Site icon Vistara News

Horoscope Today |‌ ನಾಲ್ಕು ರಾಶಿಯವರಿಗೆ ಇಂದು ಶುಭ ಫಲ; ನಿಮ್ಮ ರಾಶಿ ಭವಿಷ್ಯ ಹೀಗಿದೆ

horoscope today

Horoscope Today

ಇಂದಿನ ಪಂಚಾಂಗ (11-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ದಕ್ಷಿಣಾಯನ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ.

ತಿಥಿ: ಚತುರ್ಥಿ 14:30 ವಾರ: ಬುಧವಾರ
ನಕ್ಷತ್ರ: ಮಘ 11:49 ಯೋಗ: ಆಯುಷ್ಮಾನ್ 12:00
ಕರಣ: ಬಾಲವ 14:30
ಅಮೃತಕಾಲ: ಬೆಳಗ್ಗೆ 09 ಗಂಟೆ 09 ನಿಮಿಷದಿಂದ 10 ಗಂಟೆ 57 ನಿಮಿಷದವರೆಗೆ.

ಸೂರ್ಯೋದಯ: 06 : 45    ಸೂರ್ಯಾಸ್ತ: 0೬ : 10

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ಅತಿರೇಕದ ಮಾತುಗಳು ಜಗಳ ಉಂಟುಮಾಡಬಹುದು. ಯಾವುದಾದರೂ ಮೂಲದಿಂದ ಆರ್ಥಿಕ ಲಾಭ. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಸಾಧ್ಯತೆ. ಆರೋಗ್ಯದಲ್ಲಿ ಕೊಂಚ ಮಟ್ಟಿಗೆ ಏರುಪೇರು ಉಂಟಾಗುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ವೃಷಭ: ಭಾವನಾತ್ಮಕ ವಿಷಯಗಳಿಂದ ಮಾನಸಿಕ ಒತ್ತಡ ಹೆಚ್ಚಾಗುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಕುಟುಂಬದ ಆಪ್ತರಿಂದ ಆಮಂತ್ರಣ. ಆರೋಗ್ಯದ ಕುರಿತು ವಿಶೇಷ ಕಾಳಜಿ ಅವಶ್ಯ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ಏಕಪಕ್ಷೀಯ ವ್ಯಾಮೋಹದಿಂದ ಒತ್ತಡ ಸಾಧ್ಯತೆ. ಒತ್ತಡವನ್ನು ಕಡಿಮೆ ಮಾಡಿಕೊಳ್ಳಿ, ಆಗ ಅಹ್ಲಾದಕರ ಮನಸ್ಥಿತಿಯಲ್ಲಿರುತ್ತೀರಿ. ಭರವಸೆಯ ಹೊಸ ಅವಕಾಶಗಳು ಸಿಗುವ ಸಾಧ್ಯತೆ.
ಆರ್ಥಿಕ ಪ್ರಗತಿ ಮಧ್ಯಮ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ಅತ್ಯಂತ ಪ್ರಭಾವಿ ಜನರ ಬೆಂಬಲ ನಿಮ್ಮ ನೈತಿಕ ಸ್ಥೈರ್ಯವನ್ನು ಹೆಚ್ಚಿಸುತ್ತದೆ. ಆರ್ಥಿಕ ಪ್ರಗತಿ ಸಾಧಾರಣ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅತಿರೇಕದಲ್ಲಿ ಯಾವುದೇ ಮಾತುಗಳನ್ನು ಅಡುವುದು ಅಪಾಯ ತರಬಹುದು. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಶೀಘ್ರ ಕೋಪದಿಂದ ಕಾರ್ಯದಲ್ಲಿ ಹಾನಿ. ಆರ್ಥಿಕ ಪ್ರಗತಿ ಸಾಧಾರಣ. ಸಂಬಂಧಿಗಳೊಂದಿಗೆ ಕಾಲ ಕಳೆಯುವ ಸಾಧ್ಯತೆ. ಅನಗತ್ಯ ಮಾತುಗಳು ಕುಟುಂಬದ ವಾತಾವರಣ ಕೆಡಿಸಬಹುದು, ಎಚ್ಚರಿಕೆ ಇರಲಿ. ಸಹದ್ಯೋಗಿಗಳಿಂದ ಕಿರಿಕಿರಿ. ಆರೋಗ್ಯದ ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

ಕನ್ಯಾ: ಮನರಂಜನೆಗಾಗಿ ಸಮಯ ಕಳೆಯುವ ಸಾಧ್ಯತೆ. ಆಪ್ತರೊಂದಿಗೆ ಮಾತುಕತೆ. ಆರ್ಥಿಕ ಪ್ರಗತಿ ಸಾಧಾರಣ. ಪಾಲುದಾರಿಕೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗಿಗಳಿಗೆ ಕಿರಿಕಿರಿ. ನಂಬಿದ ವ್ಯಕ್ತಿಗಳು ನಿಮ್ಮನ್ನು ಮೋಸಗೊಳಿಸಬಹುದು. ತಪ್ಪು ತಿಳುವಳಿಕೆ ಉಂಟಾಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ತುಲಾ: ಸಕಾರಾತ್ಮಕ ಆಲೋಚನೆಗಳಿಂದ ಕಾರ್ಯದಲ್ಲಿ ಯಶಸ್ಸು. ಆರ್ಥಿಕ ಪ್ರಗತಿ ಸಾಧಾರಣ. ಹಳೆಯ ವಿಚಾರ ಕೆದಕಿ ಮನಸ್ಸಿಗೆ ಘಾಸಿ ಮಾಡಿಕೊಳ್ಳುವುದು ಬೇಡ. ಆರೋಗ್ಯ ಮಧ್ಯಮ. ಉದ್ಯೋಗಿಗಳಿಗೆ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ದೀರ್ಘಕಾಲದ ಅನಾರೋಗ್ಯಕ್ಕೆ ಪರಿಹಾರ ಸಿಗಲಿದೆ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಆರ್ಥಿಕ ಪ್ರಗತಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಅಮೂಲ್ಯ ವಸ್ತುಗಳು ಕೈಗೆ ಸಿಗುವುದರಿಂದ ಸಂತಸ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಧನಸ್ಸು: ಯಾವುದಾದರೂ ಭೂಮಿ ಸಂಬಂಧಿ ವ್ಯವಹಾರ, ಹಣಕಾಸು ವ್ಯವಹಾರದಲ್ಲಿ ಲಾಭ. ಪ್ರಯಾಣ ಮಾಡುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಸಹದ್ಯೋಗಿಗಳಿಂದ ಸಹಕಾರ ಸಿಗಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣ ಬಲ. ಕುಟುಂಬದಲ್ಲಿ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮಕರ: ಭರವಸೆಯ ಹೊಸ ಜೀವನ ಶುರುವಾಗಲಿದೆ. ದೀರ್ಘಕಾಲದ ಹೂಡಿಕೆ ವ್ಯವಹಾರದಲ್ಲಿ, ಆರ್ಥಿಕ ಪ್ರಗತಿ. ನೀವು ಮಾಡಿದ ಕೆಲಸ ಕಾರ್ಯಗಳ ಫಲಿತಾಂಶ ಬೇರೆಯವರು ತೆಗೆದುಕೊಂಡು ಪ್ರಶಂಸೆ ಪಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಬಾಕಿ ಇರುವ ಕೆಲಸ ಕಾರ್ಯಗಳು ಪೂರ್ಣವಾಗುವವು. ಅವಶ್ಯಕ ವಸ್ತುಗಳ ಖರೀದಿ. ಅಷ್ಟೇ ಆರ್ಥಿಕ ಲಾಭ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಮಾತು ಬೆಳೆಸುವುದು ಬೇಡ. ಸಾಮಜಿಕ ಕಾರ್ಯದಲ್ಲಿ ತೊಡಗುವ ಸಾಧ್ಯತೆ. ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಮೀನ: ಹಳೆಯ ನೋವು ಉಲ್ಬಣಗೊಳ್ಳವ ಸಾಧ್ಯತೆ, ಆರೋಗ್ಯದ ಕಡೆಗೆ ಗಮನ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಅಗತ್ಯ ವಸ್ತುಗಳ ಖರೀದಿಯಿಂದ ಖರ್ಚು. ಸಂಬಂಧಿಗಳೊಂದಿಗೆ ಮಾತುಕತೆ. ಉದ್ಯೋಗಿಗಳಿಗೆ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ:

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Weekly Horoscope | ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version