Site icon Vistara News

Horoscope Today : ಮಕರ ರಾಶಿಯವರಿಗೆ ಉತ್ಸಾಹದ ದಿನ; ನಿಮ್ಮ ರಾಶಿ ಭವಿಷ್ಯ ಇಂದು ಹೇಗಿದೆ?

Horoscope Today

Horoscope Today

ಇಂದಿನ ಪಂಚಾಂಗ (07-04-2023)

ಶ್ರೀ ಶಕೇ 1945, ಶೋಭಕೃತ್ ನಾಮ ಸಂವತ್ಸರ, ಉತ್ತರಾಯಣ,
ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.

ತಿಥಿ: ಪಾಡ್ಯ 10:20 ವಾರ: ಶುಕ್ರವಾರ
ನಕ್ಷತ್ರ: ಚಿತ್ತಾ 13:32 ಯೋಗ: ಹರ್ಷಣ 25:23
ಕರಣ: ಕೌಲವ 10:20 ಇಂದಿನ ವಿಶೇಷ: ಗುಡ್‌ ಫ್ರೈಡೇ. ವಿಶ್ವ ಆರೋಗ್ಯ ದಿನ.
ಅಮೃತಕಾಲ: ಬೆಳಗ್ಗೆ 06 ಗಂಟೆ 56 ನಿಮಿಷದಿಂದ 08 ಗಂಟೆ 35 ನಿಮಿಷದವರೆಗೆ.

ಸೂರ್ಯೋದಯ : 06:12 ಸೂರ್ಯಾಸ್ತ : 06:32

ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30

ದ್ವಾದಶ ರಾಶಿ ಭವಿಷ್ಯ (Horoscope Today)

ಮೇಷ: ಆರೋಗ್ಯದಲ್ಲಿ ಪ್ರಗತಿ. ವ್ಯಾಪಾರ ವ್ಯವಹಾರದಲ್ಲಿ ಲಾಭ. ಅತಿಯಾದ ಸಂಶಯಾತ್ಮಕ ಸ್ವಭಾವ ಮನಸ್ಸಿಗೆ ಘಾಸಿ ಮಾಡುವ ಸಾಧ್ಯತೆ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಇಂದು ಯಶಸ್ಸಿನ ದಿನ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವೃಷಭ: ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ಕೋಪದಿಂದ ಪರಿಸ್ಥಿತಿ ಹದಗೆಡಲು ಹಾದಿ ಮಾಡಿಕೊಡುವುದು ಬೇಡ. ತಾಳ್ಮೆಯಿಂದ ವರ್ತಿಸಿ. ಕೆಲಸ ಕಾರ್ಯಗಳಲ್ಲಿ ನಿಧಾನ. ಕುಟುಂಬದ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಮಿಥುನ: ಆಪ್ತ ವ್ಯಕ್ತಿಗಳಿಂದ ಸಲಹೆ ದೊರೆಯಲಿದೆ. ಆರ್ಥಿಕವಾಗಿ ಬಲ ಸಿಗಲಿದೆ. ದ್ವಿಸ್ವಭಾವದವರಾದ ನೀವು ಆಂತರಿಕ ಭಯದಿಂದ ಬಳಲುತ್ತಿರುವ ಹಾಗೆ ಭಾಸವಾಗುವುದು. ಆರೋಗ್ಯದಲ್ಲಿ ಪ್ರಗತಿ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ಕಟಕ: ಹಾಸ್ಯ ಪ್ರಜ್ಞೆಯಿಂದ ಕಾರ್ಯವನ್ನು ಸಾಧಿಸಿಕೊಳ್ಳುವಿರಿ. ಹೊಸ ವ್ಯವಹಾರದಲ್ಲಿ ತೊಡಗುವಿರಿ. ಆತುರದ ತಿರ್ಮಾನಗಳು ಬೇಡ. ಕುಟುಂಬದ ಸದಸ್ಯರೊಂದಿಗೆ ಚರ್ಚೆ ನಡೆಸುವಿರಿ. ಸಂಗಾತಿಯ ಬೆಂಬಲ ಸಿಗಲಿದೆ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ಸಿಂಹ: ನಿಮ್ಮ ಅತಿಯಾದ ವ್ಯಾಮೋಹ ದುಃಖಕ್ಕೆ ಕಾರಣವಾಗಬಹುದು. ಇಂದು ನಿಮ್ಮ ಕೆಲಸದ ಸ್ಥಳದಲ್ಲಿ ಪ್ರೀತಿ ಮೇಲುಗೈ ಸಾಧಿಸುತ್ತದೆ. ನಿಮ್ಮ ಶಕ್ತಿ ಮತ್ತು ನಿಮ್ಮ ಮುಂದಿನ ಯೋಜನೆಗಳನ್ನು ಮರು ನಿರ್ಣಯಿಸುವ ಸಮಯ ಇದು. ಆರೋಗ್ಯದಲ್ಲಿ ಪ್ರಗತಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಕನ್ಯಾ: ಆರೋಗ್ಯದ ಕಡೆಗೆ ಗಮನ ಹರಿಸಬೇಕು. ಅತಿಥಿಗಳ ಆಗಮನ ಸಂತಸ ತರುವುದು. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಪಾಲುದಾರಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಆಪ್ತರ ಮಾತುಗಳು ನಿಮ್ಮ ಮೇಲೆ ಅಗಾಧ ಪರಿಣಾಮ ಬೀರುವ ಸಾಧ್ಯತೆ. ಹಣಕಾಸು ವ್ಯವಹಾರದಲ್ಲಿ ಕುಂಠಿತ. ಕುಟುಂಬದ ಸದಸ್ಯರ ಆರೋಗ್ಯದಲ್ಲಿ ವ್ಯತ್ಯಾಸ ಆಗಬಹುದು. ದೃತಿಗೆಡದೆ ಕಾರ್ಯದಲ್ಲಿ ಮುನ್ನುಗ್ಗಿ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 5

ವೃಶ್ಚಿಕ: ಆಹಾರ ಕ್ರಮದಲ್ಲಿ ವ್ಯತ್ಯಾಸವಾಗುವ ಸಾಧ್ಯತೆ. ಅನಗತ್ಯ ಖರ್ಚುಗಳು ಹೆಚ್ಚಾಗುವ ಸಾಧ್ಯತೆ. ನಿಮ್ಮ ಉದಾರ ಮನೋಭಾವವನ್ನು ಬೇರೆಯವರು ದುರುಪಯೋಗ ಮಾಡಿಕೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ ಹಿಡಿದ ಕೆಲಸ ಸಾಧಿಸುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಧನಸ್ಸು: ಇಂದು ನಿಮಗೆ ದೈಹಿಕ ಆಯಾಸವಾಗುವ ಸಾಧ್ಯತೆ. ಅತಿಯಾದ ಒತ್ತಡದಿಂದ ಹೊರಬರಲು ಆಧ್ಯಾತ್ಮಿಕ ವ್ಯಕ್ತಿಗಳನ್ನು ಭೇಟಿ ಮಾಡುವ ಸಾಧ್ಯತೆ. ಕೆಲಸಕಾರ್ಯಗಳಲ್ಲಿ ನಿಧಾನ. ಉದ್ಯೋಗದಲ್ಲಿ ನೀವಂದುಕೊಂಡಿದ್ದನ್ನು ಸಾಧಿಸಲಾಗದು. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 3

ಮಕರ: ಆರೋಗ್ಯದ ದೃಷ್ಟಿಯಿಂದ ಇಂದು ನಿಮಗೆ ಉತ್ತಮವಾದ ದಿನ. ಎಂದಿಗಿಂತ ಇಂದು ಉತ್ಸಾಹದಿಂದ ಇರುವಿರಿ. ಉದ್ಯೋಗದ ಸ್ಥಳದಲ್ಲಿ ಪ್ರಸಂಶೆ ದೊರೆಯಲಿದೆ. ಪ್ರೀತಿ ಅಂಕುರವಾಗುವ ಸಾಧ್ಯತೆ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3

ಕುಂಭ: ಭರವಸೆಯು ನಿಮ್ಮ ಕೆಲಸದಲ್ಲಿ ಸಹಾಯ ಮಾಡುವುದು. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವ್ಯಾಪಾರ-ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡು ಬರುವುದು. ಉದ್ಯೋಗದಲ್ಲಿ ನಿಮಗೆ ಹಿರಿಯ ಅಧಿಕಾರಿಗಳ ಬೆಂಬಲವಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮೀನ: ಪ್ರೀತಿ, ಭರವಸೆ, ನಂಬಿಕೆ, ಸಹಾನುಭೂತಿ, ಆಶಾವಾದ ಮತ್ತು ನಿಷ್ಠೆಗಳಂಥ ಧನಾತ್ಮಕ ಭಾವನೆಗಳನ್ನು ಗ್ರಹಿಸಲು ಮನಸ್ಸು ಪ್ರೋತ್ಸಾಹಿಸುವುದು. ಹಿಡಿದ ಕಾರ್ಯದಲ್ಲಿ ಪ್ರಗತಿ. ಹಿರಿಯರ ಆಶೀರ್ವಾದ ಸಿಗಲಿದೆ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

ಇದನ್ನೂ ಓದಿ: Prerane : ಆಧ್ಯಾತ್ಮಿಕ ಮಾರ್ಗದಲ್ಲಿ ಪುರಾಣ ಗ್ರಂಥಗಳಿಗೆ ಮಹತ್ವವಿದೆಯೇ?

Exit mobile version