Horoscope Today : ಇಂದು ಮೂರು ರಾಶಿಯವರಿಗೆ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ? - Vistara News

ಪ್ರಮುಖ ಸುದ್ದಿ

Horoscope Today : ಇಂದು ಮೂರು ರಾಶಿಯವರಿಗೆ ಶುಭ ಫಲ; ನಿಮ್ಮ ಭವಿಷ್ಯ ಹೇಗಿದೆ?

ಶುಭಕೃತ ನಾಮ ಸಂವತ್ಸರ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷದ ತದಿಗೆಯ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ (Horoscope Today) ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

horoscope today read your daily horoscope
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದಿನ ಪಂಚಾಂಗ (08-೦2-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ.

ತಿಥಿ: ತದಿಗೆ 30:22 ವಾರ: ಬುಧವಾರ
ನಕ್ಷತ್ರ: ಪೂರ್ವಾಷಾಢ 20:13 ಯೋಗ: ಅತಿಗಂಡ 16:28
ಕರಣ: ವಣಿಜ 17:27
ಅಮೃತಕಾಲ: ಮಧ್ಯಾಹ್ನ 01 ಗಂಟೆ 11 ನಿಮಿಷದಿಂದ 02 ಗಂಟೆ 57 ನಿಮಿಷದವರೆಗೆ.

ಸೂರ್ಯೋದಯ: 06 : 45    ಸೂರ್ಯಾಸ್ತ: 0೬ : 23

ರಾಹುಕಾಲ : ಮಧ್ಯಾಹ್ನ 12.00 ರಿಂದ 1.30
ಗುಳಿಕಕಾಲ: ಬೆಳಗ್ಗೆ 10.30 ರಿಂದ 12.00
ಯಮಗಂಡಕಾಲ: ಬೆಳಗ್ಗೆ 7.30 ರಿಂದ 9.00

ದ್ವಾದಶ ರಾಶಿ ಭವಿಷ್ಯ  (Horoscope Today)

Horoscope Today

ಮೇಷ: ಆರೋಗ್ಯ ಮಧ್ಯಮ. ಹಣಕಾಸಿಗೆ ಸಂಬಂಧಿಸಿದ ಬಾಕಿ ವ್ಯವಹಾರಗಳು ಪೂರ್ಣವಾಗುವವು. ಸಂಗಾತಿಯ ಆರೋಗ್ಯದ ಕಡೆಗೆ ಗಮನ ಇರಲಿ. ಶುಭ ಕಾರ್ಯಗಳಿಗೆ ಆಮಂತ್ರಣ ಸಿಗುವ ಸಾಧ್ಯತೆ. ಕುಟುಂಬದಲ್ಲಿ ಕಲಹಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿಯೂ ಶುಭ ಫಲ.
ಅದೃಷ್ಟ ಸಂಖ್ಯೆ: 5

Horoscope Today

ವೃಷಭ: ಆರ್ಥಿಕವಾಗಿ ನೀವಿಂದು ಬಳಲುವ ಸಾಧ್ಯತೆ. ಬಿಡುವಿರದ ಕಾರ್ಯಕ್ರಮದ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ವಾಹನ ಖರೀದಿ ವಿಚಾರ ಮಾಡುವಿರಿ. ಹಿಂದೆ ನಡೆದ ಘಟನೆ ನೆನಪಿಸಿಕೊಂಡು ಕೊರಗುವುದು ಬೇಡ. ಕೆಲಸದ ಸ್ಥಳದಲ್ಲಿ ಸಹೋದ್ಯೋಗಿಗಳಿಂದ ಅಸಹಕಾರ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಿಥುನ: ಇತರರ ವಿರುದ್ಧ ದ್ವೇಷ ಕಾರುತ್ತಾ ನಿಮ್ಮ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ನಕರಾತ್ಮಕ ಆಲೋಚನೆಗಳು ನಿಮ್ಮನ್ನು ಘಾಸಿಮಾಡಬಹುದು. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಆರ್ಥಿಕ ಪ್ರಗತಿ ಸಾಧಾರಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಕಟಕ: ಅತಿಯಾದ ಉತ್ಸಾಹದಲ್ಲಿ ಅತಿರೇಕದ ಮಾತುಗಳು ಬೇಡ, ಭಾವನೆಗಳನ್ನು ನಿಯಂತ್ರಿಸಿ. ಹಣಕಾಸು ಪ್ರಗತಿ ಸಾಧಾರಣ. ಕುಟುಂಬದ ಸದಸ್ಯರ ಬೆಂಬಲ ಸಿಗಲಿದೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಗೊತ್ತಿಲ್ಲದಂತೆ ಸಮಯ ವ್ಯರ್ಥವಾಗುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಸಿಂಹ: ಆರ್ಥಿಕ ಸಮಸ್ಯೆಯಿಂದಾಗಿ ಒತ್ತಡ ಹೆಚ್ಚಾಗಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಪ್ರಭಾವಿ ವ್ಯಕ್ತಿಗಳ ಬೆಂಬಲ, ಸ್ನೇಹ ದೊರೆಯಲಿದೆ. ವಿವಾಹ ಅಪೇಕ್ಷಿತರಿಗೆ ಕಂಕಣಭಾಗ್ಯ ಕೂಡಿ ಬರುವುದು. ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ ಪ್ರಗತಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕನ್ಯಾ: ಸಕಾರಾತ್ಮಕ ಆಲೋಚನೆಗಳಿಂದ ಕೆಲಸ ಕಾರ್ಯಗಳಲ್ಲಿ ಯಶಸ್ಸು. ಅನಿವಾರ್ಯ ಕಾರಣಗಳಿಂದ ಖರ್ಚು ಹೆಚ್ಚಾಗಲಿದೆ. ಮನೆಯ ಸದಸ್ಯರ ವರ್ತನೆ ನಿಮ್ಮನ್ನು ಮಾನಸಿಕವಾಗಿ ನಿಮಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಪ್ರಯಾಣ ಮಾಡುವ ಸಾಧ್ಯತೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 3

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರ್ಥಿಕವಾಗಿ ಬಳಲುವ ಸಾಧ್ಯತೆ, ಕೆಲಸ ಕಾರ್ಯಗಳು ನಿಧಾನ. ತಾಳ್ಮೆಯಿಂದ ವರ್ತಿಸಿ. ನೆರೆಹೊರೆಯವರೊಂದಿಗೆ ವಿನಾಕಾರಣ ಜಗಳ ಬೇಡ. ಉದ್ಯೋಗಿಗಳಿಗೆ ಶುಭ ಫಲ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ:

Horoscope Today

ವೃಶ್ಚಿಕ: ಪ್ರಯತ್ನದಲ್ಲಿ ನಂಬಿಕೆ ಇಟ್ಟು ಕಾರ್ಯದಲ್ಲಿ ಮುನ್ನುಗ್ಗಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಲಾಭ. ಸಮಾರಂಭಗಳಲ್ಲಿ ಭಾಗವಹಿಸುವ ನಿರೀಕ್ಷೆ. ಜನಪ್ರಿಯತೆ ಹೆಚ್ಚಾಗಲಿದೆ. ಪ್ರವಾಸದ ಕುರಿತು ಚರ್ಚೆ. ಕುಟುಂಬದವರ ಸಹಕಾರ ಸಿಗಲಿದೆ. ಕೊಂಚ ಆರೋಗ್ಯದ ಕಡೆಗೆ ಗಮನ ಇರಲಿ. ಉದ್ಯೋಗಿಗಳಿಗೆ ಹೊಸ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಧನಸ್ಸು: ಅತಿಯಾದ ಚಿಂತೆ, ಒತ್ತಡ ನಿಮ್ಮ ಆರೋಗ್ಯದ ಮೇಲೆ ದೈಹಿಕವಾಗಿ ಹಾಗೂ ಮಾನಸಿಕವಾಗಿ ಪರಿಣಾಮವನ್ನು ಬೀರಬಹುದು. ಆದಷ್ಟು ವಿಶ್ರಾಂತಿ ಪಡೆಯಿರಿ, ತಾಳ್ಮೆ ಇರಲಿ. ಆರ್ಥಿಕ ಪ್ರಗತಿ ಸಾಧಾರಣ. ಉದ್ಯೋಗಿಗಳಿಗೆ ಶುಭ ಫಲ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಮಕರ: ಅನಿವಾರ್ಯ ಪ್ರಸಂಗಗಳು ನಿಮ್ಮನ್ನು ಒತ್ತಡಕ್ಕೆ ಒಳಗಾಗುವಂತೆ ಮಾಡಬಹುದು. ಸಭೆ ಸಮಾರಂಭಗಳಲ್ಲಿ ಭಾಗವಹಿಸುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಆರ್ಥಿಕವಾಗಿ ಪ್ರಗತಿ, ಹೂಡಿಕೆಯ ಕುರಿತು ಆಲೋಚನೆ. ಹೊಸ ಸ್ನೇಹಿತರ ಪರಿಚಯವಾಗಲಿದೆ. ಉದ್ಯೋಗದ ಕುರಿತು ಯೋಚಿಸುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

Horoscope Today

ಕುಂಭ: ವಾಹನ ಚಾಲನೆ ಮಾಡುವಾಗ ಜಾಗರೂಕತೆ ಇರಲಿ. ಅವಸರದಲ್ಲಿ ಕೆಲಸ ಮಾಡುವುದು ಬೇಡ. ಹೂಡಿಕೆ, ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ದಿಢೀರ್‌ ಪ್ರಯಾಣ ಸಾಧ್ಯತೆ. ಆರೋಗ್ಯದ ಕುರಿತು ಕಾಳಜಿ ಇರಲಿ. ಉದ್ಯೋಗಿಗಳಿಗೆ ಸಾಧಾರಣ ಫಲ. ಕೌಟುಂಬಿಕವಾಗಿ ಕನಿಷ್ಠ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಮೀನ: ದಿನದ ಮಟ್ಟಿಗೆ ಅನಿವಾರ್ಯ ಕಾರಣಗಳಿಂದ ಖರ್ಚು. ಆರೋಗ್ಯ ಮಧ್ಯಮ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಸಾಧ್ಯತೆ. ಮಾತಿನ ಭರದಲ್ಲಿ ಅತಿರೇಕದ ಮಾತುಗಳನ್ನು ಆಡುವುದು ಬೇಡ, ತಾಳ್ಮೆಯಿಂದ ವರ್ತಿಸಿ. ಆರೋಗ್ಯ ಪರಿಪೂರ್ಣ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ : Planet Transit 2023 : ಸದ್ಯವೇ ಮೂರು ಗ್ರಹಗಳ ಸಂಚಾರ; ಶುಭಾಶುಭ ಫಲಗಳೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

CSK vs SRH: 40 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಐಡೆನ್​ ಮಾರ್ಕ್ರಮ್​ ಮತ್ತು ನಿತೀಶ್​ ರೆಡ್ಡಿ ಕೆಲ ಕಾಲ ಆಸರೆಯಾದರೂ ಕೂಡ ಇವರಿಂದ ದೊಡ್ಡ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಕೇವಲ 4 ಬೌಂಡರಿ ನೆರವಿನಿಂದ ಮಾರ್ಕ್ರಮ್​ 32 ರನ್​ ಗಳಿಸಿ ಪತಿರಾಣ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ನಿತೀಶ್​ ರೆಡ್ಡಿ ಎಸೆತವೊಂದರಂತೆ 15 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು.

VISTARANEWS.COM


on

CSK vs SRH
Koo

ಚೆನ್ನೈ: ಲಕ್ನೋ ಸೂಪರ್​ ಜೈಂಟ್ಸ್​ ವಿರುದ್ಧ ಸತತ ಎರಡು ಸೋಲು ಕಂಡು ಮಂಕಾಗಿದ್ದ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್​ ಭರ್ಜರಿ(CSK vs SRH) ಗೆಲುವಿನ ಮೂಲಕ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದೆ. ಸನ್​ರೈಸರ್ಸ್​ ಹೈದರಾಬಾದ್(Sunrisers Hyderabad)​ ವಿರುದ್ಧ ತವರಿನಲ್ಲಿ ನಡೆದ ಭಾನುವಾರದ ಪಂದ್ಯದಲ್ಲಿ 78 ರನ್​ಗಳ ಗೆಲುವು ಸಾಧಿಸಿದೆ.

ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಐಪಿಎಲ್​(IPL 2024) ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಚೆನ್ನೈ(Chennai Super Kings) ತಂಡ ನಾಯಕ ಋತುರಾಜ್​ ಗಾಯಕ್ವಾಡ್​, ಡೇರಿಯಲ್​ ಮಿಚೆಲ್​ ಮತ್ತು ಶಿವಂ ದುಬೆ ಅವರ ಆಕ್ರಮಣಕಾರಿ ಬ್ಯಾಟಿಂಗ್​ ಸಾಹಸದಿಂದ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ ನಷ್ಟಕ್ಕೆ 212 ರನ್​ ಬಾರಿಸಿತು. ಈ ಹಿಂದಿನ ಪಂದ್ಯಗಳಲ್ಲಿ ಸಲೀಸಾಗಿ ಮೂರು ಬಾರಿ 250ರ ಗಡಿ ದಾಟಿದ್ದ ಸನ್​ರೈಸರ್ಸ್​ ತಂಡಕ್ಕೆ ಈ ಮೊತ್ತ ಎಲ್ಲಿಂದಲೂ ಸಾಲದು ಎಂದು ನಿರೀಕ್ಷೆ ಮಾಡಿದ್ದವರಿಗೆ ಚೆನ್ನೈ ತಂಡದ ಮಧ್ಯಮ ವೇಗಿ ತುಷಾರ್​ ದೇಶ್​ಪಾಂಡೆ ಘಾತಕ ಸ್ಫೆಲ್ ಮೂಲಕ ಕಟ್ಟಿಹಾಕಿದರು. ಅಂತಿಮವಾಗಿ ಹೈದರಾಬಾದ್​ 18.5 ಓವರ್​ಗಳಲ್ಲಿ 134 ರನ್​ಗೆ ಸರ್ವಪತನ ಕಂಡು ಹೀನಾಯವಾಗಿ ಸೋಲೊಪ್ಪಿಕೊಂಡಿತು.

ಕಾಡಿದ ತುಷಾರ್​ ದೇಶ್​ಪಾಂಡೆ


ದೊಡ್ಡ ಮೊತ್ತವನ್ನು ಬೆನ್ನಟ್ಟಿದ ಹೈದರಾಬಾದ್​ಗೆ ಮೊದಲ ಎಸೆತದಲ್ಲೇ ಟ್ರಾವಿಸ್​ ಹೆಡ್​ ಬೌಂಡರಿ ಮೂಲಕ ರನ್​ ಖಾತೆ ತೆರೆದರು. ಮುಂದಿನ ಓವರ್​ನಲ್ಲಿ ತುಷಾರ್​ ದೇಶ್​ಪಾಂಡೆಗೆ ಸಿಕ್ಸರ್​ ರುಚಿ ತೋರಿಸಿದರು. ಅಭಿಷೇಕ್​ ಶರ್ಮ ಕೂಡ ಒಂದು ಸಿಕ್ಸರ್​ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದರು. ಈ ವೇಳೆ ಧೋನಿ ನೀಡಿದ ಸಲಹೆಯನ್ನಾಧರಿಸಿ ಇದೇ ಓವರ್​ನಲ್ಲಿ ತುಷಾರ್​ ದೊಡ್ಡ ಬೇಟೆಯಾಡುವಲ್ಲಿ ಯಶಸ್ವಿಯಾದರು. ಟ್ರಾವಿಸ್​ ಹೆಡ್(13)​ ಮತ್ತು ಅನ್ಮೋಲ್ಪ್ರೀತ್ ಸಿಂಗ್​(0) ಖಾತೆ ತರೆಯುವ ಮುನ್ನವೇ ವಿಕೆಟ್​ ಕಿತ್ತು ಪೆವಿಲಿಯನ್​ ಕಡೆಗೆ ದಾರಿ ತೋರಿದರು. 21 ರನ್​ಗೆ 2 ವಿಕೆಟ್​ ಕಳೆದುಕೊಂಡ ಹೈದರಾಬಾದ್​ ಈ ಆಘಾತವನ್ನು ಅರಗಿಸಿಕೊಳ್ಳುವ ಮುನ್ನವೇ ಅಭಿಷೇಕ್​ ಶರ್ಮ(15) ವಿಕೆಟ್​ ಕೂಡ ಪತನಗೊಂಡಿತು. ಈ ವಿಕೆಟ್​ ಕೂಡ ತುಷಾರ್ ಪಾಲಾಯಿತು. ಅಲ್ಲಿಗೆ ಅಗ್ರ ಕ್ರಮಾಂಕದ ಮೂರು ವಿಕೆಟ್​ ಕೂಡ ತುಷಾರ್​ ಕಿತ್ತರು.

40 ರನ್​ಗೆ ಮೂರು ವಿಕೆಟ್​ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ತಂಡಕ್ಕೆ ಐಡೆನ್​ ಮಾರ್ಕ್ರಮ್​ ಮತ್ತು ನಿತೀಶ್​ ರೆಡ್ಡಿ ಕೆಲ ಕಾಲ ಆಸರೆಯಾದರೂ ಕೂಡ ಇವರಿಂದ ದೊಡ್ಡ ಮೊತ್ತ ಪೇರಿಸಲು ಸಾಧ್ಯವಾಗಲಿಲ್ಲ. ಕೇವಲ 4 ಬೌಂಡರಿ ನೆರವಿನಿಂದ ಮಾರ್ಕ್ರಮ್​ 32 ರನ್​ ಗಳಿಸಿ ಪತಿರಾಣ ಯಾರ್ಕರ್​ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ನಿತೀಶ್​ ರೆಡ್ಡಿ ಎಸೆತವೊಂದರಂತೆ 15 ರನ್​ ಗಳಿಸಿ ವಿಕೆಟ್​ ಕಳೆದುಕೊಂಡರು.

ಆಕ್ರಮಣಕಾರಿ ಬ್ಯಾಟಿಂಗ್​ಗೆ ಹೆಸರುವಾಸಿಯಾದ ಹೆನ್ರಿಚ್​ ಕ್ಲಾಸೆನ್​ ಮತ್ತು ಅಬ್ದುಲ್​ ಸಮದ್​ ಕೂಡ ಈ ಪಂದ್ಯದಲ್ಲಿ ರನ್​ ಗಳಿಸಲು ಪರದಾಡಿದರು. ಕ್ಲಾಸೆನ್​ 21 ಎಸೆತ ಎದುರಿಸಿ 20 ರನ್​ ಗಳಿಸಿದರು. ಸಿಡಿದದ್ದು 1 ಸಿಕ್ಸರ್​ ಮಾತ್ರ. ಅಬ್ದುಲ್​ ಸಮದ್ 18 ಎಸೆತಗಳಿಂದ 19 ರನ್​ ಕಲೆಹಾಕಿದರು. ಡೇರಿಯಲ್​ ಮಿಚೆಲ್​ ಈ ಪಂದ್ಯದಲ್ಲಿ 5 ಕ್ಯಾಚ್​ ಹಿಡಿದು ಮಿಂಚಿದರು.

ಗಾಯಕ್ವಾಡ್​ ಸೂಪರ್​ ಅರ್ಧಶತಕ


ಮೊದಲು ಬ್ಯಾಟಿಂಗ್​ ನಡೆಸಿದ ಚೆನ್ನೈ ತಂಡ ಆರಂಭದಲ್ಲೇ ಅಜಿಂಕ್ಯಾ ರಹಾನೆ ವಿಕೆಟ್​ ಕಳೆದುಕೊಂಡರೂ ಕೂಡ ಇದರಿಂದ ವಿಚಲಿತರಾಗಲಿಲ್ಲ. ನಾಯಕ ಋತುರಾಜ್​ ಗಾಯಕ್ವಾಡ್​ ಮತ್ತು ಡೇರಿಯಲ್​ ಮಿಚೆಲ್​ ಸೇರಿಕೊಂಡು ಹೈದರಾಬಾದ್​ ಬೌಲರ್​ಗಳ ಮೇಲೆ ಸವಾರಿ ನಡೆಸಿ ಅರ್ಧಶತಕ ಬಾರಿಸಿದರು. ಗಾಯಕ್ವಾಡ್​ ಕೇವಲ 27 ಎಸೆತಗಳಿಂದ ಅರ್ಧಶತಕ ಪೂರ್ತಿಗೊಳಿಸಿದರು. ಉತ್ತಮವಾಗಿ ಆಡುತ್ತಿದ್ದ ಈ ಜೋಡಿಯನ್ನು ಕೊನೆಗೂ ಜಯ್​ದೇವ್​ ಉನಾದ್ಕತ್​ ಬೇರ್ಪಡಿಸುವಲ್ಲಿ ಯಶಸ್ಸು ಕಂಡರು. ಗಾಯಕ್ವಾಡ್ ಮತ್ತು ಮಿಚೆಲ್​ ದ್ವಿತೀಯ ವಿಕೆಟ್​ಗೆ 107 ರನ್​ಗಳ ಅಮೋಘ ಜತೆಯಾಟ ನಡೆಸಿತು. ಮಿಚೆಲ್​ ಅವರು ​ಉನಾದ್ಕತ್ ಎಸೆತ ಲೋ ಫುಲ್​ಟಾಸ್ ಎಸೆತಕ್ಕೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. 7 ಬೌಂಡರಿ ಮತ್ತು 1 ಸಿಕ್ಸರ್​ ಬಾರಿಸಿದ ಮಿಚೆಲ್​ 52 ರನ್​ ಗಳಿಸಿದರು.

ಇದನ್ನೂ ಓದಿ IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

​ಮಿಚೆಲ್​ ವಿಕೆಟ್​ ಬಿದ್ದರೂ ಕೂಡ ಚೆನ್ನೈ ತಂಡದ ರನ್​ ಗಳಿಕೆಗೆ ಯಾವುದೇ ಹಿನ್ನಡೆಯಾಗಲಿಲ್ಲ. ಶಿವಂ ದುಬೆ ತಮ್ಮ ಎಂದಿನ ಆಕ್ರಮಣಕಾರಿ ಶೈಲಿಯ ಬ್ಯಾಟಿಂಗ್ ನಡೆಸಿ ತಮ್ಮ ಹಾಗೂ ತಂಡದ ಮೊತ್ತವನ್ನು ಹಿಗ್ಗಿಸಿದರು. 19.2 ಓವರ್​ ತನಕ ಬ್ಯಾಟಿಂಗ್​ ಕಾಯ್ದುಕೊಂಡಿದ್ದ ಗಾಯಕ್ವಾಡ್​ 98 ರನ್​ ಗಳಿಸಿ ವಿಕೆಟ್​ ಕಳೆದುಕೊಂಡು ಕೇವಲ 2 ರನ್​ ಅಂತರದಿಂದ ಶತಕ ವಂಚಿತರಾದರು. ಕಳೆದ ಲಕ್ನೋ ವಿರುದ್ಧದ ಪಂದ್ಯದಲ್ಲಿ ಇದೇ ಮೈದಾನದಲ್ಲಿ ಶತಕ ಸಿಡಿಸಿದ್ದರು. ಸತತವಾಗಿ 2ನೇ ಶತಕ ಬಾರಿಸುವ ಅವಕಾಶ ಕೈ ಚೆಲ್ಲಿದರು. ಒಟ್ಟು 54 ಎಸೆತ ಎದುರಿಸಿದ ಗಾಯಕ್ವಾಡ್​ 10 ಬೌಂಡರಿ ಮತ್ತು 3 ಸಿಕ್ಸರ್​ ನೆರವಿನಿಂದ 98 ರನ್​ ಗಳಿಸಿದರು.

ಶಿವಂ ದುಬೆ 4 ಬಿಗ್​ ಹಿಟ್ಟಿಂಗ್​ ಸಿಕ್ಸರ್​ ಮತ್ತು 1 ಬೌಂಡರಿ ಬಾರಿಸಿ ಅಜೇಯ 39 ರನ್​ ಗಳಿಸಿದರು. ಧೋನಿ ಕೂಡ 5 ರನ್ ಬಾರಿಸಿ ಅಜೇಯರಾಗಿ ಉಳಿದರು. ಹೈದರಾಬಾದ್​ ಪರ ಭುವನೇಶ್ವರ್ ಕುಮಾರ್​, ಟಿ. ನಟರಾಜನ್​ ಮತ್ತು ಉನಾದ್ಕತ್​ ತಲಾ ಒಂದು ವಿಕೆಟ್​ ಕಿತ್ತರು.​​

Continue Reading

ಕರ್ನಾಟಕ

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

ಭಾರತೀಯ ರಿಸರ್ವ್‌ ಬ್ಯಾಂಕ್‌ ಮಾರ್ಗಸೂಚಿಗಳನ್ನು ಪಾಲಿಸದೆ ಇಬ್ಬರು ಆರೋಪಿಗಳು ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದಾರೆ. ಹಾಗಾಗಿ, ಇಬ್ಬರಿಗೂ ನ್ಯಾಯಾಲಯವು ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ.

VISTARANEWS.COM


on

Notes
Koo

ಬೆಂಗಳೂರು: ಭಾರತೀಯ ರಿಸರ್ವ್‌ ಬ್ಯಾಂಕ್‌ (RBI) ನಿಯಮಗಳನ್ನು ಉಲ್ಲಂಘಿಸಿ ನೋಟುಗಳನ್ನು ನಗದೀಕರಣ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯವು (CBI Special Court) ಇಬ್ಬರು ಆರೋಪಿಗಳಿಗೆ ತಲಾ 4 ವರ್ಷ ಜೈಲು ಶಿಕ್ಷೆ ವಿಧಿಸಿದೆ. ನೋಟು ನಗದೀಕರಣ ಮಾಡಿದ ಎಸ್.‌ ಗೋಪಾಲಯ್ಯ ಹಾಗೂ ಎಲ್‌ಐಸಿ ಏಜೆಂಟ್‌ ಕೆ.ರಾಘವೇಂದ್ರ ಎಂಬುವರಿಗೆ ನ್ಯಾಯಾಲಯವು ಜೈಲು ಶಿಕ್ಷೆ ವಿಧಿಸಿದೆ.

2016ರಲ್ಲಿ ಕೇಂದ್ರ ಸರ್ಕಾರವು ಐನೂರು ಹಾಗೂ ಸಾವಿರ ರೂ. ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸಿದ ಸಂದರ್ಭದಲ್ಲಿ ನಿಷೇಧಿತ ಕರೆನ್ಸಿಗಳ ನಗದೀಕರಣಕ್ಕೆ ಆರ್‌ಬಿಐ ಹಲವು ಮಾರ್ಗಸೂಚಿಗಳನ್ನು ಹೊರಡಿಸಿತ್ತು. ಆದರೆ, ಇಬ್ಬರೂ ಆರ್‌ಬಿಐ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ನೋಟುಗಳನ್ನು ನಗದೀಕರಣ ಮಾಡಿಕೊಂಡಿದ್ದರು. ಹಾಗಾಗಿ, ಸಿಬಿಐ ನ್ಯಾಯಾಲಯವು ಇಬ್ಬರಿಗೂ ಜೈಲು ಶಿಕ್ಷೆಯ ಜತೆಗೆ ಭಾರಿ ದಂಡ ವಿಧಿಸಿದೆ. ಎಸ್‌.ಗೋಪಾಲಯ್ಯಗೆ 2.10 ಲಕ್ಷ ರೂ. ಹಾಗೂ ರಾಘವೇಂದ್ರಗೆ 1.6 ಲಕ್ಷ ರೂ. ದಂಡ ವಿಧಿಸಿದೆ.

money guide

ಮಾರ್ಗಸೂಚಿ ಅನುಸರಿಸದೆ ನೋಟುಗಳನ್ನು ನಗದೀಕರಣ ಮಾಡಿಕೊಂಡ ಹಿನ್ನೆಲೆಯಲ್ಲಿ ಸಿಬಿಐ 2017ರ ಮಾರ್ಚ್‌ನಲ್ಲಿ ಈಗ ಶಿಕ್ಷೆಗೆ ಗುರಿಯಾಗಿರುವ ಇಬ್ಬರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಿಸಿತ್ತು. ತನಿಖೆ ವೇಳೆ ಇವರ ದುರುದ್ದೇಶ ಬಯಲಾಗಿತ್ತು. ತನಿಖೆ ಪೂರ್ಣಗೊಳಿಸಿದ್ದ ತಂಡವು ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿತ್ತು. ಅದರಂತೆ, ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಜೈಲು ಶಿಕ್ಷೆ ವಿಧಿಸಿದೆ.

ಕೆಲ ತಿಂಗಳ ಹಿಂದಷ್ಟೇ, ರಾಷ್ಟ್ರೀಯ ತನಿಖಾ ದಳವು ನಕಲಿ ನೋಟು ಜಾಲದ ಮೇಲೆ ಮುಗಿಬಿದ್ದಿತ್ತು. ಬಿಹಾರ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಎನ್‌ಐಎ ಏಕಕಾಲದಲ್ಲಿ ದಾಳಿ ನಡೆಸಿದ್ದು, ಅದರಲ್ಲಿ ಕರ್ನಾಟಕದ ಬಳ್ಳಾರಿಯಲ್ಲೂ ಒಬ್ಬನನ್ನು ಸೆರೆ ಹಿಡಿದಿತ್ತು. ಬಳ್ಳಾರಿಯಲ್ಲಿ ಬಂಧಿತ ಆರೋಪಿಯನ್ನು ಮಹೇಂದ್ರ ಎಂದು ಗುರುತಿಸಲಾಗಿದ್ದು, ಆತನಿಂದ ಭಾರಿ ಪ್ರಮಾಣದ ನಕಲಿ ನೋಟು, ನೋಟು ತಯಾರಿಸುವ ಪೇಪರ್, ಪ್ರಿಂಟಿಂಗ್ ಮೆಷಿನ್‌ಗಳನ್ನು ವಶಕ್ಕೆ ಪಡೆಯಲಾಗಿತ್ತು. ಈತ 500, 200, ಹಾಗೂ 100 ರೂ ಮುಖಬೆಲೆಯ ನೋಟು ತಯಾರಿಸುತ್ತಿದ್ದ ಎಂದು ತಿಳಿದುಬಂದಿತ್ತು.

ಇದನ್ನೂ ಓದಿ: Fake Currency: ಬಳ್ಳಾರಿಯಲ್ಲಿ ಖೋಟಾ ನೋಟು ಪ್ರಿಂಟ್ ಮಾಡುತ್ತಿದ್ದ ಇಬ್ಬರ ಬಂಧನ

Continue Reading

Lok Sabha Election 2024

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

Narendra Modi: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ. ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿರುವುದಾಗಿ ತಿಳಿಸಿದ್ದಾರೆ.

VISTARANEWS.COM


on

Narendra Modi
Koo

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ಲೋಕಸಭಾ ಚುನಾವಣೆ (Lok Sabha Election 2024)ಗೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ(Congress manifesto)ಯಲ್ಲಿ ಮುಸ್ಲಿಂ ಲೀಗ್‌ನ ಛಾಯೆ ಇದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು ನ್ಯೂಸ್ 18 ನೆಟ್‌ವರ್ಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಪುನರುಚ್ಚರಿಸಿದ್ದಾರೆ. ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಪಿತ್ರಾರ್ಜಿತ ಆಸ್ತಿ ತೆರಿಗೆ ವಿಚಾರವಾಗಿಯೂ ವಿಪಕ್ಷ ಕಾಂಗ್ರೆಸ್​ ವಿರುದ್ಧ ಕಿಡಿಕಾರಿದ್ದಾರೆ.

“ಮಾಧ್ಯಮಗಳು ಪ್ರತಿಯೊಂದು ರಾಜಕೀಯ ಪಕ್ಷದ ಪ್ರಣಾಳಿಕೆಗಳನ್ನು ಅಧ್ಯಯನ ನಡೆಸುತ್ತವೆ. ನಾನು ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯಿಸುವುದನ್ನು ಕಾಯುತ್ತಿದ್ದೆ. ನಾನು ಮೊದಲ ದಿನವೇ ಪ್ರಣಾಳಿಕೆಯ ಬಗ್ಗೆ ಮಾತನಾಡಿದ್ದೆ. ಪ್ರಣಾಳಿಕೆಯನ್ನು ಗಮನಿಸಿದ ಕೂಡಲೇ ಅದರಲ್ಲಿ ಮುಸ್ಲಿಂ ಲೀಗ್‌ನ ಮುದ್ರೆ ಇದೆ ಎಂದು ನಾನು ಕಂಡುಕೊಂಡಿದ್ದೆ. ಮಾಧ್ಯಮಗಳು ಈ ವಿಚಾರ ತಿಳಿದು ಆಘಾತಕ್ಕೊಳಗಾಗಬಹುದು ಎಂದು ಭಾವಿಸಿದ್ದೆʼʼ ಎಂದು ಮೋದಿ ಹೇಳಿದ್ದಾರೆ.

“ಇದು ವ್ಯವಸ್ಥೆಯ ದೊಡ್ಡ ಹಗರಣವೆಂದು ನನಗೆ ತಿಳಿಯಿತು. ಪ್ರಣಾಳಿಕೆಯಲ್ಲಿನ ದುಷ್ಕೃತ್ಯಗಳನ್ನು ಯಾರಾದರೂ ಹೊರತರುತ್ತಾರೆ ಎಂದು ನಾನು 10 ದಿನಗಳವರೆಗೆ ಕಾಯುತ್ತಿದ್ದೆ. ಯಾಕೆಂದರೆ ಅದನ್ನು ನಿಷ್ಪಕ್ಷಪಾತವಾಗಿ ಹೊರತಂದರೆ ಉತ್ತಮ. ಅಂತಿಮವಾಗಿ ಈ ಸತ್ಯಗಳನ್ನು ನಾನೇ ಹೊರತರಬೇಕೆಂದು ನಿರ್ಧರಿಸಿದೆʼʼ ಎಂದು ಅವರು ವಿವರಿಸಿದ್ದಾರೆ.

ಸಂಪತ್ತು ಮರುಹಂಚಿಕೆ

ಮುಸ್ಲಿಮರಿಗೆ ಸಂಪತ್ತನ್ನು ಮರುಹಂಚಿಕೆ ಮಾಡಲು ಕಾಂಗ್ರೆಸ್ ಬಯಸಿದೆ ಎನ್ನುವ ವಿಚಾರ ಅಷ್ಟೊಂದು ಅಪಾಯಕಾರಿಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಪ್ರಧಾನಿ, ತಮ್ಮ ಚುನಾವಣಾ ಪ್ರಚಾರವನ್ನು ಸೂಕ್ಷ್ಮವಾಗಿ ಗಮನಿಸುವಂತೆ ಕರೆ ನೀಡಿದರು. “ನನ್ನ ಇಡೀ ಚುನಾವಣಾ ಪ್ರಚಾರವು ಎರಡು ವಿಷಯಗಳ ಮೇಲೆ ಕೇಂದ್ರೀಕೃತವಾಗಿದೆ ಎನ್ನುವುದನ್ನು ನೀವು ಗಮನಿಸಿರಬಹುದು. ನಾವು ಸಮಾಜದ ಕಲ್ಯಾಣಕ್ಕಾಗಿ ಕೆಲಸ ಮಾಡಿದ್ದೇವೆ. ಹಿಂದಿನ ಸರ್ಕಾರಕ್ಕೆ ಹೋಲಿಸಿದರೆ ನಮ್ಮ ಸರ್ಕಾರ ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸೌಲಭ್ಯ ತಲುಪಿಸಿದೆ. ನೋಡಿ, ಕೆಟ್ಟದ್ದನ್ನು ಮಾಡಲು ಯಾವುದೇ ಸರ್ಕಾರವನ್ನು ರಚಿಸುವುದಿಲ್ಲ. ಸರ್ಕಾರ ಜನರಿಗೆ ಒಳ್ಳೆಯದನ್ನು ಮಾಡಲು ಬಯಸುತ್ತದೆ. ಕೆಲವು ಜನರಿಗೆ ಇತರರಿಗೆ ಒಳ್ಳೆಯದನ್ನು ಹೇಗೆ ಮಾಡಬೇಕೆಂದು ತಿಳಿದಿದೆ. ಕೆಲವರು ನಮಗೂ ಒಳಿತಾಗಲಿ ಎಂದು ಕಾಯುತ್ತಾರೆ. ಕಷ್ಟಪಟ್ಟು ಕೆಲಸ ಮಾಡುವುದರಿಂದ ಒಳ್ಳೆಯದಾಗುತ್ತದೆ ಎನ್ನುವುದನ್ನು ನಾನು ನಂಬುತ್ತೇನೆʼʼ ಎಂದು ಮೋದಿ ತಿಳಿಸಿದ್ದಾರೆ.

ಬಡವರಿಗಾಗಿ 4 ಕೋಟಿ ಮನೆ

ತಮ್ಮ ಸರ್ಕಾರ ಜನರಿಗಾಗಿ ಕೈಗೊಂಡ ಉಪಕ್ರಮಗಳನ್ನು ವಿವರಿಸಿದ ಪಿಎಂ ಮೋದಿ, “ನಾವು ಬಡವರಿಗಾಗಿ 4 ಕೋಟಿ ಮನೆಗಳನ್ನು ನಿರ್ಮಿಸಿದ್ದೇವೆ. ನೀವು ಚುನಾವಣಾ ಪ್ರಚಾರಕ್ಕೆ ಹೋದಾಗ ಇನ್ನೂ ವಸತಿ ರಹಿತರಾಗಿರುವ ಜನರ ಪಟ್ಟಿಯನ್ನು ಸಿದ್ಧಪಡಿಸಿ ನನಗೆ ನೀಡಿ ಎಂದು ನಾನು ಕಾರ್ಯಕರ್ತರಲ್ಲಿ ಮನವಿ ಮಾಡಿದ್ದೇನೆ. ನನ್ನ ಮೂರನೇ ಅವಧಿ ಪ್ರಾರಂಭವಾದ ಕೂಡಲೇ ಆದ್ಯತೆ ಮೇರೆಗೆ ನಾನು ಈ ಕೆಲಸ ಮುಂದುವರಿಸುತ್ತೇನೆʼʼ ಎಂದು ಅವರು ಭರವಸೆ ನೀಡಿದ್ದಾರೆ.

ಪ್ರಧಾನಿಯಾಗಿ ದಾಖಲೆಯ ಮೂರನೇ ಅವಧಿಯನ್ನು ಹೊಂದುವ ವಿಶ್ವಾಸ ವ್ಯಕ್ತಪಡಿಸಿದ ಮೋದಿ, ಭವಿಷ್ಯದ ಯೋಜನೆ ಬಗ್ಗೆ ತಮಗಿರುವ ದೃಷ್ಟಿಕೋನವನ್ನೂ ವಿವರಿಸಿದ್ದಾರೆ. ʼʼನಾನು ಇನ್ನೂ 3 ಕೋಟಿ ಮನೆಗಳನ್ನು ನಿರ್ಮಿಸುವ ಯೋಜನೆ ಹಾಕಿಕೊಂಡಿದ್ದೇನೆ. ಈಗ ಆಯುಷ್ಮಾನ್ ಭಾರತ್ ವಿಶ್ವದ ಅತಿದೊಡ್ಡ ಆರೋಗ್ಯ ವಿಮಾ ಯೋಜನೆ ಎನಿಸಿಕೊಂಡಿದೆ. ಇದು ಜನರಿಗೆ ಆರೋಗ್ಯದ ಭರವಸೆ ನೀಡುತ್ತದೆ. ಸುಮಾರು 55 ಕೋಟಿ ಮಂದಿಗೆ ಇದು ನೆರವಾಗುತ್ತದೆ. ಮೋದಿ ಸರ್ಕಾರ ನಿಮ್ಮೊಂದಿಗಿದೆ ಎಂಬ ಭರವಸೆ ಇದು. ಯಾವುದೇ ವರ್ಗ, ಸಮಾಜ, ಹಿನ್ನೆಲೆಗೆ ಸೇರಿದ 70 ವರ್ಷಕ್ಕಿಂತ ಮೇಲಿನ ಪುರುಷ ಅಥವಾ ಮಹಿಳೆಗೆ 5 ಲಕ್ಷ ರೂ.ಗಳವರೆಗೆ ಉಚಿತ ಚಿಕಿತ್ಸೆ ನೀಡಲಾಗುವುದು ಎಂದು ಪ್ರಣಾಳಿಕೆಯಲ್ಲಿ ಘೋಷಿಸಿದ್ದೇವೆ. ಜತೆಗೆ ನಾವು ಈ ಪ್ರಯೋಜನವನ್ನು ಆಶಾ ಕಾರ್ಯಕರ್ತೆಯರಿಗೆ ನೀಡುತ್ತೇವೆ ಎಂದು ಹೇಳಿದ್ದೇವೆ. ತೃತೀಯ ಲಿಂಗಿಗಳಿಗೆ ಅವರ ವಯಸ್ಸು ಯಾವುದೇ ಇರಲಿ ನಾವು ನೆರವು ನೀಡಲು ಬದ್ಧʼʼ ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: BJP Manifesto: ಬಿಜೆಪಿ ಪ್ರಣಾಳಿಕೆ; ರೈತನಿಗೆ ಮೊದಲ ಪ್ರತಿ ನೀಡಿದ ಮೋದಿ, 14 ಗ್ಯಾರಂಟಿ ಘೋಷಣೆ

ಬ್ಯಾಂಕಿಂಗ್‌ ವ್ಯವಸ್ಥೆ

“ನಮ್ಮ ದೇಶದಲ್ಲಿ ಬ್ಯಾಂಕುಗಳ ಸ್ಥಿತಿ ಕಳಪೆಯಾಗಿತ್ತು. ದೇಶದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಹಣ ನೀಡಿದ್ದರೂ ಬ್ಯಾಂಕುಗಳಲ್ಲಿ ಅವರ ಹೆಸರಿನಲ್ಲಿ ಖಾತೆ ತೆರೆದಿರಲಿಲ್ಲ. ನಮ್ಮ ಸರ್ಕಾರ ಬಂದ ಬಳಿಕ 52 ಕೋಟಿ ಬ್ಯಾಂಕ್ ಖಾತೆಗಳನ್ನು ತೆರೆಯಲಾಯಿತು. ಅನೇಕರು ಅದರ ಲಾಭವನ್ನು ಪಡೆದುಕೊಂಡರು. ಹಲವರಿಗೆ ಜನ್ ಧನ್ ಖಾತೆ ಮತ್ತು ನೇರ ಲಾಭ ವರ್ಗಾವಣೆಯ ಮೂಲಕ ಪ್ರಯೋಜನ ಲಭಿಸಿತು. 36 ಲಕ್ಷ ಕೋಟಿ ರೂ.ಗಳಷ್ಟು ಮೊತ್ತವು ಜನರ ಖಾತೆಗಳಿಗೆ ನೇರ ವರ್ಗಾವಣೆಯಾಗಿದೆʼʼ ಎಂದು ತಿಳಿಸಿದ್ದಾರೆ.

ತಮ್ಮ ಸರ್ಕಾರದ ಕಾರ್ಯಕ್ಷಮತೆಯನ್ನು 2014ರ ಹಿಂದಿನ ಪರಿಸ್ಥಿತಿಗೆ ಹೋಲಿಸಿದ ಪ್ರಧಾನಿ ಮೋದಿ, “ನೋಡಿ 2014 ಕ್ಕಿಂತ ಮೊದಲು ದೇಶದ ಪರಿಸ್ಥಿತಿ ಹೇಗಿತ್ತು? ಆರ್ಥಿಕತೆ ದುರ್ಬಲವಾಗಿತ್ತು. ಇಂದು ನಾವು ಅದನ್ನು ಬದಲಾಯಿಸಿದ್ದೇವೆ. ಐಎಂಎಫ್‌ನಲ್ಲಿ ಈಗ ಚೀನಾ ಮತ್ತು ಭಾರತ ಸೇರಿದಂತೆ ವಿಶ್ವದ 150 ದೇಶಗಳ ಗುಂಪು ಇದೆ. ಇದನ್ನು ನಾವು ಅಭಿವೃದ್ಧಿಶೀಲ ದೇಶಗಳು ಅಥವಾ ಉದಯೋನ್ಮುಖ ಆರ್ಥಿಕತೆ ಹೊಂದಿರುವ ದೇಶಗಳು ಎಂದು ಕರೆಯಬಹುದುʼʼ ಎಂದು ಪ್ರಧಾನಿ ವಿವರಿಸಿದ್ದಾರೆ.

ಇದನ್ನೂ ಓದಿ: Wealth Redistribution: ಸಂಪತ್ತು ಮರು ಹಂಚಿಕೆ ವಿವಾದದ ಬೆಂಕಿಗೆ ತುಪ್ಪ ಸುರಿದ ಸ್ಯಾಮ್ ಪಿತ್ರೊಡಾ; ಕಾಂಗ್ರೆಸ್‌ಗೆ ಫಜೀತಿ!

ಪಿತ್ರಾರ್ಜಿತ ಆಸ್ತಿ ತೆರಿಗೆ

ಸಾಗರೋತ್ತರ ಕಾಂಗ್ರೆಸ್​ ಅಧ್ಯಕ್ಷ ಸ್ಯಾಮ್ ಪಿತ್ರೋಡಾ ಅವರು ಪಿತ್ರಾರ್ಜಿತ ಆಸ್ತಿ ತೆರಿಗೆ ಬಗ್ಗೆ ಮಾತನಾಡಿದ್ದರು. ಈ ಬಗ್ಗೆ ಮೋದಿ ಪ್ರತಿಕ್ರಿಯಿಸಿ, “ಅಮೆರಿಕದಲ್ಲಿ ಸಂದರ್ಶನ ನೀಡಿದ ಅವರು ಪಿತ್ರಾರ್ಜಿತ ತೆರಿಗೆ ಬಗ್ಗೆ ಪ್ರಸ್ತಾವಿಸಿದರು. ನಿಮ್ಮ ಆಸ್ತಿಯ ಮೇಲೆ ಸುಮಾರು 55% ತೆರಿಗೆ ವಿಧಿಸುವ ಬಗ್ಗೆ ಹೇಳಿದರು. ಈಗ ನಾನು ಅಭಿವೃದ್ಧಿ ಮತ್ತು ಉತ್ತರಾಧಿಕಾರದ ಬಗ್ಗೆ ಮಾತನಾಡುತ್ತಿದ್ದೇನೆ ಮತ್ತು ಅವರು ಆ ಪಿತ್ರಾರ್ಜಿತ ಆಸ್ತಿಯನ್ನು ಲೂಟಿ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ. ಈ ಬಗ್ಗೆ ಎಚ್ಚರಿಸುವುದು ನನ್ನ ಜವಾಬ್ದಾರಿ. ಈಗ ಈ ಬಗ್ಗೆ ನಿರ್ಧರಿಸಬೇಕಾದವರು ನೀವುʼʼ ಎಂದು ಮೋದಿ ಹೇಳಿದ್ದಾರೆ.

Continue Reading

ಕರ್ನಾಟಕ

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

CET 2024: ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಮೇ ಕೊನೇ ವಾರದಲ್ಲಿ ಸಿಇಟಿ 2024 ಫಲಿತಾಂಶ ಬಿಡುಗಡೆಯಾಗಲಿದೆ.

VISTARANEWS.COM


on

cet exam karnataka exam authority
Koo

ಬೆಂಗಳೂರು: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೇಳಿದ್ದ ಹಿನ್ನೆಲೆಯಲ್ಲಿ ಮರು ಪರೀಕ್ಷೆ (CET 2024) ನಡೆಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದರು, ಆದರೆ, ಇದೀಗ ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು (Out Of Syllabus Questions) ಕೈ ಬಿಡಲು ಉನ್ನತ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದ್ದು, ಮರು ಪರೀಕ್ಷೆ ನಡೆಸದೇ ಫಲಿತಾಂಶ ಬಿಡುಗಡೆ ಮಾಡಲು ತೀರ್ಮಾನಿಸಿದೆ.

ತಜ್ಞರ ವರದಿ ಆಧರಿಸಿ ಮರು ಪರೀಕ್ಷೆ ನಡೆಸದೇ, ಔಟ್ ಆಫ್ ಸಿಲಬಸ್ ಪ್ರಶ್ನೆಗಳನ್ನು ಕೈ ಬಿಡಲು ಉನ್ನತ ಶಿಕ್ಷಣ ‌ಇಲಾಖೆ ನಿರ್ಧಾರ ಮಾಡಿದೆ. ಭೌತಶಾಸ್ತ್ರ 9, ರಸಾಯನಶಾಸ್ತ್ರ 15, ಗಣಿತ 15, ಜೀವಶಾಸ್ತ್ರ 11 ಅಂಕಗಳ ಔಟ್ ಆಫ್‌ ಸಿಲಬಸ್ ಪ್ರಶ್ನೆ ಕೈ ಬಿಡಲು ತಜ್ಞರ ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಜ್ಞರ ಸಮಿತಿ ಶಿಫಾರಸಿಗೆ ಒಪ್ಪಿಗೆ ನೀಡಿದ ಉನ್ನತ ಶಿಕ್ಷಣ ಇಲಾಖೆ, ಔಟ್ ಆಫ್ ಸಿಲಬಸ್ ಪ್ರಶ್ನೆ ಬಿಟ್ಟು ಉಳಿದ ಪ್ರಶ್ನೆಗಳನ್ನು ಫಲಿತಾಂಶಕ್ಕೆ ಪರಿಗಣಿಸಲು ನಿರ್ಧಾರ ಮಾಡಿದೆ.

ಇದನ್ನೂ ಓದಿ | PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

ತಪ್ಪಾದ 2 ಪ್ರಶ್ನೆಗಳಿಗೆ ಮಾತ್ರ ಗ್ರೇಸ್ ಅಂಕ ನೀಡಲು ‌ಸಮಿತಿ ಶಿಫಾರಸು ಮಾಡಿದೆ. ಹೀಗಾಗಿ ತಪ್ಪಾದ 2 ಪ್ರಶ್ನೆಗೆ ಗ್ರೇಸ್ ಅಂಕಗಳನ್ನು ಕೆಇಎ ನೀಡಲಿದೆ. ಉಳಿದಂತೆ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಟ್ಟು ಉಳಿದ ಪ್ರಶ್ನೆಗಳ‌ನ್ನು ಅಂಕಗಳಾಗಿ ಪರಿಗಣಿಸಲಾಗುತ್ತದೆ. ಇನ್ನು ಮೇ ಕೊನೇ ವಾರದಲ್ಲಿ ಸಿಇಟಿ ಫಲಿತಾಂಶವನ್ನು ಕೆಇಎ ಪ್ರಕಟ ಮಾಡಲಿದೆ.

ಸಿಇಟಿ ಪರೀಕ್ಷೆಯಲ್ಲಿ (CET 2024) ಪಠ್ಯಕ್ರಮದ ಹೊರತಾದ ಪ್ರಶ್ನೆಗಳಿಂದ (Out of syllabus questions) ವಿದ್ಯಾರ್ಥಿಗಳಲ್ಲಿ ಆತಂಕ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಲು ರಾಜ್ಯ ಸರ್ಕಾರದಿಂದ ಇತ್ತೀಚೆಗೆ ತಜ್ಞರ ಸಮಿತಿ ರಚನೆ ಮಾಡಲಾಗಿತ್ತು. ಪ್ರತಿ 4 ವಿಷಯಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ತಜ್ಞರ ಸಮಿತಿ ರಚಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿತ್ತು.

ಸಿಇಟಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ‘ಕೆಇಎ’ ಯು ಕಾರ್ಯನಿರ್ವಹಿಸಲಿದೆ. ತಜ್ಞರ ಸಮಿತಿಯ ವರದಿಯನ್ನು ಆಧರಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಹಿತಾಸಕ್ತಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಮತ್ತು ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ ಎಂದು ಶಿಕ್ಷಣ ಇಲಾಖೆ (ಉನ್ನತ ಶಿಕ್ಷಣ) ಸರ್ಕಾರದ ಪ್ರಧಾನ ಕಾರ್ಯದರ್ಶಿ ಶ್ರೀಕರ್‌ ಎಂ.ಎಸ್‌ ತಿಳಿಸಿದ್ದರು.

ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು (ಸಿಇಟಿ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಏ.18 ಮತ್ತು 19ರಂದು ನಡೆಸಲಾಗಿತ್ತು. 4 ವಿಷಯಗಳಿಗೆ (ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ ಮತ್ತು ಜೀವಶಾಸ್ತ್ರ) ನಡೆದಿದ್ದ ಸಿಇಟಿ ಪರೀಕ್ಷೆಗೆ ರಾಜ್ಯಾದ್ಯಂತ 3 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಹಾಜರಾಗಿದ್ದರು. ಪರೀಕ್ಷೆ ನಡೆದ ನಂತರ, ಪತ್ರಿಕೆಗಳಲ್ಲಿ ಹಲವು ಪ್ರಶ್ನೆಗಳು ಸಿಇಟಿಯ ಪಠ್ಯಕ್ರಮದ ಹೊರತಾಗಿವೆ ಎಂದು ವಿದ್ಯಾರ್ತಿಗಳು ಆರೋಪಿಸಿದ್ದರು. ಆದ್ದರಿಂದ, ಗ್ರೇಸ್ ಅಂಕಗಳನ್ನು ಒದಗಿಸುವಂತೆ ಅಥವಾ ಪರೀಕ್ಷೆಯನ್ನು ಮರು ನಡೆಸುವಂತೆ ಒತ್ತಾಯ ಕೇಳಿಬಂದಿತ್ತು. ಆದರೆ ಇದೀಗ ಮರು ಪರೀಕ್ಷೆ ನಡೆಸದಿರಲ್ಲಿ ಉನ್ನತ ಶಿಕ್ಷಣ ಇಲಾಖೆ ನಿರ್ಧರಿಸಿದೆ.

Continue Reading
Advertisement
ತುಮಕೂರು9 mins ago

Sira News: ಬಿಸಿಲ ಬೇಗೆಗೆ ಮತ್ಸ್ಯಗಳ ಮಾರಣಹೋಮ; ನೀರಿಲ್ಲದೇ ವಿಲವಿಲನೇ ಒದ್ದಾಡಿ ಸಾವಿರಾರು ಮೀನುಗಳ ಸಾವು

CSK vs SRH
ಕ್ರೀಡೆ13 mins ago

CSK vs SRH: ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದ ಚೆನ್ನೈ; ಹೈದರಾಬಾದ್​ ವಿರುದ್ಧ 78 ರನ್​ ಅಮೋಘ ಜಯ

Notes
ಕರ್ನಾಟಕ17 mins ago

ಬೆಂಗಳೂರಿನಲ್ಲಿ ಆರ್‌ಬಿಐ ನಿಯಮ ಉಲ್ಲಂಘಿಸಿ ನೋಟು ನಗದೀಕರಣ; ಇಬ್ಬರಿಗೆ 4 ವರ್ಷ ಜೈಲು!

Narendra Modi
Lok Sabha Election 202424 mins ago

Narendra Modi: ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ನ ಪ್ರಭಾವ ಸ್ಪಷ್ಟ; ಪುನರುಚ್ಚರಿಸಿದ ಮೋದಿ

cet exam karnataka exam authority
ಕರ್ನಾಟಕ53 mins ago

CET 2024: ಸಿಇಟಿ ಔಟ್ ಆಫ್ ಸಿಲಬಸ್ ಪ್ರಶ್ನೆ ಕೈ ಬಿಡಲು ನಿರ್ಧಾರ, ಮರು ಪರೀಕ್ಷೆ ಇಲ್ಲ; ಅಂಕ ಪರಿಗಣನೆ ಹೇಗೆ?

PM Narendra Modi
ಕರ್ನಾಟಕ59 mins ago

PM Narendra Modi: ನಾಳೆ ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಅಬ್ಬರದ ಪ್ರಚಾರಕ್ಕೆ ಸಿದ್ಧತೆ

Paris Olympics
ಕ್ರೀಡೆ1 hour ago

Paris Olympics: ಬೆಳ್ಳಿ ಗೆದ್ದು ಪ್ಯಾರಿಸ್​ ಒಲಿಂಪಿಕ್ಸ್​ಗೆ ಅರ್ಹತೆ ಪಡೆದ ಶೂಟರ್​ ಮಹೇಶ್ವರಿ

Arecanut cultivation
ಚಿತ್ರದುರ್ಗ1 hour ago

Arecanut Cultivation: ಒಣಗುತ್ತಿರುವುದು ಅಡಿಕೆ ಮರಗಳಲ್ಲ, ರೈತರ ಬದುಕು!

IPL 2024
ಕ್ರೀಡೆ2 hours ago

IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

PUC Exam 2024
ಕರ್ನಾಟಕ2 hours ago

PUC Exam 2024: ನಾಳೆಯಿಂದ ಪಿಯುಸಿ 2ನೇ ವಾರ್ಷಿಕ ಪರೀಕ್ಷೆ; ವಿದ್ಯಾರ್ಥಿಗಳಿಗೆ ಬಸ್‌ ಪ್ರಯಾಣ ಫ್ರೀ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ4 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20247 hours ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20249 hours ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 202411 hours ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 202412 hours ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
ಪ್ರಮುಖ ಸುದ್ದಿ15 hours ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ19 hours ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20241 day ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

road Accident in kolar evm
ಕೋಲಾರ1 day ago

Road Accident : ಇವಿಎಂ ಸಾಗಿಸುವಾಗ ವಾಹನದ ಟೈರ್‌ ಸ್ಫೋಟ; ರೋಡ್‌ನಲ್ಲೇ ರಿಪೇರಿ, ಮೊಕ್ಕಾಂ ಹೂಡಿದ ಪೊಲೀಸರು

Dina Bhavishya
ಭವಿಷ್ಯ2 days ago

Dina Bhavishya : ಈ ದಿನ ನಿಮ್ಮ ಪ್ರೀತಿಯ ಕನಸು ನನಸಾಗುವ ಸುದಿನ

Lok Sabha Election 2024 congress booth agent allegation for Fake voting in Hassan Lok Sabha constituency
ಹಾಸನ2 days ago

Lok Sabha Election 2024: ಹಾಸನ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನ! ಏನಿದು ಕಾಂಗ್ರೆಸ್‌ ಬೂತ್‌ ಏಜೆಂಟ್‌ ಆರೋಪ?

ಟ್ರೆಂಡಿಂಗ್‌