ಇಂದಿನ ಪಂಚಾಂಗ (09-೦2-202೩)
ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ.
ತಿಥಿ: ಚತುರ್ಥಿ (ಅಹೋರಾತ್ರಿ) ವಾರ: ಗುರುವಾರ
ನಕ್ಷತ್ರ: ಉತ್ತರ 22:26 ಯೋಗ: ಸುಕರ್ಮ 16:43
ಕರಣ: ಭವ 19:13 ಇಂದಿನ ವಿಶೇಷ: ಸಂಕಷ್ಟಚತುರ್ಥಿ
ಅಮೃತಕಾಲ: ಮಧ್ಯಾಹ್ನ 02 ಗಂಟೆ 35 ನಿಮಿಷದಿಂದ 04 ಗಂಟೆ 20 ನಿಮಿಷದವರೆಗೆ.
ಸೂರ್ಯೋದಯ: 06 : 44 ಸೂರ್ಯಾಸ್ತ: 0೬ : 24
ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: ಬೆಳಗ್ಗೆ 6.00 ರಿಂದ 7.30
ದ್ವಾದಶ ರಾಶಿ ಭವಿಷ್ಯ (Horoscope Today)
ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ಇರಲಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ಎಚ್ಚರಿಕೆ ವಹಿಸಿ. ಉದ್ಯೋಗಿಗಳಿಗೆ ಕಿರಿಕಿರಿ. ಆರೋಗ್ಯ ಮಧ್ಯಮ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 1
ವೃಷಭ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಕೀರ್ತಿ ಸಿಗುವುದು. ಹಿರಿಯರ ಬೆಂಬಲ ಆಶೀರ್ವಾದ ದೊರೆಯಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ. ಕುಟುಂಬದಲ್ಲಿ ಸಂಗಾತಿಯ ಬೆಂಬಲ ಸಲಹೆ ಸಿಗಲಿದೆ. ಜನರ ಮಟ್ಟಿಗೆ ಖರ್ಚು. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7
ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ. ಆದ್ದರಿಂದ ಈ ಬಗ್ಗೆ ಹೆಚ್ಚು ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2
ಸಿಂಹ: ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ, ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು, ಕೀರ್ತಿ, ಶುಭ ಫಲ. ವ್ಯವಹಾರದಲ್ಲಿ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 9
ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ.
ಮುಂದೆಯಾಗುವ ಕಾರ್ಯಗಳ ಬಗೆಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಇಂದು ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7
ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ (Click Here) ಮಾಡಿ
ತುಲಾ: ಹಣಕಾಸಿನ ಸಮಸ್ಯೆ ನಿಮಗೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳು ಕೇಳಿ ಬರುತ್ತವೆ. ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1
ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣ. ದೀರ್ಘಕಾಲದ ಕೆಲಸಕಾರ್ಯಗಳಲ್ಲಿ ಯಶಸ್ಸು. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3
ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ, ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದರ ಬಗ್ಗೆಯೂ ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9
ಮಕರ: ಆರ್ಥಿಕ ಪ್ರಗತಿ ಉತ್ತಮ. ಆರೋಗ್ಯದಲ್ಲಿ ಕೊಂಚ ಏರು-ಪೇರು. ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ. ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ. ಯಾವುದಾದರೂ ಪ್ರಸಂಗಗಳಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಇದೆ, ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9
ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿ. ಅಗತ್ಯ ವಸ್ತುಗಳ ಖರೀದಿಗಾಗಿ ಖರ್ಚು. ನಿಮ್ಮ ಅಮೂಲ್ಯ ವಸ್ತುಗಳ ಕುರಿತು ಸದಾ ಗಮನ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಹೆಚ್ಚಿದ ಒತ್ತಡ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6
ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದಿಂದ ಕಾಡುತ್ತಿದ್ದ ಆಲೋಚನೆಗಳು ದೂರವಾಗುವ ಸಾಧ್ಯತೆ. ಮಾನಸಿಕ ನೆಮ್ಮದಿ. ಆರೋಗ್ಯ ಪರಿಪೂರ್ಣ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4
ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com
ಇದನ್ನೂ ಓದಿ : Planet Transit 2023 : ಸದ್ಯವೇ ಮೂರು ಗ್ರಹಗಳ ಸಂಚಾರ; ಶುಭಾಶುಭ ಫಲಗಳೇನು?