Horoscope Today |‌ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ? - Vistara News

ಪ್ರಮುಖ ಸುದ್ದಿ

Horoscope Today |‌ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ?

ಶುಭಕೃತ ನಾಮ ಸಂವತ್ಸರ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷದ ತದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (24-೦೧-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ.

ತಿಥಿ: ತದಿಗೆ 15:21. ವಾರ: ಮಂಗಳವಾರ
ನಕ್ಷತ್ರ: ಶತತಾರ 21:56 ಯೋಗ: ವರಿಯಾನ 21:35
ಕರಣ: ಗರಜ 15:21
ಅಮೃತಕಾಲ: ಮಧ್ಯರಾತ್ರಿ 12 ಗಂಟೆ 56 ನಿಮಿಷದಿಂದ 02 ಗಂಟೆ 20 ನಿಮಿಷದವರೆಗೆ.

ಸೂರ್ಯೋದಯ: 07: 00    ಸೂರ್ಯಾಸ್ತ: 0೬ : 17

ರಾಹುಕಾಲ : ಸಾಯಂಕಾಲ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಪ್ರಾತಃ ಕಾಲ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಹಣಕಾಸಿನ ಹೊಡಿಕೆ ವ್ಯವಹಾರದಲ್ಲಿ ಹೊಸ ಆಲೋಚನೆಗಳು.ಆರೋಗ್ಯದ ಕುರಿತು ಕಾಳಜಿ ವಹಿಸಿ.ಸಮಯ ವ್ಯರ್ಥ ಮಾಡದೆ ಕಾರ್ಯದಲ್ಲಿ ಮುನ್ನುಗ್ಗಿ.ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಷಭ: ಹಿರಿಯರ ಸಲಹೆ ಆರ್ಥಿಕವಾಗಿ ಲಾಭ ತರುವುದು.ಕುಟುಂಬದ ಸದಸ್ಯರ ಬೆಂಬಲ ಕೆಲಸ ಕಾರ್ಯಗಳಲ್ಲಿ ಸಿಗಲಿದೆ, ಉದ್ಯೋಗದ ಸ್ಥಳದಲ್ಲಿ ನಿಮ್ಮ ಅಭಿಪ್ರಾಯಗಳಿಗೆ ಮನ್ನಣೆ ಸಿಕ್ಕು ಪ್ರಶಂಸೆ ಪಡೆಯುವಿರಿ.ಅಪರಿಚಿತರೊಂದಿಗೆ ಅನಿವಾರ್ಯ ಕಾರಣಗಳಿಂದ ವಾದಕ್ಕೆ ಇಳಿಯುವಂತೆ ಮಾಡಬಹುದು, ಮಾತು ಮಿತವಾಗಿರಲಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಆಶಾವಾದಿಗಳಾಗಿರಿ, ಆತ್ಮವಿಶ್ವಾಸದಿಂದ ಮಾಡಿದ ಕಾರ್ಯ ಯಶಸ್ಸುನ್ನು ತಂದು ಕೊಡುವುದು.ಅನಿವಾರ್ಯ ಕಾರಣಗಳಿಂದ ಖರ್ಚು ಮಾಡುವ ಸಾಧ್ಯತೆ.ಹಳೆಯ ಪರಿಚಿತರ ಸಂಪರ್ಕ ಪುನಃ ಸ್ಥಾಪಿತವಾಗುವುದು.ವೈವಾಹಿಕ ಜೀವನಕ್ಕೆ ಹಿರಿಯರಿಂದ ಮಾರ್ಗದರ್ಶನ ಸಿಗಲಿದೆ.ಆರೋಗ್ಯ ಪರಿಪೂರ್ಣ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ಅವಿರತವಾಗಿ ಶ್ರಮಿಸಿದ ಜೀವಕೆ ವಿಶ್ರಾಂತಿಯು ಸಿಗಲಿದೆ.ಸಂಗಾತಿಯೊಂದಿಗೆ ಹೂಡಿಕೆ ಕೂರಿತಾಗಿ ಚರ್ಚೆ.ಉತ್ತಮ ವ್ಯಕ್ತಿಗಳ ಸಂಪರ್ಕ, ಮಾರ್ಗದರ್ಶನ ಸಿಗಲಿದೆ.ಆರ್ಥಿಕವಾಗಿ ಲಾಭ ಸಿಗಲಿದೆ.ಆರೋಗ್ಯ ಪರಿಪೂರ್ಣ.ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ, ತಾಳ್ಮೆಯಿಂದ ಸಹಕರಿಸಿ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ:

Horoscope Today

ಸಿಂಹ: ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಬೇಟಿ ಮಾಡುವ ಸಾಧ್ಯತೆ.ಹಣಕಾಸು ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ.ಅಗತ್ಯ ವಸ್ತುಗಳ ಖರೀದಿ ಸಾಧ್ಯತೆ.ಆತುರದ ಮಾತುಗಳು ಸುತ್ತಮುತ್ತಲಿನ ಜನರೊಂದಿಗೆ ವಾದಕ್ಕೆ ಇಳಿಯುವಂತೆ ಮಾಡಬಹುದು ಎಚ್ಚರಿಕೆ ಇರಲಿ.ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ: ಹೊಸ ಆರ್ಥಿಕ ಒಪ್ಪಂದಗಳು ಗರಿಗೆದರಲಿವೆ.ಆಪ್ತರಿಂದ ಆಮಂತ್ರಣ ಸಿಗಲಿದೆ.ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ.ಆಸ್ತಿ ಖರೀದಿ ವ್ಯವಹಾರದ ಕುರಿತು ಚರ್ಚೆ.ಸಂಗಾತಿಯ ಮಾತುಗಳಿಗೆ ಮನ್ನಣೆ ಸಿಗದೇ ಇರುವದರಿಂದ ನಿಮ್ಮ ಮೇಲೆ ಕೋಪಿಸಿಕೊಳ್ಳುವ ಸಾಧ್ಯತೆ.ನಗುವಿನ ಮೂಲಕ ಪರಿಸ್ಥಿತಿ ತಿಳಿಗೊಳಿಸಿ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 6

Horoscope Today

ತುಲಾ: ಗಾಳಿಯಲ್ಲಿ ಗೋಪುರ ಕಟ್ಟಿಕೊಂಡು ವೃತಾ ಸಮಯ, ವ್ಯರ್ಥ ಪ್ರಯತ್ನ,ಮಾಡಬೇಡಿ.ಮಾಡುವ ಕೆಲಸದಲ್ಲಿ ಶ್ರದ್ಧೆ ಇರಲಿ.ಕುಟುಂಬದ ಸದಸ್ಯರ ಮಾರ್ಗದರ್ಶನ ಪಡೆಯುವುದು ಒಳ್ಳೆಯದು.ಆರೋಗ್ಯದ ಕುರಿತು ಕಾಳಜಿ ವಹಿಸಿ.ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿ ಉಂಟಾಗುವ ಸಾಧ್ಯತೆ.ಸಂಗಾತಿಯ ಮಧುರ ಪ್ರೀತಿ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು.ಹಣಕಾಸಿನ ವ್ಯವಹಾರ ನಿರೀಕ್ಷಿಸಿದಷ್ಟು ಸಾಧ್ಯವಿಲ್ಲ.ಅತಿಥಿಗಳ ಆಗಮನದಿಂದ ನಿಮ್ಮ ಯೋಚಿತ ಕಾರ್ಯ ವಿಳಂಬವಾಗುವ ಸಾಧ್ಯತೆ.ಆತುರದಲ್ಲಿ ಯಾವುದೇ ತೀರ್ಮಾನ ತೆಗೆದುಕೊಳ್ಳಲಾಗುವುದು ಬೇಡ.ಆರೋಗ್ಯ ಉತ್ತಮ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಧನಸ್ಸು: ಕುಟುಂಬದ ಸದಸ್ಯರೊಂದಿಗೆ ಪ್ರಯಾಣ ಮಾಡುವ ಸಾಧ್ಯತೆ.ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಯಾವುದೇ ಹಣಕಾಸು ಒಪ್ಪಂದಗಳನ್ನು ಮಾಡಿಕೊಳ್ಳುವುದು ಬೇಡ.ಪ್ರೀತಿ ಪಾತ್ರರೊಂದಿಗೆ ಆತುರದ ಮಾತುಗಳಿಂದ ಹಳಿಸುವ ಸಾಧ್ಯತೆ. ನಿಧಾನಿಸಿ, ಯೋಚಿಸಿ ಮಾತನಾಡಿ.ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಮಕರ: ಬಹಳ ದಿನಗಳ ಕನಸು ನನಸಾಗುವ ಕಾಲ. ಆತುರದಲ್ಲಿ ಯಾವುದೇ ಸಂಕಲ್ಪ ಮಾಡುವುದು ಬೇಡ.ಸ್ನೇಹಿತರ ಕಷ್ಟಕಾಲಕ್ಕೆ ಸ್ಪಂದಿಸುವ ಸಾಧ್ಯತೆ.ಆರೋಗ್ಯ ಪರಿಪೂರ್ಣ.ಉದ್ಯೋಗದಲ್ಲಿ ಯಶಸ್ಸು.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕುಂಭ: ಅತಿಯಾದ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವದು ಬೇಡ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯಿರಿ.ತಾಳ್ಮಯಿಂದ ವರ್ತಿಸಿ.ಆತುರದಿಂದ ಮಾತನಾಡುವುದು ಬೇಡ.ಉದ್ಯೋಗಿಗಳಿಗೆ ಹೆಚ್ಚಿನ ಒತ್ತಡ.ಕುಟುಂಬದ ಬೆಂಬಲ ಸಿಗಲಿದೆ.ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ಮೀನ: ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ.ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ ಕಾಳಜಿ ವಹಿಸುವುದು ಸೂಕ್ತ.ವ್ಯಾಪರ ವ್ಯವಹಾರದಲ್ಲಿ ಸಾಧಾರಣ.ದಿನದ ಮಟ್ಟಿಗೆ ಖರ್ಚು.ಸಂಗಾತಿಯ ವರ್ತನೆ ನಿಮಗೆ ಕೋಪ ತರಿಸಬಹುದು.ಉದ್ಯೋಗಿಗಳಿಗೆ ಶುಭ ಫಲ.ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ | Yearly Horoscope 2023 | ಹೊಸ ವರ್ಷದಲ್ಲಿ ಯಾವೆಲ್ಲಾ ರಾಶಿಗಳಿಗೆ ಶುಭಾಶುಭ ಫಲಗಳಿವೆ?; ಇಲ್ಲಿದೆ ವರ್ಷ ಭವಿಷ್ಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವಿದೇಶ

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Danesh Palyani: ಪಾಕಿಸ್ತಾನದ ಪ್ರಮುಖ ಹಿಂದು ನಾಯಕರೂ ಆಗಿರುವ ದಾನೇಶ್‌ ಕುಮಾರ್‌ ಪಲ್ಯಾನಿ ಅವರು, ಪಾಕ್‌ನಲ್ಲಿ ಹೇಗೆ ಹಿಂದು ಯುವತಿಯರನ್ನು ಹೇಗೆ ಬಲವಂತವಾಗಿ ಮತಾಂತರ ಮಾಡಲಾಗುತ್ತಿದೆ, ಹೇಗೆ ಮುಸ್ಲಿಮರು ದೌರ್ಜನ್ಯ ಎಸಗುತ್ತಿದ್ದಾರೆ ಎಂಬುದರ ಕುರಿತು ಸಂಸತ್‌ನಲ್ಲಿಯೇ ಬೆಳಕು ಚೆಲ್ಲಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Danesh Palyani
Koo

ಇಸ್ಲಾಮಾಬಾದ್:‌ ಪಾಕಿಸ್ತಾನದಲ್ಲಿ (Pakistan) ಹಿಂದುಗಳನ್ನು, ಹಿಂದು ಯುವತಿಯರನ್ನು ಬಲವಂತವಾಗಿ ಮತಾಂತರ ಮಾಡುವ ಹೀನ ಕೃತ್ಯವು ಮೊದಲಿನಿಂದಲೂ ನಡೆಯುತ್ತಿದೆ. ಭಾರತ ಹಾಗೂ ಪಾಕಿಸ್ತಾನ ವಿಭಾಜನೆಯಾದಾಗಿನಿಂದಲೂ ಮುಸ್ಲಿಮರು ಮತಾಂತರಗೊಳಿಸಿದ ಕಾರಣ ನೆರೆ ರಾಷ್ಟ್ರದಲ್ಲಿ ಹಿಂದುಗಳ ಸಂಖ್ಯೆಯು ಗಣನೀಯವಾಗಿ ಕುಸಿದಿದೆ. ಪಾಕಿಸ್ತಾನದ ಹಿಂದು ಸಂಸದ, ಹಿಂದುಗಳ ನಾಯಕರೂ ಆದ ದಾನೇಶ್‌ ಕುಮಾರ್‌ ಪಲ್ಯಾನಿ (Danesh Kumar Palyani) ಅವರೀಗ ಹಿಂದು ಯುವತಿಯರನ್ನು ಹೇಗೆ ಬಲವಂತವಾಗಿ ಮತಾಂತರ (Conversion) ಮಾಡಲಾಗುತ್ತಿದೆ ಎಂಬುದನ್ನು ಸಂಸತ್‌ನಲ್ಲಿಯೇ ಬಹಿರಂಗಪಡಿಸಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

ಸಂಸತ್‌ನಲ್ಲಿ ಮಾತನಾಡಿದ ದಾನೇಶ್‌ ಕುಮಾರ್‌ ಪಲ್ಯಾನಿ, “ಪಾಕಿಸ್ತಾನದ ಸಿಂಧ್‌ ಪ್ರಾಂತ್ಯದಲ್ಲಿ ಮಾನವ ಹಕ್ಕುಗಳ ಧಕ್ಕೆಯಾಗುತ್ತಿದೆ. ಅದರಲ್ಲೂ, ಹಿಂದು ಯುವತಿಯರನ್ನು ಮುಸ್ಲಿಮರು ಬಲವಂತವಾಗಿ ಮತಾಂತರ ಮಾಡುತ್ತಿದ್ದಾರೆ. ಹಿಂದು ಯುವತಿಯನ್ನು ಅಪಹರಣ ಮಾಡಿ, ಬಳಿಕ ಅವರನ್ನು ಇಸ್ಲಾಂಗೆ ಮತಾಂತರಗೊಳಿಸಲಾಗುತ್ತಿದೆ. ಪಾಕಿಸ್ತಾನವು ಹಿಂದುಗಳನ್ನು ಬಲವಂತವಾಗಿ ಮಾತನಾಡಬಾರದು ಎಂಬ ಹಕ್ಕು ನೀಡಿದೆ. ಆದರೆ, ಸಿಂಧ್‌ ಪ್ರಾಂತ್ಯದಲ್ಲಿ ಹಿಂದುಗಳ ಸ್ಥಿತಿಯು ದುಸ್ಥರವಾಗಿದೆ” ಎಂದು ಹೇಳಿದ್ದಾರೆ.

“ಬಲವಂತವಾಗಿ ಧರ್ಮವನ್ನು ಹೇರಬಾರದು ಎಂಬುದಾಗಿ ಕುರಾನ್‌ ಕೂಡ ಹೇಳುತ್ತದೆ. ನಿಮ್ಮ ಧರ್ಮ ನಿಮ್ಮದು, ನಮ್ಮ ಧರ್ಮ ನಮ್ಮದು ಎಂಬ ಸಂದೇಶ ಸಾರಲಾಗಿದೆ. ಆದರೆ, ಇಸ್ಲಾಂ ಧರ್ಮದ ದುಷ್ಕರ್ಮಿಗಳು ಪಾಕಿಸ್ತಾನದ ಸಂವಿಧಾನವನ್ನೂ ನಂಬಲ್ಲ, ಕುರಾನ್‌ ಷರೀಫ್‌ಅನ್ನು ಕೂಡ ನಂಬುವುದಿಲ್ಲ. ಇದರಿಂದಾಗಿ ಪಾಕಿಸ್ತಾನದಲ್ಲಿ ಹಿಂದು ಯುವತಿಯರು ಬಲವಂತವಾಗಿ ತಮ್ಮ ಧರ್ಮವನ್ನು ಬದಲಾಯಿಸಬೇಕಾಗಿದೆ. ಪ್ರಿಯಾ ಕುಮಾರಿ ಎಂಬ ಯುವತಿಯನ್ನು ಅಪಹರಿಸಿ ಎರಡು ವರ್ಷಗಳೇ ಕಳೆದಿವೆ. ಆದರೂ, ಸರ್ಕಾರ ಇಂತಹ ದುಷ್ಕರ್ಮಿಗಳ ವಿರುದ್ಧ ಯಾವುದೇ ಕ್ರಮ ತೆಗೆದುಕೊಂಡಿಲ್ಲ” ಎಂದು ದೂರಿದರು.

“ಪಾಕಿಸ್ತಾನದ ಸಂವಿಧಾನವಾಗಲಿ, ಪವಿತ್ರ ಕುರಾನ್‌ ಆಗಲಿ ಬಲವಂತದ ಮತದಾನವನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಹೀಗಿದ್ದರೂ, ನಮ್ಮ ಮಾತೃಭೂಮಿಯಾದ ಪಾಕಿಸ್ತಾನದ ಘನತೆಗೆ ದುಷ್ಕರ್ಮಿಗಳು ಧಕ್ಕೆ ತರುತ್ತಿದ್ದಾರೆ. ಇಂತಹವರ ವಿರುದ್ಧ ಪಾಕಿಸ್ತಾನ ಸರ್ಕಾರವು ಕಠಿಣ ಕ್ರಮ ತೆಗೆದುಕೊಳ್ಳಬೇಕು” ಎಂಬುದಾಗಿ ಆಗ್ರಹಿಸಿದ್ದಾರೆ. ಪಾಕಿಸ್ತಾನದಲ್ಲಿ ಬಲವಂತದ ಮತಾಂತರ, ಯುವತಿಯರ ಅಪಹರಣ, ಮಕ್ಕಳ ಕಳ್ಳ ಸಾಗಣೆ, ಬಾಲ್ಯ ವಿವಾಹದಂತಹ ಸಮಸ್ಯೆಗಳು ತಲೆದೋರಿರುವ ಕುರಿತು ಕೆಲ ದಿನಗಳ ಹಿಂದಷ್ಟೇ ವಿಶ್ವಸಂಸ್ಥೆಯು ಕಳವಳ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: Forced Conversion : ಮಹಿಳೆಯ ಖಾಸಗಿ ವಿಡಿಯೊ ಮಾಡಿ, ಇಸ್ಲಾಂಗೆ ಮತಾಂತರ ಮಾಡಲು ಯತ್ನಿಸಿದ ನೀಚ ದಂಪತಿ

Continue Reading

ಕರ್ನಾಟಕ

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

Prajwal Revanna: ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ, ಅಲ್ಲಿಯೇ ಆಶ್ರಯ ಪಡೆದಿದ್ದಾರೆ. ಎಸ್‌ಐಟಿ ವಿಚಾರಣೆಗೆ ಹಾಜರಾಗದೆ, ಭಾರತಕ್ಕೆ ವಾಪಸಾಗದೆ ಅಲ್ಲಿಯೇ ಅವರು ತಲೆಮರೆಸಿಕೊಂಡಿದ್ದರೆ, ಅವರ ಕಾರು ಓಡಿಸಿಕೊಂಡಿದ್ದ ಕಾರ್ತಿಕ್‌ ಮಲೇಷ್ಯಾದಲ್ಲಿ ಮಜಾ ಮಾಡುತ್ತಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ಅವರು ಕಾರ್ತಿಕ್‌ ಬಗ್ಗೆ ಹೇಳಿಕೆ ನೀಡಿದ ಬಳಿಕವಂತೂ ಹಲವು ಚರ್ಚೆಗಳು ನಡೆಯುತ್ತಿವೆ.

VISTARANEWS.COM


on

Prajwal Revanna
Koo

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna) ಅವರ ಕಾಮಕೇಳಿಯ ವಿಡಿಯೊಗಳು ಬಹಿರಂಗವಾದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಪೆನ್‌ಡ್ರೈವ್‌ ಪ್ರಕರಣವು (Pen Drive Case) ಕರ್ನಾಟಕದಲ್ಲಿ (Karnataka) ಜೆಡಿಎಸ್‌ ಹಾಗೂ ಬಿಜೆಪಿಗೆ ಮುಜುಗರ ತಂದರೆ, ಕಾಂಗ್ರೆಸ್‌ಗೆ ಅಸ್ತ್ರವಾಗಿದೆ. ಇದರ ಬೆನ್ನಲ್ಲೇ, ಪ್ರಜ್ವಲ್‌ ರೇವಣ್ಣ ಜರ್ಮನಿಯಲ್ಲಿ ಅಜ್ಞಾತವಾಸ ಅನುಭವಿಸುತ್ತಿದ್ದರೆ, ವಿಡಿಯೊ, ಫೋಟೊಗಳು ಎಲ್ಲೆಡೆ ಹರಡಲು ಕಾರಣರಾದ ಮಾಜಿ ಚಾಲಕ ಕಾರ್ತಿಕ್‌ ಮಲೇಷ್ಯಾದಲ್ಲಿ ಮೋಜು-ಮಸ್ತಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್‌ ಅಜ್ಞಾತಸ್ಥಳದಿಂದ ವಿಡಿಯೊ ಬಿಡುಗಡೆ ಮಾಡಿ, ಕೆಲ ಸ್ಪಷ್ಟನೆ ನೀಡಿದ್ದಾರೆ. ಇದರ ಬೆನ್ನಲ್ಲೇ, “ಕಾರ್ತಿಕ್‌ನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು” ಎಂಬುದಾಗಿ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. ಇದರೊಂದಿಗೆ ಕಾರ್ತಿಕ್‌ ಮಲೇಷ್ಯಾಗೆ ತೆರಳಿದ್ದು ದೃಢಪಟ್ಟಿದ್ದು, ಕಾರು ಚಾಲಕನೊಬ್ಬ ಮಲೇಷ್ಯಾದಲ್ಲಿ ಕಾಲ ಕಳೆಯುವುದು, ಅಲ್ಲಿಯೇ ಹಾಲಿಡೇಸ್‌ ಎಂಜಾಯ್‌ ಮಾಡುವುದು ಹೇಗೆ ಸಾಧ್ಯ ಎಂಬ ಪ್ರಶ್ನೆಗಳು ಮೂಡಿವೆ.

ಪ್ರಜ್ವಲ್‌ ರೇವಣ್ಣ ಲೈಂಗಿಕ ಶೋಷಣೆ ಮಾಡಿರುವ ಕುರಿತು ಪ್ರಕರಣ ದಾಖಲಿಸಲಾಗಿದ್ದು, ತನಿಖೆಗೆ ಎಸ್‌ಐಟಿ ರಚಿಸಲಾಗಿದೆ. ಇನ್ನು ಸಾವಿರಾರು ಅಶ್ಲೀಲ ವಿಡಿಯೊಗಳಿರುವ ಪೆನ್‌ಡ್ರೈವ್‌ ಎಲ್ಲೆಂದರಲ್ಲಿ ಸಿಕ್ಕಿರುವುದು ಹಲವು ಅನುಮಾನ ಮೂಡಿಸಿವೆ. ಇದರ ಮಧ್ಯೆಯೇ, ಜರ್ಮನಿಗೆ ತೆರಳಿರುವ ಪ್ರಜ್ವಲ್‌ ರೇವಣ್ಣ, ಅಲ್ಲಿಯೇ ಆಶ್ರಯ ಪಡೆದಿದ್ದಾರೆ. ಎಸ್‌ಐಟಿ ವಿಚಾರಣೆಗೆ ಹಾಜರಾಗದೆ, ಭಾರತಕ್ಕೆ ವಾಪಸಾಗದೆ ಅಲ್ಲಿಯೇ ಅವರು ತಲೆಮರೆಸಿಕೊಂಡಿದ್ದರೆ, ಅವರ ಕಾರು ಓಡಿಸಿಕೊಂಡಿದ್ದ ಕಾರ್ತಿಕ್‌ ಮಲೇಷ್ಯಾದಲ್ಲಿ ಮಜಾ ಮಾಡುತ್ತಿದ್ದಾರೆ ಎನ್ನಲಾಗಿದೆ. ಇದು ಈಗ ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಕಾರ್ತಿಕ್‌ ಬಗ್ಗೆ ಎಚ್‌ಡಿಕೆ ಸಿಡಿಮಿಡಿ

ಬೆಂಗಳೂರಿನ ಪದ್ಮನಾಭನಗರದ ನಿವಾಸದ ಗೇಟ್‌ ಮುಂಭಾಗದಲ್ಲಿ ಪ್ರಕರಣದ ಬಗ್ಗೆ ಪ್ರಶ್ನಿಸಿದ ಮಾಧ್ಯಮಗಳ ವಿರುದ್ಧ ಎಚ್‌.ಡಿ.ಕುಮಾರಸ್ವಾಮಿ ಗರಂ ಆದರು. ಪದೇಪದೇ ಏನು ಕೇಳುತ್ತೀರಿ, ನಿಮಗೆ ಏನು ಕೆಲಸ, ಇಲ್ಲಿ ಯಾಕೆ ಬಂದಿದ್ದೀರಾ? ಸುದ್ದಿ ಬಿಡುವವರ ಜತೆ ಹೋಗಿ ಎಂದು ಕಿಡಿಕಾರಿದರು. ನಿನ್ನೆ ಡ್ರೈವರ್ ಒಬ್ಬ ವಿಡಿಯೋ ಮಾಡಿ ಹೇಳಿದನಲ್ಲಾ? ಯಾರು ಆ ವಿಡಿಯೊ ಮಾಡಿದ್ದು? ಇಲ್ಲಿ ಚಿಲ್ಲರೆ ಅಣ್ಣ ತಮ್ಮ ಇದ್ದಾರಲ್ಲವೇ? ಅವರು ಏನ್ ಹೇಳಿದರು? ಕುಮಾರಸ್ವಾಮಿ ಬಿಟ್ಟಿದ್ದು ಎನ್ನುತ್ತಾರೆ. ಡ್ರೈವರ್ ಕಾರ್ತಿಕ್ ಎಲ್ಲಿದ್ದಾನೆ ಈಗ? ಮಲೇಷ್ಯಾದಲ್ಲಿ ಇದಾನೆ, ಆತನನ್ನು ಮಲೇಷ್ಯಾಗೆ ಕಳುಹಿಸಿದ್ದು ಯಾರು ಎಂದು ಪ್ರಶ್ನಿಸಿದರು.

ಆ ಡ್ರೈವರ್‌ ಕಾರ್ತಿಕ್ ಏನು ಹೇಳಿಕೆ ಕೊಟ್ಟಾ? ದೇವರಾಜೇಗೌಡ ಕೈಯಲ್ಲಿ ಪೆನ್ ಡ್ರೈವ್ ಕೊಟ್ಟಿದ್ದೆ ಅಂತ ಹೇಳಿದ್ದ. ಇಂದು ಬೆಳಗ್ಗೆ ಈ ಚಿಲ್ಲರೆ ಅಣ್ಣ ತಮ್ಮ ಇದಾರಲ್ವಾ (ಡಿಕೆಶಿ ಹಾಗೂ ಡಿ.ಕೆ ಸುರೇಶ್), ಕುಮಾರಸ್ವಾಮಿನೇ ಬಿಟ್ಟಿರಬೇಕು ಅಂತ ಹೇಳಿಕೆ ಕೊಟ್ಟಿದ್ದಾರೆ. ಕುಮಾರಸ್ವಾಮಿಯನ್ನು ಈ ಮೊದಲು ದೇವರಾಜೇಗೌಡ ಭೇಟಿಯಾಗಿದ್ದ ಎಂದು ಈ 420ಗಳು ಹೇಳಿದ್ದಾರೆ. ಹಾಗಾದರೆ ಎಲ್ಲಿದ್ದಾನೆ ಈ ಕಾರ್ತಿಕ್? ಯಾರು ಕಳುಹಿಸಿದರು? ಎಲ್ಲಿಂದ ವಿಡಿಯೋ ಮಾಡಿ ಬಿಟ್ಟದ್ದಾನೆ, ಅದನ್ನು ಮೊದಲು ತಿಳಿದುಕೊಳ್ಳಿ. ನನ್ನ ಕೆಣಕಿದ್ದಾರೆ, ಸುಮ್ಮನೆ ಬಿಡಲ್ಲ ನಾನು ಎಂದು ಡಿಕೆ ಬ್ರದರ್ಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: Prajwal Revanna Case: ಸಿಂಗಾಪುರ ಮಾಧ್ಯಮಗಳಲ್ಲೂ ಪ್ರಜ್ವಲ್‌ ರೇವಣ್ಣ ಕೇಸ್‌ ಸದ್ದು!

Continue Reading

ಕ್ರೀಡೆ

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

CSK vs PBKS: ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು

VISTARANEWS.COM


on

CSK vs PBKS
Koo

ಚೆನ್ನೈ: ಪ್ಲೇ ಆಫ್​ ಆಸೆಯನ್ನು ಜೀವಂತವಿರಿಸಲು ಗೆಲ್ಲಲೇ ಬೇಕಾದ ಮಹತ್ವದ ಪಂದ್ಯದಲ್ಲಿ ಪಂಜಾಬ್​ ಕಿಂಗ್ಸ್(CSK vs PBKS)​ ತಂಡ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ತಂಡವನ್ನು ಅವರದ್ದೇ ನೆಲದಲ್ಲಿ 7 ವಿಕೆಟ್​ಗಳಿಂದ ಮಗುಚಿ ಹಾಕಿದೆ. ಇದು ಈ ಆವೃತ್ತಿಯಲ್ಲಿ ಚೆನ್ನೈಗೆ ತವರಿನಲ್ಲಿ ಎದುರಾದ 2ನೇ ಸೋಲಾಗಿದೆ. ಇದಕ್ಕೂ ಮುನ್ನ ಲಕ್ನೋ ವಿರುದ್ಧ ಸೋಲು ಕಂಡಿತ್ತು. ಜಾನಿ ಬೇರ್​ಸ್ಟೋ(46 ರನ್​) ಮತ್ತು ರಾಹುಲ್​ ಚಹರ್​ (16ಕ್ಕೆ 2 ವಿಕೆಟ್​) ಪಂಜಾಬ್​ ಗೆಲುವಿನ ಪ್ರಮುಖ ರೂವಾರಿಗಳಾಗಿ ಮೂಡಿಬಂದರು.

ಇಲ್ಲಿನ ಎಂ.ಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಐಪಿಎಲ್​ನ(IPL 2024) 49 ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್​ ಆಯ್ದುಕೊಂಡ ಪಂಜಾಬ್​ ಇದಕ್ಕೆ ತಕ್ಕ ಪ್ರದರ್ಶನ ನೀಡುವು ಮೂಲಕ ಚೆನ್ನೈ ತಂಡವನ್ನು 162 ರನ್​ಗೆ ಕಟ್ಟಿಹಾಕಿತು. ಸಾಧಾರಣ ಮೊತ್ತದ ಗುರಿಯನ್ನು ಅಷ್ಟೇ ಸೊಗಸಾಗಿ ಬೆನ್ನಟ್ಟಿದ ಪಂಜಾಬ್​ ಬ್ಯಾಟರ್​ಗಳು 17.5 ಓವರ್​ಗಳಲ್ಲಿ ಕೇವಲ 3 ವಿಕೆಟ್​ಗೆ 163 ರನ್​ ಬಾರಿಸಿ ಗೆಲುವಿನ ಪತಾಕೆ ಹಾರಿಸಿದರು.

​ಚೇಸಿಂಗ್​ ವೇಳೆ ಕಳೆದ ಪಂದ್ಯದ ಶತಕ ವೀರ ಜಾನಿ ಬೇರ್​ಸ್ಟೋ 46 ರನ್​ ಬಾರಿಸಿ ಈ ಪಂದ್ಯದಲ್ಲಿಯೂ ತಮ್ಮ ಬ್ಯಾಟಿಂಗ್​ ಪ್ರತಾಪ ತೋರಿದರು. ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ಕೊಟ್ಟ ಅವರು ಪ್ರತಿ ಓವರ್​ನಲ್ಲಿಯೂ ಕನಿಷ್ಠ ಒಂದು ಬೌಂಡರಿ ಅಥವಾ ಸಿಕ್ಸರ್​ ಬಾರಿಸುತ್ತಲೇ ಮುನ್ನುಗಿದರು. ಇವರಿಗೆ 2ನೇ ಕ್ರಮಾಂಕದಲ್ಲಿ ಆಡಲಿಳಿದ ದಕ್ಷಿಣ ಆಫ್ರಿಕಾದ ಹಾರ್ಡ್​ ಹಿಟ್ಟರ್​ ರೀಲಿ ರೂಸೊ ಉತ್ತಮ ಸಾಥ್​ ನೀಡಿದರು. ಬೇರ್​ಸ್ಟೋ ವಿಕೆಟ್​ ಪತನದ ಬಳಿಕ ಇವರು ತಂಡವನ್ನು ಆಧರಿಸಿದರು. 23 ಎಸೆತ ಎದುರಿಸಿ 43(5 ಬೌಂಡರಿ, 2 ಸಿಕ್ಸರ್​) ರನ್​ ಬಾರಿಸಿದರು. ಅಂತಿಮವಾಗಿ ಶಶಾಂಕ್​ ಸಿಂಗ್​(25) ಮತ್ತು ಹಂಗಾಮಿ ನಾಯಕ ಸ್ಯಾಮ್​ ಕರನ್​(26) ಅಜೇಯರಾಗಿ ಉಳಿದು ತಂಡವನ್ನು ಗೆಲುವಿನ ದಡ ಸೇರಿಸಿದರು. ಇದೇ ವೇಳೆ ಶಶಾಂಕ್ ಟಿ20 ಕ್ರಿಕೆಟ್​ನಲ್ಲಿ 2 ಸಾವಿರ ರನ್​ಗಳ ಗಡಿ ದಾಡಿದರು.

ಚೆನ್ನೈಗೆ ಗಾಯಕ್ವಾಡ್​ ಆಸರೆ


ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಉತ್ತಮ ಆರಂಭವೇನೊ ಪಡೆಯಿತು. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಅನುಭವಿ ಹಾಗೂ ಹಿರಿಯ ಆಟಗಾರ ಅಜಿಂಕ್ಯ ರಹಾನೆ ಸೇರಿಕೊಂಡು ಮೊದಲ ವಿಕೆಟ್​ಗೆ 64 ರನ್​ ಒಟ್ಟುಗೂಡಿಸಿದರು. ರಹಾನೆ 29 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು. ಉತ್ತಮ ಸ್ಥಿತಿಯಲ್ಲಿದ್ದ ಚೆನ್ನೈ ರಹಾನೆ ವಿಕೆಟ್​ ಪತನದ ಬಳಿಕ ದಿಢೀರ್​ ಕುಸಿತ ಕಂಡಿತು. ಸತತವಾಗಿ ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಒಂದೆಡೆ ಸಹ ಆಟಗಾರರ ವಿಕೆಟ್ ಬೀಳುತ್ತಿದ್ದರೂ ಕೂಡ ಮತ್ತೊಂದು ತುದಿಯಲ್ಲಿ ಕ್ರೀಸ್​ ಕಚ್ಚಿ ನಿಂತ ಗಾಯಕ್ವಾಡ್​ ತಮ್ಮ ಶಕ್ತಿ ಮೀರಿದ ಬ್ಯಾಟಿಂಗ್​ ಪ್ರದರ್ಶನದ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವ ಪ್ರಯತ್ನ ಮುಂದುವರಿಸಿದರು. ಒಂದು ಹಂತದಲ್ಲಿ ಸಮೀರ್ ರಿಜ್ವಿ ಅವರಿಂದ ಸಣ್ಣ ಮಟ್ಟದ ಜತೆಯಾಟದ ಬೆಂಬಲ ಸಿಕ್ಕರೂ ಕೂಡ ಇದು ಹೆಚ್ಚು ಹೊತ್ತು ಸಾಗಲಿಲ್ಲ. 21 ರನ್​ ಗಳಿಸಿದ್ದ ವೇಳೆ ರಿಜ್ವಿ ಕೂಡ ಔಟಾದರು. ಗಾಯಕ್ವಾಡ್​ 48 ಎಸೆತಗಳಿಂದ 5 ಬೌಂಡರಿ ಮತ್ತು 2 ಸಿಕ್ಸರ್​ ಬಾರಿಸಿ 62 ರನ್​ ಗಳಿಸಿದರು.

ಇದನ್ನೂ ಓದಿ IPL 2024: ನಾಯಕ ಹಾರ್ದಿಕ್​ ಪಾಂಡ್ಯ ಸೇರಿ ಮುಂಬೈ ತಂಡದ ಆಟಗಾರರಿಗೆ ಬಿತ್ತು ಭಾರೀ ದಂಡ

ದುಬೆ ಬ್ಯಾಟಿಂಗ್​ ವಿಫಲ


ಈ ಆವೃತ್ತಿಯಲ್ಲಿ ಇಂಪ್ಯಾಕ್ಟ್​ ಆಟಗಾರನಾಗಿ ಕಣಕ್ಕಿಳಿಯುತ್ತಿದ್ದ ಶಿವಂ ದುಬೆ ಎಲ್ಲ ಪಂದ್ಯಗಳಲ್ಲಿಯೂ ಉತ್ತಮ ಬ್ಯಾಟಿಂಗ್​ ಪ್ರದರ್ಶನ ತೋರಿದ್ದರು. ಆದರೆ ಟಿ20 ವಿಶ್ವಕಪ್​ಗೆ ಆಯ್ಕೆಯಾದ ಮರು ಪಂದ್ಯದಲ್ಲಿಯೇ ಗೋಲ್ಡನ್​ ಡಕ್​ ಸಂಕಟಕ್ಕೆ ಸಿಲುಕಿದರು. ಹರ್​ಪ್ರೀತ್​ ಬ್ರಾರ್​ ಎಸೆತದಲ್ಲಿ ಎಲ್​ಬಿಡಬ್ಲ್ಯು ಬಲೆಗೆ ಬಿದ್ದರು. ಮೊಯಿನ್​ ಅಲಿ ಕ್ಯಾಚ್​ನಿಂದ ಒಂದು ಜೀವದಾನ ಪಡೆದರೂ ಕೂಡ ಇದರ ಲಾಭವೆತ್ತಲು ವಿಫಲರಾದರು. 15 ರನ್​ ಗಳಿಸಿ ರಾಹುಲ್​ ಚಹರ್​ ಎಸೆತದಲ್ಲಿ ಕ್ಲೀನ್​ ಬೌಲ್ಡ್​ ಆದರು. ಮಹೇಂದ್ರ ಸಿಂಗ್​ ಧೋನಿ 11 ಎಸೆತಗಳಿಂದ 14 ರನ್​ ಗಳಿಸಿ ರನೌಟ್​ ಆದರು.

ಇದುವರೆಗೆ ದ್ವಿತೀಯ ಕ್ರಮಾಂಕದಲ್ಲಿ ಆಡುತ್ತಿದ್ದ ಡೇರಿಯಲ್​ ಮಿಚೆಲ್​ ಅವರನ್ನು ಈ ಪಂದ್ಯದಲ್ಲಿ 8ನೇ ಕ್ರಮಾಂಕದಲ್ಲಿ ಆಡಿಸಲಾಯಿತು. ಈ ಪ್ರಯೋಗ ಚೆನ್ನೈಗೆ ಭಾರೀ ಹಿನ್ನಡೆ ಉಂಟುಮಾಡಿತು. ಅವರನ್ನು ಎಂದಿನಂತೆ 2ನೇ ಕ್ರಮಾಂಕದಲ್ಲಿ ಆಡಿಸುತ್ತಿದ್ದರೆ ದೊಡ್ಡ ಮೊತ್ತವನ್ನು ಕಲೆಹಾಕಬಹುದಾಗಿತ್ತು. ಪಂಜಾಬ್​ ಪರ ರಾಹುಲ್​ ಚಹರ್​ ಮತ್ತು ಹರ್​ಪ್ರೀತ್​ ಬ್ರಾರ್​ ತಲಾ 2 ವಿಕೆಟ್​ ಉರುಳಿಸಿದರು.

Continue Reading

ಕರ್ನಾಟಕ

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Neha Murder Case: ಹುಬ್ಬಳ್ಳಿಗೆ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರ ಪ್ರಚಾರಕ್ಕೆಂದು ಬುಧವಾರ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನೇಹಾ ಹಿರೇಮಠ ತಂದೆ-ತಾಯಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.

VISTARANEWS.COM


on

Neha Murder Case
Koo

ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ ಕಾರಣಕ್ಕೆ ಹತ್ಯೆಗೀಡಾದ ನೇಹಾ ಪ್ರಕರಣದಲ್ಲಿ (Neha Murder Case) ನ್ಯಾಯ ಕೋರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಸಲ್ಲಿಸಲಾಗಿದೆ. ಹುಬ್ಬಳ್ಳಿಗೆ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ್‌ ಜೋಶಿ ಪರ ಪ್ರಚಾರಕ್ಕೆಂದು ಬುಧವಾರ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ನೇಹಾ ತಂದೆ-ತಾಯಿ ನೇರವಾಗಿ ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ್ದಾರೆ.

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ವೇದಿಕೆ ಹಿಂಭಾಗದಲ್ಲಿ ಗೃಹ ಸಚಿವರನ್ನು ಭೇಟಿ ಮಾಡಿರುವ ನೇಹಾ ಕುಟುಂಬ ಮಗಳ ಹತ್ಯೆ ಕುರಿತು ಸಂಪೂರ್ಣ ಮಾಹಿತಿ ಒದಗಿಸಿದರು. ನೇಹಾ ತಂದೆ ನಿರಂಜನ್ ಹಿರೇಮಠ ಅವರು, ತಾವೊಬ್ಬ ಕಾಂಗ್ರೆಸ್ ಕಾರ್ಪೊರೇಟರ್ ಆಗಿದ್ದರೂ ಮಗಳ ಹತ್ಯೆ ಪ್ರಕರಣದಲ್ಲಿ ಸರಿಯಾಗಿ ನ್ಯಾಯ ದಕ್ಕಿಸಿಕೊಳ್ಳಲು ಆಗುತ್ತಿಲ್ಲವೆಂದು ಅಮಿತ್ ಶಾ ಅವರೆದುರು ದುಃಖ ತೋಡಿಕೊಂಡಿದ್ದಾರೆ.

ಮಗಳು ನೇಹಾಳ ಹತ್ಯೆ ಹಿನ್ನೆಲೆ ಮತ್ತು ಈವರೆಗೆ ಆದ ಬೆಳವಣಿಗೆಗಳ ಕುರಿತು ಕಾರ್ಪೊರೇಟರ್ ನಿರಂಜನ್ ಅವರು ಕೇಂದ್ರ ಗೃಹ ಸಚಿವರೆದುರು ವಿವರಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೇಹಾ ತಂದೆ-ತಾಯಿಗೆ ಸಾಂತ್ವನ ಹೇಳಿದರಲ್ಲದೆ, ನಾವಿದ್ದೇವೆ ಹೆದರಬೇಡಿ ಎಂದು ಆತ್ಮಸ್ಥೈರ್ಯ ತುಂಬಿದರು.‌

ಇದನ್ನೂ ಓದಿ | PM Narendra Modi: ನೇಹಾ ಹಿರೇಮಠ ಹತ್ಯೆ ಆತಂಕಕಾರಿ; ಹೊಸಪೇಟೆಯಲ್ಲಿ ಕಾಂಗ್ರೆಸ್‌ಗೆ ಮೋದಿ ಚಾಟಿ!

ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ್ ಜೋಶಿ, ಶಾಸಕರಾದ ಮಹೇಶ ಟೆಂಗಿನಕಾಯಿ, ಅರವಿಂದ ಬೆಲ್ಲದ ಮತ್ತಿತರ ಪ್ರಮುಖರು ಈ ಸಂದರ್ಭದಲ್ಲಿ ಇದ್ದರು.

ಮಹಿಳೆಗೆ ಅನ್ಯಾಯ ಮಾಡಿದ್ರೆ ಅಂಥವರ ಜತೆ ಬಿಜೆಪಿ ಇರಲ್ಲ; ಪ್ರಜ್ವಲ್‌ನನ್ನು ಬಿಟ್ಟಿದ್ದು ಕಾಂಗ್ರೆಸ್‌ ತಪ್ಪು ಎಂದ ಶಾ

Prajwal Revanna Case BJP will not be with those who do injustice to women says Amit Shah

ಹುಬ್ಬಳ್ಳಿ: ಹಾಸನ ಸಂಸದ (Hassan MP), ಮಾಜಿ ಸಚಿವ ಎಚ್.ಡಿ. ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ (Prajwal Revanna Case) ಅಶ್ಲೀಲ ವಿಡಿಯೊ ಎನ್ನಲಾದ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಯಾವುದೇ ಮಹಿಳೆಗೆ ಅನ್ಯಾಯ ಮಾಡಿದರೂ ಅಂಥವರ ಜತೆಗೆ ಬಿಜೆಪಿ ಇರಲ್ಲ. ಸಿಎಂ ಸಿದ್ದರಾಮಯ್ಯ (CM Siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್ (DCM DK Shivakumar) ಅವರೇ ಇಲ್ಲಿ ಸ್ವಲ್ಪ ಕೇಳಿಸಿಕೊಳ್ಳಿ. ಪ್ರಜ್ವಲ್‌ ಮೇಲೆ ಕ್ರಮವನ್ನು ನೀವು ತೆಗೆದುಕೊಳ್ಳಬೇಕಿತ್ತು, ನಾವಲ್ಲ ಎಂದು ಗುಡುಗಿದ್ದಾರೆ.

ಹುಬ್ಬಳ್ಳಿಯಲ್ಲಿ ಬುಧವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಒಕ್ಕಲಿಗ ಬೆಲ್ಟ್‌ನಲ್ಲಿ ಚುನಾವಣೆ ಆಗುವವರೆಗೂ ಪ್ರಜ್ವಲ್‌ ರೇವಣ್ಣ ಅವರ ಮೇಲೆ ನೀವು ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಈ ವಿಷಯದಲ್ಲಿ ಭಾರಿ ರಾಜಕೀಯ ಮಾಡಿದ್ದೀರಿ. ಆರೋಪಿ ಪ್ರಜ್ವಲ್‌ ರೇವಣ್ಣ ಅವರನ್ನು ವಿದೇಶಕ್ಕೆ ಹೋಗಲು ಬಿಟ್ಟಿದ್ದೀರಿ. ಧೈರ್ಯವಿದ್ದರೆ ಸತ್ಯವನ್ನು ಜನರ ಮುಂದೆ ಹೇಳಿ. ಇಂತಹ ಕೃತ್ಯ ಮಾಡುವವರಿಗೆ ಕಠೋರವಾದ ಶಿಕ್ಷೆ ಆಗಬೇಕು, ವಿಳಂಬವಾಗಬಾರದು ಅನ್ನೋದು ನಮ್ಮ ನಿಲುವು. ಇಂತಹ ಭಯಾನಕ ಅಪರಾಧದ ನಡುವೆಯೂ ಇವರು ರಾಜಕೀಯ ಮಾಡುತ್ತಿದ್ದಾರೆ ಎಂದು ಗುಡುಗಿದರು.

ನಿಮಗಾಗದಿದ್ದರೆ ಕರ್ನಾಟಕದ ಸುರಕ್ಷತೆಯನ್ನು ನಮಗೆ ಬಿಡಿ

ಏಪ್ರಿಲ್ 18ರಂದು ಹುಬ್ಬಳ್ಳಿಯಲ್ಲಿ ನೇಹಾ ಹಿರೇಮಠ ಹತ್ಯೆಯಾಯಿತು. ಇದು ವೈಯಕ್ತಿಕ ಕೇಸ್‌ ಎಂದು ಕಾಂಗ್ರೆಸ್ ನಾಯಕರು ಹೇಳಿದರು. ನಿಮಗೆ ಆಗದಿದ್ದರೆ ಬಿಡಿ, ನಾವು ಕರ್ನಾಟಕವನ್ನು ಸುರಕ್ಷಿತವನ್ನಾಗಿ ಮಾಡುತ್ತೇವೆ. ನಾವು ಕರ್ನಾಟಕದ ಹೆಣ್ಣು ಮಕ್ಕಳಿಗೆ ಸುರಕ್ಷತೆಯನ್ನು ಕೊಡುತ್ತೇವೆ ಎಂದು ಅಮಿತ್‌ ಶಾ ಅವರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

Prajwal Revanna Case BJP will not be with those who do injustice to women says Amit Shah

ಕಾಂಗ್ರೆಸ್‌ನಿಂದ ವೋಟ್‌ ಬ್ಯಾಂಕ್‌ ರಾಜಕಾರಣ

ಕಾಂಗ್ರೆಸ್‌ನವರು ವೋಟ್ ಬ್ಯಾಂಕ್‌ಗಾಗಿ ಜನರನ್ನು ಸಂಕಷ್ಟಕ್ಕೆ ಸಿಲುಕಿಸುವ ಕೆಲಸ ಮಾಡಿದ್ದಾರೆ. ಬಾಂಬ್ ಬ್ಲಾಸ್ಟ್‌ ಆದರೆ ಇವರಿಗೆ ಯಾವುದೇ ಲೆಕ್ಕವಿಲ್ಲ. ನೀವು ಪ್ರಲ್ಹಾದ್ ಜೋಶಿಯವರಿಗೆ ಹಾಕುವ ಒಂದೊಂದು ಮತವೂ ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡುತ್ತದೆ. ಮೋದಿಯವರು ಮತ್ತೊಮ್ಮೆ ಪ್ರಧಾನಿಯಾದರೆ ಭಯೋತ್ಪಾದನೆಯು ಸಂಪೂರ್ಣ ನಿರ್ಮೂಲನೆಯಾಗುತ್ತದೆ. ಕಾಂಗ್ರೆಸ್‌ನವರು ವೋಟ್ ಬ್ಯಾಂಕ್ ಕಾರಣಕ್ಕೆ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ಆಯೋಜನೆ ಮಾಡಿದ್ದ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಬರಲಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಹತ್ತು ವರ್ಷದಲ್ಲಿ ಕಾಂಗ್ರೆಸ್‌ನ ತುಷ್ಟೀಕರಣ ರಾಜಕೀಯವನ್ನು ಕಿತ್ತುಹಾಕಿದ್ದಾರೆ ಎಂದು ಅಮಿತ್‌ ಶಾ ಹೇಳಿದರು.

ಇದನ್ನೂ ಓದಿ: Prajwal Revanna Case: ಏನಿದು ಡಿಪ್ಲೊಮ್ಯಾಟಿಕ್‌ ಪಾಸ್‌ಪೋರ್ಟ್‌? ಕೇಂದ್ರ ರದ್ದು ಮಾಡಿದರೆ ಪ್ರಜ್ವಲ್‌ ರೇವಣ್ಣ ಅರೆಸ್ಟ್!

ಕಾಂಗ್ರೆಸ್‌ನವರು ಸುಳ್ಳು ಹೇಳುತ್ತಾರೆ

ಪ್ರಲ್ಹಾದ್ ಜೋಶಿಯವರನ್ನು ದೆಹಲಿಗೆ ನೀವು ಕಳುಹಿಸಿ, ಅವರನ್ನು ದೊಡ್ಡವರನ್ನಾಗಿ ನಾವು ಮಾಡುತ್ತೇವೆ. ಜೋಶಿ ನೋಡಲು ಸೀದಾ ಸಾದಾ ಕಾಣುತ್ತಾರೆ. ಹುಬ್ಬಳ್ಳಿ- ಧಾರವಾಡದ ಅಭಿವೃದ್ಧಿ ವಿಷಯ ಬಂದಾಗ ನನ್ನ ಜತೆಗೂ ಜಗಳ ಮಾಡುತ್ತಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬರದ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಪರಸ್ಪರ ಜಗಳದಲ್ಲಿ ತೊಡಗಿದ್ದಾರೆ. ನೀತಿ ಸಂಹಿತೆ ಜಾರಿಯಾಗಿದ್ದಕ್ಕೆ ಬರ ಪರಿಹಾರ ವಿಳಂಬವಾಗಿದೆ. ಕಾಂಗ್ರೆಸ್‌ನವರು ಸುಳ್ಳು ಹೇಳಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಈಗ ಹಣ ಬಿಡುಗಡೆಯಾಗಿದೆ ಎಂದು ಹೇಳಿದರು.

Continue Reading
Advertisement
Shata Chandika Yaga
ಚಿಕ್ಕಬಳ್ಳಾಪುರ1 hour ago

ಚಿಕ್ಕಬಳ್ಳಾಪುರದ ವಾಯುದೇವ, ರಾಮಕೃಷ್ಣ ದೇವರ ಸನ್ನಿಧಾನದಲ್ಲಿ ಶತ ಚಂಡಿಕಾ ಯಾಗ ಸಂಪನ್ನ

Prajwal Revanna Case
ಕರ್ನಾಟಕ2 hours ago

Prajwal Revanna Case: ಸಂಸದ ಪ್ರಜ್ವಲ್ ರೇವಣ್ಣ ಗೆಸ್ಟ್ ಹೌಸ್‌ನಲ್ಲಿಲ್ಲ ಸಿಸಿ ಕ್ಯಾಮೆರಾ?; ಹಲವು ಅನುಮಾನ

Danesh Palyani
ವಿದೇಶ2 hours ago

Danesh Palyani: ಪಾಕಿಸ್ತಾನದಲ್ಲಿ ಹಿಂದು ಯುವತಿಯರ ಮತಾಂತರ; ಕರಾಳ ಮುಖ ಬಿಚ್ಚಿಟ್ಟ ಸಂಸದ!

Bangalore University
ಕರ್ನಾಟಕ2 hours ago

Bangalore University: ಬೆಂಗಳೂರು ವಿವಿ ಕ್ಯಾಂಪಸ್‌ನಲ್ಲಿ ಪಿಎಚ್‌ಡಿ ವಿದ್ಯಾರ್ಥಿ ಅನುಮಾನಾಸ್ಪದ ಸಾವು

Prajwal Revanna
ಕರ್ನಾಟಕ2 hours ago

Prajwal Revanna: ಜರ್ಮನಿಯಲ್ಲಿ ಪ್ರಜ್ವಲ್‌ ಅಜ್ಞಾತವಾಸ, ಮಲೇಷ್ಯಾದಲ್ಲಿ ಕಾರ್ತಿಕ್‌ ಹಾಲಿಡೇಸ್?

CSK vs PBKS
ಕ್ರೀಡೆ2 hours ago

CSK vs PBKS: ಚೆನ್ನೈಗೆ ತವರಿನಲ್ಲೇ ಆಘಾತವಿಕ್ಕಿ ಪ್ಲೇ ಆಫ್​ ಆಸೆ ಜೀವಂತವಿರಿಸಿದ ಪಂಜಾಬ್​

Neha Murder Case
ಕರ್ನಾಟಕ3 hours ago

Neha Murder Case: ಮಗಳ ಸಾವಿಗೆ ನ್ಯಾಯ ದೊರಕಿಸಿಕೊಡಿ: ಅಮಿತ್‌ ಶಾಗೆ ನೇಹಾ ತಂದೆ ಮನವಿ

Love Jihad
ದೇಶ3 hours ago

Love Jihad: ಹಿಂದು ಎಂಬಂತೆ ಬಿಂಬಿಸಿ, ಯುವತಿಯನ್ನು ನಂಬಿಸಿ, ಕೊನೆಗೆ ಅತ್ಯಾಚಾರ ಎಸಗಿದ ಮುಸ್ಲಿಂ ಯುವಕ!

Union Minister Pralhad Joshi election campaign in kalaghatagi
ಧಾರವಾಡ3 hours ago

Lok Sabha Election 2024: ಕಾಂಗ್ರೆಸ್ಸಿನ 1 ಲಕ್ಷ ರು. ಬೋಗಸ್ ಗ್ಯಾರಂಟಿ: ಪ್ರಲ್ಹಾದ್‌ ಜೋಶಿ

Ikbal hussain
ಕರ್ನಾಟಕ4 hours ago

Iqbal Hussain: ಯುವತಿ ಜತೆ ಶಾಸಕ ಇಕ್ಬಾಲ್ ಹುಸೇನ್ ವಿಡಿಯೊ ಕಾಲ್ ವೈರಲ್; ಎಫ್‌ಐಆರ್‌ ದಾಖಲು

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ2 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20243 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20243 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20243 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20243 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20244 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20244 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest4 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ4 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌