Site icon Vistara News

Horoscope Today : ಮೇಷ ಸಂಕ್ರಾಂತಿಯ ಈ ದಿನ ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ನೋಡೋಣ

Horoscope Today

ಇಂದಿನ ಭವಿಷ್ಯ

ಇಂದಿನ ಪಂಚಾಂಗ (14-04-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.

ತಿಥಿ: ನವಮಿ 23:12 ವಾರ: ಶುಕ್ರವಾರ
ನಕ್ಷತ್ರ: ಉತ್ತರಾಷಾಢ 09:13 ಯೋಗ: ಸಿದ್ದಿ 09:35
ಕರಣ: ತೈತುಲ 12:24
ಅಮೃತಕಾಲ: ರಾತ್ರಿ 09 ಗಂಟೆ 54 ನಿಮಿಷದಿಂದ 11 ಗಂಟೆ 24 ನಿಮಿಷದವರೆಗೆ.
ಇಂದಿನ ವಿಶೇಷ: ಸೌರಮಾನ ಯುಗಾದಿ, ವಿಷು ಹಬ್ಬ, ಮೇಷ ಸಂಕ್ರಮಣ, ಡಾ. ಅಂಬೇಡ್ಕರ್‌ ಜಯಂತಿ.

ಸೂರ್ಯೋದಯ : 06:08 ಸೂರ್ಯಾಸ್ತ : 06:32

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಅತಿಯಾದ ಕೆಲಸದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವವರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಉತ್ತಮ ಆರೋಗ್ಯ ಇಂದು ನಿಮ್ಮದಾಗಲಿದೆ. ಸಹದ್ಯೋಗಿಗಳಿಂದ ಕಿರಿಕಿರಿ, ನೀವು ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಮಿಥುನ: ಬಂಧುಗಳು ನಿಮ್ಮನ್ನು ಟೀಕೆ ಮಾಡುವ ಸಾಧ್ಯತೆ. ದಿನದ ಮಟ್ಟಿಗೆ ಒತ್ತಡ. ಇದು ನಿಮ್ಮ ಮಾನಸಿಕ ನೆಮ್ಮದಿ ಹಾಳು ಮಾಡುವ ಸಾಧ್ಯತೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ. ಉದ್ಯೋಗದಲ್ಲಿ ನೀವಿಂದು ಸಾಕಷ್ಟು ಶಮ್ರ ಪಡಬೇಕಾಗುತ್ತದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಕಟಕ: ನಿಮ್ಮ ಕೆಲಸ ಕಾರ್ಯಗಳಿಗೆ ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಯಾವುದೇ ವಿಷಯದಲ್ಲಿ ಆತುರದ ತಿರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಆರೋಗ್ಯದಲ್ಲಿ ವ್ಯತ್ಯಾಸ. ಹಣಕಾಸು ಪ್ರಗತಿ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಉದ್ಯೋಗದಲ್ಲಿ ಹಿಡಿದ ಕಾರ್ಯ ಪೂರ್ಣಗೊಳಿಸುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅನೇಕ ಸಮಸ್ಯೆಗಳಿಗೆ ಇಂದು ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಮಾತಿಗೆ ಮಾತು ಬೆಳೆಸುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ. ಉದ್ಯೋಗದಲ್ಲಿಯೂ ಯಶಸ್ಸು.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಕುಟುಂಬದ ಸದಸ್ಯರ ಆರೋಗ್ಯ ಕಡೆ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತರ, ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಉದ್ಯೋಗದಲ್ಲಿ ಹಿಡಿದ ಕಾರ್ಯ ಪೂರ್ಣಗೊಳಿಸುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮಕರ: ಇಂದು ನಿಮ್ಮ ಆರೋಗ್ಯ ಉತ್ತಮ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮ. ಕೆಲಸದ ಮಂದಗತಿ ಸ್ವಲ್ಪ ಒತ್ತಡ ತರುವುದು. ಅತಿರೇಖದಲ್ಲಿ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕುಂಭ: ಉದ್ಯೋಗದ ಸ್ಥಳದಲ್ಲಿ ಇಂದು ಪ್ರಶಂಸೆ ಸಿಗಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಇಂದು ಉತ್ತಮ ಆರೋಗ್ಯ. ಅನಿರೀಕ್ಷಿತ ಖರ್ಚು ಸಾಧ್ಯತೆ. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ : Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?

Exit mobile version