ಇಂದಿನ ಪಂಚಾಂಗ (25-04-2023)
ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ವೈಶಾಖ ಮಾಸ, ಶುಕ್ಲ ಪಕ್ಷ.
ತಿಥಿ: ಪಂಚಮಿ 09:39 ವಾರ: ಮಂಗಳವಾರ
ನಕ್ಷತ್ರ: ಆರಿದ್ರಾ 28:19 ಯೋಗ: ಅತಿಗಂಡ 07:43
ಕರಣ: ಬಾಲವ 09:39
ಅಮೃತಕಾಲ: ಸಂಜೆ 05 ಗಂಟೆ 25 ನಿಮಿಷದಿಂದ 07 ಗಂಟೆ 10 ನಿಮಿಷದವರೆಗೆ.
ಇಂದಿನ ವಿಶೇಷ: ಶ್ರೀ ಶಂಕರಾಚಾರ್ಯರ ಜಯಂತಿ, ಶ್ರೀ ರಾಮಾನುಜಾಚಾರ್ಯರ ಜಯಂತಿ, ವಿಶ್ವ ಮಲೇರಿಯಾ ದಿನ, ರಾಷ್ಟ್ರೀಯ ದೂರವಾಣಿ ದಿನ.
ಸೂರ್ಯೋದಯ : 06:02 ಸೂರ್ಯಾಸ್ತ : 06:34
ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ನಕಾರಾತ್ಮಕ ಆಲೋಚನೆಗಳು ನಿಮ್ಮಲ್ಲಿ ನಿರಾಸೆ ಮೂಡಿಸುವ ಸಾಧ್ಯತೆ. ಮಕ್ಕಳ ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ದಿನದ ಮಟ್ಟಿಗೆ ಖರ್ಚು. ಪ್ರಯಾಣ ಮಾಡುವ ಸಾಧ್ಯತೆ. ಬಹಳ ದಿನಗಳ ಕನಸು ನನಸಾಗುವ ಕಾಲ ಕೂಡಿ ಬರಲಿದೆ. ಉದ್ಯೋಗಿಗಳಿಗೆ ಶುಭ ಫಲ.
ಅದೃಷ್ಟ ಸಂಖ್ಯೆ: 2
ವೃಷಭ: ಹಣದ ಹೂಡಿಕೆ ಕುರಿತು ಆಲೋಚನೆ ಮಾಡುವಿರಿ. ನಿಮ್ಮ ಹಾಸ್ಯದ ಮನೋವೃತ್ತಿ ಇತರರನ್ನು ಆಕರ್ಷಿಸುತ್ತದೆ. ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಮಿಥುನ: ಆರೋಗ್ಯದ ಕುರಿತಾಗಿ ಕಾಳಜಿ ವಹಿಸಿ. ಆರ್ಥಿಕ ಪ್ರಗತಿ ಸಾಧಾರಣ. ಸ್ನೇಹಿತರು, ಆಪ್ತ ಸಂಬಂಧಿಕರಿಂದ ಮಾರ್ಗದರ್ಶನ, ಉಡುಗೊರೆ ಸಿಗುವ ಸಾಧ್ಯತೆ. ನಿಮ್ಮ ಪ್ರೀತಿ ಪಾತ್ರರೊಂದಿಗೆ ಸೌಜನ್ಯದಿಂದ ವರ್ತಿಸಿ. ಹಿಂದೆ-ಮುಂದೆ ಯೋಚಿಸದೇ ಮಾತುಗಳನ್ನು ಆಡುವುದು ಬೇಡ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ನ್ಯಾಯಾಲಯದಲ್ಲಿರುವ ವ್ಯಾಜ್ಯ ಪ್ರಕರಣಗಳು ನಿಮಗೆ ವಿಜಯವನ್ನು ತಂದುಕೊಡಲಿವೆ. ಒತ್ತಡದ ಹೊರತಾಗಿಯೂ ಆರೋಗ್ಯ ಪರಿಪೂರ್ಣ. ಸಂಗಾತಿಯ ಮನಸ್ಸಿನ ಭಾವನೆಗಳನ್ನ ಅರ್ಥ ಮಾಡಿಕೊಳ್ಳುವಿರಿ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಸಿಂಹ: ಮಾನಸಿಕ ಒತ್ತಡದಿಂದ ಹೊರಬರಲು ವ್ಯಸನಗಳ ಮೊರೆ ಹೋಗುವುದು ಬೇಡ, ಬದಲಾಗಿ ಕ್ಷೇತ್ರ ದರ್ಶನ, ಆಧ್ಯಾತ್ಮಿಕ ವ್ಯಕ್ತಿಗಳ ಮಾರ್ಗದರ್ಶನ ಪಡೆಯುವುದು ಸೂಕ್ತ. ಆರೋಗ್ಯ ಮಧ್ಯಮ. ವ್ಯಾಪಾರ ವ್ಯವಹಾರ ಹಾಗೂ ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯ ಚಟುವಟಿಕೆಯ ಮಧ್ಯೆಯೂ ಯಶಸ್ಸು ಸಿಗಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕನ್ಯಾ: ಭೂ ಸಂಬಂಧಿ, ಹಣಕಾಸು ಹೂಡಿಕೆ ವ್ಯವಹಾರದಲ್ಲಿ ಪ್ರಗತಿ, ಅಲ್ಲದೆ ಲಾಭವಾಗಲಿದೆ. ಸಂಗಾತಿಯೊಂದಿಗೆ ಮುಖ್ಯ ವಿಷಯಗಳ ಕುರಿತು ಚರ್ಚೆ ಮಾಡುವಿರಿ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣ. ಪ್ರಯಾಣ ಮಾಡುವ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಹಿರಿಯರ ಮಾರ್ಗದರ್ಶನ ಸಿಗಲಿದೆ, ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಕುಟುಂಬದಲ್ಲಿ ಅನೇಕ ಬದಲಾವಣೆಗಳನ್ನು ಕಾಣುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ನಿಮಗೆ ಸಂಬಂಧಿಸಿಲ್ಲದವರ ಕುರಿತು ಅನಗತ್ಯವಾಗಿ ಚರ್ಚೆ ಮಾಡಿ, ಕುಟುಂಬದ ಸ್ವಾಸ್ಥ್ಯ ಕೆಡಿಸುವುದು ಬೇಡ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ವೃಶ್ಚಿಕ: ನಕಾರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿ ಮಾಡುವ ಸಾಧ್ಯತೆ. ಆಲಸ್ಯದಿಂದ ಕಾರ್ಯ ಮುಂದೂಡುವುದು ಬೇಡ. ಅಮೂಲ್ಯ ವಸ್ತುಗಳ ಕುರಿತಾಗಿ ಎಚ್ಚರಿಕೆ ವಹಿಸಿ. ಸ್ನೇಹಿತರೊಂದಿಗೆ ಕಾಲ ಕಳೆಯುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ವಹಿಸುವುದು ಅಗತ್ಯ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ಸಾಮಾಜಿಕ ಕಾರ್ಯಗಳಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಅತಿಯಾದ ಒತ್ತಡ ಉಂಟುಮಾಡುವ ವಿಚಾರಗಳಿಂದ ದೂರ ಇರಿ. ಕುಟುಂಬದ ಆಪ್ತರಿಂದ ಶುಭ ಸುದ್ದಿ ಸಿಗುವ ಸಾಧ್ಯತೆ. ಕುಟುಂಬದ ಸದಸ್ಯರ ವರ್ತನೆ ಮುಜುಗರ ಉಂಟು ಮಾಡಬಹುದು. ಆರೋಗ್ಯದ ವ್ಯತ್ಯಾಸದಿಂದ ದಿನದ ಮಟ್ಟಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಮಕರ: ನೀವು ನಿಮ್ಮ ಹಾಸ್ಯ ಪ್ರವೃತ್ತಿಯಿಂದ ಬರುವ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಹಣಕಾಸು ವ್ಯವಹಾರದಲ್ಲಿ ಪ್ರಗತಿ. ಕುಟುಂಬದವರು ನಿಮ್ಮ ಬಗ್ಗೆ ಹೆಚ್ಚು ಕಾಳಜಿ ವಹಹಿಸುವರು. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಕುಂಭ: ಶೀಘ್ರ ಕೋಪದಿಂದ ಅಪಾಯ ತಂದುಕೊಳ್ಳುವುದು ಬೇಡ. ಅತಿಯಾದ ಉತ್ಸಾಹದ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಸರಿಯಲ್ಲ, ಅಪಾಯ ತಂದೀತು ಎಚ್ಚರಿಕೆ. ಉದ್ಯೋಗದ ಸ್ಥಳದಲ್ಲಿ ಕಿರಿಕಿರಿ ಉಂಟಾಗುವ ಸಾಧ್ಯತೆ. ಸಂಗಾತಿಯ ಆರೋಗ್ಯದಲ್ಲಿ ಸ್ವಲ್ಪ ವ್ಯತ್ಯಾಸ ಆಗುವ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ಮೀನ: ಆಹಾರ ಕ್ರಮದ ವ್ಯತ್ಯಾಸದಿಂದ ಆರೋಗ್ಯ ಹದಗೆಡುವ ಸಾಧ್ಯತೆ. ಸಂಗಾತಿಯ ಮಾತುಗಳು ಹಿತವೆನಿಸಿದರೂ, ಅವರ ಮಾತುಗಳಿಗೆ ಮನ್ನಣೆ ಸಿಗುವುದಿಲ್ಲ. ಆರೋಗ್ಯ ಹಾಗೂ ಹಣಕಾಸಿನ ವಿಷಯದಲ್ಲಿ ಸಾಮಾನ್ಯ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ : Weekly Horoscope : ಈ ವಾರ ನಿಮ್ಮ ಭವಿಷ್ಯ ಹೇಗಿರಲಿದೆ? ಯಾವೆಲ್ಲಾ ರಾಶಿಗಳಿಗೆ ಶುಭ-ಅಶುಭ ಫಲಗಳಿವೆ?