Site icon Vistara News

Horoscope Today: ಗುರುವಾರದ ಶುಭ ದಿನದಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ?

horoscope today

ವಾರ ಭವಿಷ್ಯ

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ, ಉತ್ತರಾಯಣ,
ಗ್ರೀಷ್ಮ ಋತು, ಜೇಷ್ಠ ಮಾಸ, ಶುಕ್ಲ ಪಕ್ಷ.
ತಿಥಿ: ನವಮಿ 08:20 ವಾರ:  ಗುರುವಾರ
ನಕ್ಷತ್ರ:  ಹಸ್ತ 28:25 ಯೋಗ: ವ್ಯತಿಪಾತ 25:47
ಕರಣ: ಕೌಲವ 08:20 ದಿನ ವಿಶೇಷ: ಆರ್ದ್ರಾಪ್ರವೇಶಃ

ಸೂರ್ಯೋದಯ :  05:41                  ಸೂರ್ಯಾಸ್ತ  : 07:10

ರಾಹು ಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ:  ಪ್ರಾತಃ ಕಾಲ 9.00 ರಿಂದ 10.30
ಯಮಗಂಡಕಾಲ: ಪ್ರಾತಃ ಕಾಲ 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ.
ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿ.ಆರೋಗ್ಯ ಮಧ್ಯಮ.ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ಜನರ ಮಟ್ಟಿಗೆ ಖರ್ಚು. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು, ಕೀರ್ತಿ, ಶುಭಫಲ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ  ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.
ಮುಂದೆಯಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ.ದೀರ್ಘಕಾಲದ ಕೆಲಸಕಾರ್ಯಗಳಲ್ಲಿ ಯಶಸ್ಸು. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ, ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭಫಲ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

ಮಕರ: ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯದಲ್ಲಿ ಕೊಂಚ ಏರು-ಪೇರು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯವಸ್ತುಗಳ ಖರೀದಿ ಗಾಡಿ ಖರ್ಚು. ಅಮೂಲ್ಯ ವಸ್ತುಗಳ ಕುರಿತು ಲಕ್ಷ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

Exit mobile version