ಇಂದಿನ ಪಂಚಾಂಗ (17-04-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ದ್ವಾದಶಿ 15:45 ವಾರ: ಸೋಮವಾರ
ನಕ್ಷತ್ರ: ಪೂರ್ವಾಭಾದ್ರಪದ 26:26 ಯೋಗ: ಬ್ರಹ್ಮ 21:05
ಕರಣ: ತೈತುಲ 15:45 ಇಂದಿನ ವಿಶೇಷ: ಸೋಮ ಪ್ರದೋಷ
ಅಮೃತಕಾಲ: ರಾತ್ರಿ 07 ಗಂಟೆ 01 ನಿಮಿಷದಿಂದ 08 ಗಂಟೆ 30 ನಿಮಿಷದವರೆಗೆ.
ಸೂರ್ಯೋದಯ : 06:06 ಸೂರ್ಯಾಸ್ತ : 06:32
ರಾಹುಕಾಲ : ಬೆಳಗ್ಗೆ 7.30 ರಿಂದ 9.00
ಗುಳಿಕಕಾಲ: ಮಧ್ಯಾಹ್ನ 1.30 ರಿಂದ 3.00
ಯಮಗಂಡಕಾಲ: ಬೆಳಗ್ಗೆ 10.30 ರಿಂದ 12.00
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ನಿಮ್ಮ ಅಪಾರ ಆತ್ಮ ವಿಶ್ವಾಸ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ತಂದುಕೊಡಲಿದೆ. ಅತಿರೇಕದಿಂದ ಇಲ್ಲ ಸಲ್ಲದ ಮಾತುಗಳನ್ನಾಡಿ ಅಪಾಯವನ್ನು ತಂದುಕೊಳ್ಳುವುದು ಬೇಡ. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಷಭ: ಅತಿಥಿಗಳ ಆಗಮನದಿಂದ ಕುಟುಂಬದಲ್ಲಿ ಸಂತಸ. ಕುಟುಂಬದ ಸದಸ್ಯರಿಗೆ ಸಂಬಂಧಿಗಳಿಂದ ಸುದ್ದಿ ಬರುವುದು. ಆರ್ಥಿಕವಾಗಿ ಪ್ರಗತಿ ಕಂಡರೂ, ದಿನದ ಮಟ್ಟಿಗೆ ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಮನೆಯಲ್ಲಿ ಶುಭ ಕಾರ್ಯಗಳ ಕುರಿತು ಚರ್ಚೆ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಮಿಥುನ: ಸಕಾರಾತ್ಮಕ ಆಲೋಚನೆಗಳು ನಿಮ್ಮ ಯಶಸ್ಸಿಗೆ ಕಾರಣವಾಗುವುದು. ಆತುರದ ತಿರ್ಮಾನ, ಮಾತುಗಳು ಅಪಾಯ ತಂದೀತು, ಎಚ್ಚರಿಕೆ ಇರಲಿ. ಆರೋಗ್ಯ ಕೊಂಚ ಮಟ್ಟಿಗೆ ಹದಗೆಡುವ ಸಾಧ್ಯತೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಸಾಧ್ಯತೆ ಇರುವುದರಿಂದ ಆದಷ್ಟು ಮೌನಕ್ಕೆ ಜಾರುವುದು ಒಳಿತು. ಮನೆಯವರ ಧೈರ್ಯದ ಮಾತುಗಳು ಮನಸ್ಸಿಗೆ ಸಂತೋಷ ನೆಮ್ಮದಿ ತರುವುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7
ಕಟಕ: ಅತಿಯಾದ ಒತ್ತಡ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ. ಸೂಕ್ತ ವ್ಯಕ್ತಿಗಳ ಬೆಂಬಲದಿಂದ ಹೂಡಿಕೆ ವ್ಯವಹಾರದಲ್ಲಿ ತೊಡುಗುವ ಸಾಧ್ಯತೆ. ಪ್ರೀತಿಪಾತ್ರರೊಂದಿಗೆ ಸಮಯ ಕಳೆಯುವಿರಿ. ಸಂಗಾತಿ ನಿಮ್ಮ ಮನಸ್ಸಿಗೆ ಮುದ ನೀಡುವಳು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಸಿಂಹ: ನಿಮ್ಮ ವರ್ತನೆಯಲ್ಲಿ ಬದಲಾವಣೆಗಳಾಗಲಿವೆ. ಹಿರಿಯರ ಆಶೀರ್ವಾದದ ಬಲದಿಂದ ಯಶಸ್ಸು ಸಿಗಲಿದೆ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಅನಾರೋಗ್ಯ ಪೀಡಿತ ವ್ಯಕ್ತಿಯನ್ನು ಭೇಟಿ ಮಾಡಿ ಸ್ವಾಂತನ ಹೇಳಬಹುದು. ದಿಢೀರ್ ಪ್ರಯಾಣ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ಕನ್ಯಾ: ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಕುಟುಂಬದ ಸದಸ್ಯರ ಅವಶ್ಯಕತೆಗಾಗಿ ಅನಗತ್ಯ ಖರ್ಚು. ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುವ ಸಾಧ್ಯತೆ. ಇದರ ಮದ್ಯೆ ಕುಟುಂಬದ ಸದಸ್ಯರು ನಿಮ್ಮ ಮುಂದೆ ಸಮಸ್ಯೆ ಹಂಚಿಕೊಳ್ಳುವ ಸಾಧ್ಯತೆ. ಅವರ ಸಮಸ್ಯೆಯನ್ನು ಕೇಳಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಕೈಗೊಂಡ ಧಾರ್ಮಿಕ ಕಾರ್ಯಗಳು ಮನಸ್ಸಿಗೆ ಸಮಾಧಾನ ತರುವುದು. ಅಗತ್ಯಕ್ಕೆ ತಕ್ಕಂತೆ ಖರ್ಚು. ಕುಟುಂಬದ ಸದಸ್ಯರಿಂದ ಬರುವ ರಹಸ್ಯ ಸುದ್ದಿ ಅಚ್ಚರಿ ತರುವುದು. ಕೋಪದಲ್ಲಿ ಮಾತಿಗೆ ಇಳಿಯುವುದರಿಂದ ಕಠಿಣ ಪರಿಸ್ಥಿತಿ ನಿರ್ಮಾಣವಾಗುವುದು. ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ಕಠಿಣ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಲು ಸಿದ್ಧರಾಗುವಿರಿ. ಭಾವನಾತ್ಮಕ ನಿರ್ಧಾರ ಕೈಗೊಳ್ಳುವ ಭರದಲ್ಲಿ ಮನಸ್ಸಿನ ಸ್ಥಿಮಿತ ಕಳೆದುಕೊಳ್ಳುವುದು ಬೇಡ. ಅಜಾಗೃತ ಕಾರ್ಯ ನಿಮಗೆ ಆರ್ಥಿಕ ನಷ್ಟ ಉಂಟು ಮಾಡಬಹುದು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಧನಸ್ಸು: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕುಟುಂಬದ ಸದಸ್ಯರ ವರ್ತನೆಯಿಂದ ಕೋಪಗೊಳ್ಳುವ ಸಾಧ್ಯತೆ. ಸಂಬಂಧಿಕರಿಂದ ವ್ಯಾಜ್ಯ ಉಂಟಾಗುವ ಸಾಧ್ಯತೆ. ಆತುರದ ಮಾತುಗಳು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ಮಕರ: ಜೀವನದಲ್ಲಿ ಹೊಸ ಪಾಠ ಕಲಿಯುವಿರಿ. ಕೌಟುಂಬಿಕ ಒತ್ತಡ ನಿಮ್ಮ ಮನಸ್ಸಿಗೆ ನೋವುಂಟು ಮಾಡುವ ಸಾಧ್ಯತೆ. ಕೋಪದಲ್ಲಿ ಆಡಿದ ಮಾತುಗಳ ಮನವರಿಕೆ ಆಗುವುದು. ಆರೋಗ್ಯದ ಕಡೆಗೆ ಗಮನ ಹರಿಸಿ. ವೈದ್ಯರ ಸಲಹೆ ಪಡೆಯುವ ಸಾಧ್ಯತೆ. ಕೌಟುಂಬಿಕವಾಗಿ ಇಂದು ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು , ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಅನಗತ್ಯವಾಗಿ ಖರ್ಚು ಮಾಡುವ ಸಾಧ್ಯತೆ. ಗೌಪ್ಯ ವಿಷಯಗಳನ್ನು ಹಂಚಿಕೊಂಡು ಅಪಾಯವನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ. ಕುಟುಂಬದ ಕಲಹದಲ್ಲಿ ಧ್ವನಿ ಸೇರಿಸುವುದು ಬೇಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಮೀನ: ಒತ್ತಡದ ಜೀವನಕ್ಕೆ ಕೊಂಚ ಮಟ್ಟಿಗೆ ಸಮಾಧಾನದ ಮಾತುಗಳು ಸೂಕ್ತ ವ್ಯಕ್ತಿಗಳಿಂದ ಸಿಗಲಿವೆ. ನಿಮ್ಮ ವರ್ತನೆಯಿಂದ ಕುಟುಂಬದ ಸದಸ್ಯರು ಕೋಪಗೊಳ್ಳವ ಸಾಧ್ಯತೆ. ಹಣಕಾಸು ಪ್ರಗತಿ ಸಾಧಾರಣ. ಆರೋಗ್ಯದ ಕಡೆಗೆ ಕಾಳಜಿ ವಹಿಸುವುದು ಅವಶ್ಯಕ. ಕೌಟುಂಬಿಕವಾಗಿ ಇಂದು ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ : Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?