗ್ಯದ ಕಡೆಗೆ ಗಮನ ಹರಿಸುವುದು ಅಗತ್ಯ. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ತುಲಾ: ಆಪ್ತರ ಮಾತುಗಳು ಅಗಾದ ಪರಿಣಾಮ ಬೀರುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಕುಂಠಿತ. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ಧೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ. ನಿಮ್ಮ ಉದಾರತನವನ್ನು ಬೇರೆಯವರು ದುರೂಪಯೋಗ ಪಡಿಸಿಕೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಧನಸ್ಸು: ದೈಹಿಕವಾಗಿ ಇಂದು ನೀವು ಹೆಚ್ಚು ಆಯಾಸಗೊಳ್ಳುವಿರಿ. ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಕೆಲಸ ಕಾರ್ಯಗಳು ಮಂದಗತಿಯಲ್ಲಿ ಸಾಗಲಿವೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಮಕರ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ದೊರೆಯಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಹಿಡಿದ ಎಲ್ಲ ಕಾರ್ಯದಲ್ಲಿ ಪ್ರಗತಿ. ಹಿರಿಯರ ಆಶೀರ್ವಾದ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ |Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?; ಇಲ್ಲಿದೆ ವರ್ಷ ಭವಿಷ್ಯ

Exit mobile version