Site icon Vistara News

Horoscope Today : ಸಂಕಷ್ಟ ಚತುರ್ಥಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೀಗಿದೆ ನೋಡಿ

horoscope today

horoscope

ಇಂದಿನ ಪಂಚಾಂಗ (09-04-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.

ತಿಥಿ: ತದಿಗೆ 09:35 ವಾರ: ಭಾನುವಾರ
ನಕ್ಷತ್ರ: ವಿಶಾಖ 13:59 ಯೋಗ: ಸಿದ್ಧಿ 22:12
ಕರಣ: ವಿಷ್ಟಿ (ಭದ್ರ) 09:35 ಇಂದಿನ ವಿಶೇಷ: ಸಂಕಷ್ಟ ಚತುರ್ಥಿ, ಈಸ್ಟರ್‌ ಸಂಡೇ.
ಅಮೃತಕಾಲ: ಸೋಮವಾರದ ಮುಂಜಾನೆ 03 ಗಂಟೆ 25 ನಿಮಿಷದಿಂದ 04 ಗಂಟೆ 59 ನಿಮಿಷದವರೆಗೆ.

ಸೂರ್ಯೋದಯ : 06:11 ಸೂರ್ಯಾಸ್ತ : 06:32

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಕಿರಿಕಿರಿ. ಆರೋಗ್ಯ ಮಧ್ಯಮ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1

ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು, ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ಜನರ ಮಟ್ಟಿಗೆ ಖರ್ಚು. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ. ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಸಿಂಹ: ನಿಮ್ಮ ಆಕರ್ಷಕ ವರ್ತನೆ ಎಲ್ಲರ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು, ಕೀರ್ತಿ, ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.
ಮುಂದೆಯಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಇಂದು ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳಿ ಬರಲಿವೆ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡುವಿರಿ. ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನು ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಮಕರ: ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯದಲ್ಲಿ ಕೊಂಚ ಏರು-ಪೇರು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯವಸ್ತುಗಳ ಖರೀದಿಗಾಗಿ ಖರ್ಚು. ಅಮೂಲ್ಯ ವಸ್ತುಗಳ ಕುರಿತು ಲಕ್ಷ್ಯ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Navavidha Bhakti : ಪಾದಸೇವೆಯಿಂದಲೂ ಭಕ್ತಿಯ ವೃದ್ಧಿ

Exit mobile version