Site icon Vistara News

Horoscope Today : ವೃಷಭ ರಾಶಿಯ ಅದೃಷ್ಟ ಸಂಖ್ಯೆ 6 ; ನಿಮ್ಮ ರಾಶಿಯ ಅದೃಷ್ಟ ಸಂಖ್ಯೆ ಎಷ್ಟು?

horoscope today

Horoscope Today

ಇಂದಿನ ಪಂಚಾಂಗ (14-೦2-202೩)

ಶ್ರೀ ಶಕೇ 1944, ಶುಭಕೃತ ನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು, ಮಾಘ ಮಾಸ, ಕೃಷ್ಣ ಪಕ್ಷ.

ತಿಥಿ: ಅಷ್ಟಮಿ 09:03 ವಾರ: ಮಂಗಳವಾರ
ನಕ್ಷತ್ರ: ಅನುರಾಧ 26:00 ಯೋಗ: ಧ್ರುವ 12:24
ಕರಣ: ಕೌಳವ 09:03 ಇಂದಿನ ವಿಶೇಷ: ಪ್ರೇಮಿಗಳ ದಿನ
ಅಮೃತಕಾಲ: ಮಧ್ಯಾಹ್ನ 03 ಗಂಟೆ 52 ನಿಮಿಷದಿಂದ 05 ಗಂಟೆ 26 ನಿಮಿಷದವರೆಗೆ.

ಸೂರ್ಯೋದಯ: 06 : 43   ಸೂರ್ಯಾಸ್ತ: 0೬ : 25

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ  (Horoscope Today)

ಮೇಷ: ಅತಿಯಾದ ಒತ್ತಡ ಕಡಿಮೆ ಮಾಡಿಕೊಳ್ಳಲು ಆಧ್ಯಾತ್ಮಿಕ ಸಾಧನೆ ಅವಶ್ಯಕ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ. ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವವರ ಬಗ್ಗೆ ಎಚ್ಚರಿಕೆ ಇರಲಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 7

ವೃಷಭ: ಕುಟುಂಬದ ಸದಸ್ಯರೊಂದಿಗೆ ಕಾಲ ಕಳೆಯುವ ಅವಕಾಶ ಸಿಗಲಿದೆ. ಹಣಕಾಸಿನ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಉತ್ತಮ ಆರೋಗ್ಯ ನಿಮ್ಮದಾಗಲಿದೆ. ಉದ್ಯೋಗದ ಸ್ಥಳದಲ್ಲಿ ಸಹದ್ಯೋಗಿಗಳಿಂದ ಕಿರಿಕಿರಿ, ತಾಳ್ಮೆಯಿಂದ ವರ್ತಿಸಿ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಮಿಥುನ: ನಿಮ್ಮ ಬಂಧುಗಳು ನಿಮ್ಮನ್ನೇ ಟೀಕಿಸುವ ಸಾಧ್ಯತೆ. ದಿನದ ಮಟ್ಟಿಗೆ ಒತ್ತಡದಿಂದ ಮಾನಸಿಕ ನೆಮ್ಮದಿ ಹಾಳಾಗುವ ಸಾಧ್ಯತೆ. ಸಂಯಮದಿಂದ ವರ್ತಿಸಿ. ಆರ್ಥಿಕ ಪ್ರಗತಿ ಉತ್ತಮ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 4

ಕಟಕ: ನಿಮ್ಮ ಕೆಲಸ ಕಾರ್ಯಗಳಿಗೆ ಪ್ರಮುಖ ವ್ಯಕ್ತಿಗಳ ಸಹಕಾರ ಸಿಗಲಿದೆ. ಆತುರದಲ್ಲಿ ಯಾವುದೇ ತಿರ್ಮಾನ ತೆಗೆದುಕೊಳ್ಳುವುದು ಬೇಡ. ವ್ಯಾಪಾರ ವ್ಯವಹಾರಗಳಲ್ಲಿ ಪ್ರಗತಿ. ಆರೋಗ್ಯ ಪರಿಪೂರ್ಣವಾಗಿರುತ್ತದೆ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 8

ಸಿಂಹ: ಮಿತಿಮೀರಿದ ಕೆಲಸದ ಒತ್ತಡದಿಂದಾಗಿ ದಣಿವು, ಸಾಧ್ಯವಾದಷ್ಟು ವಿಶ್ರಾಂತಿ ಪಡೆಯಿರಿ. ಹೂಡಿಕೆ ವ್ಯವಹಾರದಲ್ಲಿ ಪ್ರಗತಿ. ಆರೋಗ್ಯದ ಬಗೆಗೆ ಕಾಳಜಿ ವಹಿಸಿ. ಮಕ್ಕಳಿಂದ ಸಂತೋಷ ಸಿಗಲಿದೆ. ಉದ್ಯೋಗದಲ್ಲಿ ಯಶಸ್ಸು. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕನ್ಯಾ: ನಿಮ್ಮ ವರ್ತನೆ ಕುಟುಂಬದ ಸದಸ್ಯರಿಗೆ ಕಿರಿಕಿರಿ ಉಂಟು ಮಾಡುವ ಸಾಧ್ಯತೆ. ಆರೋಗ್ಯದಲ್ಲಿ ವ್ಯತ್ಯಾಸ. ಹಣಕಾಸು ವಿಷಯಗಳಲ್ಲಿ ಪ್ರಗತಿ. ಬಂಧುಗಳ ಭೇಟಿ ಕೊಂಚ ಸಮಾಧಾನ ತರುವುದು. ಉದ್ಯೋಗದಲ್ಲಿ ಹಿಡಿದ ಕಾರ್ಯ ಪೂರ್ಣಗೊಳಿಸುವಿರಿ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 4

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

ತುಲಾ: ಇಂದು ನಿಮ್ಮ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಆತುರದಲ್ಲಿ ಮಾತನಾಡಿ ಅಪಾಯ ತಂದುಕೊಳ್ಳುವುದು ಬೇಡ. ಸಂಗಾತಿಯ ವರ್ತನೆ ಮುಜುಗರ ಉಂಟು ಮಾಡುವ ಸಾಧ್ಯತೆ. ಯಾರೊಂದಿಗೂ ಮಾತಿಗೆ ಮಾತು ಬೆಳೆಸುವುದು ಬೇಡ. ಉದ್ಯೋಗಯದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ವೃಶ್ಚಿಕ: ಕುಟುಂಬದ ಸದಸ್ಯರ ಆರೋಗ್ಯ ಕಡೆ ಹೆಚ್ಚಿನ ಗಮನ ಇರಲಿ. ನಕಾರಾತ್ಮಕ ಆಲೋಚನೆಗಳು ಮಾನಸಿಕವಾಗಿ ಹಾಗೂ ದೈಹಿಕವಾಗಿ ಬಳಲುವಂತೆ ಮಾಡಬಹುದು. ದಿನದ ಮಟ್ಟಿಗೆ ಖರ್ಚು ಹೆಚ್ಚು. ಉದ್ಯೋಗದಲ್ಲಿ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

ಧನಸ್ಸು: ಹೂಡಿಕೆ ವ್ಯವಹಾರದಲ್ಲಿ ಪ್ರಗತಿ ಕಾಣುವಿರಿ. ಆಪ್ತ ಸ್ನೇಹಿತರು, ಸಂಬಂಧಿಗಳ ಸಮಸ್ಯೆಗಳಿಗೆ ಸ್ಪಂದಿಸುವಿರಿ. ವಿವಾಹ ಆಕಾಂಕ್ಷಿಗಳಿಗೆ ಶುಭ ಸುದ್ದಿ ಸಿಗಲಿದೆ. ಉದ್ಯೋಗದ ಸ್ಥಳದಲ್ಲಿ ಹೆಚ್ಚು ಶ್ರಮ ಪಡಬೇಕಾಗಿ ಬರಬಹುದು. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 6

ಮಕರ: ಇಂದು ಆರೋಗ್ಯ ಉತ್ತಮವಾಗಿರಲಿದೆ. ಸ್ನೇಹಿತರ ಸಹಕಾರ ಸಿಗಲಿದೆ. ಆರ್ಥಿಕ ಪ್ರಗತಿ ಉತ್ತಮ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ಸೃಷ್ಟಿಸಬಹುದು. ಯೋಚಿಸದೇ ಮಾತನಾಡುವುದು ಬೇಡ. ಸಮಾಧಾನದಿಂದ ವರ್ತಿಸಿ. ಉದ್ಯೋಗದಲ್ಲಿ ಮಿಶ್ರ ಫಲ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

ಕುಂಭ: ಉದ್ಯೋಗದ ಸ್ಥಳದಲ್ಲಿ ಪ್ರಶಂಸೆ ದೊರೆಯಲಿದೆ. ಹಿರಿಯರ ಮಾರ್ಗದರ್ಶನ ಸಿಗುವುದು. ಇಂದು ಉತ್ತಮ ಆರೋಗ್ಯ. ಅನಿರೀಕ್ಷಿತ ಖರ್ಚು ಹೆಚ್ಚು. ಸಂಗಾತಿಯ ಸಂಪೂರ್ಣ ಬೆಂಬಲ ಸಿಗಲಿದೆ. ವ್ಯಾಪಾರ ವ್ಯವಹಾರದಲ್ಲಿ ಯಶಸ್ಸಿನ ದಿನ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

ಮೀನ: ಉದ್ಯೋಗದ ಸ್ಥಳದಲ್ಲಿ ಹೊಸ ಭರವಸೆಗಳು ಮೂಡಲಿವೆ. ಕಾರ್ಯಗಳಲ್ಲಿ ಯಶಸ್ಸು. ಪಾಲುದಾರಿಕೆ ವ್ಯವಹಾರವು ನಷ್ಟ ತರುವುದು. ನಿಮ್ಮ ಉದಾರ ವರ್ತನೆಯನ್ನು ಯಾರಾದರೂ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು
M: 9481854580 | pnaveenshastri@gmail.com

ಇದನ್ನೂ ಓದಿ : Astro Tips : ಯಾವ ದಿಕ್ಕಿಗೆ ತಲೆಹಾಕಿ ಮಲಗಿದರೆ ಒಳ್ಳೆಯದು? ವಾಸ್ತು ಶಾಸ್ತ್ರ ಹೇಳುವುದೇನು?

Exit mobile version