ಇಂದಿನ ಪಂಚಾಂಗ (03-೦2-202೩)
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಶುಕ್ಲ ಪಕ್ಷ.
ತಿಥಿ: ತ್ರಯೋದಶಿ 18:57 ವಾರ: ಶುಕ್ರವಾರ
ನಕ್ಷತ್ರ: ಪುನರ್ವಸು 33:15 ಯೋಗ: ವಿಷ್ಕುಂಭ 12:59
ಕರಣ: ತೈತುಲ 18:57
ಅಮೃತಕಾಲ: ಶನಿವಾರ ಬೆಳಗ್ಗೆ 06 ಗಂಟೆ 35 ನಿಮಿಷದಿಂದ 08 ಗಂಟೆ 22 ನಿಮಿಷದವರೆಗೆ.
ಸೂರ್ಯೋದಯ: 06 : 46 ಸೂರ್ಯಾಸ್ತ: 0೬ : 21
ರಾಹುಕಾಲ : ಬೆಳಗ್ಗೆ 10.30 ರಿಂದ 12.00
ಗುಳಿಕಕಾಲ: ಬೆಳಗ್ಗೆ 7.30 ರಿಂದ 9.00
ಯಮಗಂಡಕಾಲ: ಮಧ್ಯಾಹ್ನ 3.00 ರಿಂದ 4.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಆಪ್ತರೊಂದಿಗೆ ನಿಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಳ್ಳುವಿರಿ. ಅನಗತ್ಯ ಮಾನಸಿಕ ಒತ್ತಡ ತಂದುಕೊಳ್ಳುವುದು ಬೇಡ. ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯ ನ್ಯಾಯಾಲಯ ಪ್ರಕರಣದಲ್ಲಿ ಸಿಲುಕಿಕೊಂಡಿದ್ದರೆ, ಇಂದು ನೀವು ಅದರಲ್ಲಿ ವಿಜಯವನ್ನು ಪಡೆಯಬಹುದು. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ವೃಷಭ: ಇಂದು ನೀವು ಉತ್ಸಾಹದಿಂದ ಕಾಲ ಕಳೆಯುವಿರಿ. ಯಾರಾದರೂ ಆರ್ಥಿಕ ಸಹಾಯವನ್ನು ಕೇಳಬಹುದು. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಉದ್ಯೋಗಿಗಳಿಗೆ ಮಿಶ್ರ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ದಿನದ ಮಟ್ಟಿಗೆ ಖರ್ಚು ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ಮಿಥುನ: ಅನಾವಶ್ಯಕ ವಿಚಾರಗಳಿಂದ ಮಾನಸಿಕವಾಗಿ ವಿಚಲಿತರಾಗುವುದು ಬೇಡ. ಸಕಾರಾತ್ಮಕವಾಗಿ ಆಲೋಚಿಸಿ ಮತ್ತು ನಿಮ್ಮ ವಿವೇಚನೆಯಲ್ಲಿ ಗಮನಾರ್ಹ ಬದಲಾವಣೆ ಕಾಣುತ್ತದೆ. ಆರೋಗ್ಯ ಮಧ್ಯಮ. ಹಣಕಾಸು ಪ್ರಗತಿ ಉತ್ತಮ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಉತ್ತಮ ಫಲ.
ಅದೃಷ್ಟ ಸಂಖ್ಯೆ: 8
ಕಟಕ: ಅನೇಕ ಒತ್ತಡಗಳು ದೂರವಾಗಿ ಹರ್ಷದಿಂದ ಕಾಲ ಕಳೆಯುರಿ. ಸಂಗಾತಿಯೊಂದಿಗೆ ಪ್ರಮುಖ ಯೋಜನೆಗಳ ಕುರಿತು ಚರ್ಚಿಸುವ ಸಾಧ್ಯತೆ. ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯ ಉತ್ತಮ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 3
ಸಿಂಹ: ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ವಿಚಲಿತರಾಗುವಂತೆ ಮಾಡಬಹುದು. ಕುಲ ದೇವರ ಆರಾಧನೆ, ಕ್ಷೇತ್ರ ದರ್ಶನದಿಂದ ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಹಣಕಾಸು ಪ್ರಗತಿ ಸಾಧಾರಣ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕಿರಿಕಿರಿ ಸಾಧ್ಯತೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಕನ್ಯಾ: ಶ್ರಮದ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಕೀರ್ತಿ ಸಿಗುವುದು. ದಿನದ ಮಟ್ಟಿಗೆ ಖರ್ಚು. ನಿಮ್ಮ ಜವಾಬ್ದಾರಿ ಹೆಚ್ಚಲಿದೆ. ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ. ಕುಟುಂಬದ ಸದಸ್ಯರ ಬೆಂಬಲ ದೊರೆಯಲಿದೆ. ವಿವಾಹ ಅಪೇಕ್ಷಿತರಿಗೆ ಸಿಹಿ ಸುದ್ದಿ ಸಿಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಆರೋಗ್ಯದ ಕುರಿತು ಹೆಚ್ಚು ಕಾಳಜಿ ವಹಿಸಿ. ಮಾನಸಿಕ ಒತ್ತಡದಿಂದ ದೂರವಿರಲು ಯೋಗ, ಪ್ರಾಣಾಯಾಮ, ಧ್ಯಾನ ಮಾಡಿ. ಆರ್ಥಿಕ ಸಹಾಯದ ಬೇಡಿಕೆ ಬರಬಹುದು. ಆಪ್ತರೊಂದಿಗೆ ಸಮಯ ಕಳೆಯಲು ಅವಕಾಶ ಸಿಗಲಿದೆ. ಕುಟುಂಬದವರ ಸಹಕಾರ ಸಿಗಲಿದೆ. ಆರೋಗ್ಯ ಮಧ್ಯಮ. ವ್ಯಾಪಾರ ವ್ಯವಹಾರ ಉತ್ತಮ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2
ವೃಶ್ಚಿಕ: ಅನಿರೀಕ್ಷಿತ ಪ್ರಯಾಣ ಮಾಡುವ ಸಾಧ್ಯತೆ. ದೇಹದ ಆಯಾಸ ಹೆಚ್ಚಾಗುವ ಸಾಧ್ಯತೆ. ಒತ್ತಡದಿಂದ ಮನಸ್ಸಿನ ಹತೋಟಿ ತಪ್ಪುವ ಸಾಧ್ಯತೆ. ತಾಳ್ಮೆ ಅವಶ್ಯಕ. ವ್ಯಾಪಾರ ವ್ಯವಹಾರದಲ್ಲಿ ಇಮ್ಮಡಿ ಲಾಭ ಪಡೆಯುವಿರಿ. ಆರ್ಥಿಕವಾಗಿ ಬಲಿಷ್ಠ. ಆದಾಯದ ಮೂಲಗಳು ಹೆಚ್ಚಾಗಲಿದೆ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ಧನಸ್ಸು: ಆರೋಗ್ಯದ ಕಡೆಗೆ ಹೆಚ್ಚು ಗಮನ ಇರಲಿ. ಅನಿವಾರ್ಯ ಕಾರಣಗಳಿಂದ ಖರ್ಚು. ಕುಟುಂಬದ ಆಪ್ತರೊಂದಿಗೆ ಸಮಯ ಹಂಚಿಕೊಳ್ಳುವಿರಿ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ಮಕರ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಅನಿವಾರ್ಯ ಕಾರಣಗಳಿಂದ ಖರ್ಚು. ಆಪ್ತರೊಂದಿಗೆ ಸಮಯ ಕಳೆಯವಿರಿ. ಅನೇಕ ಭಿನ್ನಾಭಿಪ್ರಾಯಗಳು ಮಾನಸಿಕ ನೆಮ್ಮದಿಯನ್ನು ಹಾಳು ಮಾಡಬಹುದು, ಮಾನಸಿಕ ಆರೋಗ್ಯಕ್ಕಾಗಿ ಶ್ರೀ ಗುರು ದತ್ತಾತ್ರೇಯರ ಆರಾಧನೆ ಮಾಡಿ. ಆರೋಗ್ಯ ಮಾಧ್ಯಮ. ಕೌಟುಂಬಿಕವಾಗಿ ಉತ್ತಮ ಫಲ.
ಅದೃಷ್ಟ ಸಂಖ್ಯೆ: 9
ಕುಂಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗಲಿದೆ. ಅನಾವಶ್ಯಕವಾಗಿ ಒತ್ತಡಕ್ಕೆ ಒಳಗಾಗುವುದು ಬೇಡ. ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯ ಪರಿಪೂರ್ಣವಾಗಿರಲಿದೆ. ಆಪ್ತರಿಂದ ಉಡುಗೊರೆ ಸಿಗುವುದು. ಕಷ್ಟದಲ್ಲಿ ಇರುವವರಿಗೆ ಸಹಾಯ ಮಾಡುವಿರಿ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಮೀನ: ದೈಹಿಕ ಆರೋಗ್ಯ ಉತ್ತಮ, ಮಾನಸಿಕ ಆರೋಗ್ಯ ಚೆನ್ನಾಗಿರಲು ನೀವು ನಡೆದಿರುವ ಘಟನೆ ನೆನಪಿಸಿ ಕೊರಗುವುದು ಬೇಡ. ಸಂಗಾತಿಯ ಮಾತುಗಳು ಅಹಿತಕರ ಎನಿಸಬಹುದು. ಕುಟುಂಬದ ಸದಸ್ಯರ ಅಡ್ಡಿಯ ಕಾರಣದಿಂದ ನಿಮ್ಮ ದಿನ ಸ್ವಲ್ಪ ಏರುಪೇರಾಗಬಹುದು. ಆಪ್ತರ ಬೆಂಬಲ ಸಿಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 5
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ : Jaya Ekadashi 2023 : ಜಯ ಏಕಾದಶಿಯಂದು ವಿಷ್ಣು ಸಹಸ್ರನಾಮ ಪಠಿಸಿದರೆ ಇಷ್ಟಾರ್ಥ ಸಿದ್ಧಿ!