Site icon Vistara News

Horoscope Today |‌ ಕಟಕ ರಾಶಿಯವರಿಗೆ ಹಣದ ಹರಿವು ಹೆಚ್ಚಲಿದೆ; ನಿಮ್ಮ ಭವಿಷ್ಯ ಹೇಗಿದೆ?

Horoscope Today daily horoscope

Horoscope Today

ಇಂದಿನ ಪಂಚಾಂಗ (20-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸ, ಕೃಷ್ಣ ಪಕ್ಷ.

ತಿಥಿ: ತ್ರಯೋದಶಿ 09:59/ ಚತುರ್ದಶಿ 30:17. ವಾರ: ಶುಕ್ರವಾರ
ನಕ್ಷತ್ರ: ಮೂಲಾ 12:39 ಯೋಗ: ವ್ಯಾಘಾತ 18:55
ಕರಣ: ವಾಣಿಜ 09:59 ಇಂದಿನ ವಿಶೇಷ: ಬುಧವಕ್ರತ್ಯಾಗ, ಮಾಸ ಶಿವರಾತ್ರಿ.
ಅಮೃತಕಾಲ: ಬೆಳಗ್ಗೆ 06 ಗಂಟೆ 58 ನಿಮಿಷದಿಂದ 08 ಗಂಟೆ 24 ನಿಮಿಷದವರೆಗೆ.

ಸೂರ್ಯೋದಯ: 06 : 46    ಸೂರ್ಯಾಸ್ತ: 0೬ : 15

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ಗೌಪ್ಯ ವಿಚಾರಗಳನ್ನು ಇತರರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರವಿರಲಿ. ಹಣಕಾಸು ಪರಿಸ್ಥಿತಿ ಉತ್ತಮ. ಮಾನಸಿಕ ಶಾಂತಿಗಾಗಿ ಕೆಲವು ದಾನ ಧರ್ಮಗಳಲ್ಲಿ ತೊಡಗಿಸಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗದ ಸ್ಥಳದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ವೃಷಭ: ವ್ಯವಹಾರದಲ್ಲಿ ಸಂಗಾತಿಯ ಹಸ್ತಕ್ಷೇಪ ನಿಮಗೆ ಕೋಪ ತರಿಸಬಹುದು, ತಾಳ್ಮೆಯಿಂದ ವರ್ತಿಸಿ. ಈ ಹಿಂದೆ ಕಾಡಿದ ವ್ಯಾಧಿ ಮರುಕಳಿಸುವ ಸಾಧ್ಯತೆ. ದಿನದ ಮಟ್ಟಿಗೆ ಖರ್ಚು. ಏತನ್ಮಧ್ಯೆ ಅತಿಥಿಗಳ ಆಗಮನ ಹರ್ಷ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಮಿಥುನ: ಘಟಿಸಿದ ಘಟನೆಗಳನ್ನು ಮೆಲುಕು ಹಾಕುತ್ತಾ ಕಾಲಹರಣ ಮಾಡುವ ಬದಲು, ಮುಂದಿನ ಆಗುವ ಕೆಲಸಗಳ ಬಗೆಗೆ ಕಾರ್ಯ ಪ್ರವೃತ್ತರಾಗಿ. ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಅನೇಕ ವಿಚಾರಗಳಿಂದ ಒತ್ತಡಕ್ಕೆ ಒಳಾಗಾಗುವ ಸಾಧ್ಯತೆ. ಕೋಪದಿಂದ ಏನನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ಕಟಕ: ಹಣದ ಹರಿವು ಹೆಚ್ಚಾಗಲಿದೆ. ಮಾನಸಿಕ ನೆಮ್ಮದಿ ಸಿಗುವುದು. ಹೊಸ ಭರವಸೆಯ ಅವಕಾಶಗಳು ಹುಡುಕಿಕೊಂಡು ಬರುವವು. ಉದ್ಯೋಗ ಆಕಾಂಕ್ಷಿಗಳಿಗೆ ಶುಭ ಫಲ ಸಿಗಲಿದೆ. ಆರೋಗ್ಯ ಉತ್ತಮ ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

ಸಿಂಹ: ಕುಟುಂಬದ ಆಪ್ತರ ಹಾಗೂ ಸ್ನೇಹಿತರ ಸೂಕ್ತ ಸಲಹೆ ಸಹಕಾರ ಸಿಗುವುದು. ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ವಿಶ್ರಾಂತಿ ಸಿಗಲಿದೆ. ಹಣಕಾಸು ಪ್ರಗತಿ ಉತ್ತಮ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ಅಗತ್ಯವಿದ್ದಷ್ಟೆ ಮಾತನಾಡಿ, ಇಂದು ನೀವು ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕನ್ಯಾ: ಅನೇಕ ವಿಷಯಗಳು ನಿಮಗೆ ಒತ್ತಡ ಉಂಟುಮಾಡುವ ಸಾಧ್ಯತೆ. ಖರ್ಚು ಹೆಚ್ಚಾಗುವ ಸಾಧ್ಯತೆ. ಗೌಪ್ಯ ವಿಷಯಗಳು ಬಹಿರಂಗವಾಗದಿರಲಿ. ಜಂಟಿ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದ ಅಸಹಕಾರದಿಂದ ಕಿರಿಕಿರಿ. ಕೌಟುಂಬಿಕವಾಗಿ ಇಂದು ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5

ತುಲಾ: ಆಪ್ತ ಸಂಬಂಧಿಕರಿಂದ ಸಹಾಯ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಹಣಕಾಸು ಪ್ರಗತಿ. ಹಳೆಯ ವಿಚಾರಗಳು ನಿಮ್ಮ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ, ಎಚ್ಚರಿಕೆ ಇರಲಿ. ಉತ್ತಮ ಆರೋಗ್ಯ, ಉದ್ಯೋಗದಲ್ಲಿ ಸಾಧಾರಣ ಫಲ. ಕುಟುಂಬದ ಸಹಕಾರ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ವೃಶ್ಚಿಕ: ವಾಹನ ಚಾಲನೆ ಮಾಡುವಾಗ ಆದಷ್ಟು ಎಚ್ಚರಿಕೆ ವಹಿಸಿ. ಆಪ್ತರ ಸಲಹೆಗಳನ್ನು ತಿರಸ್ಕಾರ ಭಾವದಿಂದ ನೋಡಬೇಡಿ, ವ್ಯತಿರಿಕ್ತವಾದ ಪರಿಣಾಮದಿಂದಾಗಿ ಸ್ನೇಹದಲ್ಲಿ ಬಿರುಕು ಮೂಡುವ ಸಾಧ್ಯತೆ. ಅನಗತ್ಯವಾಗಿ ಖರ್ಚು ಹೆಚ್ಚು. ಆರೋಗ್ಯ ಸಾಧಾರಣ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಧನಸ್ಸು: ಅನಿರೀಕ್ಷಿತ ಪ್ರಯಾಣ ಸಾಧ್ಯತೆ. ಆತುರದ ಭರದಲ್ಲಿ ಅತಿರೇಕದ ಮಾತುಗಳು ಜಗಳ ತರಬಹುದು, ಸಮಾಧಾನದಿಂದ ವರ್ತಿಸಿ. ಅಮೂಲ್ಯ ವಸ್ತುಗಳು ಕೈತಪ್ಪುವ ಸಾಧ್ಯತೆ, ಎಚ್ಚರಿಕೆ ಇರಲಿ. ಕುಟುಂಬ ಸದಸ್ಯರ ಮಧ್ಯೆ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಮಕರ: ಆರೋಗ್ಯ ಉತ್ತಮ. ಆತ್ಮವಿಶ್ವಾಸದಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಉದ್ಯೋಗಿಗಳಿಗೆ ಬಡ್ತಿ, ವೇತನ ಹೆಚ್ಚಳವಾಗುವ ಭರವಸೆ. ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುಲು ಪ್ರಯತ್ನಿಸುವಿರಿ. ಶುಭ ಸಮಾರಂಭದ ಆಮಂತ್ರಣ ಬರುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕುಂಭ: ಆಹಾರದ ಕ್ರಮ ಆರೋಗ್ಯದಲ್ಲಿ ವ್ಯತ್ಯಾಸ ಮೂಡಿಸಬಹುದು, ಎಚ್ಚರಿಕೆಯಿಂದಿರಿ. ನಿಮ್ಮ ಅಮೂಲ್ಯ ವಸ್ತುಗಳ ಬಗೆಗೆ ಕಾಳಜಿ ವಹಿಸಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಸಿಗುವುದು. ಉದ್ಯೋಗದಲ್ಲಿ ಪ್ರಗತಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಮೀನ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸುವುದರಲ್ಲಿ ಯಶಸ್ಸು ಪಡೆಯುವಿರಿ. ಸಂಗಾತಿಯ ಹಸ್ತಕ್ಷೇಪ ನಿಮಗೆ ಮುಜುಗರ ಉಂಟು ಮಾಡುವ ಸಾಧ್ಯತೆ. ಉದ್ಯೋಗದಲ್ಲಿ ಭರವಸೆ ಮೂಡಲಿದೆ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?; ಇಲ್ಲಿದೆ ವರ್ಷ ಭವಿಷ್ಯ

Exit mobile version