Site icon Vistara News

Horoscope Today : ಮೇಷ ರಾಶಿಯವರಿಗೆ ಇಂದು ಉತ್ಸಾಹದ ದಿನ; ನಿಮ್ಮ ರಾಶಿ ಭವಿಷ್ಯ ಹೀಗಿದೆ

horoscope today

ಇಂದಿನ ಭವಿಷ್ಯ

ಇಂದಿನ ಪಂಚಾಂಗ (12-೦2-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ.

ತಿಥಿ: ಷಷ್ಠಿ 09:45 ವಾರ: ಭಾನುವಾರ
ನಕ್ಷತ್ರ: ಸ್ವಾತಿ 26:26 ಯೋಗ: ಗಂಡ 15:32
ಕರಣ: ವಣಿಜ 09:45
ಅಮೃತಕಾಲ: ಸಂಜೆ 05 ಗಂಟೆ 22 ನಿಮಿಷದಿಂದ 07 ಗಂಟೆ 01 ನಿಮಿಷದವರೆಗೆ.

ಸೂರ್ಯೋದಯ: 06 : 43   ಸೂರ್ಯಾಸ್ತ: 0೬ : 25

ರಾಹುಕಾಲ : ಸಂಜೆ 4.30 ರಿಂದ 6.00
ಗುಳಿಕಕಾಲ: ಮಧ್ಯಾಹ್ನ 3.00 ರಿಂದ 4.30
ಯಮಗಂಡಕಾಲ: ಮಧ್ಯಾಹ್ನ 12.00 ರಿಂದ 1.30

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ಉತ್ಸಾಹದ ದಿನವಿದು. ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಜೀವನದಲ್ಲಿ ಹೊಸ ತಿರುವು ಪಡೆದುಕೊಳ್ಳುವ ಸಾಧ್ಯತೆಯಿದೆ. ದಿನದ ಮಟ್ಟಿಗೆ ಹಣಕಾಸಿನ ಹೂಡಿಕೆ ವ್ಯವಹಾರದಲ್ಲಿ ತೊಡುಗುವುದು ಬೇಡ. ಕೌಟುಂಬಿಕ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಷಭ: ನಿಮ್ಮ ಆಕರ್ಷಕ ವರ್ತನೆ ಗಮನ ಸೆಳೆಯುತ್ತದೆ. ಆರ್ಥಿಕವಾಗಿ ಇಂದು ನೀವು ಸಾಕಷ್ಟು ಬಲವಾಗಿ ಕಾಣುವಿರಿ. ಸಂಗಾತಿಯೊಂದಿಗೆ ಮಾತಿಗೆ ಮಾತು ಬೆಳೆಸುವುದು ಬೇಡ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಮಿಥುನ: ನಿಮ್ಮೆಲ್ಲ ಕೆಲಸ ಕಾರ್ಯಗಳಿಗೆ ಜನರ ಸಹಕಾರ ಸಿಗಲಿದೆ. ನೀವು ಕೋಪದಿಂದ ಇತರರ ಮೇಲೆ ಒತ್ತಡ ಹೇರುವುದು ಬೇಡ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ. ಉದ್ಯೋಗದಲ್ಲಿ ನೀವಂದುಕೊಂಡಿದ್ದನ್ನು ಇಂದು ಸಾಧಿಸಲಿದ್ದೀರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಕಟಕ: ನಿಮಗಿಂದು ಪ್ರಭಾವಿ ವ್ಯಕ್ತಿಗಳ ಬೆಂಬಲ ಸಿಗಲಿದೆ. ಆರೋಗ್ಯದ ಬಗೆಗೆ ಕಾಳಜಿ ಇರಲಿ. ಹೊಸ ಯೋಜನೆ, ಯೋಚನೆಗಳು ಫಲ ನೀಡಲಿವೆ. ಹಣಕಾಸು ವ್ಯವಹಾರದಲ್ಲಿ ಸಾಧಾರಣ. ಉದ್ಯೋಗದಲ್ಲಿಯೂ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಸಿಂಹ: ದಿನದ ಮಟ್ಟಿಗೆ ಆರೋಗ್ಯದಲ್ಲಿ ವ್ಯತ್ಯಾಸ ಆಗುವ ಸಾಧ್ಯತೆ, ಕಾಳಜಿ ವಹಿಸಿ. ಕುಟುಂಬದ ಬೆಂಬಲ ಸಿಗಲಿದೆ. ಆತುರದಲ್ಲಿ ಯಾವುದೇ ತಿರ್ಮಾನ ಕೈಗೊಳ್ಳುವುದು ಬೇಡ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಕನ್ಯಾ: ನಕಾರಾತ್ಮಕವಾಗಿ ಆಲೋಚನೆ ಮಾಡಿ ಮಾನಸಿಕ ನೆಮ್ಮದಿ ಹಾಳು ಮಾಡಿಕೊಳ್ಳುವುದು ಬೇಡ. ಇಂದು ಆದಷ್ಟು ಕೆಟ್ಟ ಯೋಚನೆಗಳಿಂದ ದೂರ ಇರಿ. ಪ್ರಯಾಣ ಮಾಡುವ ಸಾಧ್ಯತೆ. ಆರ್ಥಿಕವಾಗಿ ಪ್ರಗತಿ ಕಾಣುವಿರಿ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 9

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಅತಿಯಾದ ಒತ್ತಡದ ಕಾರ್ಯ ಆಯಾಸವನ್ನುಂಟು ಮಾಡುವುದು. ಆಲಸ್ಯದಿಂದ
ಕೆಲಸ ಕಾರ್ಯಗಳನ್ನು ಮುಂದೂಡುವುದು ಬೇಡ. ಅತಿಥಿಗಳ ಆಗಮನ ಸಂತಸ ತಂದೀತು. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 2

ವೃಶ್ಚಿಕ: ಆತ್ಮವಿಶ್ವಾಸದಿಂದ ಕಾರ್ಯದಲ್ಲಿ ಯಶಸ್ಸು ಸಿಗುವುದು. ಅನುಮಾನ ಸಂಬಂಧಗಳನ್ನು ಹಾಳು ಮಾಡುವುದು. ಕುಟುಂಬದಲ್ಲಿ ಮಾತಿಗೆ ಮಾತು ಬೆಳೆಸುವುದು ಬೇಡ, ತಾಳ್ಮೆಯಿಂದ ವರ್ತಿಸಿ. ಉದ್ಯೋಗದ ಸ್ಥಳದಲ್ಲಿಯೂ ಎಚ್ಚರಿಕೆಯಿಂದಿರಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 4

ಧನಸ್ಸು: ಕೆಲವು ಅನಿವಾರ್ಯ ಸಂದರ್ಭಗಳು ನಿಮಗೆ ಅಹಿತಕರವೆನಿಸಬಹುದು. ಆತುರದಲ್ಲಿ ಅತಿರೇಕದ ಮಾತುಗಳನ್ನು ಆಡಲು ಹೋಗಬೇಡಿ, ಮಾತಿನ ಮೇಲೆ ಹಿಡಿತವಿರಲಿ. ಹೂಡಿಕೆಯಲ್ಲಿ ತೊಡಗಿಸಿದ ಹಣ ಇಮ್ಮಡಿ ಲಾಭ ತರುವುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 1

ಮಕರ: ಜೀವನದಲ್ಲಿ ಹೊಸ ಭರವಸೆ ಮೂಡಲಿದೆ. ಅನಿರೀಕ್ಷಿತವಾಗಿ ಹಣ ಖರ್ಚು ಮಾಡುವಿರಿ. ಸಂಬಂಧಿಗಳಿಂದ ಕುಟುಂಬಕ್ಕೆ ಶುಭ ಸುದ್ದಿ ಸಿಗುವ ಸಾಧ್ಯತೆ. ಉದ್ಯೋಗದಲ್ಲಿ ಯಶಸ್ಸು ಸಿಗಲಿದೆ. ದಿನದ ಕೊನೆಯ ಗಳಿಗೆಯಲ್ಲಿ ಸ್ವಲ್ಪ ಒತ್ತಡ ಉಂಟಾಗವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ಕುಂಭ: ಇಂದು ನಡೆಯುವ ಅನೇಕ ವಿಷಯಗಳು ನಿಮಗೆ ಸಂತಸ ತರುವುದು. ದೀರ್ಘಕಾಲದ ಕೆಲಸ ಇಂದು ಪೂರ್ಣ ಗೊಳ್ಳುವ ಸಾಧ್ಯತೆ. ಆರ್ಥಿಕ ವ್ಯವಹಾರದಲ್ಲಿ ಪ್ರಗತಿ. ಟೀಕಿಸುವವರ ಮಾತುಗಳಿಗೆ ಕಿವಿಯಾಗದೆ, ಕಾರ್ಯದಲ್ಲಿ ಮುನ್ನುಗ್ಗಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 8

ಮೀನ: ಅನುಮಾನದಿಂದ ಕಾರ್ಯದಲ್ಲಿ ತೊಡಗುವುದು ಬೇಡ. ಹೊಸ ಅವಕಾಶಗಳು ಒದಗಿ ಬಂದಾವು. ಮಕ್ಕಳ ಆರೋಗ್ಯದ ಕಡೆಗೆ ಗಮನ ಇರಲಿ. ಕುಟುಂಬದಲ್ಲಿ ವ್ಯತಿರಿಕ್ತವಾದ ವಾತಾವರಣ ಸೃಷ್ಟಿಯಾಗುವ ಮುಂಚೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 5

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ : Astro Tips : ಯಾವ ದಿಕ್ಕಿಗೆ ತಲೆಹಾಕಿ ಮಲಗಿದರೆ ಒಳ್ಳೆಯದು? ವಾಸ್ತು ಶಾಸ್ತ್ರ ಹೇಳುವುದೇನು?

Exit mobile version