ಇಂದಿನ ಪಂಚಾಂಗ (02-೦2-202೩)
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ.
ತಿಥಿ: ದ್ವಾದಶಿ 16:25 ವಾರ: ಗುರುವಾರ
ನಕ್ಷತ್ರ: ಆರಿದ್ರಾ 30:16 ಯೋಗ: ವೈಧೃತಿ 12:10
ಕರಣ: ಬಾಲವ 16:25 ಇಂದಿನ ವಿಶೇಷ: ಪಕ್ಷ ಪ್ರದೋಷ
ಅಮೃತಕಾಲ: ಸಂಜೆ 07 ಗಂಟೆ 05 ನಿಮಿಷದಿಂದ ರಾತ್ರಿ 08 ಗಂಟೆ 53 ನಿಮಿಷದವರೆಗೆ.
ಸೂರ್ಯೋದಯ: 06 : 46 ಸೂರ್ಯಾಸ್ತ: 0೬ : 21
ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ದಿನದ ಮಟ್ಟಿಗೆ ಒತ್ತಡ ಉಂಟುಮಾಡುವ ವಿಚಾರಗಳಿಂದ ಮಾನಸಿಕ ನೆಮ್ಮದಿ ಕಡಿಮೆ. ಆರ್ಥಿಕ ಪ್ರಗತಿ ಉತ್ತಮ. ಉದ್ಯೋಗದಲ್ಲಿ ಕಿರಿಕಿರಿ. ಆರೋಗ್ಯದ ಕುರಿತು ಕಾಳಜಿ ವಹಿಸಿ. ಉದ್ಯೋಗದಲ್ಲಿ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಷಭ: ಕೋಪದಿಂದ ವರ್ತಿಸಿ ಮನೆಯ ವಾತಾವರಣ ಹದಗೆಡಲು ಕಾರಣವಾಗುವುದು ಬೇಡ. ಕುಟುಂಬದ ಸದಸ್ಯರು ತಮಗೆ ಅಸಹಕಾರ ನೀಡವ ಸಾಧ್ಯತೆ. ಆರೋಗ್ಯ ಮಧ್ಯಮ. ಖರ್ಚು ಹೆಚ್ಚಾದೀತು. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ಮಿಥುನ: ಆಕರ್ಷಕ ವ್ಯಕ್ತಿತ್ವ ಇತರರ ಗಮನ ಸೆಳೆಯುವುದು. ಹಣಕಾಸು ಹೂಡಿಕೆ ವ್ಯವಹಾರದಲ್ಲಿ ತೊಡಗುವುದು ಬೇಡ, ಖರ್ಚು ಹೆಚ್ಚಾಗಬಹುದು. ಯಾವುದೇ ಕೆಲಸದಲ್ಲಿ ಪ್ರಯತ್ನ ವಿಫಲವಾಗುವ ಸಾಧ್ಯತೆ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಉತ್ತಮ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕಟಕ: ಒತ್ತಡದ ಮಧ್ಯೆಯೂ ಕಾರ್ಯದಲ್ಲಿ ಯಶಸ್ಸು, ಕೀರ್ತಿ ಸಿಗುವುದು. ಹಣದ ಹರಿವು ಹೆಚ್ಚಾಗಲಿದೆ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯ ಉತ್ತಮವಾಗಿರಲಿದೆ. ಆಪ್ತರನ್ನು ಭೇಟಿ ಮಾಡುವ ಸಾಧ್ಯತೆ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ಸಿಂಹ: ಇಂದು ನಿಮ್ಮ ಏಕಾಗ್ರತೆಗೆ ಭಂಗ ತರುವ ಸಾಧ್ಯತೆಗಳು ಹೆಚ್ಚು. ಆರೋಗ್ಯ ಪರಿಪೂರ್ಣ. ಮನೆಯಲ್ಲಿ ವಿನಾಕಾರಣ ಕಲಹಗಳು ನಡೆಯುವ ಸಾಧ್ಯತೆ. ತಾಳ್ಮೆಯಿಂದ ವರ್ತಿಸಿ. ಉದ್ಯೋಗದಲ್ಲಿ ನೀವಂದುಕೊಂಡಂತೆ ಇಂದು ಎಲ್ಲವೂ ನಡೆಯದು. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಕನ್ಯಾ: ಶ್ರಮದ ಕಾರಣ, ಆಯಾಸ, ಒತ್ತಡ ಉಂಟಾಗುವ ಸಾಧ್ಯತೆ. ದಿನದ ಮಟ್ಟಿಗೆ ವಿಶ್ರಾಂತಿ ಅತ್ಯಾವಶ್ಯಕ. ಮನೆಯಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ. ಉದ್ಯೋಗಿಗಳಿಗೆ ಸ್ವಲ್ಪ ಮಟ್ಟಿಗೆ ಒತ್ತಡ ಹೆಚ್ಚಾಗಲಿದೆ. ಆರೋಗ್ಯ ಮಧ್ಯಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಸಕಾರಾತ್ಮಕ ಆಲೋಚನೆಗಳು ಸದಾ ಯಶಸ್ಸು ತಂದು ಕೊಡುವುದು. ಹಣಕಾಸು ಹಾಗೂ ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಯಶಸ್ಸು ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ನಿಮ್ಮ ಆಕರ್ಷಕ ವರ್ತನೆ ಇತರರ ಗಮನ ಸೆಳೆಯುವುದು. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಹಣದ ಹರಿವು ಹೆಚ್ಚಾಗಲಿದೆ. ಕುಟುಂಬದ ಸದಸ್ಯರ ವರ್ತನೆ ನಿಮಗೆ ಕೋಪ ತರಿಸಬಹುದು. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ಧನಸ್ಸು: ಯಾವುದಾದರೂ ಸುದ್ದಿ ನಿಮ್ಮ ಮನಸ್ಸಿಗೆ ನೋವು ತರುವ ಸಾಧ್ಯತೆ. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ಆರ್ಥಿಕ ವ್ಯವಹಾರದಲ್ಲಿ ಲಾಭ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಅಪರಿಚಿತರೊಂದಿಗೆ ವಾದಕ್ಕಿಳಿಯುವುದು ಬೇಡ. ಆರೋಗ್ಯ ಉತ್ತಮ, ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8
ಮಕರ: ಒತ್ತಡದ ಮಧ್ಯೆಯೂ ಕೆಲಸ ಕಾರ್ಯಗಳಲ್ಲಿ ಮುನ್ನಡೆ ಸಾಧಿಸುವಿರಿ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಮಾನಸಿಕ ಆರೋಗ್ಯ ಹದಗೆಡುವ ಸಾಧ್ಯತೆ. ಅನಪೇಕ್ಷಿತ ವಿಷಯದ ಕುರಿತು ಚರ್ಚೆ, ಕುಟುಂಬದ ಸದಸ್ಯರ ಮಧ್ಯೆ ಕಲಹ ಮೂಡುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8
ಕುಂಭ: ಜವಾಬ್ದಾರಿಗಳು ಹೆಚ್ಚಾಗಲಿವೆ. ಸಹನೆ ಮಿತಿ ಮೀರಿ ಕೋಪಗೊಳ್ಳುವ ಸಾಧ್ಯತೆ. ಗೌಪ್ಯ ವಿಚಾರಗಳನ್ನು ಆಪ್ತರೊಂದಿಗೆ ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ದಿನದ ಮಟ್ಟಿಗೆ ಖರ್ಚು. ಆರೋಗ್ಯದ ಕಾಳಜಿ ಅವಶ್ಯ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಮೀನ: ಹಳೆಯ ವ್ಯಾಧಿಯು ಉಲ್ಬಣ ಗೊಳ್ಳುವ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಪ್ರಯಾಣದಿಂದ ದಿನದ ಮಟ್ಟಿಗೆ ಖರ್ಚು. ನಿಮ್ಮ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಉದ್ಯೋಗದಲ್ಲಿ ಯಶಸ್ಸಿನ ದಿನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ : Jaya Ekadashi 2023 : ಜಯ ಏಕಾದಶಿಯಂದು ವಿಷ್ಣು ಸಹಸ್ರನಾಮ ಪಠಿಸಿದರೆ ಇಷ್ಟಾರ್ಥ ಸಿದ್ಧಿ!